ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತಮ ಪ್ರಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಲು ಕೊನೆಯ ಕ್ಷಣದಲ್ಲಿ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯನ್ನು ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ಇಂದು (ಸೆ.5) ಶಿಕ್ಷಕರ ದಿನಾಚರಣೆ ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವುದನ್ನು ಸರ್ಕಾರ ತಡೆ ಹಿಡಿದಿದೆ. ಸರಕಾರದ ಈ ನಡೆದ ಇದೀಗೆ ಟೀಕೆಗೆ ಕಾರಣವಾಗಿದೆ. ► ಕುಂದಾಪುರ: ರಾಮಕೃಷ್ಣ ಬಿ. ಜಿ. ಅವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ – https://kundapraa.com/?p=76098 . ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ ಎನ್ನಲಾಗಿದೆ. ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಹೊರಕ್ಕೆ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತಿಚಿಗೆ ನಡೆಯಿತು. ಕಾರ್ಯಕ್ರಮವನ್ನು ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್. ವಿಶ್ವನಾಥ ಕರಬ ಅವರು ಉದ್ಘಾಟಿಸಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ್ಯೋದ್ದೇಶಗಳು, ಅದರಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸತ್ಯನಾರಾಯಣ ಹತ್ವಾರ್ ಇವರು ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಮತ್ತು ಅಗತ್ಯತೆ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಅರುಣ್ ಏ. ಎಸ್, ರಾಮಚಂದ್ರ ಆಚಾರ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಸ್ವಯಂಸೇವಕರಾದ ಸಮೀಕ್ಷಾ ಶೆಟ್ಟಿ ಸ್ವಾಗತಿಸಿದರು, ದೀಕ್ಷಾ ಅತಿಥಿಗಳನ್ನು ಪರಿಚಯಿಸಿದರು. ಅಮಿತ್ ರಾಜ್ ವಂದಿಸಿದರು ಹಾಗೂ ವಿಗ್ನೇಶ್ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಕರ ದಿನಾಚರಣೆಯ ಸುಸಂದರ್ಭದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲರ ಪ್ರಶಸ್ತಿಗೆ ಆಯ್ಕೆಯಾದ ಕುಂದಾಪುರದ ಜ್ಯೂನಿಯರ್ ಕಾಲೇಜು ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡುವ ವಿಷಯದಲ್ಲಿ ತಾತ್ಕಾಲಿಕ ತಡೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಖಂಡಿಸಿದ್ದಾರೆ. ಇದನ್ನೂ ಓದಿ:► ಕುಂದಾಪುರ: ರಾಮಕೃಷ್ಣ ಬಿ. ಜಿ. ಅವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ – https://kundapraa.com/?p=76098 . ಪಾಲರಾದ ಬಿ. ಜಿ. ರಾಮಕೃಷ್ಣ ಅವರ ಎಲ್ಲಾ ಅರ್ಹತೆಯನ್ನು ಗಮನಿಸಿ ಶಿಕ್ಷಣ ಇಲಾಖೆ ಪ್ರಶಸ್ತಿ ಆಯ್ಕೆ ಮಾಡಿದೆ. ಶಿಕ್ಷಣ ವಿಷಯದಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ಇದು ಶಿಕ್ಷಣ ಇಲಾಖೆ ಮತ್ತು ದೇಶದಾದ್ಯಂತ ಇರುವ ಶಿಕ್ಷಕರಿಗೆ ಮಾಡಿದ ಅವಮಾನ. ರಾಜ್ಯ ಸರ್ಕಾರ ಈ ಕೂಡಲೇ ತಾತ್ಕಾಲಿಕ ತಡೆಯನ್ನು ತೆಗೆದು ಹಾಕಿ ಈ ಹಿಂದೆ ಆಯ್ಕೆಯಾದ ಗೌರವಾನ್ವಿತ ಶಿಕ್ಷಕರಿಗೆ ಪ್ರಶಸ್ತಿ ನೀಡಬೇಕು ಅವರು ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಮಿಳುನಾಡಿನ ವೆಲಂಕಣಿಯಲ್ಲಿರುವ ಚರ್ಚಿಗೆ ತೆರಳು ಅನುಕೂಲವಾಗುವಂತೆ ಮಡಗಾಂವ್- ವೆಲಂಕಣಿ ನಡುವೆ ಸೆಪ್ಟೆಂಬರ್ 6ಕ್ಕೆ ವಿಶೇಷ ರೈಲು ಸಂಚರಿಸಲಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಮೇರೆಗೆ ಕೊಂಕಣ ರೈಲ್ವೆ ಈ ಆದೇಶ ಹೊರಡಿಸಿದೆ. ರೈಲು ಸೆಪ್ಟಂಬರ್ 6ರ ಮಧ್ಯಾಹ್ನ 12:30ಕ್ಕೆ ಮಡಗಾಂವ್ ನಿಂದ ಹೊರಡಲಿದ್ದು 3:36ಕ್ಕೆ ಬೈಂದೂರು, 4:18ಕ್ಕೆ ಕುಂದಾಪುರ, 4:42ಕ್ಕೆ ಉಡುಪಿ, 5:30ಕ್ಕೆ ಸುರತ್ಕಲ್, ಸಂಜೆ 6ಕ್ಕೆ ಮಂಗಳೂರು ಜಂಕ್ಷನ್ ಆಗಿ ಕಾಸರಗೋಡು ಪಯ್ಯನೂರು ಮೂಲಕ ರಾತ್ರಿ 11:14ಕ್ಕೆ ಶಿರೂರು ನಿಲ್ದಾಣ, ಸೆಪ್ಟೆಂಬರ್ 7ರ ಬೆಳಿಗ್ಗೆ 8:28ಕ್ಕೆ ತಿರುಚಿರಪಳ್ಳಿ ಮಧ್ಯಾಹ್ನ 12:25 ಕ್ಕೆ ವೆಲಂಕಣಿಗೆ ತಲುಪಲಿದೆ. ಸೆಪ್ಟೆಂಬರ್ 7ರ ರಾತ್ರಿ 11:55ಕ್ಕೆ ವೆಲಂಕಣಿಯಿಂದ ಹೊರಟು ಮಂಗಳೂರು, ಉಡುಪಿ, ಕುಂದಾಪುರ, ಕಾರಾವರ ಮೂಲಕ ಸಂಚರಿಸಲಿದೆ. ಈ ರೈಲು ಸಂಚಾರ ಆರಂಭದಿಂದ ಕರಾವಳಿ ಭಾಗದ ಕ್ರೈಸ್ತರಿಗೆ ವೆಲಂಕಣಿಯ ವಾರ್ಷಿಕ ಹಬ್ಬಕ್ಕೆ ತೆರಳಲು ಅನುಕೂಲವಾಗಲಿದೆ. ಅನೇಕ ಸಮಯಗಳಿಂದ ಮಡಗಾಂವ್- ವೆಲಂಕಣಿ ಮಧ್ಯೆ ರೈಲು ಸಂಚಾರ ಆರಂಭಕ್ಕೆ ಬೇಡಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ (ಕಿರು ಮಂತ್ರಾಲಯ) ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗೃಹಕ್ಕೆ ಗುರುವಾರ ಶಿಲಾನ್ಯಾಸ ಮಾಡಲಾಯಿತು. ವೇದಮೂರ್ತಿ ಕುತ್ಯಾರು ಕೇಂಜ ಶ್ರೀಧರ ತಂತ್ರಿ ಹಾಗೂ ಮಠದ ಪ್ರಧಾನ ಅರ್ಚಕರಾದ ಸುಬ್ರಾಯ ನಾವಡ ಇವರ ನೇತೃತ್ವದಲ್ಲಿ ಬೆಳಿಗ್ಗೆ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಸೂಲ್ಯಣ್ಣ ಶೆಟ್ಟಿ, ಸದಸ್ಯರಾದ ಎಸ್. ರಾಜು ಪೂಜಾರಿ, ಮಂಜುನಾಥ ಶೆಟ್ಟಿ, ದಿನೇಶ್, ರವೀಂದ್ರ ಶ್ಯಾನುಭಾಗ್, ಗಿರೀಶ್ ಶೇಟ್, ರಾಜು ದೇವಾಡಿಗ, ಮಂಜುನಾಥ ಸೆಳಾಕುಳ್ಳಿ, ಜಗನ್ನಾಥ ಶೆಟ್ಟಿ, ಮಹೇಶ್ ಮೊಗೇರ್ ಕರಾವಳಿ, ದಿನಕರ ಶೆಟ್ಟಿ, ಅಣ್ಣಪ್ಪ ಪೂಜಾರಿ, ಶಿಲ್ಪಿಗಳಾದ ಗುರು ಭಟ್ಕಳ, ಅರ್ಚಕರಾದ ಮುರುಳಿ ನಾವಡ, ತಿರುಮಲ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ , ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪಾರ್ಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಹಾಗೂ ಶಾಲಾ ವಿದ್ಯಾರ್ಥಿ ಸಂಸತ್ತಿನ ಮಕ್ಕಳು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ವಿದ್ಯಾರ್ಥಿ ಮನ್ವಿತಾ ಎಸ್. ಅವರು ಶಿಕ್ಷಕರ ದಿನಾಚರಣೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಲೋನಾ ಡಿಸೋಜಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಆರೋಗ್ಯ ಮತ್ತು ನೈರ್ಮಲ್ಯ ಉತ್ತಮ ಆರೋಗ್ಯದ ತಳಹದಿ, ಆಧುನಿಕತೆಯ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡಿರುವAತ ವಿದ್ಯಾರ್ಥಿಗಳು ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಪ್ರಾಮುಖ್ಯತೆಯನ್ನು ನೀಡುವುದು ಅತ್ಯಂತ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಹಿತಮಿತವಾದ ಉತ್ತಮ ಆಹಾರ, ಶುದ್ಧ ನೀರು, ನಿಯಮಿತವಾದ ವ್ಯಾಯಾಮ ಅವಶ್ಯಕ ಎಂದರು. ಉಪ-ಪ್ರಾಂಶುಪಾಲರು ಮತ್ತು ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ರಶ್ಮಿ ಗಾವಡಿ ಉಪಸ್ಥಿತರಿದ್ದರು. ಮಹಿಳಾ ಸಬಲೀಕರಣ ಘಟಕದ ಸಂಯೋಜಕರಾದ ವೀಣಾ ವಿ. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ಆಫೀಸರ್ ಡಾ. ಜಯಶಂಕರ ಕಂಗನಾರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸನ್ನಿಧಿ ಹೊಳ್ಳ ಮತ್ತು ಪಿ.ಸಿ.ಎಂ.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಅಮೋಘ ದೇವಾಡಿಗ ಅವರನ್ನು ವಿಶೇಷವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ. ವಹಿಸಿದ್ದರು. ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಲಾ ತಾಂಡೇಲಾ ಶುಭಾ ಸಂಸನಗೈದರು. ಎನ್ಎಸ್ಎಸ್ ಯೋಜನಾಧಿಕಾರಿ ಸುಗುಣ ಆರ್.ಕೆ, ಎನ್ಎಸ್ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳು ಜರುಗಿದವು. ಕುಂದಾಪುರ ಮತ್ತು ಬೈಂದೂರು ತಾಲೂಕಿಗೊಳಪ್ಪಟ್ಟ ಸುಮಾರು 30ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ̧1265ಕ್ಕೂ ಹೆಚ್ಚು ಸ್ಪರ್ಧಿಗಳು 20 ಸಾಂಸ್ಕೃತಿಕ, 10 ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಕರಾಮತ್ತನ್ನು ಪ್ರದರ್ಶಿಸಿದರು. ಮುಂಜಾನೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಶಾಲೆ ನಡೆದು ಬಂದ ಹಾದಿ, ಸ್ಪರ್ಧೆಗಳನ್ನು ನಡೆಸಿಕೊಂಡು ಬಂದ ರೀತಿನೀತಿಗಳನ್ನು ತಿಳಿಸಿದರು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಕುಂದಾಪುರದ ತಹಶೀಲ್ದಾರರಾದ ಶೋಭಾಲಕ್ಷ್ಮೀ ಗ್ರಾಮೀಣಪ್ರದೇಶದಲ್ಲಿ ವಿದ್ಯಾರ್ಜನೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿ ಮಾಡಿರುವುದರ ಬಗ್ಗೆ ಹರ್ಷವನ್ನು ವ್ಯಕ್ತಪಡಿಸುತ್ತಾ “ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಲ್ಲಿ ಹುದುಗಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವಜನತೆಗೆ ಮಾದರಿಯಾಗುವ ರೀತಿಯಲ್ಲಿ ಹಿರಿಯ ನಾಗರಿಕರು ಜೀವನ ನಡೆಸುತ್ತಿದ್ದು, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ , ವೃದ್ಧಾಶ್ರಮಗಳು ಉಡುಪಿ ಹಾಗೂ ಕೆನರಾ ಬ್ಯಾಂಕ್ ವೃತ್ತ ಕಚೇರಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ…
