ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಕರ್ನಾಟಕ ಸರಕಾರದ ಪ್ರತಿಷ್ಠಿತ ರಾಜ್ಯಮಟ್ಟದ ಸಹಕಾರಿ ರತ್ನ ಪ್ರಶಸ್ತಿ ಲಭಿಸಿದೆ. ನವಂಬರ್ 17 ರಂದು ಬಾಗಲಕೋಟೆಯಲ್ಲಿ ಜರುಗಲಿರುವ 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಗತಿಪರ ಕೃಷಿಕರಾಗಿ, ಮಾದರಿ ಹೈನುಗಾರರಾಗಿ ಸಾಧನೆ ಮಾಡಿರುವ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಅಗ್ರಮಾನ್ಯ ಸಾಧನೆ ಮಾಡಿರುವ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಉತ್ತುಂಗಕ್ಕೇರಿಸಿದ್ದಾರೆ. ಮೆಕೋಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸ್ವಂತ ಕಟ್ಟಡ ನಿರ್ಮಾಣ, ಹಾಲು ಶೀತಲಿಕರಣ ಘಟಕ ಸ್ಥಾಪನೆಯಲ್ಲಿ ಮುಂಚೂಣಿ ವಹಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಏಕಮುಖ ರಸ್ತೆಯ ಮುಳ್ಳಿಕಟ್ಟೆ ಜಂಕ್ಷನ್ ಬಳಿಯಿಂದ ಅರಾಟೆಗೆ ಚಲಿಸುತ್ತಿದ್ದ ಪ್ಯಾಸೆಂಜರ್ ರಿಕ್ಷಾಕ್ಕೆ, ತ್ರಾಸಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡಿದ್ದ ರಿಕ್ಷಾ ಸುಮಾರು ಹತ್ತು ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಪ್ರಯಾಣಿಸುತ್ತಿದ್ದ ಜಯಲಕ್ಷ್ಮೀ (39) ಜಲಜಾಕ್ಷಿ (36) ರಿಕ್ಷಾ ಚಾಲಕ ರವಿ (41) ಗಾಯಗೊಂಡಿದ್ದಾರೆ. ರಿಕ್ಷಾದ ಹಿಂಭಾಗ ನಜ್ಜುಗುಜ್ಜಾಗಿದೆ. ಈ ಬಗ್ಗೆ ಗಂಗೊಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗ್ರಾಮೀಣ ಕ್ರೀಡೆಗಳು ಮಕ್ಕಳಲ್ಲಿ ಆರೋಗ್ಯವನ್ನು ಮತ್ತು ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಇಂತಹ ಕ್ರೀಡೆಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ತಮ್ಮನ್ನು ತೊಡಗಿಸಿಕೊಳ್ಳುವಂತೆ ಅವಕಾಶಗಳನ್ನು ಒದಗಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇಸಿಓ ರಾಜ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಜಿಎಸ್ವಿಎಸ್ ಅಸೋಸಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ನಡೆದ ಗ್ರಾಮೀಣ ಆಟಗಳ ಕ್ರೀಡಾಕೂಟ ಆಡುಂಬೊಲವನ್ನು ಉದ್ಘಾಟಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮತ್ತು ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲ ದೇವಾಡಿಗ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಸ್ವಾಗತಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ 5 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು, ಮಗುವಿಗೆ ಎದೆಹಾಲು, ಪೌಷ್ಠಿಕ ಆಹಾರ, ಒಂದು ವರ್ಷದ ಅವಧಿಯೊಳಗೆ ನೀಡುವುದರೊಂದಿಗೆ ಉತ್ತಮವಾಗಿ ಆರೈಕೆ ಮಾಡಿದ್ದಲ್ಲಿ ಮಗುವಿನ ಭವಿಷ್ಯದ ಬೆಳವಣಿಗೆ ಸಹ ಉತ್ತಮವಾಗಿರುತ್ತದೆ. ತಾಯಂದಿರು ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ನ್ಯೂಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಹಾಗೂ ಕ್ರಿಯಾ ಅಭಿಯಾನ ಮತ್ತು ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಗು ಜನಿಸಿದ ಆರಂಭ ಹಂತದಲ್ಲಿ ಹೆಚ್ಚಿನ ಕಾಳಜಿ ಅತ್ಯವಶ್ಯಕವಾಗಿದ್ದು, ಹುಟ್ಟಿನಿಂದ ಮಕ್ಕಳಿಗೆ ನೀಡಬೇಕಾದ ಲಸಿಕೆಯ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣವನ್ನು ಕಲ್ಪಿಸಿ, ಮತ್ತಷ್ಟು ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಹೆಚ್ಚಿಸಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿ ರೂ. ಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಈ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು. ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬರ್ 310 ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಬೇಕು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಂಪ್ರೆಸ್ ಕಾಲೇಜು ಆಡಿಟೋರಿಯಂ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ. ಸಿ. ಎಸ್. ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ಸುಜನ್ ಶೆಟ್ಟಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ. ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಬೈಂದೂರು ತಾಲೂಕು ಮುದೂರು ಗ್ರಾಮದ ಶಂಕರಮುಖ ಎಂಬಲ್ಲಿಯ ತೆಲಾಯಿಲ್ ಮನೆಯ ನಿವಾಸಿ ಜಯಕುಮಾರ್ (58) ಎಂಬ ವ್ಯಕ್ತಿಯು ನವೆಂಬರ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅವರು 5 ಅಡಿ 4 ಇಂಚು ಎತ್ತರ, ಬಿಳಿ ಮೈಬಣ್ಣ ಕೋಲು ಮುಖ, ಸಾಧಾರಣ ದೃಢಕಾಯ ಶರೀರ ಹೊಂದಿದ್ದು, ತಮಿಳು, ಹಿಂದಿ ಹಾಗೂ ಮಳೆಯಾಳಂ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 ಹಾಗೂ ಕಂಟ್ರೋಲ್ ರೂಂ : 100 ಅಥವಾ 0820- 2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 17 ತಿಂಗಳಲ್ಲಿ ಕುಂದಾಪುರ ತಾಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 248 ಕೋಟಿ ರೂಪಾಯಿ ಸರಕಾರದಿಂದ ಬಿಡುಗಡೆಯಾಗಿರುತ್ತದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಕುಂದಾಪುರ ತಾಲೂಕಿನಲ್ಲಿ 17 ತಿಂಗಳಲ್ಲಿ ಶಕ್ತಿ ಯೋಜನೆಯಡಿ 97,99 , 147 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು 33,81,95,617 ರೂಪಾಯಿ ರಿಯಾಯಿತಿ ಪಡೆದಿರುತ್ತಾರೆ. ಗೃಹ ಜ್ಯೋತಿ ಯೋಜನೆಯಡಿ 15 ತಿಂಗಳಲ್ಲಿ ತಿಂಗಳ ಸರಾಸರಿ 63,860 ಫಲಾನುಭವಿಗಳು 41,23,22,559 ರೂಪಾಯಿ ಲಾಭ ಪಡೆದಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯಡಿ 50485 ಫಲಾನುಭವಿಗಳ ಖಾತೆಗೆ ನೇರವಾಗಿ 131,26,10,000 ರೂಪಾಯಿ ಜಮೆಯಾಗಿರುತ್ತದೆ. ಅನ್ನಭಾಗ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಎ. ಖಾರ್ವಿ ಗೋಕಾಕ್ನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಕ್ರೀಕೆಟ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಮ್ಮು ಕಾಶ್ಮಿರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
