Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಾಪಂಚಿಕವಾಗಿ ನಮ್ಮ ದೇಹ ಮತ್ತು ಮನಸ್ಸು ಇಲ್ಲಿ ಇರಬೇಕಾದರೆ ನಮ್ಮ ತಂದೆ ತಾಯಿಯ ಒಂದೊಂದು ಜೀವಕೋಶಗಳನ್ನು ನಾವು ಪಡೆದಿರುತ್ತೇವೆ, ತಂದೆ ತಾಯಿ ಇದ್ದರೆ ಮಾತ್ರ ನಾವೆಲ್ಲಾ. ಈ ಸೃಷ್ಟಿಯ ಆದಿಯಲ್ಲಿ ಅದೆಷ್ಟೋ ಜೀವ ಕಣಗಳಿದ್ದು, ಇಲ್ಲಿ ನಮ್ಮನ್ನು ನಾವು ಹಿಂದಿರುಗಿ ಹುಡುಕಿಕೊಂಡು ಹೋದಾಗ ಮಾತ್ರ ಭಗವಂತನ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಲ್ಲಿ ನಾವು ದೇವರನ್ನು ಕಾಣಬೇಕು ಇದೇ ಸೃಷ್ಟಿಕರ್ತ ವಿಶ್ವಕರ್ಮ. ಪ್ರಪಂಚದಲ್ಲಿ ಅತ್ಯಂತ ಶ್ರೇಷ್ಠವಾದ ಧರ್ಮ ಎನ್ನುವುದಿದ್ದರೇ ಅದು ವಿಶ್ವಕರ್ಮ ಧರ್ಮ ಎಂದು ಮಂಗಳೂರಿನ ಅಜಲಸ್ ಡಯಾಗ್ನಾಸ್ಟಿಕ್ಸ್ ಇಲ್ಲಿನ ಡಾ| ಚಂದ್ರಯ್ಯ ಆಚಾರ್ಯ ಅವರು ಹೇಳಿದರು. ಅವರು ಕೋಟೇಶ್ವರ ಶ್ರೀ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಯುವಕ ದಳ, ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ ಹಾಗೂ ಶ್ರೀದೇವಿ ಮಹಿಳಾ ಮಂಡಳಿ ಕೋಟೇಶ್ವರ ಇವರ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯಲ್ಲಿ ನೂತನ ಹಿಂದೂಸ್ಥಾನ ಗೋಲಿ ಸೋಡಾ ಮತ್ತು ಪಾನೀಯ ಉತ್ಪಾದನಾ ಲೋಕಾರ್ಪಣೆಗೊಂಡಿತ್ತು. ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಹೆಮ್ಮಾಡಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ ಹಾಗೂ ಉಪ್ಪಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ, ಮಾಲಿಕರಾದ ಶಂಕರ ಆಚಾರ್ಯ, ದಿನೇಶ್‌ ಆಚಾರ್ಯ ಇನ್ನಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ, ಗಂಗೊಳ್ಳಿ ದಾಕುಹಿತ್ಲು ನಿವಾಸಿ ಬಾಣಿ ರಾಮಕೃಷ್ಣ ಖಾರ್ವಿ (57) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಅವರು 10 ವರ್ಷಗಳ ಕಾಲ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ದಾಕುಹಿತ್ಲು  ಶ್ರೀ ರಾಮ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿದ್ದ ಅವರು ಪಕ್ಷಬೇಧ ಮರೆತು ಎಲ್ಲರೊಂದಿಗೆ ಬೆರೆತು ಸಹಾಯ ಮಾಡುವ ಮೂಲಕ ಜನಾರಾಗಿದ್ದರು. ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಅನುಪಮ ಸೇವೆ ಮೂಲಕ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸತ್ಯ ವಾಕ್ಯದ ಮೂಲಕ ಮೌಢ್ಯ ಮತ್ತು ಅಂಧ ಶೃದ್ಧೆಯಿಂದ ನಲುಗಿ ಹೋಗಿರುವ ಶೋಷಿತ ಸಮಾಜವನ್ನು, ಸಾಮಾಜಿಕ ಪರಿವರ್ತನೆಯ ಮೂಲಕ ಮೌನಕ್ರಾಂತಿ ನಡೆಸಿ ಸಮಾಜ ನಿರ್ಮಾಣಕ್ಕೆ ಮೇಲ್ಪಂಕ್ತಿ ಹಾಕಿದ ಮಹಾನ್‌ ದಾರ್ಶನಿಕರಾಗಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ನಾಗೂರು ಮಹಾಲಸಾ ಕಲ್ಚರಲ್ ಹಾಲ್‌ನಲ್ಲಿ ಸೋಮವಾರ ಬಿಜೆಪಿ ಬೈಂದೂರು ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 170ನೇ ಜನ್ಮ ದಿನಾಚರಣೆಯ ಅಂಗವಾಗಿ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಶೇ. 50ರಷ್ಟು ಜನರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದು, ಕಳೆದ 70 ವರ್ಷದಿಂದ ಅಕಾರ ನಡೆಸಿದ ಕಾಂಗ್ರೆಸ್ ಪಕ್ಷ ಕೇವಲ ಮತಕ್ಕಾಗಿ ಅವರನ್ನು ಬಳಸಿಕೊಂಡಿದೆಯೇ ಹೊರತು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿಲ್ಲ. ಕಾಂಗ್ರೆಸ್ ಅಕಾರಕ್ಕಾಗಿ ಮೊಸಳೆ ಕಣ್ಣೀರು ಸುರಿಸುವ ಕೆಲಸ ಮಾಡುತ್ತಿದೆ ಎಂದು ದೂರಿದ ಅವರು ರಾಜ್ಯದಲ್ಲಿ ಬಿಜೆಪಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ ಮಂಗಳೂರು ಕರಂಗಲ್ಪಾಡಿ ನಿವಾಸಿ, ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್(33) ಮೃತ ದುದೈವಿ. ಯಕೃತ್ತಿಗೆ(ಲಿವರ್) ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು. ಈ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೊಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅರ್ಚನಾ ಮೂಲತಃ ಕೋಟೇಶ್ವರದವರಾಗಿದ್ದು ಮಂಗಳೂರಿನ ಚೇತನ್ ಕಾಮತ್ ಅವರನ್ನು ಮದುವೆಯಾಗಿದ್ದರು. ಮೃತದೇಹವನ್ನು ಕರಂಗಲ್ಪಾಡಿಯಯ ನಿವಾಸಕ್ಕೆ ತಂದು ವಿಧಿ ವಿಧಾನ ನೆರವೇರಿಸಿದ ಬಳಿಕ ಕೋಟೇಶ್ವರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್‌ ಸಕ್ರಿಯವಾಗಿದ್ದು ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ಇಡೀ ಸಮಾಜವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ – 3182ರ ಮಧ್ಯಮ ವರ್ಗದ ಕ್ಲಬ್‌ಗಳ ವಿಭಾಗದಲ್ಲಿ ಬೈಂದೂರು ರೋಟರಿ ಕ್ಲಬ್‌ ಒಟ್ಟು 20 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಶಿವಮೊಗ್ಗ ಕಾಸ್ಮೋ ಕ್ಲಬ್ ಆವರಣದಲ್ಲಿ ನಡೆದ 2023-24ನೇ ಸಾಲಿನ ಅವಾರ್ಡ್ಸ್ ನೈಟ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 2023-24ನೇ ಸಾಲಿನ ರೋಟರಿ ವರ್ಷದಲ್ಲಿ ಬೈಂದೂರು ರೋಟರಿ ಕ್ಲಬ್ ಕಾರ್ಯಗಳನ್ನು ಹಾಗೂ ಕಾರ್ಯಕ್ರಮಗಳನ್ನು ಪರಿಗಣಿಸಿ 19 ಪ್ರಶಸ್ತಿ ಹಾಗೂ CITATION AWARD ಸೇರಿ ಒಟ್ಟು 20 ಪ್ರಶಸ್ತಿಗಳಿಗೆ ನಮ್ಮ ಕ್ಲಬ್ ಭಾಜನವಾಗಿದೆ. 2023-24ನೇ ಸಾಲಿನ ಗವರ್ನರ್‌ ಪ್ರಶಸ್ತಿ ಬಿ.ಸಿ ಗೀತಾ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಕಳೆದ ಸಾಲಿನ ಸಹಾಯಕ ಗವರ್ನರ್‌ ಸಂದೀಪ್‌ ಶೆಟ್ಟಿ, ಬೈಂದೂರು ರೋಟರಿ ಕ್ಲಬ್‌ 2023-24ನೇ ಸಾಲಿನ ಅಧ್ಯಕ್ಷ ಪ್ರಸಾದ್‌ ಪ್ರಭು ಶಿರೂರು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ 2024-25ನೇ ಸಾಲಿನ ಅಧ್ಯಕ್ಷ ಮೋಹನ್‌ ರೇವಣ್ಕರ್‌, ರೊಟೆರಿಯನ್‌ಗಳಾದ ಐ. ನಾರಾಯಣ್‌, ಹರೀಶ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕ್ರಿಯಾಶೀಲ  ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ನವೆಂಬರ್ 1ರಿಂದ 3ರವರೆಗೆ ಬೈಂದೂರು ಗಾಂಧಿ ಮೈದಾನದಲ್ಲಿ ಆಯೋಜಿಸಿರುವ ಬೈಂದೂರು ಉತ್ಸವ 2024ರ ಅಧಿಕೃತ ಲಾಂಛನವನ್ನು ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮೃದ್ದ ಬೈಂದೂರು ಮೂಲಕ ಬೈಂದೂರು ಕ್ಷೇತ್ರದ ಭಾಷೆ, ಕಲೆ ಸಂಸ್ಕೃತಿಯನ್ನು ಇಡೀ ಜಗತ್ತು ನೋಡಬೇಕು ಎನ್ನುವ ಕಾರಣಕ್ಕೆ ನಡೆಯುವ ಬೈಂದೂರು ಉತ್ಸವಕ್ಕೆ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆ ಎಂದರು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಬೈಂದೂರು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ಕ್ಷೇತ್ರ. ಬೈಂದೂರು ಉತ್ಸವದಲ್ಲಿ ರಾಜ್ಯದಲ್ಲಿಯೇ ಕುಗ್ರಾಮವಾಗಿದ್ದ ಬೈಂದೂರು ಕ್ಷೇತ್ರ ಕಳೆದ ಹದಿನೈದು ವರ್ಷಗಳಿಂದ ಅಭಿವೃದ್ಧಿಯತ್ತ ಸಾಗುತ್ತಿದೆ. ಕುಂದಾಪ್ರ ಭಾಷೆಗೆ ಕಿರೀಟವಿಟ್ಟಂತೆ ನಮ್ಮ ಗ್ರಾಮೀಣ ಕಲೆ, ಸಂಸ್ಕೃತಿಗಳನ್ನು ಪ್ರತಿಬಿಂಬಿಸುವುದಕ್ಕಾಗಿ ಬೈಂದೂರು ಉತ್ಸವ ಸಜ್ಜಾಗುತ್ತಿದೆ ಎಂದರು. ಸಮೃದ್ಧ ಜನಸೇವಾ ಚಾರಿಟೇಬಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾಬ್ರಕಟ್ಟೆಯ ರೋಹಿತ್ ನಾಯಕತ್ವದ ಬಾಲಕರ ತಂಡ  ದೊಡ್ಡ ಅಂತರದಲ್ಲಿ ಎದುರಾಳಿ ತಂಡಗಳನ್ನು ಮಣಿಸಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ, ಅಕ್ಟೋಬರ್‌ನಲ್ಲಿ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದ ವಂಶಿತ್ ಪಂದ್ಯಾಟದ ಬೆಸ್ಟ್ ಆಲ್ ರೌಂಡರ್ ಮತ್ತು ಮಹಾರಾಜ ಬೆಸ್ಟ್ ಡಿಫೆಂಡರ್ ಆಗಿ ವೈಯಕ್ತಿಕ ಪ್ರಶಸ್ತಿಯನ್ನು ಗೆದ್ದಿದ್ದಾರೆ. ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಕರಾದ ಗಜೇಂದ್ರ ಶೆಟ್ಟಿ ಅವರು ತರಬೇತು ಗೊಳಿಸಿದ್ದಾರೆ. ಶಾಲೆಯ ಈ ತಂಡದ ಸಾಧನೆಯನ್ನು ಹಳೆ ವಿದ್ಯಾರ್ಥಿ ಸಂಘ, ಎಸ್ ಡಿ ಎಂ ಸಿ ಹಾಗೂ ಸ್ಥಳೀಯ ಸಂಘ ಸಂಸ್ಥೆಯವರು ಹರ್ಷ ವ್ಯಕ್ತ ಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಕರು ತಮಗೆ ದೊರೆಯುವ ವೇತನದಿಂದ ತೃಪ್ತರಾಗುವವರು. ಅವರದ್ದು ನಿಜ ಅರ್ಥದಲ್ಲಿ ಸೇವೆ. ಅವರು ಮಕ್ಕಳ ಭವಿಷ್ಯವನ್ನು ರೂಪಿಸುವ ಕಾಯಕ ನಡೆಸುವುದರಿಂದ ಅವರನ್ನು ಸಮುದಾಯವು ಗೌರವ ಮತ್ತು ಆದರದಿಂದ ನೋಡಿಕೊಳ್ಳಬೇಕು ಎಂದು ಮರವಂತೆ ಸಾಧನಾ ವೇದಿಕೆಯ ಸಂಸ್ಥಾಪಕ ಎಸ್. ಜನಾರ್ದನ ಮರವಂತೆ ಹೇಳಿದರು. ಇಲ್ಲಿನ ಸಾಧನಾ ಸಮುದಾಯ ಭವನದಲ್ಲಿ ಸಾಧನಾ ಏರ್ಪಡಿಸಿದ್ದ ಶಿಕ್ಷಕ ದಿನಾಚರಣೆಯಲ್ಲಿ ಸನ್ಮಾನಿತರಾದ ನಿವೃತ್ತ ಶಿಕ್ಷಕ ನಾರಾಯಣ ಬಿ. ಮತ್ತು ಸರ್ವೋತ್ತಮ ಭಟ್ ಅವರನ್ನು ಅಭಿನಂದಿಸಿದರು. ಭಾಗವಹಿಸಿದ್ದ ಮರವಂತೆಯ ಎಲ್ಲ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಲಾಯಿತು ಮತ್ತು ಭೋಜನ ಕೂಟ ಏರ್ಪಡಿಸಲಾಗಿತ್ತು. ಸಾಧನಾ ಅಧ್ಯಕ್ಷ ಪುಟ್ಟ ಎಂ. ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಶಾಧಿಕಾರಿ ಚಂದ್ರ ಬಿಲ್ಲವ, ಸದಸ್ಯರು, ನಾಡ ಸತ್ಯಸಾಯಿ ಲೋಕಸೇವಾ ಗುರುಕುಲಂನ ಮುಖ್ಯಸ್ಥ ಅವಿನಾಶ್ ಉಪಸ್ಥಿತರಿದ್ದರು. ಜತೀಂದ್ರ ಮರವಂತೆ ನಿರೂಪಿಸಿದರು. ದೇವಿದಾಸ ಶ್ಯಾನುಭಾಗ್ ಸಹಕರಿಸಿದರು. ಜಿ. ಎಸ್. ಮಡಿವಾಳ್ ಸ್ವಾಗತಿಸಿದರು. ಕಾರ್ಯದರ್ಶಿ ಶೇಷಗಿರಿ ಆಚಾರ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊಟೇಶ್ವರದ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇಗುಲಕ್ಕೆ ಭಕ್ತರು ಹಾಗೂ ದಾನಿಗಳು ನೀಡಿದ 125ಕೆ.ಜಿ ತೂಕದ ಬೆಳ್ಳಿಯಿಂದ 1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ರಜತ ರಥವನ್ನು ಭವ್ಯ ಪುರಮೆರವಣಿಗೆಯೊಂದಿಗೆ ಭಾನುವಾರ ದೇಗುಲಕ್ಕೆ ಕೊಂಡೊಯ್ಯಲಾಯಿತು. ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಳದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ರಜತ ರಥದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕುಂಭಾಶಿ, ಗೋಪಾಡಿ, ಬೀಜಾಡಿ, ಕೋಟೇಶ್ವರ, ಅಂಕದಕಟ್ಟೆ ಮೂಲಕ ದೇಗುಲಕ್ಕೆ ರಥವನ್ನು ಕೊಂಡೊಯ್ಯಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ, ತಟ್ಟಿರಾಯ, ಕೀಲು ಕುದುರೆ, ಟ್ಯಾಬ್ಲೊ, ಚಂಡೆ ವಾದನ ಸಹಿತ ಭವ್ಯ ಮೆರವಣಿಗೆಯಲ್ಲಿ ದೇಗುಲಕ್ಕೆ ಸಾಗಿಸಿ ಪೂಜೆ ಸಲ್ಲಿಸಲಾಯಿತು. ಸೆ.16ರ ರಾತ್ರಿ ರಜತರಥ ಸಮರ್ಪಣೆ ನಡೆಯಿಲಿದೆ. ದೇವಾಲಯದ ಪ್ರಧಾನ ತಂತ್ರಿ ಪ್ರಸನ್ನ ಕುಮಾರ್ ಐತಾಳ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಮೆರವಣಿಗೆಯಲ್ಲಿ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಗ್ರಾಮಸ್ಥರು ಪಾಲ್ಗೊಂಡಿದ್ದರು. 1.25 ಕೋಟಿ ವೆಚ್ಚದ ರಜತ ರಥವನ್ನು ಭಕ್ತರು…

Read More