ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಮೋದ್ ಮಧ್ವರಾಜ್ ಅಭಿಮಾನಿಗಳ ಬಳಗ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ.ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರ ಕಲಾಮಂದಿರದಲ್ಲಿ ನಡೆದ ರಕ್ತದಾನ ಶಿಬಿರ ನಡೆಯಿತು. ಉದ್ಯಮಿ ಆನಂದ ಸಿ ಕುಂದರ್ ರಕ್ತದಾನ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಂಪತ್ ಶೆಟ್ಟಿ, ಜಯಕರ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಸುನೀಲ್ ಶೆಟ್ಟಿ,ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ಶರತ್ ಕಾಂಚನ್ , ಸತೀಶ್ ಪೂಜಾರಿ, ಪ್ರಶಾಂತ್ ತಲ್ಲೂರು ಉಪಸ್ಥಿತ್ತರಿದ್ದರು. ರಕ್ತದಾನ ಶಿಬಿರದಲ್ಲಿ ದಾಖಲೆಯ 143 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ: ಕಾರ್ಕಳದ ಹಿರ್ಗಾನದ ಮೂರೂರಿನಲ್ಲಿ ಬಿ ಎಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಶಿಬಿರದ ಸಮಾರೋಪ ಊರಿನ ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಹಾಲಕ್ಮೀ ದೇವಸ್ಥಾನದ ಮುಕ್ತೇಸರರಾದ ಶ್ರೀ ಅಶೋಕ್ ನಾಯಕ್ ರವರು ಇಂತಹ ಶಿಬಿರಗಳಿಂದ ಊರಿನ ಅಭಿವೃದ್ಧಿಯ ಜೊತೆಗೆ ಸಮಾಜದಲ್ಲಿ ಒಂದು ಧನಾತ್ಮಕ ಬದಲಾವಣೆ ಬರಲು ಸಾಧ್ಯವಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಸಹಕಾರ, ಸಹಬಾಳ್ವೆಯ ಅರಿವು ಉಂಟಾಗುತ್ತದೆ. ಯಾವಾಗಲು ನಾವೆಲ್ಲರೂ ಒಂದು ಎಂಬ ಭಾವದಿಂದ ಸಮಾಜಕ್ಕಾಗಿ ದುಡಿಯ ಬೇಕು ಎಂದು ನುಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿಯವರು ಶಿಬಿರದ ಆರಂಭ ಸವಾಲಿನ ಕೆಲಸವಾಗಿದ್ದರು ಊರಿನ ಗಣ್ಯರು, ಮಹನೀಯರ ಮತ್ತು ದಾನಿಗಳಿಂದ ಈ ಕಾರ್ಯ ಯಶಸ್ವಿಯಾಗಲು ಕಾರಣವಾಯಿತೆಂದು ಅಭಿಪ್ರಾಯ ವ್ಯಕ್ತಪಡಿಸಿ ಈ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲರನ್ನು ಸ್ಮರಿಸಿದರು. ಬಿ. ಎಂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಆಶಾ ಕ್ಲೇರಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾಡದಿರುವ ತಪ್ಪನ್ನು ಒಪ್ಪಿಕೊಳ್ಳುವಂತೆ ಬೆದರಿಕೆಯೊಡ್ಡಿ ಹಲ್ಲೆಗೈದ ಘಟನೆಯೊಂದು ಬ್ರಹ್ಮಾವರ ತಾಲೂಕು ವಂಡಾರು ಗ್ರಾಮದ ಬಿಲ್ಲಾಡಿ ಶ್ರೀಕೃಷ್ಣ ಪ್ರಸಾದ ಗೇರುಬೀಜ ಕಾರ್ಖಾನೆಯಲ್ಲಿ ಬುಧವಾರ ನಡೆದಿದೆ. ಕಾರ್ಖಾನೆಯ ಮಾಲಿಕ ಸಂಪತ್ ಕುಮಾರ್ ಶೆಟ್ಟಿ ಎಂಬಾತ ಅಲ್ಲಿಯೇ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ವಿಜಯ (25) ಎಂಬ ವ್ಯಕ್ತಿಯನ್ನು ಅಮಾನುಷವಾಗಿ ತಳಿಸಿದ್ದು, ಗಾಯಗೊಂಡ ವಿಜಯ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುಂಡ್ಮಿ ಯಕ್ಷಿಮಠದ ನಿವಾಸಿಯಾದ ವಿಜಯ ಪೂಜಾರಿ ಎಂಬುವವರು ಕೆಲ ಸಮಯದಿಂದ ವಂಡಾರುವಿನ ಶ್ರೀ ಕೃಷ್ಣ ಪ್ರಸಾದ ಗೇರು ಬೀಜ ಕಾರ್ಖಾನೆಯಲ್ಲಿ ಟಿಕ್ನೀಶಿಯನ್ ಆಗಿ ಕೆಲಸ ಮಾಡಿಕೊಂಡಿದ್ದರು. ಅ.16ರಂದು ಅಲ್ಲಿನ ಕೆಲಸಗಾರನೋರ್ವ ಗೇರು ಬೀಜಗಳನ್ನು ಕಟ್ಟಿಂಗ್ ಮೆಶೀನ್’ಗೆ ಹಾಕುವಾಗ ದೊಡ್ಡ ಮೆಶೀನ್ಗೆ ಬದಲಾಗಿ ಸಣ್ಣ ಮೆಶೀನ್ಗೆ ಹಾಕಿದ್ದಾನೆ. ಇದರಿಂದ ಹೆದರಿದ ಆ ನೌಕರ ಕಾರ್ಖಾನೆ ಕಡೆಗೆ ಬಂದಿರಲಿಲ್ಲ. ಆದರೆ ಘಟನೆಯಿಂದಾಗಿ ಕೋಪಗೊಂಡಿದ್ದ ಮಾಲಿಕ ಸಂಪತ್ ಶೆಟ್ಟಿ, ಅ.18ರ ಬೆಳಿಗ್ಗೆ ಗೇರು ಬೀಜ ಕಾರ್ಖಾನೆಯ ಒಳಗಡೆ ವಿಜಯ್ ಕೆಲಸ ಮಾಡುತ್ತಿದ್ದ ಜಾಗಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶಾರದೋತ್ಸವ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. 50ನೇ ವರ್ಷದ ಶಾರದೋತ್ಸವದ ಅಂಗವಾಗಿ ಅಕ್ಟೋಬರ್ 20ರಿಂದ ಮೊದಲ್ಗೊಂಡು 23ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದು ಬೈಂದೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಶ್ರೀ ಸೇನೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅಕ್ಟೋಬರ್ 20ರ ಶುಕ್ರವಾರ ಬೆಳಿಗ್ಗೆ ಶ್ರೀ ಶಾರದಾಂಬೆಯ ವಿಗ್ರಹವನ್ನು ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿದ ತರುವಾಯ, ಅದ್ದೂರಿ ‘ಬೈಂದೂರು ದಸರಾ’ಕ್ಕೆ ಚಾಲನೆ ನೀಡಲಾಗುತ್ತದೆ ಎಂದರು. ಅಂದು ಧಾರ್ಮಿಕ ಕಾರ್ಯಕ್ರಮವಾಗಿ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಪೂಜೆ ಹಾಗೂ ರಾತ್ರಿ ಪೂಜೆಗಳು ನಡೆಯಲಿದೆ. ಶುಕ್ರವಾರ ಮಧ್ಯಾಹ್ನ ಬಾಲಕಿಯರಿಗೆ ಮುದ್ದು ಶಾರದೆ ಸ್ವರ್ಧೆ, ಸಾರ್ವಜನಿಕರಿಗೆ ಭಕ್ತಿಗೀತೆ ಹಾಗೂ ಮಕ್ಕಳಿಗೆ ಭಜನೆ ಹಾಡುವ ಸ್ವರ್ಧೆ ನಡೆಯಲಿದೆ. ಸಂಜೆಯ ಸಾಂಸ್ಕೃತಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋವುಗಳನ್ನು ಕಳವು ಮಾಡಿ ಗೋಮಾಂಸ ತಯಾರಿಸುತ್ತಿದ್ದ ದಂಧೆಯನ್ನು ಬೇಧಿಸಿದ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾವ್ರಾಡಿ ಗ್ರಾಮದ ಕಂಡ್ಲೂರು ಕರಾಣಿ ಅಬು ಮೊಹಮ್ಮದ್ ಎಂಬವರ ಮನೆಯ ಹಿಂಬದಿಯ ಶೆಡ್ನಲ್ಲಿ ಝಾಕೀರ್ ಹುಸೇನ್ ಮತ್ತು ಕರಾಣಿ ಶಾಕೀರ್ ಎಂಬ ವ್ಯಕ್ತಿಗಳು ಕಳವು ಮಾಡಿದ ಗೋವುಗಳನ್ನು ತಂದು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಬುಧವಾರ ಮಧ್ಯಾಹ್ನ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿದ್ದ ಇಬ್ಬರು ವ್ಯಕ್ತಿಗಳು ಅಲ್ಲಿದ್ದ ಕಾಲ್ಕಿತ್ತಿದ್ದಾರೆ. ಪರಾರಿಯಾರಿದ್ದ ಮೊದಲ ಆರೋಪಿ ಝಾಕೀರ್ ಹುಸೇನ್ ಎಂಬಾತನನ್ನು ಕೊನೆಗೆ ಬಂಧಿಸಿದ್ದಾರೆ. ದಾಳಿ ನಡೆಸಿದಾಗ ಶೆಡ್ಡಿನಲ್ಲಿದ್ದ ಪ್ಲಾಸ್ಟಿಕ್ ಟಬ್ನಲ್ಲಿದ್ದ 152 ಕೆ.ಜಿ ಗೋವಿನ ಮಾಂಸವಿರುವುದು ಕಂಡುಬಂದಿದೆ. ಎಲ್ಲವನ್ನು ಸೀಜ್ ಮಾಡಲಾಗಿದ್ದು ಇನ್ನೋರ್ವ ಆರೋಪಿಯ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪವನ್ ನಾಯಕ್ ಅವರ ನೇತೃತ್ವದಲ್ಲಿ, ಇನ್ವೆಸ್ಟಿಗೇಷನ್ ಪಿಎಸ್ಐ ನೂತನ, ಎ.ಎಸ್.ಐ ವಿಶ್ವನಾಥ ಹಾಗೂ ಸಿಬ್ಬಂದಿಯವರು ದಾಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕನ್ನಡ ಕಿರುತೆರೆ, ಸಿನಿಮಾ ಹಾಗೂ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕನ್ನಡ ಅಭಿಮಾನಿಗಳ ಹೃದಯ ಗೆದ್ದಿರುವ ನಟಿ ದಿವ್ಯಾ ಉರುಡುಗ ಇದೀಗ ಅರ್ದಂಬರ್ಧ ಪ್ರೇಮಕತೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ಟೀಸರ್ ಮತ್ತು ಫಸ್ಟ್ ಲುಕ್ ಮೂಲಕ ಗಮನ ಸೆಳೆಯುತ್ತಿರುವ “ಅರ್ದಂಬರ್ಧ” ಪ್ರೇಮಕಥೆ ಸಿನಿಮಾತಂಡ ಈಗ ಮೊದಲ ಹಾಡಿನ ಮೂಲಕ ಅಭಿಮಾನಿಗಳ ಜೊತೆಯಾಗಿ ವಿಭಿನ್ನ ರೀತಿಯಲ್ಲಿ ಎಂಟ್ರಿಕೊಟ್ಟಿದ್ದಾರೆ….. ‘ಹುಚ್ಚು ಮನಸೇ..’ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡು ಅಭಿಮಾನಿಗಳಿಂದ ರಿಲೀಸ್ ಆಗಿದ್ದು ವಿಶೇಷ. ಅರ್ದಂಬರ್ಧ ಪ್ರೇಮಕಥೆ ಈಗಾಗಲೇ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದ್ದು ಸದ್ಯ ಹಾಡಿನ ಮೂಲಕ ಅಭಿಮಾನಿಗಳಲ್ಲಿ ಹುಚ್ಚು ಹಿಡಿಸಿದೆ. ಇದೀಗ ರಿಲೀಸ್ ಆಗಿರುವ ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ನಿರ್ದೇಶಕ ಅರವಿಂದ್ ಕೌಶಿಕ್ ಅವರೇ ಈ ಹಾಡಿಗೆ ಸಾಹಿತ್ಯ ರಚಿಸಿದ್ದು ಗಾಯಕ ವಾಸಕಿ ವೈಭವ್ ಮತ್ತು ಪೃಥ್ವಿ ಭಟ್ ಧ್ವನಿ ಧ್ವನಿಯಲ್ಲಿ ಈ ಹಾಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಮುಳ್ಳಿಕಟ್ಟೆ ನಡುವೆ ರಾಷ್ಟ್ರೀಯ ಹೆದ್ದಾರಿ 66ರರಲ್ಲಿ ಪಲ್ಟಿಯಾಗಿ 18ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಕುಂದಾಪುರದಿಂದ ಹೊರಟ ಲೋಕಲ್ ಬಸ್ಸು ಅರಾಟೆ ಸೇತುವೆ ದಾಟಿದ ಬಳಿಕ ಚಾಲಕನ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿದ್ದು, ಡಿವೈಡರ್ ಏರಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ. ಇದೇ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಅಘಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 18ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಅಪಘಾತ ನಡೆದ ತಕ್ಷಣ ಬಸ್ಸಿನ ಚಾಲಕ ಪರಾರಿಯಾಗಿದ್ದಾನೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡವರ ನಿಖರ ಸಂಖ್ಯೆ ಇನ್ನಷ್ಟೇ ತಿಳಿದುಬರಬೇಕಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/ ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ರಜತ ಮಹೋತ್ಸವದ ಸಂಭ್ರಮದಲ್ಲಿದ್ದು, ಬುಧವಾರ ಕೊಲ್ಲೂರು ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು “ರಜತ ಸಂಭ್ರಮ”ದ ಪೋಸ್ಟರ್ ಅನಾವರಣಗೊಳಿಸಿದರು. ಡಿಸೆಂಬರ್ 25ರ ಬೆಳಿಗ್ಗೆ 8ರಿಂದ ಮರುದಿನ ಬೆಳಿಗ್ಗೆ 8ರ ತನಕ ವಿವಿಧ ಕಾರ್ಯಕ್ರಮಗಳು ರಜತ ಸಂಭ್ರಮದ ಅಂಗವಾಗಿ ನಡೆಯಲಿದೆ. ಪೋಸ್ಟರ್ ಅನಾವರಣಗೊಳಿಸಿ ಬಳಿಕ ಅವರು ಮಾತನಾಡಿ, ದೇವಳದ ವತಿಯಿಂದ ನಡೆಸಲಾಗುತ್ತಿರುವ ಪ್ರೌಢಶಾಲೆ ಮೌಲ್ಯದಾರಿತ ಶಿಕ್ಷಣದ ಮೂಲಕ ನೂರಾರು ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಸತ್ಪಜೆಯಾಗಿ ರೂಪಿಸಿದೆ. ಸಂಸ್ಥೆಯಿಂದ ಶಿಕ್ಷಣ ಪಡೆದವರೆಲ್ಲರೂ ಒಂದಾಗಿ ಈ ಸಂಭ್ರಮವನ್ನು ಆಚರಿಸಬೇಕಿದೆ. ಹಳೆ ವಿದ್ಯಾರ್ಥಿಗಳು, ಊರವರು, ಶಿಕ್ಷಕರು ಹಾಗೂ ಸಮಿತಿಯ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು. ಹಳೇ ವಿದ್ಯಾರ್ಥಿ ಸಂಘದ ಅದ್ಯಕ್ಷರಾದ ಕೆ. ಎಲ್. ಜಯರಾಮ್ ಶೆಟ್ಟಿ ಕಾನಬೇರು ಅವರು ಮಾತನಾಡಿ ಡಿಸೆಂಬರ್ 25ರ ಬೆಳಿಗ್ಗೆ 8ರಿಂದ ಮರುದಿನ 8ರ ತನಕ ನಿರಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಜತ ಮಹೋತ್ಸವದ ನೆನಪಿಗಾಗಿ ವಾಹನ ವ್ಯವಸ್ಥೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ಸಿನಿಮಾಗೆ ಕ್ಯಾಪ್ಚರ್ ಎಂದು ಟೈಟಲ್ ಇಡಲಾಗಿದೆ. ಸದ್ಯ ಕ್ಯಾಪ್ಚರ್ ತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅಭಿಮಾನಿಗಳ ಮಧ್ಯೆ ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷವಾಗಿತ್ತು. ಸ್ಯಾಂಡಲ್ವುಡ್ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ ಪೋಸ್ಟರ್ ಅನ್ನು ಇಷ್ಟು ದೊಡ್ಡ ಮಟ್ಟದಲ್ಲಿ 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ಖುಷಿಯ ವಿಚಾರವಾದ್ರೆ ಮತ್ತೊಂದು ಕಡೆ ಕನ್ನಡ ಸಿನಿಮಾರಂಗದಲ್ಲಿಯೇ ಇದೊಂದು ವಿನೂತನವಾದ ಪ್ರಯತ್ನವಾಗಿದೆ .. ವಿಶೇಷ ಎಂದರೆ ಈ ಸಿನಿಮಾಗೆ ಮಮ್ಮಿ, ದೇವಕಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್ನ 3ನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಪರಮೇಶ್ವರಿ ಪ್ರೊಡಕ್ಷನ್ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 37ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಅ.20ರಿಂದ 23ರ ತನಕ ವಿಜೃಂಭಣೆಯಿಂದ ಜರುಗಲಿದೆ. ಅ.20ರ ಬೆಳಿಗ್ಗೆ ಶ್ರೀ ಶಾರದಾಂಬೆಯನ್ನು ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅಂದು ಸಂಜೆ ನವಚಂಡಿಕಾ ಯಾಗ ನಡೆಯಲಿದೆ. ಅದೇ ದಿನ ಮಕ್ಕಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಜೊತೆಗೆಯಲ್ಲಿ, ಭಗವದ್ಗೀತಾ ಪಠಣ ಸ್ಪರ್ಧೆ, ಭಜನಾ ಕುಣಿತ ಸ್ಪರ್ಧೆಗಳು ಇರಲಿದೆ. ಅ.21ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದ್ದು ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಅಂದು ರಾಮಕ್ಷತ್ರಿಯ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಬಳಿಕ ನೃತ್ಯನಿಕೇತನ ಕೊಡವೂರು ತಂಡದಿಂದ ನೃತ್ಯ ಸಿಂಚನ ಜರುಗಲಿದೆ. ಅ.22ರ ಸಭಾ ಕಾರ್ಯಕ್ರಮದಲ್ಲಿಯೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆಗಳು ಜರುಗಲಿದೆ. ಅ.23ರಂದು ವೈಭವದ ನಗರೋತ್ಸವ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ…
