Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮಲ್ಲಿನ ಸಾಮರ್ಥ್ಯಗಳು ಹುಟ್ಟಿನಿಂದ ಬರುವಂತದ್ದಲ್ಲ. ಸತತ ಪ್ರಯತ್ನದಿಂದ ಜೀವನದಲ್ಲಿ ಗುರಿಯನ್ನು ತಲುಪಲು ಸಾಧ್ಯ. ಆದ್ದರಿಂದ ವ್ಯಕ್ತಿಗೆ ಜೀವನದಲ್ಲಿ ಗುರಿಮುಖ್ಯ ಎಂದು ಎಫ್.ಎಂ.ರೇಡಿಯೋ ಮಂಗಳೂರಿನ ಆರ್.ಜೆ. ನಯನ ಹೇಳಿದರು. ಅವರು ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲ್‌ನಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಯಾವುದೇ ಕೆಲಸ ಮಾಡಬೇಕೆಂದರೆ ಅದರಲ್ಲಿ ನಂಬಿಕೆ ಮುಖ್ಯ. ಹುಟ್ಟುವಾಗಲೇ ಮನುಷ್ಯನಿಗೆ ಪ್ರತಿಭೆ ಎನ್ನುವುದು ಬರುವುದಿಲ್ಲ. ಅದು ಮನುಷ್ಯನು ವಿಕಸನಗೊಂಡಾಗಲೇ ಬರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವಿಶಿಷ್ಟ ಪ್ರತಿಭೆ ಮತ್ತು ಆಸಕ್ತಿಗಳಿರುತ್ತದೆ. ನಾವು ಅದನ್ನು ಗ್ರಹಿಸಿ ಉತ್ತಮಪಡಿಸಿಕೊಳ್ಳಬೇಕು ಎಂದು ಅವರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಸೂತ್ರವನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ.ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಎಂ. ಮಹೇಶ ಹೆಗ್ಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ನಿಮ್ಮ ಗುಣ ನಡತೆಯನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಮಾತನಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ|. ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸ್ಪರ್ಧೆಯಲ್ಲಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಪ್ರಥಮ್ ಭಂಡಾರಿ ಪ್ರಥಮ ಸ್ಥಾನ, ದ್ವಿತೀಯ ಬಿ.ಕಾಂ. ವಿಭಾಗದ ಸುಜನ್ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿಬಿಎ ವಿದ್ಯಾರ್ಥಿ ಸೃಜನ್ ತೃತೀಯ ಸ್ಥಾನ ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ರೋವರ್ಸ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ಸ್ ಲೀಡರ್ ಪೂಜಾ ಕುಂದರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಾರಾಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರಾಕ್‌ಸೂಟ್‍ ಉಚಿತ ವಿತರಣೆ ಹಾಗೂ ಚದುರಂಗ ತರಗತಿ ಉದ್ಘಾಟನಾ ಸಮಾರಂಭ ಗುರುವಾರ ಜರುಗಿತು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಕೃಷ್ಣ ಖಾರ್ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಉಚಿತವಾಗಿ 150 ಟ್ರಾಕ್‍ಸೂಟ್‍ಗಳನ್ನು ನೀಡಿದ ಶಾಲೆಯ ಹಳೆ ವಿದ್ಯಾರ್ಥಿ,  ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಸದಸ್ಯ ಯೋಗೇಶ್ ಕುಮಾರ್ ಪರವಾಗಿ, ಅವರ ತಾಯಿ ವೆಂಕಮ್ಮ ಅವರನ್ನು ಸನ್ಮಾನಿಸಲಾಯಿತು. ನಮ್ಮ ಶಾಲೆಯ ಮಕ್ಕಳಿಗೆ ಚೇಸ್‍ ತರಬೇತಿಯನ್ನು ಉಚಿತವಾಗಿ ನೀಡಲಿರುವ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಬಾಬು ಜೆ. ಪೂಜಾರಿ, ದಾನಿಗಳಾದ ವಾಸುದೇವ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ಹರೀಶ್‍ ಪೂಜಾರಿ, ಗೋಪಾಲ ಮಲ್ಯ, ಭಾಸ್ಕರ ಕೋಣನಮನೆ, ನಿವೃತ್ತ ಮುಖ್ಯ ಶಿಕ್ಷಕ ಆನಂದ ಅವರು ಶುಭ ಹಾರೈಸಿದರು. ಪ್ರಭಾರ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಟಿಜಿಟಿ ಶಿಕ್ಷಕ ದಿನಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮ ಶತಾಬ್ದಿ ಆರಾಧನಾ ಮಹೋತ್ಸವದ ಅಂಗವಾಗಿ ಖ್ಯಾತ ಗಾಯಕ ಶಂಕರ ಶ್ಯಾನುಭಾಗ ಅವರ ವತಿಯಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಿತು. ದೇವಾಲಯದ ಆಡಳಿತ ಮೊಕ್ತೇಸರ ಕೆ.ರಾಧಾಕೃಷ್ಣ ಶೆಣೈ ಹಾಗೂ ಶಂಕರ ಶ್ಯಾನುಭಾಗ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರ ಶ್ಯಾನುಭಾಗ ಅವರೊಂದಿಗೆ ಶಂಕರ ಶೆಣೈ, ಲೋಕೇಶ, ಹರಿ, ಅಶ್ವಥ, ಅದೃತ ಪೈ ಹಾರ್ಮೋನಿಯಂ, ತಬಲಾ, ತಾಳ ಸಂವಾದಿನಿಯಲ್ಲಿ ಸಹಕರಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಕೆ. ಪದ್ಮನಾಭ ಶೆಣೈ ಕಲಾವಿದರನ್ನು ಗೌರವಿಸಿದರು. ಪಿ.ಜಯವಂತ ಪೈ ನಿರೂಪಿಸಿದರು.

Read More

ಕುಂದಾಪ್ರ ಡಾ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಅಲ್ಲಿ ಬುಧವಾರ ನಡೆಯಿತು. ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಡಾ.ಪೂರ್ಣಿಮಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾ.ಪಂ ಸದಸ್ಯ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಹಾಗೂ ಕರ್ಕುಂಜೆ, ಹೊಸಾಡು, ಕೊಲ್ಲೂರು ಸಿ.ಆರ್.ಪಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ  ಡಿಜಿಟಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 5ರಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ  ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.  ಅವರಿಗೆ, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ. ಸ್ಪರ್ಧೆಗಳ ವಿವಿರ:  ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಹೊಂದಿರುವವರು ಸೆಪ್ಟಂಬರ್ 27ರ ಸಂಜೆ 5.30 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಉಡುಪಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಜಂಟಿ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ  ಪ್ರೌಢ ಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಅದ್ದೂರಿಯಾಗಿ ನೆರವೇರಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ತೆಲುಗು ಟೈಟಾನ್ಸ್ ತಂಡದ ಕಬಡ್ಡಿ ಆಟಗಾರರಾದ ರತನ್ ನಾಯ್ಕ ‘ಒಬ್ಬ ಶ್ರೇಷ್ಠ ಆಟಗಾರನಾಗಬೇಕಾದರೆ ಇಂತಹ ವೇದಿಕೆಗಳು ಅತ್ಯದ್ಭುತ, ಧೈರ್ಯ ತುಂಬಿ ಆಟ ಆಡಿ. ಕ್ರೀಡೆಯಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದರು’.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ  ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು  ಶಿಕ್ಷಣ ಪರಿಪೂರ್ಣವಾಗಬೇಕಾದರೆ ಪಠ್ಯದ  ಜೊತೆಗೆ ಸಹಪಠ್ಯ ಚಟುವಟಿಕೆಗಳು ಪ್ರಮುಖವಾದದ್ದು ಆ ನೆಲೆಯಲ್ಲಿ ನಮ್ಮ ಸಂಸ್ಥೆಯಲ್ಲಿ ಸಮಾನ ಪ್ರಾಧಾನ್ಯತೆ ನೀಡುತ್ತಿದ್ದು,ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸೋಲು – ಗೆಲುವು ಇವೆರೆಡನ್ನು ಸಮನಾಗಿ ಸ್ವೀಕರಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು .ಮುಖ್ಯ ಅತಿಥಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ನಾಗೇಶ ನಾಯ್ಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣವಾಗಿ ಐವತ್ತು ವರ್ಷಗಳು ಸಂದವು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು “ಸುವರ್ಣ ಸಂಭ್ರಮ-50” ಕಾರ್ಯಕ್ರಮವನ್ನು ಆಯೋಜಿಸಿದೆ. ಇದರ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶಿರೋನಾಮೆಯಲ್ಲಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ (ಜತ್ತ ತಾಲೂಕು, ಮಹಾರಾಷ್ಟ್ರ, ಮೈಸೂರು, ಮಂಗಳೂರು ಮತ್ತು ರಾಯಚೂರು) ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 24 ಮತ್ತು 25 ರಂದು ಮಂಗಳೂರಿನಲ್ಲಿ ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳು ಸೇರಿ “ಬಹುಸಂಸ್ಕೃತಿ ಉತ್ಸವ” ಕಾರ್ಯಕ್ರಮ ಏರ್ಪಡಿಸಿದೆ. ಇದರ ಭಾಗವಾಗಿ ಉಡುಪಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲೆಯ ಪ್ರೌಢ ಶಾಲಾ ವಿಭಾಗದಿಂದ ಜಿಲ್ಲಾ ಮಟ್ಟದ “ಕರಾವಳಿ ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ” ಎಂಬ ಶೀರ್ಷಿಕೆಯಡಿ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ…

Read More