ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸಿ, ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೇ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಜನತೆ ಅನಗತ್ಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೇ, ಶೈಕ್ಷಣಿಕ ಬೆಳವಣಿಗೆಯ ಕಡೆ ಗಮನಹರಿಸುವ ಮೂಲಕ ತಮ್ಮ ಬದುಕು ರೂಪಿಸಲು ಈಗಿನಿಂದಲೇ ದೃಢ ನಿರ್ಧಾರ ಕೈಗೊಂಡು ಉತ್ತಮ ಭವಿಷ್ಯದ ನಿರ್ಮಾಣದತ್ತ ಹೆಜ್ಜೆ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಅಮೃತ್ ಗಾರ್ಡನ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಅಮೃತ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿದಾಗ ನಮ್ಮ ದೇಶವನ್ನು ಹೊರತುಪಡಿಸಿ ವಿವಿಧೆಡೆ ಸಾಮಾಜಿಕ ಅಸ್ಥಿರತೆ ಇದ್ದು, ಇದರ ಪರಿಣಾಮ ಯುವಜನರ ಮೇಲೆ ಉಂಟಾಗುತ್ತದೆ. ನಮ್ಮ ದೇಶದಲ್ಲಿ ಬೇಧ, ಭಾವ, ಜಾತಿ ತಾರತಮ್ಯ ವಿಲ್ಲದೇ ಸಂವಿಧಾನದ ಆಶಯದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಧನ್ವಿ ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಅವರ ಪುತ್ರಿಯಾಗಿದ್ದು ಪ್ರಸ್ತುತ ಹೆಮ್ಮಾಡಿಯ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡತ್ತಿದ್ದಾರೆ. ಸೆ. 26ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕನ 113ನೇ ಜನ್ಮದಿನದ ಸಂಭ್ರಮಚಾರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಲಜಾಗ್ರತಿ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ್ ವಹಿಸಿದ್ದರು.ರೋಟರಿ ಜಿಲ್ಲಾ ಗವರ್ನರ್ ಸಿ.ಎ. ದೇವಾನಂದ್ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನೆಲ-ಜಲ-ಪರಿಸರ ಜಿಲ್ಲಾ ಸಂಯೋಜಕರಾದ ಶಿವಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಸಂಪನ್ಮೂಲ ವ್ಯಕ್ತಿ ರತ್ನ ಜೋಸೆಫ್ ಜಿ.ಎಮ್ ರೆಬೆಲ್ಲೊ ಅವರು ಮಾತನಾಡಿ, ಜಲಜಾಗ್ರತಿಯ ಕುರಿತಾಗಿ ಅರಿವು ಮೂಡಿಸಿದರು. ಮಳೆಕೊಯ್ಲು,ಜಲ ಮರುಪೂರಣ, ಜಲಕ್ಷಾಮ, ದ್ರವ ತ್ಯಾಜ್ಯ ಈ ಪ್ರಮುಖ ವಿಚಾರಗಳ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ರಂಜಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೊಂಕಣಿ ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಎಂ. ಆರ್. ಕಾಮತ್ ಮತ್ತು ಉಷಾ ಪೈ ಹಾಗೂ ಕೊಡಿಯಾಲ್ ಕಬರ್ ಪತ್ರಿಕೆ ಮುಖ್ಯಸ್ಥ ವೆಂಕಟೇಶ ಬಾಳಿಗ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಿಸಿ ಶುಭ ಹಾರೈಸಿದರು. ಜಿ.ಎಸ್.ವಿ.ಎಸ್ ಅಸೋಸಿಯೇನ್ ಕಾರ್ಯದರ್ಶಿ ಎಚ್.ಗಣೇಶ್ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಎಸ್.ವಿ. ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು. ಕೊಂಕಣಿ ಶಿಕ್ಷಕಿಯರಾದ ರೇಷ್ಮಾ ನಾಯಕ್ ಮತ್ತು ನಮಿತಾ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿ, ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿ ಸಾಧನೆ ಮಾಡಿ, ವರದಿ ವರ್ಷದಲ್ಲಿ 6.01 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರದಿ ವರ್ಷದಲ್ಲಿ 1030 ಕೋಟಿ ರೂ. ಗೂ ಮಿಕ್ಕಿ ವ್ಯವಹಾರ ನಡೆಸಿ, ಸಂಘದ ನಾಲ್ಕು ಶಾಖೆಗಳ ಮೂಲಕ 238.08ಕೋಟಿ ರೂ. ಠೇವಣೆ ಸಂಗ್ರಹಿಸಿ, 200.22 ಕೋಟಿ ರೂ. ಸಾಲ ನೀಡಿದೆ, 77.18 ಕೋಟಿ ರೂ. ಹೂಡಿಕೆ ಮಾಡಿ, 32.05ಕೋಟಿ ರೂ. ನಿಧಿಗಳನ್ನು ಹೊಂದಿ ಸದೃಢವಾಗಿದೆ. 8400 ಸದಸ್ಯರನ್ನೊಳಗೊಂಡ 756 ರೈತಸಿರಿ ಸ್ವಸಹಾಯ ಗುಂಪುಗಳನ್ನು ಸಂಯೋಜಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ, ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಹಾಗೂ ಗಂಗೊಳ್ಳಿ ವಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ವರ್ಷ- 2024 ಅಂಗವಾಗಿ ಗಂಗೊಳ್ಳಿ ವಲಯ ಅಂಗನವಾಡಿ ಮಕ್ಕಳ ಚಿಣ್ಣರ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಶ್ರೀ ಶಾರದೋತ್ಸವ ಸಮತಿ ಅಧ್ಯಕ್ಷ ಸತೀಶ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಹಿರಿಯ ನಾಗರಿಕ ಬಿ.ಸದಾನಂದ ಶೆಣೈ, ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಲ್., ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ತೀರ್ಪುಗಾರರಾದ ಮಹಾಬಲ ಆಚಾರ್ಯ, ನಟರಾಜ್ ಮೇಲ್ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸುಮಿತ್ರಾ ಜಿ., ಸರೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಗಂಗೊಳ್ಳಿ ಇದರ 2023 – 24ನೇ ಸಾಲಿನ ಮಹಾಸಭೆ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಗುರುವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 4519 ಸದಸ್ಯರೊಂದಿಗೆ 21.80 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 17.35 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಹೊರಬಾಕಿ ಸಾಲ 11.08 ಕೋಟಿ ರೂ. ಇದೆ. 9.91 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದ್ದು, ವರ್ಷಾಂತ್ಯಕ್ಕೆ ಸಂಘವು 15.16 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಹಕಾರಿ ಸಂಘದ ಸದಸ್ಯರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಶೇಕಡವಾರು ಆಧಾರದಲ್ಲಿ ಒಟ್ಟು 31 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಘದ ಉಪಾಧ್ಯಕ್ಷೆ ಶೈಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತಮ ಶೈಕ್ಷಣಿಕ ಜ್ಞಾನ ಮತ್ತು ಸಂಶೋಧನಾ ಪ್ರವೃತ್ತಿಯು ಶಿಕ್ಷಕರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ (ತಂತ್ರಜ್ಞಾನ ಮತ್ತು ವಿಜ್ಞಾನ) ಉಪಕುಲಪತಿ ಡಾ. ನಾರಾಯಣ ಸಭಾಹಿತ ಹೇಳಿದರು. ಅವರು ಶನಿವಾರದಂದು ಕುಲಪತಿಗಳ ಹುಟ್ಟಿದ ಹಬ್ಬದ ಪ್ರಯುಕ್ತ ನಡೆದ ಎ.ಜಿ.ಇ ಅಧೀನ ಕಾಲೇಜುಗಳ ಮೂರನೇ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇರುವಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಧೀನ ಕಾಲೇಜುಗಳ ಉಪನ್ಯಾಸಕರುಗಳಿಗೆ ಒಳ್ಳೆಯ ಅವಕಾಶವಿದೆ. ಅವರುಗಳು ದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮಾಹೆಯಲ್ಲಿ ಶೈಕ್ಷಣಿಕ ಜ್ಞಾನ ಮತ್ತು ಸಂಶೋಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು. ಈ ಮೂಲಕ ನಿಮ್ಮ ಶೈಕ್ಷಣಿಕ ಅರ್ಹತೆಯನ್ನು ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು. ಅಲ್ಲದೆ ಎ.ಜಿ.ಇ ಅಧೀನ ಕಾಲೇಜುಗಳೊಂದಿಗೆ ಉತ್ತಮ ಸಂಪರ್ಕ ಕಲ್ಪಿಸುವುದು ಮತ್ತು ಮಾಹಿತಿ ಮತ್ತು ಜ್ಞಾನವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಪರಸ್ಪರ ಬೆಳೆಯಬಹುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,21: ತಾಲೂಕಿನ ಪಡುವರಿ ನಿವಾಸಿ ಹೊಸಾಡು ಸುಬ್ರಾಯ ಶೇರುಗಾರ್ (92) ಅವರು ಶನಿವಾರದಂದು ಮೃತಪಟ್ಟಿದ್ದಾರೆ. ವಯೋಸಹಜವಾಗಿ ಅವರು ಇಂದು ಬೆಳಗ್ಗೆ ನಿಧನರಾದರು. ಬೈಂದೂರು ಮಾಜಿ ಪುರಸಭಾಧ್ಯಕ್ಷರು, ಬೈಂದೂರು ಕಾ೦ಗ್ರೆಸ್ಸಿನ ಪ್ರಮುಖ ನಾಯಕರಾಗಿದ್ದರು. ಸಮಾಜದ ಮತ್ತು ರಾಜಕೀಯ, ವಿವಿಧ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿ ಜನಮನ್ನಣೆ ಪಡೆದಿದ್ದರು. ಸಮಾಜ ಸೇವಕರು ಉತ್ತಮ ವಾಗ್ನಿಗಳಾಗಿದ್ದ ಅವರು ರಾಮಕ್ಷತ್ರಿಯ ಸಮಾಜ ಪ್ರಮುಖ ನಾಯಕಾಗಿದ್ದರು. ಅವರ ಧರ್ಮಪತ್ನಿ ಪಾರ್ವತಿ, ಖ್ಯಾತ ಹೃದಯ ತಜ್ಞರಾದ ಡಾಕ್ಟರ್ ಹೆಚ್. ಪ್ರಭಾಕರ್ ಮಂಗಳೂರು, ಸುಧಾಕರ್, ಪುತ್ರಿಯರಾದ ಪ್ರೇಮ, ಸುಜಾತರ, ಬಂಧುಗಳನ್ನು ಅಗಲಿದ್ದಾರೆ.
