Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ (Students’ Welfare Council) 2026-27ನೇ ಸಾಲಿನ ಪದಗ್ರಹಣ ಸಮಾರಂಭವು ಸೋಮವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಬಾರ್ಕೂರಿನ ಎಸ್‌.ಆರ್‌.ಎಸ್‌.ಎಂ.ಎನ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ನೂತನ ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಸದಸ್ಯರಿಗೆ ಶುಭಹಾರೈಸಿ, ವಿದ್ಯಾರ್ಥಿಗಳು ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ಡಾ. ಎಂ. ವಿಶ್ವನಾಥ ಪೈ ಅವರ ನೇತೃತ್ವದಲ್ಲಿ ಪದಗ್ರಹಣ ಹಾಗೂ ಪ್ರಮಾಣ ವಚನ ಸ್ವೀಕಾರ ನಡೆಯಿತು. ಸಂಘದ ಕಾರ್ಯದರ್ಶಿಗಳಿಗೆ ದಾಖಲೆಗಳ ಫೋಲ್ಡರ್‌ಗಳನ್ನು ಹಸ್ತಾಂತರಿಸಲಾಯಿತು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಜಿ. ಪೈ, ಎಂಜಿಎಂ ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಹಾಗೂ ಟಿಎಂಎ ಪೈ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್‌ನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ (ಹೆಚ್.ಐವಿ/ಏಡ್ಸ್ ಸೋಂಕಿತ/ಬಾದಿತ ಮಹಿಳೆಯರಿಗೆ), ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ (ಟ್ರಾನ್ಸ್ಜೆಂರ‍್ಸ್ ವ್ಯಕ್ತಿಗಳಿಗೆ), ಚೇತನಾ ಯೋಜನೆ (ದಮನಿತ ಮಹಿಳೆಯರಿಗೆ) ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಬಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅಥವಾ ಉಡುಪಿ ದೂ.ಸಂಖ್ಯೆ 0820-2524055, ಕುಂದಾಪುರ ದೂ.ಸಂಖ್ಯೆ: 08254-230807, ಕಾರ್ಕಳ ದೂ.ಸಂಖ್ಯೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ : ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಸಹಾಯವನ್ನು ಪಡೆದು ಮುಂದೆ ಉದ್ಯೋಗ ಪಡೆದ ನಂತರ ಇನ್ನಷ್ಟು ಜನರಿಗೆ ಧನ ಸಹಾಯ ಮಾಡುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಅರಿಯಬೇಕು ಎಂದು ಕುಂದಾಪುರದ ರೋಟರಿ ಕ್ಲಬ್ ದಕ್ಷಿಣದ ಅಧ್ಯಕ್ಷ ಡಾ. ಆದರ್ಶ ಹೆಬ್ಬಾರ್‌ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸುಪ್ರಿಯಾ ಕಾಮತ್‌ ಬ್ಯಾನರ್ಜಿ ಸ್ಕಾಲರ್‌ಶಿಪ್‌ ಹಸ್ತಾಂತರಿಸಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್‌ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಮಾನಂದ ಕಾರಂತ್‌ ಸ್ಕಾಲರ್‌ಶಿಪ್‌ ಚೆಕ್‌ ಹಸ್ತಾಂತರಿಸಿ ಆಶಯ ನುಡಿಗಳನ್ನಾಡಿದರು. ಈ ಸಂದರ್ಭ ಮನೋಹರ್‌ ಪಿ ಉಪಸ್ಥಿತರಿದ್ದರು. ಆಡಳಿತ ನಿಕಾಯಕ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಕಾರ್ಯಕ್ರಮ ಸಂಯೋಜಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸರ್ವಾಂಗಾಸನದಲ್ಲಿ ನಿರಂತರವಾಗಿ ಆಸನ ನಿರ್ವಹಿಸಿದ ಸಾಧನೆಗಾಗಿ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್‌ನ ತೃತೀಯ ವರ್ಷದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ವಿದ್ಯಾರ್ಥಿ ಪಿ.ಕೆ. ವಿಕಾಸ್‌ರವರು ಬುಕ್ ಆಫ್ ವರ್ಲ್ಡ ರೆಕಾರ್ಡ್ಸನಿಂದ ವಿಶ್ವ ದಾಖಲೆಯ ಮಾನ್ಯತೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ವಿಕಾಸ್‌ರವರು ಐದನೇ ತರಗತಿಯಿಂದಲೇ ಯೋಗಾಭ್ಯಾಸ ಆರಂಭಿಸಿದ್ದು, ಕಳೆದ 11 ವರ್ಷಗಳಿಂದ ನಿರಂತರವಾಗಿ ಯೋಗವನ್ನು ಅಭ್ಯಾಸ ಮಾಡುತ್ತಿದ್ದಾರೆ. ಸರ್ವಾಂಗಾಸನದ ಪ್ರದರ್ಶನದಲ್ಲಿ ಸಮತೋಲನ, ದೈಹಿಕ ಸಾಮರ್ಥ್ಯ, ನಮ್ಯತೆ, ಸ್ಥಿರತೆ, ಏಕಾಗ್ರತೆ ಹಾಗೂ ಸಹನಶಕ್ತಿಯನ್ನು ಸಮರ್ಥವಾಗಿ ಪ್ರದರ್ಶಿಸಿರುವುದಾಗಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಯೋಗ ಕ್ಷೇತ್ರದಲ್ಲಿ ಹಲವು ಗಮನಾರ್ಹ ಸಾಧನೆಗಳನ್ನು ಮಾಡಿರುವ ವಿಕಾಸ್ ಅವರು, 2023, 2024 ಹಾಗೂ 2025ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಯೋಗ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 2022ರಲ್ಲಿ ನಡೆದ ಡಬ್ಲ್ಯುಎಫ್‌ಎಫ್ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. 2024ರಲ್ಲಿ ನವದೆಹಲಿಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು,ಸೆ.29: ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಎಂಬಲ್ಲಿ ಸೌಪರ್ಣಿಕಾ ನದಿಯ ಸಮೀಪ ಇಬ್ಬರು ವ್ಯಕ್ತಿಗಳ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತರನ್ನು ಚಾರ್ಸಾಲು ನಿವಾಸಿ ವಿಠ್ಠಲ ನಾಯ್ಕ್ (36 ವರ್ಷ) ಹಾಗೂ ಹೊಸೂರು ಗ್ರಾಮದ ದರುಕೋಡು ನಿವಾಸಿ ಭವ್ಯಾ ಅಲಿಯಾಸ್ ನಿಶ್ಮಿತಾ (33 ವರ್ಷ) ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಇವರ ವಿರುದ್ಧ ವಿಠ್ಠಲ ನಾಯ್ಕನ ಮಡದಿಗೆ ವಿಷಪ್ರಾಶನಗೈದು ಕೊಲೆ ಮಾಡಲು ಯತ್ನಿಸಿದ ಆರೋಪ ಎದುರಾಗಿತ್ತು. ಈ ಬಗ್ಗೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಸೆ.11ರಂದು ದೂರು ದಾಖಲಾಗಿತ್ತು. ಆಟೋ ಚಾಲಕನಾಗಿದ್ದ ವಿಠ್ಠಲ ನಾಯ್ಕ್‌ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ಚಾರ್ಸಾಲುವಿನಲ್ಲಿ ವಾಸವಿದ್ದ. ಈ ನಡುವೆ ಟೈಲರ್‌ ವೃತ್ತಿ ಮಾಡಿಕೊಂಡಿದ್ದ ಭವ್ಯಾಳ ಪರಿಚಯವಾಗಿ ಅದು ಪ್ರೀತಿಗೆ ತಿರುಗಿತ್ತು. ಇದಕ್ಕೆ ಅಡ್ಡಿಯಾಗಿದ್ದ ಪತ್ನಿಯನ್ನು ಹತ್ಯೆಗೈಯುವ ಸಂಚು ರೂಪಿಸಿದ್ದರು ಎನ್ನಲಾಗಿದೆ. ಅದರಂತೆ ಭವ್ಯಾಳನ್ನು ನರ್ಸ್‌ ಎಂದು ಪರಿಚಯಿಸಿ ಇಂಜೆಕ್ಷನ್‌ ನೀಡಲಾಗಿತ್ತು. ಇದರಿಂದ ವಿಠ್ಠಲನ ಪತ್ನಿ ಅಸ್ವಸ್ಥಗೊಂಡಿದ್ದು, ಕುಟುಂಬಿಕರು ಮಣಿಪಾಲದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ‘ಈ ಬಾರಿ ನಿರೀಕ್ಷೆಯಂತೆ ಮಳೆ ಬಾರದೆ ಇರುವುದರಿಂದ ಕುಂದಾಪುರ, ಬೈಂದೂರು ತಾಲೂಕಿನಲ್ಲಿ ನೀರಿನ ಕೊರತೆಯಿದ್ದು, ಈಗಿನಿಂದಲೇ ನೀರಿನ ಸಮಸ್ಯೆ ಎದುರಿಸಲು ಸಜ್ಜಾಗಬೇಕು’ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕುಂದಾಪುರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರದಿ ಪ್ರಕಾರ ಬೈಂದೂರಲ್ಲಿ ಶೇ. 27 ಹಾಗೂ ಕುಂದಾಪುರದಲ್ಲಿ ಶೇ. 16ರಷ್ಟು ಮಳೆ ಕೊರತೆಯಾಗಿದೆ. ಮಳೆಮಾಪನ ಸರಿಯಾಗಿ ನಿರ್ವಹಣೆಯಾಗಿದ್ದಲ್ಲಿ, ಇನ್ನಷ್ಟು ಹೆಚ್ಚಿನ ಕೊರತೆ ಕಾಣುತ್ತಿತ್ತು. ಉಪ್ಪು ನೀರಿನ ಸಮಸ್ಯೆ ಇರುವ ಕಡೆ ಡಿಸೆಂಬರ್‌ನಿಂದಲೇ ಕೊರತೆಯಾಗಬಹುದು. ಈ ಕಾರಣಕ್ಕಾಗಿ ಈ ಬಾರಿ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದ್ದು, ಕೃಷಿಕರಿಗೂ ನೆರವಾಗಬೇಕು ಎಂದರು. ಈ ಬಾರಿಯ ಮಳೆಗೆ 16 ಕಡೆ ತೋಟಗಳಿಗೆ, 4.5 ಎಕರೆ ಪ್ರದೇಶಕ್ಕೆ ಹಾನಿಯಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳಿದರು. ವಾರಾಹಿ ನದಿಯ ಮಾಣಿ ಜಲಾಶಯದ ಒಟ್ಟು ಸಂಗ್ರಹಣಾ ಸಾಮರ್ಥ್ಯ 31.5…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ- ಗುಜ್ಜಾಡಿ, ರೋಟರಿ ಕ್ಲಬ್ ಗಂಗೊಳಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ, ಶ್ರೀ ನಾರಾಯಣ ಗುರು ಜನಸೇವಾ ಬಳಗ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ ಗಂಗೊಳ್ಳಿಯ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಸೋಮವಾರ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಗಂಗೊಳ್ಳಿ ಗ್ರಾಪಂ ಪಿಡಿಒ ರವಿ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧಾ ಹಾದಿಮನೆ, ಜಿಲ್ಲಾ ಮಹಿಳಾ ಮಕ್ಕಳ ಅಧಿಕಾರಿ ವಿಜಯಲಕ್ಷ್ಮೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧೀ ಎಮೊರಿಯಲ್ ಸಂಧ್ಯಾ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ”ಹಿಂದಿ ದಿವಸ್” ಆಚರಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಏನ್. ಬಾಯಾರ್ ಅವರು ಆಗಮಿ ಮಾತನಾಡಿ, “ಹಿಂದಿ ಬಹಳ ಪ್ರಾಚೀನ ಭಾಷೆ.ಹಿಂದಿಯಲ್ಲಿ ಹಲವು ಉತ್ತಮ ಸಾಹಿತ್ಯ ಪ್ರಕಾರಗಳು ರಚಿಸಲ್ಪಟ್ಟಿವೆ. ಹಿಂದಿ ಒಂದು ಭಾವೈಕ್ಯದ ಭಾಷೆ ಹಾಗು ಈ ಭಾಷೆಯು ಎಲ್ಲಾ ಬಗೆಯ ಜನರನ್ನು ಒಗ್ಗೂಡಿಸುವ ಭಾಷೆಯಾಗಿದೆ” ಎಂದರು. ಹಿಂದಿ ದಿವಸ್ ನ ಅಂಗವಾಗಿ ಕಾಲೇಜಿನಲ್ಲಿ ಆಶುಭಾಷಣವೇ ಮೊದಲಾದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿಕಾಲೇಜಿನ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. “ಡಿಜಿಟಲ್ ಯುಗ್ ಮೇ ಹಿಂದಿ” ವಿಷಯಕವಾದ ಭಿತ್ತಿಪತ್ರ ಪ್ರದರ್ಶನ ಮತ್ತು ರಂಗೋಲಿಗಳೊಂದಿಗೆ ವಿದ್ಯಾರ್ಥಿಗಳು ಸಭೆಯನ್ನು ಅಲಂಕರಿಸಿದ್ದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯ್ಕ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಉಪನ್ಯಾಸಕಿ ಕೃತ್ತಿಕಾ ಪಿ. ಶೆಣೈ ಅವರು “ಹಿಂದಿ ದಿವಸ್” ನ ಔಚಿತ್ಯದ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಅಭಿಯಾನದಡಿ ಆಯೋಜಿಸಲಾದ “ಅಂಗನ್ ಕಾ ಮಿಲನ್” ಕಾರ್ಯಕ್ರಮವು ಬೆಳ್ವೆಯ ವಾಸುಕಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಅವರು ವಹಿಸಿ, ಮಾತನಾಡಿ, “ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಮತ್ತು ಸಂಸ್ಕಾರದ ಮೊದಲ ದೀಪ. ಅವರ ಸೇವೆಯನ್ನು ಗುರುತಿಸುವುದೇ ಈ ಮಿಲನ್ ಕಾರ್ಯಕ್ರಮದ ಉದ್ದೇಶ. ಸೇವೆಯೇ ಸಂಘಟನೆ ಎಂಬ ಮಂತ್ರದೊಂದಿಗೆ ಮಹಿಳಾ ಮೋರ್ಚಾ ನಿರಂತರವಾಗಿ ಕೆಲಸ ಮಾಡುತ್ತಿದೆ” ಎಂದರು. ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಅವರು ಮಾತನಾಡಿ, “ಮೋದಿಜಿ ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ಬಂದಿದೆ. ಅಂಗನವಾಡಿ ವ್ಯವಸ್ಥೆಯನ್ನು ಭವಿಷ್ಯದ ಭಾರತ ಕಟ್ಟುವ ಸಂಸ್ಕಾರ ಕೇಂದ್ರ ಎಂದು ಪರಿಗಣಿಸಿ ಕೆಲಸ ಮಾಡುತ್ತಿರುವ ಮಹಿಳಾ ಮೋರ್ಚಾದ ಪ್ರಯತ್ನ ಶ್ಲಾಘನೀಯ” ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತರಬೇತಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ JFM ಕೃಷ್ಣಮೂರ್ತಿ ಹೈಕಾಡಿ ಅವರಿಗೆ ‘ಪ್ರೇರಣಾ ಪ್ರಶಸ್ತಿ–2026’ ನೀಡಿ ಗೌರವಿಸಲಾಯಿತು. ಭಾನುವಾರ ಮಂಗಳೂರಿನ ʼಜೆಪ್ಪು ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ‘ಆರೋಹಣ ತರಬೇತಿ ಸಮ್ಮೇಳನ–2026’ ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಂ.ಎ ಬಿ.ಇಡಿ ಪದವೀಧರರಾಗಿರುವ ಅವರು 2018ರಲ್ಲಿ JCI Brahmavara Sevame ಮೂಲಕ JCI ಸೇವಾ ಕ್ಷೇತ್ರಕ್ಕೆ ಪ್ರವೇಶಿಸಿದರು. 2023ರಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಆ ಅವಧಿಯಲ್ಲಿ 100% Efficiency ಹಾಗೂ Zone ಮಟ್ಟದ ಪ್ರಶಸ್ತಿಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2024ರಲ್ಲಿ JCI Zone Trainer ಆಗಿ ಆಯ್ಕೆಯಾದರು ಬಳಿಕ JCI Shankaranarayana ಘಟಕಕ್ಕೆ ಸೇರಿ ವಿವಿಧ ತರಬೇತಿ ಚಟುವಟಿಕೆಗಳನ್ನು ನಡೆಸಿದ್ದರು. ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ JCI ಸದಸ್ಯರಿಗೆ How to Face Exams, National Youth Day Training, Women Empowerment, Skill Development, Effective Communication, Personality Development,…

Read More