Author: ನ್ಯೂಸ್ ಬ್ಯೂರೋ

ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನಕ್ಕೆ ಚಾಲನೆಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರೆಯುವ – ಮೆರೆಯುವ ಇಂದಿನ ಕಾಲಘಟ್ಟದಲ್ಲಿ ಉದಾತ್ತವಾಗಿ ಚಿಂತನೆ ಮಾಡುವ ಮನಸ್ಸುಗಳು ಬೇಕಾಗಿವೆ. ಮಕ್ಕಳಿಗೆ ನಿಜವಾಗಿಯೂ ಅಗತ್ಯವಿರುವ ಪ್ರೀತಿ, ವಿಶ್ವಾಸ, ವಿಶಾಲ ಮನೋಭಾವವನ್ನು ತುಂಬಲು ಮರೆತಿರುವ ನಾವುಗಳು ಪರಸ್ಪರ ನಂಬಿಕೆಯನ್ನು ಕಳೆದುಕೊಂಡು ಯಾಂತ್ರಿಕ ಜಗತ್ತಿನ ದಾಸರಾಗಿ ಬದುಕುತ್ತಿರುವುದು ವಿಪರ್ಯಾಸ ಎಂದು ಹಿರಿಯ ಸಾಹಿತಿ, ನಿವೃತ್ತ ಪ್ರಾಚಾರ್ಯ ಡಾ. ಜಯಪ್ರಕಾಶ್ ಮಾವಿನಕುಳಿ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿ ಹಬ್ಬದ ರಜತ ಲಾಂಛನ ಅನಾವರಣಗೊಳಿಸಿ ಮಾತನಾಡಿದರು. ಧಾವಂತದ ಬದುಕಿನಲ್ಲಿ ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹಿಂದಿಕ್ಕಿ ಹೋಗುತ್ತಿದ್ದೇವೆ. ನೆರೆಯವರ ಮೇಲೆ ಪ್ರೀತಿ ವಿಶ್ವಾಸವಿಡದ ಬದುಕು ನಮ್ಮದಾಗುವುದು ಬೇಡ. ಆಧುನಿಕ ಬದುಕಿನ ಅಗತ್ಯತೆಗಳ ನಡುವೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ ಎಂದ ಅವರು ಸಾಹಿತಿ, ಕಲಾವಿದರು, ಚಿಂತಕರಿಂದ ಊರಿಗೆ ಘನತೆ ಹೆಚ್ಚುತ್ತದೆಯೇ ಹೊರತು ಹಣವಂತರಿಂದ ಅಲ್ಲ ಎಂಬುದನ್ನು ಮರೆಯಬಾರದು ಎಂದರು. ಜಿಲ್ಲಾ ಕನ್ನಡ ಸಾಹಿತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಸಸಿಹಿತ್ಲು ಸಮುದ್ರ ತಟದಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಭಾನುವಾರದಂದು ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್.ಸಿ.ಸಿ., ಎನ್.ಎಸ್.ಎಸ್. ನ 120 ವಿದ್ಯಾರ್ಥಿಗಳು ಪಾಲ್ಗೊಂಡು 30-40 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಒಟ್ಟಿಗೆ ಕೂಗುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತ, ಮತ್ತು ಬಹುತ್ವದ ನೆಲೆಯಲ್ಲಿ ರೂಪುಗೊಂಡ ಭಾರತಕ್ಕೆ ಪ್ರಜಾಪ್ರಭುತ್ವ ಒಂದು ವರ. ನಾವು ಯಾವುದೇ ಜಾತಿ, ಮತ ಧರ್ಮ, ಭಾಷೆಗೆ ಸೇರಿದವರಾದರೂ ನಾವೆಲ್ಲ ಭಾರತೀಯರು ಎಂಬ ಹೆಮ್ಮೆ ಮತ್ತು ಐಕ್ಯತಾ ಭಾವ ನಮ್ಮಲ್ಲಿ ಸದಾ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಾಣಿಕ್ಯ, ಐ.ಸಿ.ಸಿ. ಸಫಿಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಹಾಗೂ ಸಫಿಂಗ್ ಸ್ವಾಮಿ ಪ್ರತಿಷ್ಠಾನದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ 130.19 ಕೋಟಿಯಷ್ಟು ವ್ಯವಹಾರ ನಡೆಸಿ, ರೂ 37.29 ಲಕ್ಷ ನಿವ್ವಳ ಲಾಭಗಳಿಸಿದ್ದು, ಮುಂದಿನ ದಿನಗಳಲ್ಲಿ 150 ಕೋಟಿ ರೂ. ವ್ಯವಹಾರದ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಮೋಹನ ಪೂಜಾರಿ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ 33ನೇ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 32 ವರ್ಷಗಳಿಂದಲೂ ನಿರಂತರ ಡಿವಿಡೆಂಡ್ ನೀಡಿರುವ ಹೆಗ್ಗಳಿಕೆಯಿದೆ. ಈ ಬಾರಿ ಶೇ. 12ರಷ್ಟು ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ರಚನೆಯಾದ ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರುಗಳಿಗೆ ಮಾಹಿತಿ ಶಿಬಿರ ಹಾಗೂ ಸಂಘಗಳಿಗೆ ಸಾಲ ಸೌಲಭ್ಯ ನೀಡಿ ಈ ಮೂಲಕ ವ್ಯವಹಾರ ಹೆಚ್ಚಿಸಲಾಗುವುದು. ವರದಿ ವರ್ಷದ ಅಂತ್ಯಕ್ಕೆ ಒಟ್ಟು 173 ಕಲ್ಪತರು ಮಹಿಳಾ ಸ್ವ ಸಹಾಯ ಗುಂಪುಗಳನ್ನು ಹೊಂದಿದ್ದು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗ ಮತ್ತು ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿಗಳಿಗಾಗಿ “ಕರಿಯರ್ ಗೈಡೆನ್ಸ್” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಕಾಲೇಜಿನ ಡೀನ್ (ಅಕಾಡೆಮಿಕ್ಸ್) ಗಿರಿರಾಜ್ ಭಟ್‌ ಅವರು “ನಾವು ಸಂದರ್ಶನಕ್ಕೆ ಹೋದಾಗ ಸಲ್ಲಿಸುವ ರೆಸೂಮ್ ಎನ್ನುವುದು ನಮ್ಮ ಸಂಪೂರ್ಣ ಜ್ಞಾನ, ವ್ಯಕ್ತಿತ್ವ, ಸಾಮರ್ಥ್ಯ ಮತ್ತು ಕೌಶಲ್ಯವನ್ನು ಸಂದರ್ಶನಕಾರರಿಗೆ ಮನದಟ್ಟು ಮಾಡಿಸುವಂತಿರಬೇಕು” ಎಂದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಪ್ಲೇಸ್ಮೆಂಟ್ ಆಫೀಸರ್ ಸುರೇಶ್ ಕಾಮತ್ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಜಯಲಕ್ಷ್ಮಿ ಸ್ವಾಗತಿಸಿ, ವೆಂಕಟೇಶ್ ಶೆಟ್ಟಿ ವಂದಿಸಿದರು. ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಹರೀಶ್ ಕಾಂಚನ್‌ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಬಿ.ಸಿ.ಎ ಅಂತಿಮ ವರ್ಷದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯದಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ 250 ಕಿ.ಮೀನ ಮಾನವ ಸರಪಳಿಯನ್ನು ಆಯೋಜಿಸಿದ್ದು, ಇದರ ಭಾಗವಾಗಿ ಜಿಲ್ಲೆಯ ಗಡಿಭಾಗಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆವರೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವು ನಡೆಯಿತು. ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ನಡೆಯಿತು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರಸ್ಪರ ಕೈಯನ್ನು ಹಿಡಿದುಕೊಂಡು ಮಾನವ ಸರಪಳಿ ರಚಿಸಿದರು. ಜಿಲ್ಲಾ ಮಟ್ಟದಲ್ಲಿ ನಡೆದ ಕಾರ್ಯಕ್ರಮವನ್ನು ಚಂಡೆ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಎಲ್ಲೆಡೆ ಪಸರಿಸುವ ಉದ್ದೇಶದಿಂದ ವಿನೂತನವಾದ ಮಾನವ ಸರಪಳಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಆಯೋಜಿಸಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ  ಸಹಭಾಗಿತ್ವದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಸರಕಾರಿ  ಪ್ರೌಢಶಾಲೆ  ಸಾಲೆತ್ತೂರು  ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ  ರಾಘವೇಂದ್ರ ಕಂಡ್ಲೂರು ಮಾತನಾಡಿ, ಇಂದಿನ ಯುವ ಜನಾಂಗ  ದುಶ್ಚಟಗಳಿಗೆ  ದಾಸರಾಗದೇ, ಅತ್ಯುತ್ತಮ ಹವ್ಯಾಸವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ವಿದ್ಯೆಯೊಂದಿಗೆ ಕ್ರೀಡೆ ಸಹ ಮುಖ್ಯ ಎಂಬುದನ್ನು ಅರಿತು ಬದುಕಿನ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಾ ತಮ್ಮ ಕಾರ್ಯ ಸಾಧನೆಗಳ ಮೂಲಕ ಪ್ರಸಿದ್ದಿ, ಜನಪ್ರೀತಿಯನ್ನು ಪಡೆಯುವಂತಾಗಲಿ ಎಂದು ಆಶಿಸಿದರು. ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ  ಸಂಘದ ಗೌರವಾಧ್ಯಕ್ಷರಾದ ಜೀವನ್‍ ಕುಮಾರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯಾದ್ಯಂತ ಆಯೋಜಿಸಲಾದ ಮಾನವ ಸರಪಳಿಗೆ ಭಾನುವಾರ ಜಿಲ್ಲಾದ್ಯಂತ ಏಕಕಾಲದಲ್ಲಿ ಚಾಲನೆ ದೊರೆಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿಯೂ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ತನಕ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ  ಪ್ರತಿ ಗ್ರಾಮ ವ್ಯಾಪ್ತಿ, ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತ್‌ ವ್ಯಾಪ್ತಿಕಯಲ್ಲಿ ಮಾನವ ಸರಪಳಿ ರಚಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಾಡಗೀತೆಯಿಂದ ಆರಂಭಗೊಂಡು ಸಂವಿಧಾನ ಪ್ರಸ್ತಾವನೆ ಓದುವುದು, ಮಾನವ ಸರಪಳಿಗೆ ಕೈ ಹಿಡಿದು ನಿಂತ ಬಳಿಕ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ಬಳಿಕ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು. ಕುಂದಾಪುರದಲ್ಲಿ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಪುರಸಭೆ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24 ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.  ವೀರೇಶ್ ಖಾರ್ವಿ, ಶಮಿತ್ ಖಾರ್ವಿ, ಶರಣ್ ಎಸ್. ಪೂಜಾರಿ, ಯುವರಾಜ್ ಖಾರ್ವಿ,  ಪ್ರೀತೇಶ್ ಖಾರ್ವಿ, ಕಾರ್ತಿಕ್ ಖಾರ್ವಿ, ತರುಣ್ ಖಾರ್ವಿ ಹಾಗೂ ಧನುಷ್ ಖಾರ್ವಿ. ನಿತಿನ್ ರೆಬೆರೋ ಮತ್ತು ವಿಶ್ವಾಸ್ ತಂಡವನ್ನು ಪ್ರತಿನಿಧಿಸಿದ್ದರು. ಶಮಿತ್ ಖಾರ್ವಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ತರಬೇತಿ ನೀಡಿದ್ದರು. ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ,  ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಶು ಆಹಾರ ಉತ್ಪನ್ನಗಳ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದ್ದು, ಇದು ಹೈನುಗಾರರಿಗೆ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹಾಗೂ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಮೇಕೊಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಸಭಾಭವನದಲ್ಲಿ ಶನಿವಾರ ನಡೆದ ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ, ಕರು ಸಾಕಾಣಿಕೆ ಯೋಜನೆಯ ನೋಂದಾಯಿತ ಕರುಗಳ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಹಾಲು ಉತ್ಪಾದಕರ ಸಹಕಾರಿ ಸಂಘವು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಸುಮಾರು 70ಲಕ್ಷ ಸ್ಥಿರಾಸ್ತಿಯನ್ನು, ಸುಮಾರು 20ಲಕ್ಷ ರೂ. ನಿರಖು ಠೇವಣೆಯನ್ನು ಹೊಂದಿದೆ. ಕಳೆದ ಸಾಲಿನಲ್ಲಿ ಹಾಲು ಉತ್ಪಾದನೆಗಾಗಿ ಸುಮಾರು 2.28ಕೋಟಿ ರೂ. ಒಕ್ಕೂಟದಿಂದ ಸಂದಾಯವಾಗಿದೆ.…

Read More