Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರದ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮ ಗುರುಗಳು ಹಾಗೂ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿ ರೆ. ಫಾ. ಪಾವ್ಲ್ ರೇಗೊ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಭಾಪತಿ ಜಯಕರ ಶೆಟ್ಟಿ ಅವರು ರೆಡ್ ಕ್ರಾಸ್ ಸಂಸ್ಥೆ ಬೆಳೆದು ಬಂದ ಬಗೆ, ಉದ್ದೇಶ ಹಾಗೂ ಅದರ ಕಾರ್ಯ ಕಲಾಪಗಳ ಬಗ್ಗೆ ಮಾಹಿತಿ ನೀಡಿ ತಾರತಮ್ಯವಿಲ್ಲದೆ ಒಗ್ಗಟ್ಟು, ಮಾನವೀಯ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವುದು ರೆಡ್ ಕ್ರಾಸ್ ಸಂಸ್ಥೆ ಎಂದು ಹೇಳಿದರು. ಕುಂದಾಪುರದ ವೈದ್ಯರು ಡಾ. ಸೋನಿ ಡಿಕೋಸ್ತಾ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ರೆಡ್ ಕ್ರಾಸ್‌ನ ಖಜಾಂಚಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 2024 ಮೇ ಯಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಹಿರಿಯ ವಿದ್ಯಾರ್ಥಿಗಳಾದ ಒಲ್ವಿಟಾ ಆನ್ಸಿಲ್ಲಾ ಡಿಸೋಜಾ, ಪ್ರೀತಿಶ್ ಕುಡ್ವಾ, ಜೊನಿಟಾ ಜೋಶ್ನಿ ಸೋಜಾ ಡಿ, ಸಾಹುಲ್ ಹಮೀದ್, ಅನುಷಾ ಹೆಗ್ಡೆ, ಮೆಲ್ವಿನ್ ಜೋಸ್ವಿನ್ ಲೋಬೋ, ಪಲ್ಲವಿ ಹೆಚ್. ಆರ್, ಪ್ರಜ್ವಲ್, ವಿಲಿಟಾ ಆಲ್ವಿಶಾ ರೇಗೊ, ಆಂಚಲ್, ಸುಷ್ಮಾ ಎನ್, ಕಿರಣ್ ಚಂದ್ರಶೇಖರ್ ಶೇರಿಗಾರ್, ರೋಯ್ಡನ್, ಕೌಶಿಕ್, ಕಿರಣ್ ಭಾರಧ್ವಜ್, ರಜತ್ ಜೈನ್, ಶುಭಂಕರ್, ರಾಕೇಶ್, ಪ್ರಖ್ಯಾತ್, ಪವನ್, ನಾಗರಾಜ್ ಜಿ. ಶೆಟ್ಟಿ, ಹೇಮಂತ್ ಕುಮಾರ್ ಡಿ. ಕೆ., ಶ್ರೀನಿಧಿ ಎಸ್ ಶೆಟ್ಟಿ, ಖುಶ್ಬೂ ಮತ್ತು ಗೀತಾ ನಿಶಾ ಪಿರೇರಾ – ಒಟ್ಟು 25 ವಿದ್ಯಾರ್ಥಿಗಳು, ಹಾಗೂ ಜನವರಿ 2024ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಕ್ಲಾರ‍್ಸನ್, ಮೇಘಾ, ತೇಜಸ್, ವಾಣಿಶ್ರೀ, ಧಾಮಿನಿ, ದರ್ಶನ್ ಜಿ. ಎಚ್, ಪ್ರಸಾದ, ನೌಫಾಲ್, ಅಂಕಿತಾ ಕಲ್ಲಪ್ಪ, ರಾಷ್ಟ್ರೀತ್ ಸಿ. ಜಿ, ಅವಿನಾಶ್, ಸುಕ್ಷ್ಮಾ, ಅಭಿಷೇಕ್ ಚೋಟಿ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಇವರು ಮೇ ತಿಂಗಳಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಸಂಪನ್ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಅವರು ಉಡುಪಿಯ ಲೆಕ್ಕಪರಿಶೋಧಕರಾದ ಸಿ.ಎ. ಸುರೇಂದ್ರ ನಾಯಕರವರಲ್ಲಿ ಸಿ.ಎ. ಆರ್ಟಿಕಲ್ ಶಿಪ್ ಪೂರೈಸಿರುತ್ತಾರೆ. ಅವರು ಕುಂದಾಪುರ ತಾಲೂಕಿನ ಆಲೂರು ಗೋಳಿಕಟ್ಟೆ‌ಯ ನಿವಾಸಿ‌ಯಾಗಿರುವ ಶೇಖರ ಶೆಟ್ಟಿ ಮತ್ತು ಸುಜಾತ ಶೆಟ್ಟಿಯವರ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮುದಾಯದ ಸಂಘಟನೆಗಳ ಮೂಲ ಉದ್ದೇಶವೇ ಸಮುದಾಯದ ಅಭಿವೃದ್ಧಿಯಾಗಿದ್ದು, ಉಳ್ಳುವರು ಇಲ್ಲದವರಿಗೆ ನೀಡುವ ದಾನಕ್ಕೆ ಸೇತುವೆಯಾಗಿ ಕೆಲಸ ಮಾಡಬೇಕು. ಅಂತಹ ಶ್ರೇಷ್ಠ ಕಾರ್ಯವನ್ನು ಕಳೆದ ಹನ್ನೆರಡು ವರ್ಷಗಳಿಂದ ಟ್ರಸ್ಟ್‌ ಮಾಡುತ್ತಾ ಬರುತ್ತಿದೆ ಎಂದು ವಿಶ್ವ ರಾಮಕ್ಷತ್ರಿಯ ಮಹಾಸಂಘ ಅಧ್ಯಕ್ಷ ಎಚ್.‌ ಶಶಿಧರ್‌ ನಾಯ್ಕ್‌ ಹೇಳಿದರು. ಅವರು ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ರಿ. ಬೈಂದೂರು ಇದರ 12ನೇ ವರ್ಷದ ಟ್ರಸ್ಟ್ ದಿನಾಚರಣೆ ಹಾಗೂ ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ ರಾಮಕ್ಷತ್ರಿಯ ಸಮುದಾಯದಲ್ಲಿ ಹಲವು ಪ್ರತಿಭಾನ್ವಿತರಿದ್ದು ಅವರಿಗೆ ಸೂಕ್ತ ಪ್ರೋತ್ಸಾಹ ದೊರೆತಾದ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತದೆ ಎಂದರು. ಟ್ರಸ್ಟ್‌ನಿಂದ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, ಮನೆ ಹಸ್ತಾಂತರ, ವಿದ್ಯಾರ್ಥಿ ದತ್ತು ಸ್ವೀಕಾರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಹಸ್ತಾಂತರ ನಡೆಯಿತು. ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಡಾ. ಜಿ. ಕೆ. ಸುರೇಶ್ ಮಾತನಾಡಿ, ಅರ್ಹರಿಗೆ ನೆರವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರದಂದು ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಗುರುಕುಲ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪಾಲ್ ಮಚಾಡೊ, ಇವರು ನಿಜವಾದ ಸಂಸತ್ತಿನ ಕಾರ್ಯ ವೈಖರಿ‌ ಬಗ್ಗೆ ತಿಳಿಸಿದರು. ಶಿಕ್ಷಣವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ. ನೀವು ಪಡೆದ ಶಿಕ್ಷಣ ಅರ್ಥಪೂರ್ಣವಾಗಬೇಕಾದರೆ ಮೊದಲು ನೀವು ನಿಮ್ಮ ಶಿಕ್ಷಕರನ್ನು ಮತ್ತು ಶಿಕ್ಷಣ ಸಂಸ್ಥೆಯನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕೌಶಲಭರಿತ ಶಿಕ್ಷಣ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವೃತ್ತಿಪರ ಮತ್ತು ವೈಯಕ್ತಿಕ ಜೀವನಕ್ಕೆ ಸಹಕಾರಿ, ಪ್ರತಿಯೊಬ್ಬ ವಿಧ್ಯಾರ್ಥಿಯು ತನ್ನಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು, ನಾಯಕತ್ವ ಗುಣ ಹುಟ್ಟಿನಿಂದ ಬರುವುದಿಲ್ಲ, ಅದನ್ನು ತಾವಾಗೇ ಬೆಳೆಸಿಕೊಳ್ಳಬೇಕು, ಆ ಗುಣವೂ ಉತ್ತಮ ಮಾತುಗಾರಿಕೆ ಮತ್ತು ನಡವಳಿಕೆಯಿಂದ ಮಾತ್ರ ಬೆಳೆಸಿಕೊಳ್ಳಲು ಸಾಧ್ಯ, ಜೊತೆಗೆ ಸಂಸ್ಥೆಯ ನೀತಿನಿಯಮಗಳನ್ನು ಪಾಲಿಸುತ್ತಾ ಸಂಸ್ಥೆಯ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನೀಲ್ ಪ್ಯಾಟ್ರಿಕ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಹೇಳಿದರು. ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್‌, ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಸರ್ಕಾರಿ ವ್ಯವಸ್ಥೆಯ ಮೂಲಕ ಕಾಲು ಸಂಕ ನಿರ್ಮಿಸಲು ಅಸಾಧ್ಯ ಎನ್ನುವುದು ನಮ್ಮ ಗಮನದಲ್ಲಿತ್ತು. ಆದರೆ ಹಾಗೆಯೇ ಬಿಟ್ಟರೆ ನಮ್ಮ ಜನರ ಸಮಸ್ಯೆಯೂ ಬಗೆಹರಿಯುವುದಿಲ್ಲ ಎನ್ನುವುದೂ ಕೂಡಾ ಅರಿವಿತ್ತು. ಇದಕ್ಕಾಗಿ ನಾನು ಮತ್ತು ಅನುದೀಪ್ ಹೆಗ್ಡೆ ಅವರು ಸೇತುವೆಯ ರೀತಿಯಲ್ಲಿ ದಾನಿಗಳನ್ನು ಜೋಡಿಸುವ ಕೆಲಸ ಮಾಡಿದ್ದೇವೆ ಅಷ್ಟೇ, ಉಳಿದೆಲ್ಲವೂ ಕೂಡಾ ದೇವರು ದಾನಿಗಳ ಮೂಲಕ ಮಾಡಿಸಿದ್ದಾರೆ. ದೂರದ ಬೆಂಗಳೂರಿನಲ್ಲಿ ಕುಳಿತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡು, ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಉಡುಪಿ ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜುಲೈ 18ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸರಾಸರಿ 92.7ಮಿ.ಮೀ ಮಳೆಯಾಗಿದ್ದು, ಈ ಪೈಕಿ ಕುಂದಾಪುರ ತಾಲೂಕಿನಲ್ಲಿ 101.8ಮಿ.ಮೀ, ಬೈಂದೂರು ತಾಲೂಕಿನಲ್ಲಿ 98.5 ಮಿ.ಮೀ., ಬ್ರಹ್ಮಾವರ ತಾಲೂಕಿನಲ್ಲಿ 100.4ಮೀ.ಮೀ, ಹೆಬ್ರಿ ತಾಲೂಕಿನಲ್ಲಿ 83.8 ಮಿ.ಮೀ. ಮಳೆಯಾಗಿದೆ. ಹವಾಮಾನ ಇಲಾಖೆ ವರದಿಯಂತೆ ಜುಲೈ 14ರ ತನಕ ಭಾರಿ ಮಳೆ, ಜುಲೈ 15 ಮತ್ತು 16ರಂದು ಅತ್ಯಂತ ಭಾರಿ ಮಳೆ, ಜುಲೈ 17 ಮತ್ತು 18ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕಳೆದ 15 ದಿನಗಳಲ್ಲಿ ವರಣನ ಆರ್ಭಟಕ್ಕೆ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪ್ರವಾಹ, ಕಡಲಕೊರೆತ, ಸುಂಟರಗಾಳಿ ಮೊದಲಾದವುಗಳನ್ನು ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಕೃಷಿ, ತೋಟಗಾರಿಕಾ ಬೆಳೆ ಹಾನಿ, ವಿದ್ಯುತ್‌ ಕಂಬಗಳು, ಮನೆ, ಕೊಟ್ಟಿಗೆ ಹಾನಿ ಸೇರಿದಂತೆ ಜೀವಹಾನಿಯೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಮಾಜಕ್ಕೆ ಮಾಡುವ ಸೇವೆಯು ಬದುಕನ್ನು ಅವಿಸ್ಮರಣೀಯಗೊಳಿಸುತ್ತದೆ. ರೋಟರಿಯಿಂದ ರಚನಾತ್ಮಕ ಕೆಲಸಗಳ ಜೊತೆಗೆ ಈ ನೆಲ, ಜಲ ಪ್ರಕೃತಿಯನ್ನು ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು ಎಂದು ರೋಟರಿ ಜಿಲ್ಲಾ ಮಾಜಿ ಸಹಾಯಕ ಗವರ್ನರ್ ಡಾ. ಸೌಮ್ಯ ಮಣಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿ ನಡೆದ ಗಂಗೊಳ್ಳಿ ರೋಟರಿ ಕ್ಲಬ್‌ನ 2024-25ನೇ ಸಾಲಿನ ಪದ ಪ್ರದಾನ ಸಮಾರಂಭದಲ್ಲಿ ರೋಟರಿ ಪದಾಧಿಕಾರಿಗಳಿಗೆ ಪದ ಪ್ರದಾನ ನೆರವೇರಿಸಿ ಅವರು ಮಾತನಾಡಿದರು. ಮಹಾನ್ ವ್ಯಕ್ತಿಗಳು ಎಂದೆನ್ನಿಸಿಕೊಂಡವರು ಕೇವಲ ಬದುಕಲಿಲ್ಲ. ಬದಲಿಗೆ ಇತಿಹಾಸ ಸೃಷ್ಟಿಸಿ ಹೋದರು. ನಾವು ಮಾಡುವ ಉತ್ತಮ ಕಾರ್ಯದ ಮೂಲಕ ಮಹಾನ್ ಎನ್ನಿಸಿಕೊಳ್ಳುತ್ತೇವೆ. ನಾನು ಎನ್ನುವುದನ್ನು ಬಿಟ್ಟು ನಾವು ಎನ್ನುವ ಸಮಷ್ಟಿ ಪ್ರಜ್ಞೆ ಬೆಳೆದರೆ ಗೆಲುವಿನ ಸಾರಿ ಸುಗಮವಾಗುವುದು ಎಂದರು. ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಟಾಚಾರದ ಜನಸ್ಪಂದನ ಜಿಲ್ಲೆಯಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿನ ಗೊಂದಲಗಳಿಗೆ ಅಧಿಕಾರಿಗಳ ಜನ ವಿರೋಧಿ ವರ್ತನೆಗಳೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆರೋಪಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ಜನಸ್ಪಂದನ ಕಾರ್ಯಕ್ರಮವು ಉಡುಪಿ ಜಿಲ್ಲೆಯ ಹೆಚ್ಚಿನ ತಾಲ್ಲೂಕುಗಳಲ್ಲಿ ಗೊಂದಲಗಳು ಏರ್ಪಡಲು ಅಧಿಕಾರಿಗಳ ಜನವಿರೋಧಿ ವರ್ತನೆಗಳೇ ಕಾರಣ. ಜಿಲ್ಲೆಯಲ್ಲಿನ ಜನಸ್ಪಂದನ ಕಾರ್ಯಕ್ರಮಗಳು ಕೇವಲ ಕಾಟಾಚಾರಕ್ಕೆ ನಡೆಯುತ್ತಿದೆ, ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲಾ. ಇಲಾಖೆಯ ಮೆಟ್ಟಿಲುಗಳನ್ನು ವರ್ಷಗಳಿಂದ ಹತ್ತಿ ಇಳಿಯುವುದು ಬಿಟ್ಟರೆ ಜನರಿಗೆ ಸಮಸ್ಯೆಗಳ ಶಾಶ್ವತ ಪರಿಹಾರ ಮರೀಚಿಕೆಯಾಗಿದೆ. ಕುಂದಾಪುರ ತಾಲ್ಲೂಕಿನ ಜನಸ್ಪಂದನ ಕಾರ್ಯಕ್ರಮವಾಗಿ ತಿಂಗಳು ಕಳೆಯುತ್ತಾ ಬಂದರೂ ಸಮಸ್ಯೆಗಳ ಪರಿಹಾರ ಕೋರಿ ಅರ್ಜಿ ನೀಡಿದ ಹೆಚ್ಚಿನವರಿಗೆ ಸಂಬಂಧಿತ ಇಲಾಖೆಗಳಲ್ಲಿ ಅದೇ ಹಾರಿಕೆಯ ಉತ್ತರ ದೊರೆಯುತ್ತಿದೆ. ಮುಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಹಿಂದೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ಅರ್ಜಿ, ಅದರಲ್ಲಿ ವಿಲೇವಾರಿ ಆದ ಅರ್ಜಿ, ಬಾಕಿ ಇರುವ ಅರ್ಜಿ, ಅರ್ಜಿ ಬಾಕಿ ಇರಲು ಕಾರಣವೇನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ ಜೆಸಿಐ ಕುಂದಾಪುರ ಸಿಟಿ, ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕದಳ ಕುಂದಾಪುರ ಠಾಣೆ ಅವರು ಅಗ್ನಿನಂದಕ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಫ್‌ಡಿ ಕಿರಣ್ ವಹಿಸಿದ್ದರು. ಕಾರ್ಯಕ್ರಮದ ವಿಶೇಷ ಆಹ್ವಾನಿತರು ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿಗಳಾಗಿರುವ ವಿ.ಸುಂದರ್ ಅವರು ಅಗ್ನಿನಂದಕದ ಕುರಿತಾಗಿ ಸಂಕ್ಷಿಪ್ತ ಮಾಹಿತಿ ನೀಡಿದರು. ತದನಂತರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿದರು. ಮುಖ್ಯ ಅತಿಥಿಗಳಾಗಿ ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರಾಗಿರುವ ಜೆಎಫ್‌ಎಸ್‌ ರಾಜೇಶ್ ರಾಜನ್, ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್, ಜನತಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ…

Read More