ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.27: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರರಾದ ಕೆ. ಲಕ್ಷ್ಮೀನಾರಾಯಣ ಅವರು, ಶ್ರೀ ಲಕ್ಷ್ಮಿಕನ್ಸ್ಟ್ರಕ್ಷನ್ ಸಂಸ್ಥೆಯನ್ನು ಸ್ಥಾಪಿಸಿ ಉದ್ಯಮಿಯಾಗಿ ಖ್ಯಾತಿಗಳಿಸಿದ್ದರು. ಮುಂದೆ ರಾಜಕೀಯದಲ್ಲಿ ಆಸಕ್ತಿ ಹೊಂದಿ ಮೂರು ಭಾರಿ ಬೈಂದೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2 ಬಾರಿ ಸೋಲು ಕಂಡಿದ್ದ ಅವರು 2008ರಲ್ಲಿ ಜಯಗಳಿಸಿ ತನ್ನ ಶಾಸಕತ್ವದ ಅವಧಿಯಲ್ಲಿ ಬೈಂದೂರು ಕ್ಷೇತ್ರದ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ. ಹಲವು ವರ್ಷಗಳಿಂದ ಬೇಡಿಕೆಯಲ್ಲಿದ್ದ ಬೈಂದೂರು ತಾಲೂಕು ರಚನೆಯಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ತಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದ ಅವರು, ಗುಂಡೂರು ಡ್ಯಾಂ, ಮರವಂತೆ ಬಂದರು, ಕೊಡೇರಿ ಕಿರು ಬಂದರು, ಮರವಂತೆ – ಪಡುಕೋಣೆ ಸೇತುವೆ, ಕನ್ನಡಕುದ್ರು ಸೇತುವೆ, ನಿರ್ಮಾಣಕ್ಕೆ ನಾಂದಿ ಹಾಡಿದ್ದರು. ಅಧಿಕಾರಾವಧಿಯಲ್ಲಿ ಸ್ವಜನ ಪಕ್ಷಪಾತ, ಭ್ರಷ್ಟಾಚಾರದ ಆರೋಪಗಳಿಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಬೈಂದೂರು ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಗಣೇಶ ಮೇಸ್ತ ಮಾತನಾಡಿ, ಸರಕಾರದ ಹತ್ತಾರು ಹೊಸ ತಂತ್ರಾಂಶಗಳ ಕೆಲಸವನ್ನು ಯಾವುದೆ ಸೌಲಭ್ಯ ನೀಡದೆ ನಿರ್ವಹಿಸುವ ಜೊತೆಗೆ ಸಿಬಂದಿಗಳ ಕೊರತೆ ಕಂದಾಯ ನಿರ್ವಹಣೆ ಮೊದಲಾದವುಗಳ ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹೇರಲಾಗಿದೆ. ಜಿಲ್ಲೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಐದಾರು ಗ್ರಾಮಗಳ ಜವಾಬ್ದಾರಿ ನೀಡಿರುವುದರಿಂದ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲು ಸಾದ್ಯವಾಗದೆ ಒತ್ತಡದ ಬದುಕು ನಡೆಸುವಂತಾಗಿದೆ. ಹೀಗಾಗಿ ನಮ್ಮ ಬೇಡಿಕೆ ಶೀಘ್ರವಾಗಿ ಈಡೇರಿಸುವವರೆಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು. ► ಕುಂದಾಪುರ:…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಲು, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಅನಿರ್ದಿಷ್ಠಾವಧಿ ಪ್ರತಿಭಟನೆಯ ಭಾಗವಾಗಿ ಗುರುವಾರ ಕುಂದಾಪುರ ತಾಲೂಕು ಕಚೇರಿ ಮುಂಭಾಗ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ನಡೆಸಿದರು. ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಹಕ್ಕುಪತ್ರ, ಆಧಾರ್ ಸೀಡ್, ಬೆಳೆ ಕಟಾವು ಮೊಬೈಲ್ ಆಪ್, ಭೂಮಿ, ದಿಶಾಂಕ್ ಸೇರಿದಂತೆ ಸುಮಾರು 21 ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳ ಮೂಲಕ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳ ವೇತನ ಶ್ರೇಣಿ ನೀಡಬೇಕು. ► ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಠಾವಧಿ ಪ್ರತಿಭಟನೆ- https://kundapraa.com/?p=77240 . ಕಛೇರಿ, ಪೋನ್, ಕಂಪ್ಯೂಟರ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಸೇವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಹೊರಡಿಸಿದ್ದ ಆದೇಶ ಜಾರಿಗೊಳಿಸದಂತೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಸೆ.20ರಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು 9 ಮಂದಿ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದರು. ಆದರೆ ಸೆ.19ರಿಂದ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದು ವಾದಿಸಲಾಗಿದೆ. ಅಲ್ಲದೇ ಓರ್ವ ಸದಸ್ಯರ ವಿರುದ್ದ ಅಪರಾಧ ಪ್ರಕರಣ ದಾಖಲಾಗಿದೆ. ಅವರನ್ನು ಸದಸ್ಯರನ್ನಾಗಿ ನೇಮಿಸಿರುವುದು ಸರಿಯಲ್ಲ ಎಂಬ ವಾದವನ್ನು ಹೈಕೋರ್ಟ್ ಮುಂದಿಡಲಾಗಿದೆ. ಈ ಬಗ್ಗೆ ಚಂದ್ರಶೇಖರ ರೆಡ್ಡಿ ಬೆಂಗಳೂರು, ರವೀಶ್ ಕುಮಾರ್ ನಿಟ್ಟೂರು, ಎ.ಎಲ್. ಲಕ್ಷ್ಮೀಶ್ ನಿಟ್ಟೂರು ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದು ಅದರಂತೆ ಇಲಾಖಾ ಆಯುಕ್ತರ ಆದೇಶ ಅನುಷ್ಠಾನಗೊಳಿಸಲು ತಾತ್ಕಾಲಿಕ ತಡೆ ನೀಡಿರುವ ಹೈಕೋರ್ಟ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈಗಿರುವ ರಾಷ್ಟ್ರೀಯ ಪಿಂಚಣಿ ಯೋಚನೆ (NPS) ಹಾಗೂ ಕೇಂದ್ರ ಸರಕಾರ ಹೊಸತಾಗಿ ಜಾರಿಗೆ ತರಲು ಹೊರಟಿರುವ ಏಕೀಕೃತ ಪಿಂಚಣಿ ಯೋಜನೆಯನ್ನು (UPS) ಕೈಬಿಟ್ಟು ಹಳೆ ಪಿಂಚಣಿ ಯೋಜನೆ (OPS) ಮರು ಸ್ಥಾಪಿಸಿದರೆ ಮಾತ್ರ ಸರಕಾರಿ ನೌಕರರಿಗೆ ನ್ಯಾಯ ಒದಗಿಸಿದಂತಾಗಲಿದೆ. ಸರಕಾರವು ನೌಕರರ ಬೇಡಿಕೆಯನ್ನು ಪರಾಮರ್ಶಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಒತ್ತಾಯಿಸಿದ್ದಾರೆ. ಅವರು ಗುರುವಾರ ತಾಲೂಕು ಆಡಳಿತ ಸೌಧದ ಎದುರು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಬೈಂದೂರು ತಾಲೂಕು ಘಟಕದಿಂದ ಬೈಂದೂರು ತಹಶಿಲ್ದಾರರ ಮೂಲಕ ರಾಜ್ಯ ಸರಕಾರ ಮುಖ್ಯಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿ ಮಾತನಾಡಿದರು. 2014ರಿಂದ ಎನ್.ಪಿ.ಎಸ್ ವಿರುದ್ಧ ಹೋರಾಟ ನಡೆಸಲಾಗುತ್ತಿದ್ದು, ಅದರ ಪರಿಣಾಮವಾಗಿ ಯು.ಪಿ.ಎಸ್ ಎಂಬ ಹೊಸ ಕಾನೂನನ್ನು ತಂದಿರುವ ಕೇಂದ್ರ ಸರಕಾರ ಎಂಪ್ಲಾಯರ್ ಫಂಡ್ ಶೇ.18ಕ್ಕೆ ಏರಿಸಿ ಶೇ.50 ಖಾತ್ರಿ ಇರುವ ಪಿಂಚಣಿ ನೀಡುವುದಾಗಿ ಹೇಳಿದೆ. ಅದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 25 ರಂದು ಉಡುಪಿ ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಮತ್ತು ಈಜು ಸ್ಪರ್ಧೆಯಲ್ಲಿ ರೋಹಿತ್ 2 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದಿದೆ. ವಿದ್ಯಾರ್ಥಿಗಳಾದ ಸಹನಾ ಖಾರ್ವಿ, ಮಾನ್ಯ ಖಾರ್ವಿ, ಭೂಮಿಕಾ ಖಾರ್ವಿ ಮತ್ತು ಅಮೂಲ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನಾ ಖಾರ್ವಿ ಬೆಸ್ಟ್ ಆಲ್-ರೌಂಡರ್ ಪ್ರಶಸ್ತಿ ಪಡೆದುಕೊಂಡರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ಎಸ್.ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ವಿಜಯಶಾಲಿಯಾಗುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಮತ್ತು ಆಶಿತ್ ಶೆಟ್ಟಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇವೆ, ಸ್ನೇಹ, ವೈವಿಧ್ಯತೆ, ಸಮಗ್ರತೆ ಮತ್ತು ನಾಯಕತ್ವ ಎಂಬ ಮೌಲ್ಯದ ಮೂಲಕ ನಿರಂತರವಾಗಿ ಸಮಾಜದ ಅಭ್ಯುದಯಕ್ಕಾಗಿ ಶ್ರಮಿಸುತ್ತಾ ಬಂದಿರುವ ರೋಟರಿ ಸಂಸ್ಥೆ ತನ್ನದೇ ಆದ ಸಾಮಾಜಿಕ ಮೌಲ್ಯಗಳನ್ನು ಹೊಂದಿದೆ. ಆರೋಗ್ಯ, ಶಿಕ್ಷಣ, ಸಮುದಾಯದ ಅರಿವು ಹಾಗೂ ಅಭಿವೃದ್ಧಿಯಲ್ಲಿ ರೋಟರಿ ಹೆಚ್ಚಿನ ಕಾರ್ಯ ಮಾಡುತ್ತಿದೆ ಎಂದು ರೋಟರಿ ಜಿಲ್ಲೆ 3182ರ ಗವರ್ನರ್ ಸಿಎ ದೇವ್ ಆನಂದ್ ಹೇಳಿದರು. ಅವರು ಮಂಗಳವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಜರುಗಿದ ಬೈಂದೂರು ರೋಟರಿ ಕ್ಲಬ್ಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರೋಟರಿ ಸದಸ್ಯರು ತಮ್ಮ ಉದ್ಯೋಗ ಹಾಗೂ ಸೇವೆಯಲ್ಲಿ ನೈತಿಕ ಮೌಲ್ಯಗಳನ್ನು ಕಾಯ್ದುಕೊಂಡು ಕಾರ್ಯನಿರ್ವಹಿಸುವುದರಿಂದ ಸಮುದಾಯದಲ್ಲಿ ಗೌರವ ಹೆಚ್ಚುತ್ತದೆ. ಪ್ರತಿ ಸದಸ್ಯರಿಗೂ ನಾಯಕರಾಗುವ ಸಮಾನ ಅವಕಾಶವಿದ್ದು ಅಂತರಾಷ್ಟ್ರೀಯ ರೋಟರಿ ಅಧ್ಯಕ್ಷರಾಗುವ ತನಕವೂ ಮಕ್ತ ಅವಕಾಶವಿದೆ ಎಂದರು. ಈ ಸಂದರ್ಭ ಬೈಂದೂರು ರೋಟರಿ ಟ್ರಸ್ಟ್ ವತಿಯಿಂದ 5 ಮಂದಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ, ಮಹಿಳಾ ರೊಟೆರಿಯನ್ಗಳ ಮೂಲಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ಪೋಸ್ಟ್ ಎದುರಿನ ನಿವಾಸಿ ಬಶೀರ್ ಅಹ್ಮದ್ ಅವರ ಪುತ್ರ ಮುಬಾಶೀರ್ (30) ಅವರು ಸೌದಿ ಅರೇಬಿಯಾದಲ್ಲಿ ಹಠಾತ್ತನೆ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸೆ. 25ರಂದು ಮಧ್ಯಾಹ್ನ ಸಂಭವಿಸಿದೆ. ಮುಬಾಶೀರ್ ಅವರು ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿದ್ದರು. 2 ವರ್ಷದ ಹಿಂದೆ ಮಹಾರಾಷ್ಟ್ರದ ಪುಣೆಯ ಯುವತಿಯೊಂದಿಗೆ ವಿವಾಹವಾಘಿದ್ದು, ಬಳಿಕ ಪತ್ನಿಯೊಂದಿಗೆ ಸೌದಿಯಲ್ಲಯೇ ನೆಲೆಸಿದ್ದರು. ಮೃತರು ಪತ್ನಿ, ತಾಯಿ, ತಂದೆ ಹಾಗೂ ಸಹೋದರನನ್ನು ಅಗಲಿದ್ದಾರೆ. ಅವರು ಕುಂದಾಪುರದ ಎಚ್ ಎಂಎಂ ಶಾಲೆ, ವಿಕೆಟರ್ ಶಾಲೆ, ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪೂರೈಸಿ ಆನಂತರ ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಎಂಜಿನಿಯರಿಂಗ್ ಪದವಿ ಪೂರೈಸಿ ಸೌದಿಗೆ ತೆರಳಿದ್ದರು. ಅಂತ್ಯಕ್ರಿಯೆ ವಿಧಿವಿಧಾನಗಳ ಬಗ್ಗೆ ಸೌದಿ ದೇಶದ ಕಾನೂನು ಪ್ರಕ್ರಿಯೆಗಳು ಮುಗಿದ ಅನಂತರವೇ ತಿಳಿದು ಬರಬೇಕಿದೆ. ಕಷ್ಟಕ್ಕೆ ನೆರವಾಗುತ್ತಿದ್ದರು:ಊರಿನಲ್ಲಿದ್ದಾಗ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದ ಮುಬಾಶೀರ್ ಅವರು 4 ವರ್ಷಗಳ ಹಿಂದೆ ತ್ರಾಸಿ – ಮರವಂತೆ…
