ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್ಎಲ್ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಕಿಶೋರಿ ಮಾಹಿತಿ ಕಾರ್ಯಾಗಾರ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಮತ್ತು ಪತ್ರಕರ್ತ ಬಿ. ರಾಘವೇಂದ್ರ ಪೈ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಮಾಹಿತಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿದರು. ರೋಟರಿ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಎಸ್ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸದಸ್ಯ ಅಶೋಕ ಪೂಜಾರಿ ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧಾ ಸ್ವಾಗತಿಸಿದರು. ಸಹಕಶಿಕ್ಷಕಿಯರಾದ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ನಾಗರತ್ನ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸೆಪ್ಟಂಬರ್ 14 ರಿಂದ ಅಕ್ಟೋಬರ್ 02 ರ ವರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ನೈರ್ಮಲ್ಯ, ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯದ ವತಿಯಿಂದ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ರಂಗದಲ್ಲಿ ಅವಿರತವಾಗಿ ತೊಡಗಿಸಿಕೊಂಡು ಜನಮಾನಸದಲ್ಲಿ ಸ್ಥಾನ ಪಡೆದಿರುವ ಸುರಭಿ ಸಂಸ್ಥೆಯು ಹಲವು ಸಾಧನೆಯ ಮೈಲುಗಲ್ಲುಗಳನ್ನು ದಾಟಿ 25ನೇ ವರ್ಷದ ಸಂಭ್ರಮದಲ್ಲಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ ಎಂದು ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಉದ್ಯಮಿ ಪ್ರಸಾದ್ ಪ್ರಭು ಶಿರೂರು ಹೇಳಿದರು. ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಶುಕ್ರವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ಸೆ.14ರಂದು ಆಯೋಜಿಸಲಾಗಿರುವ ರಜತಯಾನ -2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೈಗೊಳ್ಳುವುದು ಸವಾಲಿನ ಕೆಲಸವಾಗಿದ್ದು ಸತತ ಆಸಕ್ತಿ ಹಾಗೂ ಬದ್ಧತೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು. ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ, ನಿಕಟಪೂರ್ವ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ಯಾಂಕರ್ನಿಂದ ಸೋಪ್ ಆಯಿಲ್ ಸೋರಿಕೆಯಾದ ಪರಿಣಾಮ ಹಬ್ಬದ ಸಂಭ್ರಮದಲ್ಲಿದ್ದ ಕುಂದಾಪುರದ ಜನತೆ ಸರಣಿ ಅಪಘಾತಗಳನ್ನು ಕಾಣುವಂತಾಗಿತ್ತು. ಸೋಪ್ ಆಯಿಲ್ ಸೋರಿಕೆಯಿಂದಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ 30ಕ್ಕೂ ಅಧಿಕ ಬೈಕ್ ಸವಾರರ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ಪೈಕಿ 6ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಆದದ್ದೇನು?ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಶನಿವಾರ ಬೆಳಿಗ್ಗೆ 32 ಟನ್ ಸೋಪ್ ಆಯಿಲ್ (ಪಾಮ್ ಪ್ಯಾಟಿ ಆಸಿಡ್ ಡಿಸ್ಟಿಲೇಟ್) ತುಂಬಿದ್ದ ಬೃಹತ್ ಗಾತ್ರದ ಟ್ಯಾಂಕರ್ ತೆರಳುತ್ತಿದ್ದು,ಈ ಮಧ್ಯೆ ತೆಕ್ಕಟ್ಟೆಯಿಂದ ಟ್ಯಾಂಕರ್ ಅಡಿಭಾಗದಲ್ಲಿ ಆಯಿಲ್ ಸೋರಿಕೆಯಾಗಿದೆ. ಅದೇ ಸಮಯದಲ್ಲಿ ಮಳೆಯಿದ್ದ ಕಾರಣ ಇದು ಚಾಲಕನಿಗೆ ಗಮನಕ್ಕೂ ಬಂದಿರಲಿಲ್ಲ. ಹೀಗಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ನಿಂದ ಆಯಿಲ್ ಸೋರಿಕೆಯಾಗಿದೆ. ಇದೇ ಮಾರ್ಗದಲ್ಲಿ ಸಾಗಿದ ತೆರಳಿದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುವಂತಾಗಿದ್ದು ಲಘು ವಾಹನಗಳು ಬ್ರೇಕ್ ತಗುಲದೆ ಸಣ್ಣಪುಟ್ಟ ಅವಘಡ ಸಂಭವಿಸಿತ್ತು. /ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ನಿಂದ ಆಯಿಲ್ ಸೋರಿಕೆಯಾದ ಪರಿಣಾಮ 25ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬಿದ್ದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಬೆಳಿಗ್ಗೆ 32 ಟನ್ ಸೋಪ್ ಆಯಿಲ್ (ಪಾಮ್ ಪ್ಯಾಟಿ ಆಸಿಡ್ ಡಿಸ್ಟಿಲೇಟ್) ತುಂಬಿದ್ದ ಬೃಹತ್ ಗಾತ್ರದ ಟ್ಯಾಂಕರ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಟ್ಯಾಂಕರ್ ಅಡಿಭಾಗದಲ್ಲಿ ಆಯಿಲ್ ಸೋರಿಕೆಯಾಗುತ್ತಿದ್ದು ಅದೇ ವೇಳೆ ಮಳೆಯಿದ್ದ ಕಾರಣ ವಾಹನದ ಕನ್ನಡಿಯಲ್ಲಿ ಚಾಲಕನಿಗೆ ಇದು ಗಮನಕ್ಕೆ ಬಂದಿರಲಿಲ್ಲ. ಹೀಗಾಗಿ ತೆಕ್ಕಟ್ಟೆಯಿಂದ ಹೆಮ್ಮಾಡಿ ತನಕ ಟ್ಯಾಂಕರ್ ಸಾಗಿದ ದಾರಿಯಲ್ಲಿ ಮತ್ತೆ ಪ್ರಯಾಣಿಸಿದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ಕಳೆದುಕೊಂಡು ಬೀಳುವಂತಾಗಿದ್ದು ಲಘು ವಾಹನಗಳು ಬ್ರೇಕ್ ತಗುಲದೆ ಸಣ್ಣಪುಟ್ಟ ಅವಘಡ ಸಂಭವಿಸಿತ್ತು. ಪ್ರಾಥಮಿಕ ವರದಿ ಪ್ರಕಾರ 25-30 ಮಂದಿ ಬಿದ್ದಿದ್ದು 6 ಮಂದಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿದ್ದ ಅಪಘಾತದಿಂದ ಹಲವು ವಾಹನಗಳಿಗೆ ಹಾನಿಯಾಗಿದೆ.…
ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂ ಲೇಖನ.ವಿಭಿನ್ನ ರೂಪ, ಜ್ಞಾನಧಾರೆಯ ಸ್ವರೂಪ, ಬುದ್ದಿವಂತ ಗಣಪ. ವಿಘ್ನಗಳನ್ನು ನಿವಾರಿಸೋ ವಿನಾಯಕ, ನಮ್ಮೆಲ್ಲರ ಆರಾಧ್ಯ ದೇವ ಗಣನಾಯಕ. ಗಣಪತಿ ಎಂದ ತಕ್ಷಣ ನೆನಪಾಗುವುದೇ ಅವನ ರೂಪ. ಇವನ ಈ ರೂಪದಲ್ಲೂ, ಗುಣದಲ್ಲೂ ನಾವು ಕಲಿಯಬೇಕಾದ ಪಾಠಗಳು ಬಹಳ. ಆನೆಯ ತಲೆ ಧರಿಸಿರುವ ಗಜಾನನ, ಆನೆಗಳು ದಟ್ಟವಾದ ಕಾಡಿನಲ್ಲಿ ಮತ್ತು ಮರದ ಸಾಲಿರುವ ದಾರಿಯಲ್ಲಿ ನಡೆಯುವುದರಿಂದ ಇತರೆ ಪ್ರಾಣಿಗಳಿಗೂ ದಾರಿಯನ್ನು ಮಾಡಿಕೊಡುತ್ತದೆ. ಇದೇ ರೀತಿ ಗಜೇಂದ್ರನು ಭಕ್ತರು ನಡೆಯುವ ಮಾರ್ಗದಲ್ಲಿರುವ ಎಲ್ಲಾ ಅಡೆ-ತಡೆಗಳನ್ನು, ವಿಘ್ನಗಳನ್ನು ದೂರ ಮಾಡುವ. ಗಣೇಶನ ದೊಡ್ಡ ತಲೆಯು ಬುದ್ದಿವಂತಿಕೆ ಮತ್ತು ದೊಡ್ಡದಾದ ಆಲೋಚನಾ ಸಾಮರ್ಥ್ಯವನ್ನು ಪ್ರತಿನಿಧಿಸುತ್ತದೆ. ಹೀಗಾಗಿಯೇ ತಂದೆ ಈಶ್ವರನು ಮೂರು ಬಾರಿ ಪ್ರಪಂಚ ಪ್ರದಕ್ಷಿಣೆ ಮಾಡಿ ಮೊದಲಿಗರಾಗಿ ಬರಬೇಕೆಂದು ಗಣೇಶ ಮತ್ತು ಕಾರ್ತಿಕೇಯರಲ್ಲಿ ಹೇಳಿದಾಗಿ ತನ್ನ ಬುದ್ದಿವಂತಿಕೆಯಿಂದ ತನ್ನ ಮಾತಾ-ಪಿತರಲ್ಲಿ ಈಡೀ ಜಗತ್ತೆ ಮೈದುಂಬಿರುವಾಗ ಬೇರೆಲ್ಲೂ ಹೋಗಬೇಕಾದ ಅವಶ್ಯಕತೆ ಇಲ್ಲವೆಂದು ಇವರಿಗೆ ಮೂರು ಸುತ್ತು ಬಂದು, ಪ್ರಥಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿಯ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಶಾಲೆಯಲ್ಲಿ ಕರ್ತವ್ಯ ನಿರತರಾದ ಶಿಕ್ಷಕರನ್ನು ಗೌರವಿಸುವುದರಿಂದ ಮಕ್ಕಳಿಗೆ ಆನಂದ ದೊರೆಯುವುದರೊಂದಿಗೆ, ಶಿಕ್ಷಕರಿಗೆ ತಮ್ಮ ಸ್ಥಾನ ಮತ್ತು ಜವಾಬ್ದಾರಿಯ ಬಗ್ಗೆ ಅರಿವು ಮೂಡುತ್ತದೆ. ಸತ್ಸಮಾಜದ ಸಂರಚನೆಯ ಸದುದ್ದೇಶದಿಂದ ಆರಂಭಗೊಂಡ ಈ ಸಂಸ್ಥೆ ವಿದ್ಯಾರ್ಥಿಗಳನ್ನು ಸುಸಂಸ್ಕೃತರನ್ನಾಗಿಸುತ್ತಾ ಸಾಗಿ ಬಂದಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಲು ಶಿಕ್ಷಕರು ಒಮ್ಮನಸ್ಸಿನಿಂದ ಶ್ರಮಿಸಬೇಕಾಗಿದೆ”ಎಂದು ತಿಳಿಸಿದರು. ಶಾಲೆಯಲ್ಲಿ ಅಧ್ಯಾಪನ ವೃತ್ತಿಯಲ್ಲಿರುವ ಎಲ್ಲಾ ಶಿಕ್ಷಕರರಿಗೆ ಈ ಸಂದರ್ಭದಲ್ಲಿ ಕಿರು ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. 2023-24ನೇ ಸಾಲಿನಲ್ಲಿ ರೂಬಿಕ್ ಕ್ಯೂಬ್ನಲ್ಲಿ ಗಿನ್ನೆಸ್ ದಾಖಲೆಯ ಮೂಲಕ ಇತಿಹಾಸ ಸೃಷ್ಟಿಸಿದ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ. ಹಾಗೂ ಎಲ್ಲಾ ಶಿಕ್ಷಕರುಗಳಿಗೆ ಗಿನ್ನೆಸ್ ದಾಖಲೆಯ ಪದಕ ಮತ್ತು ಪ್ರಮಾಣಪತ್ರಗಳನ್ನುನೀಡಿ ಸನ್ಮಾನಿಸಲಾಯಿತು. ಬಸ್ರೂರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ವಿದ್ಯಾರ್ಥಿಗಳಾದ ಸಂಜನಾ ಖಾರ್ವಿ, ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ , ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್, ಸನ್ನಿಧಿ ಕರ್ಣಿಕ್, ತೇಜಸ್ವಿನಿ ಖಾರ್ವಿ ಮತ್ತು ಮಾನ್ಯ ಖಾರ್ವಿ ತಂಡವನ್ನು ಪ್ರತಿನಿಧಿಸಿದ್ದರು. ಸಹನ ಖಾರ್ವಿ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
