Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆ.12 ರಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ  ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ  ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾರೈಸಿದರು. ಅವರು ಅಂದು ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹು ಭಾಷೆ, ಬಹು ಕಲೆ – ಸಂಸ್ಕೃತಿಯ ಈ ಕರಾವಳಿ ಭಾಗದಲ್ಲಿ ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಸೆ.06: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಸೆಪ್ಟೆಂಬರ್ 15 ರಂದು ಬೆಳಗ್ಗೆ  9.30 ರಿಂದ 10.30 ರ ವರೆಗೆ ಜಿಲ್ಲೆಯ ಗಡಿಭಾಗ ಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ  ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಲಾಗಿದ್ದು, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9:30 ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವರು ಸರತಿ ಸಾಲಿನಲ್ಲಿ ನಿಲ್ಲುವುದು, 9:37 ರಿಂದ 9.40 ರವರೆಗೆ ನಾಡಗೀತೆ ,ರಿಂದ9-40ರಿಂದ 9-55ರವರೆಗೆ ಮುಖ್ಯ ಅತಿಥಿಗಳ ಭಾಷಣ,9-55 ರಿಂದ 9 -57 ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು ,9:57 ರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಬೋರ್ಡ್ ಹೈಸ್ಕೂಲು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರೌಢ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡವು ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡವು ನೇರವಾಗಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದುಕೊಂಡಿತು ವಿಜೇತ ತಂಡಗಳಿಗೆ ಕುಂದಾಪುರ ಸರಕಾರಿ ಪದವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕೋಡಿ ಶ್ರೀರಾಮ ವಿದ್ಯಾಕೇಂದ್ರ ಇವರ ಆಶ್ರಯದಲ್ಲಿ ವಡೇರಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕೋಡಿ ಶ್ರೀರಾಮ ನಗರದ ಶ್ರೀ ರಾಮ ವಿದ್ಯಾ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾ ಕೇಂದ್ರ ಸಂಚಾಲಕ ಕೆ.ನಾಗೇಶ್ ಕಾಮತ್ ವಹಿಸಿದ್ದರು. ಕುಂದಾಪುರ ಪುರಸಭಾ ಸದಸ್ಯ ಮೊಹಮ್ಮದ್ ಅಶ್ಫಾಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ಶೇಖರ್ ಪಡುಕೋಣೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್‍ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ಪಿಯೂಸ್ ಡಿಸೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಶ್ರೀನಾಥ್ ಪೂಜಾರಿ, ಪತ್ರಕರ್ತ ಬಿ. ರಾಘವೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕಿರಿಮಂಜೇಶ್ವರ ಸಮೂಹ ಸಂಪನ್ಮೂಲ ಕೇಂದ್ರ   ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ  ಇವರ ಸಹಯೋಗದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಗುರುವಾರದಂದು ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ ಅವರು ಮಾತನಾಡಿ, ‘ಪ್ರತಿಭೆಗಳು ಅರಳಲು ಸೂಕ್ತ ವೇದಿಕೆ ಕಲ್ಪಿಸಿ ಕೊಡುವ ಅವಶ್ಯಕತೆ ಇದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿ ಪ್ರತಿಭೆಗಳಿಗೆ ಪ್ರೋತ್ಸಾಹ ನಿಡೋಣ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಮಾತನಾಡಿ, ‘ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಈ ಪ್ರತಿಭಾ ಕಾರಂಜಿ ಉತ್ತಮ ಕಾರ್ಯಕ್ರಮ, ನಿಷ್ಪಕ್ಷಪಾತವಾಗಿ ತೀರ್ಪು ನೀಡುವಂತೆ ಕೋರಿಕೊಂಡು ಸೋಲು ಗೆಲುವು ಇವೆರಡನ್ನು ಸಮಾನಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್. ಅಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಲಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.. ವಿದ್ಯಾರ್ಥಿಗಳಾದ ಹೊನ್ನುಶ್ರೀ (ಇಂಗ್ಲೀಷ ಕಠಪಾಠ), ಮೊಹಮ್ಮದ್‌ನಬಾನ್ (ಅರೇಬಿಕ್ ಧಾರ್ಮಿಕ ಪಠಣ), ಹರ್ಷಾಲಿ (ಛದ್ಮವೇಷ), ಆರಾಧ್ಯ ದೇವಾಡಿಗ (ಚಿತ್ರ ಕಲೆ) ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.  ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜಿನ ತಂಡವನ್ನು 2-1 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಸೆಪ್ಟಂಬರ್ 30ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More