Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಾರಾಷ್ಟ್ರದ ನಾಗಪುರದಲ್ಲಿ ಸೆ.28ರಂದು ನಡೆಯಲಿರುವ ವರ್ಡ್‌ಕ್ಯಾಂಪ್‌ ಸೆಮಿನಾರ್‌ನಲ್ಲಿ “Navigating the DPDP Act 2023: What Digital Professionals Need to Know?” ಎಂಬ ವಿಷಯದ ಮೇಲೆ ಫೋರ್ತ್‍ ಪೋಕಸ್‍ ಸಂಸ್ಥಾಪಕ ಮತ್ತು ನಿರ್ದೇಶಕರಾದ ವಿ. ಗೌತಮ್ ನಾವಡ ಮಾರ್ಗದರ್ಶನ ನೀಡಲಿದ್ದಾರೆ. ಡಿಜಿಟಲ್ ವೈಯಕ್ತಿಕ ಡೇಟಾ ರಕ್ಷಣೆ ಕಾಯ್ದೆ 2023 (DPDP Act 2023) ಡಿಜಿಟಲ್ ವೃತ್ತಿಪರರು, ಉದ್ಯಮಗಳು ಮತ್ತು ಸಂಸ್ಥೆಗಳು ವೈಯಕ್ತಿಕ ಮಾಹಿತಿಯನ್ನು ಹೇಗೆ ಸಂಗ್ರಹಿಸಬೇಕು ಎಂಬಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಗೌತಮ್ ನಾವಡ ಅವರ ಸೇಶನ್, ಈ ಕಾಯ್ದೆಯ ಪರಿಣಾಮಗಳು, ಉಪಯುಕ್ತತೆಗಳು ಮತ್ತು ಸವಾಲುಗಳನ್ನು ವಿವರವಾಗಿ ವಿಶ್ಲೇಷಿಸಿ, ಡಿಜಿಟಲ್ ವೃತ್ತಿಪರರಿಗೆ ಈ ನಿಯಮಾತ್ಮಕ ಪರಿಸರವನ್ನು ಅರ್ಥಮಾಡಿಕೊಡಲಿದೆ. ಅವರ ಬಹುವಾರ್ಷಿಕ ತಂತ್ರಜ್ಞಾನ ಉದ್ಯಮದ ಅನುಭವ ಮತ್ತು ವೆಬ್ ಸೊಲ್ಯೂಷನ್ ಕ್ಷೇತ್ರದಲ್ಲಿ ಸಾಧಿಸಿರುವ ಸಾಧನೆಗಳನ್ನು ಆಧರಿಸಿ, ಗೌತಮ್ ನಾವಡ ಅವರ ಸಶಕ್ತ ಭಾಷಣವು ಡಿಜಿಟಲ್ ವೃತ್ತಿಪರರಿಗೆ ಹೊಸ ಕಾಯ್ದೆಯನ್ನು ಅನುಸರಿಸುವುದು, ಡೇಟಾ ನಿರ್ವಹಣೆ ಮತ್ತು ವೈಯಕ್ತಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮುದಾಯದ ಸೇವೆಯಲ್ಲಿ ರೋಟರಿ ಸದಾ ಮುಂಚೂಣಿಯಲ್ಲಿದ್ದು, ಸಾರ್ವಜನಿಕರಿಗೆ ಸಂಪೂರ್ಣ ಉಪಯೋಗವಾಗುವಂತಹ ಹತ್ತಾರು ಜನಪರ ಯೋಜನೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತದೆ. ಇಂತಹ ಯೋಜನೆಗಳು ಜನರಿಗೆ ನೆರವಾಗುವುದಲ್ಲದೇ, ಧೀರ್ಘಕಾಲದ ತನಕ ಅವರ ಮನಸ್ಸಿನಲ್ಲಿಯೂ ಉಳಿಯುವಂತಾಗುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್‌ ಸಿಎ ದೇವ್‌ ಆನಂದ್‌ ಹೇಳಿದರು. ಅವರು ಮಂಗಳವಾರ ರೋಟರಿ ಕ್ಲಬ್‌ ಬೈಂದೂರು ವತಿಯಿಂದ ಇಲ್ಲಿನ ಮೂಕಾಂಬಿಕಾ ರೋಡ್‌ ರೈಲ್ವೆ ನಿಲ್ದಾಣದಲ್ಲಿ 2024-25ನೇ ಸಾಲಿನ ರೋಟರಿ ಸಾರ್ವಜನಿಕ ಸೇವೆ ಯೋಜನೆಯಡಿ ನಿರ್ಮಿಸಲಾದ ನೂತನ ರೈಲು ಪ್ರಯಾಣಿಕರ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಸಾರ್ವಜನಿಕ ವಲಯದಲ್ಲಿ ರೋಟರಿಯ ಘನತೆಯನ್ನು ಎತ್ತಿಹಿಡಿಯುವಂತಹ ಯೋಜನೆ ರೂಪಿಸಿರುವುದು ಶ್ಲಾಘನಾರ್ಹವಾದುದು ಎಂದರು. ಕೊಂಕಣ್‌ ರೈಲ್ವೆಯ ಸೀನಿಯರ್‌ ರೀಜನಲ್‌ ಟ್ರಾಫಿಕ್‌ ಮ್ಯಾನೇಜರ್‌ ದಿಲೀಪ್‌ ಡಿ. ಭಟ್‌ ರೋಟರಿ ಮಾಹಿತಿ ಫಲಕವನ್ನು ಉದ್ಘಾಟಿಸಿದರು. ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಜಯಾನಂದ ಹೋಬಳಿದಾರ್‌ ಅವರು ರೋಟರಿಯಿಂದ ಸಾರ್ವಜನಿಕರಿಗಾಗಿ ನೀಡಿದ 3 ಬೆಂಚುಗಳನ್ನು ಲೋಕಾರ್ಪಣೆಗೊಳಿಸಿದರು. ರೈಲು ತಂಗುದಾಣ ನಿರ್ಮಾಣಕ್ಕೆ ದೇಣಿಗೆ ನೀಡಿದ ಸುಮತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈಜಲು ತೆರಳಿದ್ದ ಇಲ್ಲಿನ ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಯೋಜನಾನಗರ ನಿವಾಸಿ ಕೃಷ್ಣ ದೇವಾಡಿಗ ಎಂಬುವರ ಮಗ ನಾಗೇಂದ್ರ (13) ಹಾಗೂ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು ಶಾಲಿಯಾನ್ ಎಂಬುವರ ಮಗ ಶಾನು ಮೊಹಮದ್ ಶಫಾನ್ (13) ಸಾವನ್ನಪ್ಪಿದ ವಿದ್ಯಾರ್ಥಿಗಳು ಮಧ್ಯವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಮಂಗಳವಾರ ಪರೀಕ್ಷೆ ಮುಗಿಸಿ ಮನೆಗೆ ತೆರಳಿದ್ದರು. ಸಂಜೆ 4 ಗಂಟೆ ಸುಮಾರಿಗೆ ನಾಗೇಂದ್ರ, ಸ್ನೇಹಿತ ಶಾನು ಮೊಹಮದ್ ಶಫಾನ್ ಕೆರೆಕಟ್ಟೆಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ. ರಾತ್ರಿಯಾದರೂ ವಿದ್ಯಾರ್ಥಿಗಳು ಮನೆಗೆ ಬರದ್ದನ್ನು ನೋಡಿ ಕೆರೆ ಬಳಿ ಹುಡುಕಾಟ ನಡೆಸಿದಾಗ ಸೈಕಲ್, ಬಟ್ಟೆ ಹಾಗೂ ಎರಡು ಜೊತೆ ಚಪ್ಪಲಿ ಪತ್ತೆಯಾಗಿದೆ. ಬುಧವಾರ ಬೆಳಿಗ್ಗೆ 02:25ರ ವೇಳೆಗೆ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. 40 ಅಡಿ ಆಳ ಹಾಗೂ 10-20…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಡ್ಕಲ್ – ಹೊಸೂರು  ಸಿದ್ದೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ 2023-24ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ವಂಡಬಳ್ಳಿಪಾಲ್‍ನಲ್ಲಿರುವ ಶಾಲೋಮ್ ಕಾಂಪ್ಲೆಕ್ಸ್  ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ ಜೋಗಿಜಡ್ಡು ಮಾತನಾಡಿ, ಮಾರ್ಚ್ 2021ರಲ್ಲಿ ಪ್ರಾರಂಭಗೊಂಡ ಈ ಸಹಕಾರ ಸಂಘವು ಮಾರ್ಚ್ 2024ಕ್ಕೆ 1500 ‘ಅ’ ತರಗತಿ ಸದಸ್ಯರನ್ನು ಮತ್ತು ರೂ. 49.90ಲಕ್ಷ ಪಾಲು ಬಂಡವಾಳವನ್ನು ಹೊಂದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 29.58 ಕೋಟಿ ವ್ಯವಹಾರ ನಡೆಸಿರುವ ನಮ್ಮ ಸಹಕಾರ ಸಂಘವು ಸದಸ್ಯರಿಗೆ ರೂ. 6.67 ಕೋಟಿ ವಿವಿಧ ಸಾಲಗಳನ್ನು ನೀಡಿದೆ. 2023-24 ರಲ್ಲಿ ರೂ. 11.8 ಲಕ್ಷ ಲಾಭಗಳಿಸಿ, ಸದಸ್ಯರಿಗೆ ಶೇ.7 ಡಿವಿಡೆಂಡ್ ನೀಡುತ್ತಿದ್ದೇವೆ ಎಂದರು. ಸಂಘದ ಯಶಸ್ವಿಗೆ ಕಾರಣಿಕರ್ತರಾದ ಎಲ್ಲಾ ಸದಸ್ಯರಿಗೂ ಧನ್ಯವಾದಗಳು ತಿಳಿಸಿದರು. ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಚಂದ್ರಶೇಖರ ನಾಯ್ಕ ಹರ್ಕೋಡು, ನಿರ್ದೇಶಕರಾದ ಸುರೇಶ ನಾಯ್ಕ ಬೆಳ್ಳಾಲ, ದೇವಪ್ಪ ನಾಯ್ಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ಪಂದ್ಯದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್‌ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಇದರ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆ ಮಂಗಳವಾರದಂದು ತಾಲೂಕಿನ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಇದರ ಅಧ್ಯಕ್ಷ ಬಿ. ನಾರಾಯಣ ರಾವ್ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ‌ ಅಧ್ಯಕ್ಷತೆ ವಹಿಸಿದ್ದರು. ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ವಿಸ್ತರಣಾಧಿಕಾರಿ ರಾಜಾರಾಮ ಅವರು 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ‌ ಉದ್ದೇಶಿಸಿ ಮಾತನಾಡಿ, ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಕಳೆದ 38 ವರ್ಷಗಳಿಂದ ಅತೀ ಹಾಲು ಸಂಗ್ರಹಣೆಯಲ್ಲಿ ಮುಂಚೂಣಿಯ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ 4.29,219 ಲಕ್ಷ ಲಾಭಗಳಿಸಿದೆ. ಅದರ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಶೇ 18% ಡೆವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದರು. ಕಳೆದ 38 ವರ್ಷಗಳಿಂದ ಸಂಘದ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿದ ರಾಮಚಂದ್ರ ಅವರಿಗೆ ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಸನ್ಮಾನಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಆಶ್ರಯದಲ್ಲಿ ರಕ್ತದೊತ್ತಡದ ಮೇಲೆ ಮೊಬೈಲ್ ಆರೋಗ್ಯದ ಪರಿಣಾಮ ಎನ್ನುವ ವಿಷಯದ ಮೇಲೆ ಅರಿವು ಕಾರ್ಯಕ್ರಮ ಜರುಗಿತು . ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕಸ್ತೂರ್ಬಾ ಮೆಡಿಕಲ್ ಕಾಲೇಜು, ಮಣಿಪಾಲ ಇಲ್ಲಿನ ಜೆ.ಆರ್.ಎಫ್. ಆಗಿರುವ ಮಮತಾ ಅವರು ವಿದ್ಯಾರ್ಥಿಗಳಿಗೆ ಮಾತನಾಡಿ, ಮೊಬೈಲ್ ಹೆಲ್ತ್ ಅರಿವಿನ ಅವಶ್ಯಕ ಹಾಗೂ ಕೆಲವು ನಿದರ್ಶನಗಳ ಮೂಲಕ ವಿವರಿಸಿದರು. ಕಾಲೇಜಿನ ಪ್ರಾಶುಪಾಲರಾದ ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಕೆ.ಎಂ. ಸಿ. ಮಣಿಪಾಲದ ಜೆ.ಆರ್.ಎಫ್. ಆಗಿರುವ ಡೊಯ್ಲಿನ್ ಒಲಿವೆರ ಅವರು ಉಪಸ್ಥಿತರಿದ್ದರು. ಈ ಸಂದರ್ಭ ಕಾಲೇಜಿನ ಯುವ ರೆಡ್‌ಕ್ರಾಸ್ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಸಹ ಸಂಯೋಜಕಿ ಮಾಲತಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿಶೇಷ ತರಬೇತಿ ನೀಡಿ ವಿದ್ಯಾರ್ಥಿಗಳ ಸಾಧನೆಗೆ ಉತ್ತೇಜನ ನೀಡಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಕೂಡ ಕಾಲೇಜು ಸಾಧನೆಯ ಪಥದಲ್ಲಿ ಸಾಗಿ ಬರುತ್ತಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಕುಂದಾಪುರ ಇದರ 2023-24 ನೇ ಸಾಲಿನ ಹತ್ತನೆ ವರ್ಷದ ವಾರ್ಷಿಕ ಮಹಾಸಭೆಯು ಮಂಗಳವಾರದಂದು ಸಂಘದ ಸಹಕಾರಿ ಕಛೇರಿಯಲ್ಲಿ ಸೊಸೈಟಿ ಅಧ್ಯಕ್ಷರಾದ ಗಿರೀಶ್ ಜಿ. ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್‌ಕೆಪಿಎ ಕುಂದಾಪುರ – ಬೈಂದೂರು ವಲಯದ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಉಪ್ಪುಂದ, ಪತ್ರಕರ್ತ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ, ಸೊಸೈಟಿ ಉಪಾಧ್ಯಕ್ಷರಾದ ಗಣೇಶ್ ಪೂಜಾರಿ, ಎಸ್‌ಕೆಪಿಎ ಕುಂದಾಪುರ – ಬೈಂದೂರು ವಲಯ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ‌ ಮಠ ಹಾಗೂ ಸೊಸೈಟಿಯ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಮತಾ ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು, ಪ್ರೀತಿ ಶೆಟ್ಟಿ ಸ್ವಾಗತಿಸಿದರು, ಮಮತಾ ವಂದಿಸಿದರು ಹಾಗೂ ಮಾನ್ಯ ಪ್ರಾರ್ಥಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರದಂದು ನಡೆದ ಉಡುಪಿ ಜಿಲ್ಲಾ ಮಟ್ಟದ  ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಕ್ರಮವಾಗಿ – ವಿಘ್ನೇಶ್, ರತನ್, ರಿತೇಶ್, ನವಾಜ್, ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More