Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಸರೆಯಲ್ಲಿ ಕೊಡಮಾಡುವ ಡಾ| ಶಿವರಾಮ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಶಿಕ್ಷಕ ಶಿಕ್ಷಕಿಯರು  ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಶಿಕ್ಷಕ ಶಿಕ್ಷಕಿಯರು ಸ.ಹಿ.ಪ್ರಾ.ಶಾಲೆ ಸಾಸ್ತಾವು ಪ್ರಭಾರ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಬ್ರಕಟ್ಟೆ ಶಿಕ್ಷಕ ಸುರೇಂದ್ರ ಕೋಟ, ವಿವೇಕ ಪದವಿ ಪೂರ್ವ ಕಾಲೇಜು ಮತ್ತು ಫ್ರೌಡಶಾಲೆ ದೈಹಿಕ ಶಿಕ್ಷಕ ಗಣೇಶ್ ಶೆಟ್ಟಿ, ಹಿಂದು ಮಾದರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಶಿಕ್ಷಕ ಮಂಜುನಾಥ, ಸ.ಹಿ.ಪ್ರಾ. ಶಾಲೆ ಉಪ್ಪೂರು ಬ್ರಹ್ಮಾವರ ಶಿಕ್ಷಕಿ ಚೆಲುವ ಕುಮಾರಿ, ಸ.ಹಿ.ಪ್ರಾ. ಶಾಲೆ ಹೆಸಕುತ್ತೂರು ಮುಖ್ಯ ಶಿಕ್ಷಕ ಶೇಖರ್, ಸರಕಾರಿ ಫ್ರೌಡಶಾಲೆ ಕುಕ್ಕೆಹಳ್ಳಿ ಶಿಕ್ಷಕಿ ಲಿನಟ್ ವಾರ್ತಾ ಡಿಸೋಜ, ಸ.ಹಿ.ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಶಿಕ್ಷಕಿ ಚಂದ್ರಮತಿ ದೇವಾಡಿಗ, ಸರಕಾರಿ ಫ್ರೌಡಶಾಲೆ ಕಾವಡಿ ಶಿಕ್ಷಕ ಪ್ರಶಾಂತ್ ಜತ್ತನ್, ಸರಕಾರಿ ಸಂಯುಕ್ತ ಫ್ರೌಡಶಾಲೆ(ಪ್ರಾಥಮಿಕ ಭಾಗ)ಮಣೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಂತಸ-ಸಡಗರದಿಂದ ಆಚರಿಸಲಾಯಿತು. ಪ್ರಾತಃಕಾಲದಲ್ಲೇ ಶಾಲೆಯ ಹಟ್ಟಿಯಂಗಡಿ ಶಾಂತಾರಾಮ ವೇದಿಕೆಯಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಶ್ರೀ ಗಣೇಶನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗಣೇಶನ ಮಹಿಮೆಯನ್ನು ಸಾರುವ ಭಕ್ತಿಗೀತೆಗಳನ್ನು ಹಾಡಲಾಯಿತು. ದಕ್ಷಾ ವಯಲಿನ್ ಮತ್ತು ಕೊಳಲು ವಾದನದಿಂದ ಸಿದ್ಧಿವಿನಾಯಕನಿಗೆ ಗೀತನಮನವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಕೃತ ಶಿಕ್ಷಕರಾದ ರಾಮಕೃಷ್ಣ ಉಡುಪ ವಿದಾರ್ಥಿಗಳನ್ನು ಉದ್ದೇಶಿಸಿ “ ಗಣೇಶ ಚತುರ್ಥಿ ಹಬ್ಬವು ಇಡೀ ಭಾರತದಲ್ಲಿ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಶ್ರದ್ಧಾ ಭಕ್ತಿಯಿಂದ ಗಣೇಶನನ್ನು ಭಜಿಸಿ, ಲೋಕಕ್ಕೆ ಒಳಿತನ್ನು ಬಯಸುವ ಸಂಕಲ್ಪದೊಂದಿಗೆ ನಮ್ಮೆಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವ ಕಾರ್ಯವನ್ನು ಈ ಸಂದರ್ಭದಲ್ಲಿ ಮಾಡಲಾಗುತ್ತದೆ” ಎನ್ನುತ್ತಾ ಚೌತಿ ಚಂದ್ರನ ಕಥೆ ಮತ್ತು ಕೃಷ್ಣನ ಸ್ಯಮಂತಕ ಮಣಿಯ ಕಥೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ತದನಂತರ ವಿದ್ಯಾರ್ಥಿಗಳಿಗಾಗಿ ಮೆಹಂದಿ ಸ್ಪರ್ಧೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ. ರಾಜ್ಯ ಪ್ರಶಸ್ತಿಗಾಗಿ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ದ್ವಿಪ್ರತಿಗಳಲ್ಲಿ ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿ (ಎಂ.ಎಸ್ ಆಫೀಸ್‌ನಲ್ಲಿ ನುಡಿ-6 ಫಾಂಟ್‌ನಲ್ಲಿ) ಯೊಂದಿಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, ಇಲ್ಲಿಗೆ ಅಕ್ಟೋಬರ್ 15 ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಆಹಾರ ಸರಬರಾಜು ಇಲಾಖೆಯಲ್ಲಿ ಖಾಸಗಿಯಾಗಿ ಕೆಲಸ ಮಾಡಿಕೊಂಡಿರುವ ಸಾಕು ಕುಂದಬಾರಂದಾಡಿ ಎಂಬವರ ಕುತ್ತಿಗೆಯಿಂದ ಕರಿಮಣಿ ಸರ ಯಾರೋ ಕಳವು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟು ಮುಳ್ಳಿಕಟ್ಟೆಯಲ್ಲಿ ಖಾಸಗಿ ಬಸನ್ನೇರಿ ಕುಂದಾಪುರ ಶಾಸ್ತ್ರೀ ಸರ್ಕಲ್‍ನಲ್ಲಿ ಇಳಿದಿದ್ದು ಕುತ್ತಿಗೆ ನೋಡುವಾಗ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, ಇಲ್ಲವಾಗಿತ್ತು. ಬಸ್‌ನಲ್ಲಿ ಪಯಣಿಸುತ್ತಿರುವ ಹೊತ್ತಲ್ಲಿ ಯಾರೊ ಕಳ್ಳರು ಕಳವು ಮಾಡಿದ್ದಾರೆ ಎಂದು ಅವರು ದೂರು ನೀಡಿದ್ದು ಕಳವಾದ ಸೊತ್ತಿನ ಮೌಲ್ಯ 1.20 ಲಕ್ಷ ರೂ. ಎಂದು ತಿಳಿಸಿದರು. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟ ವ್ಯಾಪ್ತಿಯ ನಿವಾಸಿ ಅಕ್ಷತಾ (26) ಎಂಬವರಿಗೆ ಮೊಬೈಲ್‌ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತು ನಂಬಿ ಅವರು ಲಿಂಕ್ ಒತ್ತಿದ್ದು 9 ಆರ್ಡರ್ ಮುಗಿಸುವಂತೆ ಆದೇಶ ಬಂದಿತ್ತು. ಅದನ್ನು ನಂಬಿ ಇನ್ನೊಬ್ಬ ಹಂತಹಂತವಾಗಿ 67,330 ರೂ. ಪಾವತಿ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಯಾವುದೇ ಬೋನಸ್ ನೀಡದೆ ವಂಚನೆ ಎಸಗಿದ್ದಲ್ಲದೆ ಪಾವತಿಸಿದ್ದ ಹಣ ವಾಪಸ್ ನೀಡದೆ ವಂಚನೆ ಎಸಗಿದ್ದಾರೆ ಎಂದು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಾಂಧಿ ಮೈದಾನದಲ್ಲಿ ನಡೆದ, ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಕ್ರಿಕೆಟ್ ಆಯ್ಕೆಯಲ್ಲಿ ಶ್ರೀ  ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಾದ, ಆರ್ಯನ್ ಎ. ಖಾರ್ವಿ, ದಿಗಂತ ಖಾರ್ವಿ, ಶ್ರೇಷ್ಠ ಪಿ. ಖಾರ್ವಿ, ಸೌರೀಶ್ ಆರ್. ಖಾರ್ವಿ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಮಕ್ಕಳ ರಕ್ಷಣೆಗೆ ಹಲವಾರು ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ಎಸ್.ಗಂಗಣ್ಣವರ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ನೀತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅನುಷ್ಠಾನಾಧಿಕಾರಿಗಳಿಗೆ ಮಿಷನ್ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021, ದತ್ತು ಅಧಿನಿಯಮ -2022, ಪೋಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಮಕ್ಕಳ ರಕ್ಷಣಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಮಂಗಳವಾರದಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಅವರು ಮಾತನಾಡಿ ’ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂದೀಪ್ ಕುದ್ವ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ’ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ’ ಎಂದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಎಚ್. ಅವರು ’ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಕಾರ್ಯಕ್ರಮವನ್ನು ಕುರಿತು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ’ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆ ಪರಿಹಾರವಲ್ಲ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸಾಂಯವಾಹಿನಿ ಸಂಘದ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ “ಮತ್ಸಾಂಯವಾಹಿನಿ” ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿ ಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 0.50 ಲಕ್ಷ ಭದ್ರತಾ ಠೇವಣಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಪರವಾನಗಿದಾರರಿಗೆ ಪ್ರತಿ ವಾಹನಕ್ಕೆ 3000 ರೂ ಮಾಸಿಕ ಶುಲ್ಕ ನಿಗದಿಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರು ಕಸ್ತೂರ್ಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ತರಬೇತಿ ಶಿಬಿರ ನಡೆಸಲಾಗಿದೆ. ತರಬೇತಿ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 15 ದಿನಗಳ ಜಿಮ್ ಹಾಗೂ ಫಿಟ್ನೆಸ್ ತರಬೇತಿ, ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳಿಗೆ 13 ದಿನಗಳ ಬ್ಯೂಟೀಷಿಯನ್ ತರಬೇತಿ ಹಾಗೂ ಅಕ್ಟೋಬರ್ 4 ರಿಂದ 9 ರವರೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 6 ದಿನಗಳ ಚಾಟ್ಸ್ ತಯಾರಿಕೆ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿಯ ಅರ್ಹ…

Read More