Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು, ರಾಜ್ಯದ 31 ಶಿಕ್ಷಕರ ಪೈಕಿ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ಕಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೋಟ ವಿವೇಕ ಬಾಲಕಿಯರ ಫ್ರೌಡಶಾಲೆಯ ಮೂಲಕ ವೃತ್ತಿ ಬದುಕು ಆರಂಭಿಸಿದ ನರೇಂದ್ರ ಕುಮಾರ್ ಕೋಠ ಅವರು ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದಾರೆ. ಪಠ್ಯ ಪಠ್ಯೇತರ ಶಿಕ್ಷಣದೊಂದಿಗೆ ಮಕ್ಕಳ ಭೌದ್ದಿಕ ವಿಕಸನಕ್ಕೆ ಸಹಕಾರಿಯಾಗುವ ಹಲವು ಸೃಜನಶೀಲ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದಾರೆ. ಪಠ್ಯೇಟರ ಚಟುವಟಿಕೆಗಳಲ್ಲಿ ಬೇಸಿಗೆ ಶಿಬಿರ, ಪರೀಕ್ಷೆ ಭಯ ಹೊಗಲಾಡಿಸಲು ತರಬೇತಿ, ಪುಸ್ತಕ ಪ್ರಕಟಣೆ ಹೀಗೆ ವಿವಿಧ ಕಾರ್ಯಚಟುವಟಿಕೆಗಳನ್ನು ಆಯೋಜಿಸುತ್ತಲೇ ಬರುತ್ತಿದ್ದಾರೆ. ರಾಜ್ಯ ಮಟ್ಟದ ತರಬೇತುದಾರರೂ ಆಗಿರುವ ನರೇಂದ್ರ ಕುಮಾರ್ ಅವರು ಹತ್ತಾರು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತೊಡಗಿಸಿಕೊಂಡಿದ್ದಾರೆ. ಉತ್ತಮ ನಿರೂಪಕರಾಗಿ ಹಲವು ಕಾರ್ಯಕ್ರಮಗಳನ್ನು, ಟಿವಿ ಸಂದರ್ಶನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಸಾಹಿತ್ಯ – ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸಿದ ಕೀರ್ತಿ ಇವರದ್ದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರೊಂದು ಓವರ್‌ಟೇಕ್‌ ಮಾಡುವ ಭರದಲ್ಲಿ ನಡೆದ ಸರಣಿ ಅಪಘಾತದಲ್ಲಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ತಾಲೂಕಿನ ಮೂಡ್ಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಅಂಪಾರು ಗ್ರಾಮದ ಯುವತಿ ಅಂಬಿಕಾ (22) ಮೃತಪಟ್ಟಿದ್ದು, ಆಕೆಯ ಸಹೋದರ ಶಾಂತರಾಮ ಹಾಗೂ ಸಂಬಂಧಿ ನಯನಕುಮಾರ್ ಗಂಭೀರ ಗಾಯಗೊಂಡಿದ್ದಾರೆ. ಮೂಡ್ಲಕಟ್ಟೆ ಸಮೀಪ ಶುಕ್ರವಾರ ಸಂಜೆ ವೇಳೆಗೆ ಬಸ್ರೂರು ಕಡೆಯಿಯಿಂದ ಬರುತ್ತಿದ್ದ ಕಾರು ಚಾಲಕ ಮುಂಭಾಗದ ಇನ್ನೊಂದು ಕಾರನ್ನು ಓವರ್ ಟೇಕ್ ಮಾಡುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಎದುರಿದ್ದ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ರಿಕ್ಷಾದಲ್ಲಿದ್ದ ಅಂಬಿಕಾ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ರಿಕ್ಷಾದಲ್ಲಿದ್ದ ಶಾಂತಾರಾಮ್ ಹಾಗೂ ನಯನ್ ಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಅಂಬಿಕಾ ಅವರು ವಡೇರಹೋಬಳಿಯ ಸಂಬಂಧಿಯ ಮನೆಯಿಂದ ಸಹೋದರ ಶಾಂತಾರಾಮ ಹಾಗೂ ನಯನಕುಮಾರ್ ಜೊತೆಗೆ ಆಟೋದಲ್ಲಿ ತನ್ನ ಮನೆಯಾದ ಅಂಪಾರಿಗೆ ಪ್ರಯಾಣಿಸುತ್ತಿದ್ದು, ಈ ವೇಳೆ ಅವಘಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಆಸರೆ’ ಪೋತ್ಸಾಹಧನ ಹಾಗು ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ ‘ನವಚೇತನ’ ಪೋತ್ಸಾಹಧನದ ಸಮಿತಿಯ ಸಂಚಾಲಕರಾಗಿ ಕುಂದಾಪುರದ ಖ್ಯಾತ ನಿರೂಪಕ ಹಾಗು ಸಿಪ್ಲಾ ಕಂಪನಿ ಉದ್ಯೋಗಿ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆಯಾಗಿರುತ್ತಾರೆ. ಕಳೆದ 11 ವರ್ಷಗಳಿಂದ ಪ್ರತಿಷ್ಠಿತ ಔಷದ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬೆನಕ ಇವೆಂಟ್ಸ್ ಅಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮೂಲಕ ಕಾರ್ಯಕ್ರಮ ಸಂಘಟಿಸಿ ಹಾಗು ನಿರೂಪಿಸಿ ಪ್ರಸಿದ್ಧ ನಿರೂಪಕರೆನಿಸಿಕೊಂಡಿದ್ದಾರೆ. ಪ್ರಸ್ತುತ ಜೆಸಿಐ ಕುಂದಾಪುರ ಸಿಟಿ ಘಟಕದ ಕಾರ್ಯದರ್ಶಿಯಾಗಿ ಹಾಗು ಕುಂದಾಪುರ ಯುವ ಬಂಟರ ಸಂಘದ ದಶಮ ಸಂಭ್ರಮದ ಕಾರ್ಯಕಾರಿ ಸಮಿತಿಯ ಸಕ್ರೀಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.= ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷರಾದ ಬಿ ಉದಯ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರಸಿದ್ಧ ಆಸ್ಪತ್ರೆಗಳಲ್ಲೊಂದಾದ ಶ್ರೀಮಾತಾ ಆಸ್ಪತ್ರೆಯಲ್ಲಿ ಖ್ಯಾತ ವೈದ್ಯೆ ಡಾ. ಪುಪ್ಪಿಂದರ್ ಧುನ್ಪುತ್ ಪೂರ್ಣಾವಧಿಗೆ ಸೇವೆ ನೀಡಲಿದ್ದು, ಶುಕ್ರವಾರ ಆಸ್ಪತ್ರೆ ವತಿಯಿಂದ ಅವರನ್ನು ಸ್ವಾಗತಿಸಲಾಯಿತು. ಎಂಬಿಬಿಎಸ್, ಎಂಡಿ ಪದವಿ ಹೊಂದಿರುವ ಡಾ. ಪುಪ್ಪಿಂದರ್ ಧುನ್ಪುತ್ ಅವರು ಹನ್ನೆರಡು ವರ್ಷಗಳಿಂದ ಮಣಿಪಾದಲ್ಲಿ ಸೇವೆ ಸಲ್ಲಿಸಿದ್ದು, ಸೆ.1ರಿಂದ ಶ್ರೀಮಾತಾ ಆಸ್ಪತ್ರೆಯಲ್ಲಿ ಕಾಯಂ ಆಗಿ ಸೇವೆ ಸಲ್ಲಿಸುತ್ತಾರೆ. ಕುಂದಾಪುರದಲ್ಲಿ ಮೊದಲ ಭಾರಿಗೆ ಮಹಿಳಾ ಫಿಸಿಶಿಯನ್ ಸೇವೆ ನೀಡಿತ್ತಿದ್ದಾರೆ. ಹೃದಯ ರೋಗ, ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯ್ಡ್, ಚರ್ಮದ ಸಮಸ್ಯೆ ಸಹಿತ ಅನೇಕ ರೋಗಗಳ ಚಿಕಿತ್ಸೆಯಲ್ಲಿ ಪ್ರಸಿದ್ದಿ ಪಡೆದಿದ್ದಾರೆ. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಪ್ರಕಾಶ ತೋಳಾರ್, ಡಾ. ಸತೀಶ್ ಪೂಜಾರಿ, ಡಾ. ಸವಿತಾ ಪ್ರಕಾಶ ತೋಳಾರ್, ನೇಹಾ ಸತೀಶ್ ಪೂಜಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.1: ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಭವಿಷ್ಕಕ್ಕೆ ಪಡೆಯಲು ತಪ್ಪದೇ ಇ-ಶ್ರಮ್ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಮಿಕ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರುಗಳಿಗೆ ಸಂಬAಧಿಸಿದ ಸಮಸ್ಯೆಗಳ ನಿವಾರಣೆ, ಕಾರ್ಮಿಕರಿಗೆ ವಿಶೇಷ ನೀತಿಗಳು, ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಮಗ್ರ ದತ್ತಾಂಶವಿದ್ದಾಗ ಮಾತ್ರ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಸಾಧ್ಯ. ಈ ಹಿನ್ನೆಲೆ ಪ್ರತಿಯೊಬ್ಬರೂ ಇ-ಶ್ರಮ್ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಇವರೆಗೆ 1,85,791 ಜನ ನೋಂದಾಯಿಸಿದ್ದಾರೆ. ಉಳಿದವರು ಸಹ ನೋಂದಾಯಿಸಿಕೊಳ್ಳಬೇಕು. ಇ-ಶ್ರಮ್ ನಲ್ಲಿ ನೋಂದಾಯಿಸಲು ಕಾರ್ಮಿಕರು ಆಧಾರ್ ಕಾರ್ಡ್ನೊಂದಿಗೆ ಬಂದು ತಮ್ಮ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯತೆಯ ವಿಧü, ಕುಟುಂಬದ ವಿವರ, ಬ್ಯಾಂಕ್ ಖಾತೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.1: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ 2 ತಿಂಗಳ ನಿಷೇಧಿತ ಅವಧಿಯನ್ನು ಹೊರತುಪಡಿಸಿ, ವಾರ್ಷಿಕ 10 ತಿಂಗಳ ಅವಧಿಗೆ ಮಾಸಿಕ ಪ್ರತಿ ದೋಣಿಗೆ 300 ಲೀ. ನಂತೆ ಸೀಮೆಎಣ್ಣೆ ವಿತರಿಸಲು ಸರ್ಕಾರವು ಆದೇಶಿಸಿರುವ ಹಿನ್ನೆಲೆ, ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ ಸೀಮೆಎಣ್ಣೆ ಪಡೆಯಲು ಪರ್ಮಿಟ್‌ಗಾಗಿ ದೋಣಿ ಮಾಲಕರು ಅರ್ಜಿ ಸಲ್ಲಿಸುವ ಮೊದಲು ಇಲಾಖೆಯಿಂದ ದೋಣಿಗಳನ್ನು ಭೌತಿಕ ಪರಿಶೀಲನೆ ಮಾಡಿ ನಂತರ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿಯನ್ನು ದೋಣಿ ಮಾಲಕರಿಗೆ ನೀಡಲಾಗುವುದು. ಆ ಪ್ರಯುಕ್ತ ಸೆಪ್ಟಂಬರ್ 4 ರಂದು ಬೈಂದೂರು ತಾಲೂಕಿನ ಅಳ್ವೆಗದ್ದೆಯ ಮೀನುಗಾರಿಕೆ ಜೆಟ್ಟಿ, ಕಳಿಹಿತ್ಲುವಿನ ಮೀನುಗಾರಿಕೆ ಹರಾಜು ಪ್ರಾಂಗಣ, ಮಡಿಕಲ್‌ ಮಹೇಶ್ವರ ದೇವಸ್ಥಾನ, ಪಡುವರಿ/ತಾರಾಪತಿಯ ಶ್ರೀ ರಾಮ ಮಂದಿರ, ಕೊಡೇರಿ/ಕಿರಿಮಂಜೇಶ್ವರದ ಕೊಡೇರಿ ಬಂದರು, ಮರವಂತೆ ಬಂದರು, ಕಂಚುಕೋಡು ಮಡಿ, ಗಂಗೊಳ್ಳಿ ಲೈಟ್ಹೌಸ್, ಗಂಗೊಳ್ಳಿ ಬಂದರು, ಕುಂದಾಪುರ, ಕೋಟೇಶ್ವರ ಮತ್ತು ತೆಕ್ಕಟ್ಟೆಯ ಕೋಡಿ ಕಿನಾರೆಯಲ್ಲಿ ತಪಾಸಣೆಗೆ ನಡೆಯಲಿದೆ. ಸೆಪ್ಟಂಬರ್ 5 ರಂದು ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಆ.31: ಸಮಾಜದಲ್ಲಿದ್ದ ಅಸ್ಪೃಶ್ಯತೆ, ಅಸಮತೋಲನಗಳನ್ನು ಶಾಂತಿಯ ಮೂಲಕ ಕ್ರಾಂತಿಯ ಬದಲಾವಣೆಯನ್ನು ತರುವ ಕೆಲಸವನ್ನು ಬ್ರಹ್ಮ ಶ್ರೀ ನಾರಾಯಣ ಗುರು ರವರು ಮಾಡಿದರು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಇಂದು ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಉಡುಪಿ (ರಿ) ಬನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ, ಸಮಬಾಳು-ಸಮಪಾಲು ಲಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರು ದೊಡ್ಡ ಕ್ರಾಂತಿಯನ್ನೇ ಶಾಂತಿಮಾರ್ಗದಲ್ಲಿ ರಕ್ತಕ್ರಾಂತಿ ಇಲ್ಲದೇ ಮಾಡುವುದರೊಂದಿಗೆ ಸಮಾಜದಲ್ಲಿ ಸುಧಾರಣೆಯನ್ನು ತಂದಿದ್ದಾರೆ ಎಂದರು. ಸ್ವಾಮೀ ವಿವೇಕಾನಂದರು ಕೇರಳಕ್ಕೆ ಭೇಟಿ ನೀಡಿದಾಗ, ಅಲ್ಲಿನ ಮನುಷ್ಯತ್ವ ಇಲ್ಲದ ವಾತಾವರಣವನ್ನು ನೋಡಿ, ಇದನ್ನು ಸರಿ ಮಾಡಲು ಸಾಧ್ಯವೇ ಎಂದಿದ್ದರು. ಅಂತಹ ಪ್ರದೇಶದಲ್ಲಿ ನಾರಾಯಣ ಗುರುಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರೌಢಶಿಕ್ಷಣ ಇಲಾಖೆ ಹಾಗೂ ಕುಳ್ಳಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಶಂಕರನಾರಾಯಣ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮದರ್ ತೆರೆಸದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿವಿಧ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ 12 ಪ್ರಥಮ ಬಹುಮಾನವನ್ನು, 14 ದ್ವಿತೀಯ ಬಹುಮಾನವನ್ನು ಹಾಗೂ 9 ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಜಾನಪದ ನೃತ್ಯ ಮತ್ತು ಕವ್ವಾಲಿ ಯಲ್ಲಿ ಪ್ರಥಮ ಬಹುಮಾನವನ್ನು ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಬೋಧಕ ಭೋದಕೇತರ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿಯ ತ್ರಿಷಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್, 40 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್.58 ಕೆ.ಜಿ.ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ / ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ವಿದ್ಯಾರ್ಥಿಗಳಿಗೆ ಕೃಷಿಯ ಕುರಿತು ಆಸಕ್ತಿ ಬೆಳೆಸುವ ಮತ್ತು ಅನ್ನದಾತನ ಕಷ್ಟವನ್ನು ಅರಿಯುವ ಕಾರ್ಯಕ್ರಮದ ಅಂಗವಾಗಿ ಕ್ರಿಯೇಟಿವ್‌ ಕಾಲೇಜ್‌ ನ ವಾಣಿಜ್ಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ನೆಡುವ ಕಾರ್ಯಕ್ರಮ ಹಿರ್ಗಾನದ ಬೆಂಗಾಲ್‌ ನ ಕೃಷಿ ಭೂಮಿಯಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕವಾಗಿ ನೇಜಿ ನೆಡುವ ವಿಧಾನವನ್ನು ತಿಳಿಸಲಾಯಿತು. ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಕ್ರಿಯೇಟಿವ್‌ನ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಇಂದಿನ ಕಾಲಘಟ್ಟದಲ್ಲಿ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಅನ್ನವನ್ನು ಗಳಿಸಬೇಕಾದರೆ ಅದರ ಹಿಂದೆ ಅಪಾರ ಪರಿಶ್ರಮವಿದೆ. ನಾವೆಲ್ಲರೂ ರೈತರ ಕಷ್ಟವನ್ನು, ಒಕ್ಕಲುತನದ ಆನಂದವನ್ನು ಪಡೆಯಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್‌ ಅವರು ಮಾತನಾಡುತ್ತಾ ಹಿಂದಿನ ಕೃಷಿ ಜೀವನ ಹಾಗೂ ಇಂದಿನ ಒತ್ತಡದ ಬದುಕಿನಲ್ಲಿ ಕೃಷಿ ಚಟುವಟಿಕೆಗಳೇ ಮನಸ್ಸಿಗೆ ಸಂತೋಷ ನೀಡುತ್ತವೆ. ಆತ್ಮ ಸಂತೋಷಕ್ಕಾಗಿಯಾದರೂ ನಾವು ರೈತಾಪಿ ಕಸುಬನ್ನು ರೂಢಿಸಿಕೊಳ್ಳಬೇಕಾಗಿದೆ ಎಂದು ನುಡಿದರು. ತದನಂತರ ವಿದ್ಯಾರ್ಥಿಗಳಿಂದಲೇ ಒಂದು ಎಕರೆಯಷ್ಟು ಕೃಷಿಭೂಮಿಯಲ್ಲಿ ನಾಟಿಕಾರ್ಯ…

Read More