ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಜಿಕೆ ಅವರು ವಹಿಸಿದ್ದರು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಹಿಂದಿನ ವಿದ್ಯಾರ್ಥಿ ಸಿ.ಎ ಸುದೀಪ್ ಶೆಟ್ಟಿ ಅವರು ಕೊಡಮಾಡಿದ ಬೆಳ್ಳಿಯ ಕ್ವಾಯಿನನ್ನು ಉಡುಗೊರೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಧನೆ ಹಾಗೂ ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ, ಮೂಕಾಂಬಿಕ ಪದವಿ ಪೂರ್ವ ಕಾಲೇಜು ಈ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದು ಎಂದು ಹೇಳಲು ನಾನು ಅತ್ಯಂತ ಹೆಮ್ಮೆ ಪಡುತ್ತೇನೆ. ಈ ಕಾಲೇಜಿನಲ್ಲಿ ಕಲಿತ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಜು.05: ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುಂಡಿ, ವಾಟೆಗುಂಡಿ ಸಂಪರ್ಕಿಸುವ ಕಿರು ಸೇತುವೆ ನೀರಿನ ರಭಸಕ್ಕೆ ಕುಸಿಯುವ ಭೀತಿ ಉಂಟಾಗಿದೆ. ಬೆಳ್ಕಲ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಾಕಿಕೊಂಡಿರುವ ಈ ಕಿರುಸೇತುವೆಯ ಅಡಿಪಾಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿದೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಅಪಾಯದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಈ ಹೊಳೆಗೆ ಹೊಂದಿಕೊಂಡಿರುವ ಶಾಲೆಗೂ ಕೂಡ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಸುತ್ತ-ಮುತ್ತಲಿನ ಪ್ರದೇಶಗಳಿಂದ ಬೆಳ್ಕಲ್ ಶಾಲೆ, ಅಂಗನವಾಡಿಗೆ ಹೋಗುವ ಮಕ್ಕಳಿಗೆ ಹಾಗೂ ದೈನಂದಿನ ಕೆಲಸ ಕಾರ್ಯಗಳಿಗಾಗಿ ತಿರುಗಾಡುವ ಸ್ಥಳೀಯರಿಗೆ ಇದೇ ಪ್ರಮುಖ ಸಂಪರ್ಕ ಸೇತುವೆಯಾಗಿದ್ದು, ಸೇತುವೆ ಮಳೆಯ ರಭಸಕ್ಕೆ ಕುಸಿದುಬಿದ್ದಲ್ಲಿ ಈ ಭಾಗದ ಜನಸಂಪರ್ಕಕ್ಕೆ ತೊಡಕಾಗುವ ಸಾಧ್ಯತೆಗಳಿದೆ. ಜಡ್ಕಲ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸತೀಶ್ ತೋಳಾರ್, ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರಿನ ಟೋಲ್ಗಳ ಸಮೀಪ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಐದಾರು ಬಾರಿಗೂ ಹೆಚ್ಚು ಟೋಲ್ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ನಾವುಂದ, ನಾಡ, ಮರವಂತೆ ಗ್ರಾಮದ ಹಲವು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೈಂದೂರು ತಾಲೂಕಿನ ಬಡಾಕೆರೆ, ಮರವಂತೆ, ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ. ನೆರೆಪೀಡಿತ ಪ್ರದೇಶದಲ್ಲಿದ್ದ ಮನೆಯವರು, ಜಾನುವಾರುಗಳನ್ನು ಬೇರೆ ಪ್ರದೇಶಕ್ಕೆ ಸ್ಥಳ ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕಾರ್ಯಚರಣೆಗಿಳಿದಿದ್ದರು. ಸ್ಥಳೀಯರು ದೋಣಿಗಳ ಮೂಲಕ ತೆರಳಿ ರಕ್ಷಣಾ ಕಾರ್ಯಕ್ಕೆ ಸಹಕರಿಸಿದರು. ಅಧಿಕಾರಿಗಳ ಭೇಟಿಬೈಂದೂರು ತಾಲೂಕು ಆಡಳಿತ ಅಧಿಕಾರಿ ಪ್ರದೀಪ್ ತಾಲೂಕು ಪಂಚಾಯತಿಯು ಭಾರತಿ, ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು, ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ, ಗ್ರಾಮ ಪಂಚಾಯತ್ ನಾವುಂದ, ಗ್ರಾಮ ಪಂಚಾಯತ್ ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸುಂಟರಗಾಳಿಯಿಂದ ಹಾನಿಗೊಳಗಾದ ಕುಳ್ಳುಂಜೆ, ರಟ್ಟಾಡಿ ಮೊದಲಾದ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆದೂರು ಸದಾನಂದ ಶೆಟ್ಟಿ, ಹಾಲಾಡಿ ಗ್ರಾಪಂ ಅದ್ಯಕ್ಷ ಚೋರಾಡಿ ಅಶೋಕ ಶೆಟ್ಟಿ, ಸದಾಶಿವ ಶೆಟ್ಟಿ, ಶಂಕರನಾರಾಯಣ, ಅಜಿತ್ ರಟ್ಟಾಡಿ, ಸಂಪತ್ ಶೆಟ್ಟಿ ರಟ್ಟಾಡಿ, ಕೃಷ್ಣ ರಟ್ಟಾಡಿ ಜೊತೆಯಲ್ಲಿದ್ದರು. ► ಕೊಲ್ಲೂರು: ಮನೆ ಮೇಲೆ ಗುಡ್ಡ ಜರಿದು ಬಿದ್ದು ಮಹಿಳೆ ಸಾವು – https://kundapraa.com/?p=73870 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಮನೆಗೆಲಸಕ್ಕೆಂದು ತೆರಳಿದ್ದ ಮಹಿಳೆ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿಗುಡ್ಡೆ ಎಂಬಲ್ಲಿ ನಡೆದಿದೆ. ಹಳ್ಳಿಬೇರು ನಿವಾಸಿ ಅಂಬಾ (55) ಮೃತ ದುರ್ದೈವಿ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಗುರುವಾರ ಸಂಜೆಯ ವೇಳೆಗೆ ಗುಡ್ಡದ ಒಂದು ಪಾರ್ಶ್ವ ಜರಿದು ಬಲಭಾಗಕ್ಕೆ ಅಪ್ಪಳಿಸಿದೆ. ಈ ವೇಳೆ ಸೊಸೈಟಿಗುಡ್ಡೆಯ ಮನೆಯೊಂದರಲ್ಲಿ ಕೂಲಿ ಕೆಲಸಕ್ಕಾಗಿ ತೆರಳಿದ್ದ ಮಹಿಳೆಯ ಮೇಲೆಯೇ ಗುಡ್ಡ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ ಅವರು ಉಸುರುಗಟ್ಟಿ ಸಾವನ್ನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹ ಮೇಲಕ್ಕೆತ್ತಲಾಗಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೈದ್ಯೋ ನಾರಾಯಣ ಹರಿ ಎಂಬ ವಾಕ್ಯ ಇಂದಿಗೂ ಪ್ರಸ್ತುವಾಗಿದ್ದು ದೇವರ ನಂತರ ಜನರು ವೈದ್ಯರನ್ನು ತಮ್ಮ ಕಾಯಿಲೆ ಗುಣಪಡಿಸುವ ದೇವರಂತೆಯೇ ನೋಡುತ್ತಾರೆ ಎಂದು 2024-25ನೇ ಸಾಲಿನ ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಹೇಳಿದರು. ವೈದ್ಯರ ದಿನಾಚರಣೆ ಅಂಗವಾಗಿ ಬೈಂದೂರು ರೋಟರಿ ವತಿಯಿಂದ ವಿವಿಧೆಡೆ ಹಮ್ಮಿಕೊಳಲಾಗಿದ್ದ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಬೈಂದೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜೇಶ್, ವೈದ್ಯೆ ಹಾಗೂ ಬೈಂದೂರು ರೋಟರಿ ಸದಸ್ಯರಾದ ಡಾ. ನಂದಿನಿ, ವೈದ್ಯರುಗಳಾದ ಡಾ. ನಿವೇದಿತಾ, ಡಾ. ಜೈಮಿನಿ, ಡಾ. ವತ್ಸಲಾ, ಡಾ. ಆರ್. ಸಿ. ಪಾಟೀಲ್, ಹಿರಿಯ ವೈದ್ಯರುಗಳಾದ ಡಾ. ಎಂ. ಎಸ್. ಶೆಟ್ಟಿ, ಡಾ. ಕೆ. ಆರ್. ನಂಬಿಯಾರ್, ಡಾ. ಸುಧಾಕರ ಹೆಗ್ಡೆ, ಡಾ. ಪ್ರವೀಣ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕಾರ್ಯದರ್ಶಿ ಸುನಿಲ್ ಹೆಚ್.ಜಿ., ಈ ವೇಳೆ ಹಿರಿಯ ರೊಟೇರಿಯನ್ ಐ. ನಾರಾಯಣ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.4: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರ್ಕಾರಿ / ಅನುದಾನಿತ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಸಮಾರಂಭವನ್ನು ಬೈಂದೂರಿನ ಜೆ.ಎನ್.ಆರ್ ಸಭಾಂಗಣದಲ್ಲಿ ಜುಲೈ 6ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಅವರು ಬೈಂದೂರು ಪ್ರಸ್ ಕ್ಲಬ್ನ್ನಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಾದ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಮೈಸೂರು ಮರ್ಕಂಟೈಲ್ ಕಂಪನಿ ಲಿಮಿಟೆಡ್ [ಎಂ.ಎಂ.ಸಿ.ಎಲ್) ನೆರವಿನೊಂದಿಗೆ ಹೆಗ್ಗುಂಚೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಾಲಾ ಕಟ್ಟಡಗಳ ನಿರ್ಮಾಣ, ವಿದ್ಯಾರ್ಥಿಗಳಿಗೆ ನಿರಂತರವಾಗಿ ಉಚಿತ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ, ಮಧ್ಯಾಹ್ನ ಊಟಕ್ಕೆ ದೇಣಿಗೆ, ಶಾಲಾ ಕಂಪ್ಯೂಟರ್ ಲ್ಯಾಬ್ಗಳ ವ್ಯವಸ್ಥೆ, ಸಾರ್ವಜನಿಕ ಶೌಚಾಲಯಗಳ ನಿರ್ಮಾಣ, ಬಡ ಮತ್ತು ನಿರ್ಗತಿಕರಿಗೆ ವೈದ್ಯಕೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆಂಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರ ಶೋಭಾಲಕ್ಷ್ಮೀ ಎಚ್. ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ 142 ಕೋಟಿ ಜನಸಂಖ್ಯೆಯಲ್ಲಿ 50 ಕೋಟಿಯವರೆಗೆ ವಿದ್ಯಾರ್ಥಿಗಳು ಇರುವುದು ನಮ್ಮ ಭಾಗ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಜಿಲ್ಲಾ ಆಯುಕ್ತ ಡಾ. ಎಂ ಮೋಹನ ಆಳ್ವ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ವತಿಯಿಂದ ಮೂಡುಬಿದಿರೆಯ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ನಡೆದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ವಿದ್ಯೆ ಹಾಗೂ ಬುದ್ಧಿಯನ್ನು ಬೆಳೆಸುವುದರ ಜೊತೆಗೆ ಒಂದು ಒಳ್ಳೆಯ ಮನಸ್ಸನ್ನು ಕಟ್ಟುವ ಅವಶ್ಯಕತೆ ಇದೆ. ಇದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ನೆರವೇರಿಸಲು ಸಾಧ್ಯ ಎಂದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಇರುವ ಅವಕಾಶಗಳು ಅಪಾರ. ಸ್ಕೌಟ್ಸ್ ಮತ್ತು ಗೈಡ್ಸ್ ನ ಚಟುವಟಿಕೆಗಳು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಪಸರಿಸಬೇಕು ಎಂದರು.ಜಿಲ್ಲೆಯ ಎಲ್ಲಾ ಸ್ಥಳೀಯ…
