Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈ ವರೆಗೆ 65% ಮಾತ್ರ ಈ ಕಾರ್ಯದ ಪ್ರಗತಿಯು ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದ ನಿರ್ದೇಶನವಿರುತ್ತದೆ. ಜಿಲ್ಲೆಯ ಕೆಲವೊಂದು ನಾಗರೀಕರು ಆಧಾರ್ ಲಿಂಕ್ ಮಾಡಲು ಹಿಂಜರಿಯುತ್ತಿದ್ದುಇದರಿಂದ ನಿಗಧಿತ ಪ್ರಗತಿಯು ಸಾಧಿಸಲು ಅಸಾಧ್ಯವಾಗಿರುತ್ತದೆ. ರೈತರಿಗೆ ನಿಗಧಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ , ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಅತ್ಯಂತ ಸಂಭ್ರಮದಿಂದ ನೆರವೇರಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಸಮಾರಂಭವನ್ನು ಉದ್ಘಾಟಿಸಿ  ‘ಮುದ್ದು ಮುಖದ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿ ಆ ಮೂಲಕ ಪುಟಾಣಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಜನ್ಮಾಷ್ಠಮಿಯ ಈ ಪರ್ವ ಕಾಲದಲ್ಲಿ ಸ್ಪರ್ಧೆಗೆ ಆಗಮಿಸಿದ ಸರ್ವ ಸ್ಪರ್ಧಿಗಳಿಗೂ ಶುಭ ಹಾರೈಸಿದರು’. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದ ಕನ್ನಡದ ಸಾಹಿತಿಯಾಗಿರುವ ಪೂರ್ಣಿಮಾ ಕಮಲಶಿಲೆ ಅವರು ಮಾತನಾಡಿ, ‘ಕಡಲ ಕಿನಾರೆಯ ಸಮೀಪದಲ್ಲಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನವರು ಮುದ್ದು ಕೃಷ್ಣ ಸ್ಪರ್ಧೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಿದ್ದಾರೆ. ಭಗವಾನ್  ಕೃಷ್ಣನ ವೇಷ ಧರಿಸಿ ವೇದಿಕೆಯ ಮೇಲೆ ಪುಟಾಣಿಗಳು ಅಭಿನಯಿಸಿದಾಗ ಪೋಷಕರ ಮೊಗದಲ್ಲಿ ಮೂಡುವ  ಸಂತೋಷವೇ ನಿಜವಾದ ಬಹುಮಾನ.ಇಂತಹ ವೇದಿಕೆಗಳೇ ನಿಮ್ಮನ್ನು ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು 1 ರಿಂದ 10 ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/CA/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಮಂಗಳೂರು ವಿಶ್ವವಿದ್ಯಾಲಯದ 2024-25ನೇ ಸಾಲಿನ ಬಿ. ಕಾಂ. ಆರನೇ ಸೆಮಿಸ್ಟರ್‌ನ ಎಲ್ಲಾ ವಿಷಯಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ. ಶೆಟ್ಟಿ ಪೂರ್ಣ ಅಂಕ ಗಳಿಸಿದ್ದಾಳೆ. ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಇದು ದಾಖಲೆಯಾಗಿದೆ. ಇಂಡಿಯನ್ ಅಕೌಂಟಿಂಗ್ ಸ್ಟಾಂಡರ್ಡ್-2, ಇನ್‌ವೆಸ್ಟ್‌ಮೆಂಟ್ ಮ್ಯಾನೆಜ್‌ಮೆಂಟ್, ಅಡ್ವಾನ್ಸ್ಡ್ ಫೈನಾನ್ಶಿಯಲ್ ಮ್ಯಾನೆಜ್‌ಮೆಂಟ್, ಇನ್‌ಕಂ ಟ್ಯಾಕ್ಸ್ ಲಾ ಆಂಡ್ ಪ್ರಾಕ್ಟೀಸ್ 2, ಮ್ಯಾನೆಜ್‌ಮೆಂಟ್ ಅಕೌಂಟಿಂಗ್, ಅಸೆಸ್‌ಮೆಂಟ್ ಆಫ್ ಪರ್ಸನ್ಸ್ ಅದರ್ ದೆನ್ ಇಂಡಿವಿಜ್ಯುವಲ್ಸ್ ಆಂಡ್ ಫೈಲಿಂಗ್ ಐಟಿಆರ್ಸ್‌, ಹಾಗೂ ಮಿನಿ ಪ್ರಾಜೆಕ್ಟ್ ವಿಷಯಗಳಲ್ಲಿ ಪೂರ್ಣಾಂಕ ಗಳಿಸಿದ್ದಾಳೆ. ಅವರು ಒಟ್ಟಾರೆ ಸರಾಸರಿ ಅಂಕವು 95.54% ಇದೆ. ಕಾಲೇಜಿನ ಕ್ಯಾಂಪಸ್ ಸಂದರ್ಶನದಲ್ಲಿ ಟಿಸಿಎಸ್ ಕಂಪೆನಿಗೆ ಉತ್ತಮ ವೇತನದೊಂದಿಗೆ ಆಯ್ಕೆಯಾಗಿದ್ದಾಳೆ. ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯಳಾಗಿದ್ದಳು. ಮೂಡುಬಿದಿರೆ ದರೆಗುಡ್ಡೆ ನಿವಾಸಿಗಳಾದ ದಿನೇಶ ಶೆಟ್ಟಿ ಹಾಗೂ ಜಯಶ್ರೀ ಶೆಟ್ಟಿ ದಂಪತಿಗಳ ಪುತ್ರಿ. ವಿದ್ಯಾರ್ಥಿನಿಯ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಶ್ಲಾಘಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶೃಂಗೇರಿ ಶಾರದಾ ಪೀಠದ ಚಾತುರ್ಮಾಸ್ಯ ಆಚರಣೆಯ ಸಂದರ್ಭದಲ್ಲಿ ಬೈಂದೂರು ಮತ್ತು ಕುಂದಾಪುರ ವಲಯದ 36 ಕೇರಿಯ ಸಮಸ್ತ ಮರಾಠಿ ಸಮಾಜ ಬಾಂಧವರು, ಗುರಿಕಾರರು ಮತ್ತು ಮುಖಂಡರನ್ನು ಒಳಗೊಂಡು  ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿ ಅವರಿಗೆ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗುರುವಂದನಾ ಸಮಿತಿಯ ಅಧ್ಯಕ್ಷರಾದ ಭೋಜ ನಾಯ್ಕ ಜಾಂಬ್ಳಿ ಹೊಂಡ, ಉಪಾಧ್ಯಕ್ಷರಾದ ಮಹಾಲಿಂಗ ನಾಯ್ಕ ಜೋಗಿಜಡ್ಡು, ನಾರಾಯಣ ನಾಯ್ಕ ಬ್ರಮ್ಮೇರಿ, ಜಯರಾಮ ನಾಯ್ಕ ಮಂಗನಮಕ್ಕಿ, ಶೇಷು ನಾಯ್ಕ ಮಾವಿನಕೊಡ್ಲು ಹಾಗೂ ಕಾರ್ಯದರ್ಶಿ ಉದಯ ನಾಯ್ಕ ಕನ್ಕಿಮಡಿ, ಹಾಗೂ ವೇ. ಮು. ಲೋಕೇಶ್ ಅಡಿಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್  https://karnemakaone.kar.nic.in/abcd/ ನಲ್ಲಿ   ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಅವಶ್ಯ. ಸರಕಾರ ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಬೀದರ್‌ನಿಂದ ಚಾಮರಾಜನಗರದ ವರೆಗೆ ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಇದರ ಭಾಗವಾಗಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು:ತಾಲೂಕಿನ ಯಡ್ತರೆ ಗರ್ಜಿನ ಹಿತ್ಲು ದೊಡ್ಡಜ್ಜಿ ಮನೆ ನರಸಿಂಹ ಪೂಜಾರಿ (57) ಹೃದಯಘಾತದಿಂದ ಸೌದಿ ಅರಿಬಿಯದಲ್ಲಿ ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಸೌದಿ ಅರೆಬಿಯಾದಲ್ಲಿ ಉದ್ಯೋಗದಲ್ಲಿದ್ದ ನರಸಿಂಹ ಪೂಜಾರಿ ಅವರು 2 ಹೆಣ್ಣು ಮಕ್ಕಳು ಹಾಗೂ ಕುಟುಂಬದವರನ್ನು ಅಗಲಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಇನ್ನಿತರರು ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ, ನಟ ಪ್ರಮೋದ್ ಶೆಟ್ಟಿ, ಜ್ಯೂ. ಎನ್‌ಟಿಆರ್ ತಾಯಿ ಶಾಲಿನಿ ಹಾಗೂ ಪತ್ನಿ, ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ರಿಷಬ್ ಶೆಟ್ಟಿ ಮೊದಲಾದವರು ಜೊತೆಗಿದ್ದರು. ದೇಗುಲದ ವತಿಯಿಂದ ನಟರನ್ನು ಸ್ವಾಗತಿಸಿಕೊಂಡು ಬಳಿಕ ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಶ್ರೀ ಕೃಷ್ಣಮಠಕ್ಕೆ ತೆಲುಗು ಚಿತ್ರರಂಗದ ಪ್ರಸಿದ್ದ ನಟ ಜ್ಯೂನಿಯರ್ ಎನ್‌ಟಿಆರ್ ಅವರು ತಮ್ಮ ಕುಟುಂಬ, ಪ್ರಶಾಂತ್ ನೀಲ್ ಅವರೊಂದಿಗೆ ಶನಿವಾರ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ತಮ್ಮ ತಾಯಿ ಶಾಲಿನಿ ನಂದಾಮುರಿ ಅವರೊಂದಿಗೆ ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹಲವು ವರ್ಷಗಳಿಂದ ನನ್ನ ಅಮ್ಮನಿಗೆ ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇದ್ದು ಅದು ಇವತ್ತು ಈಡೇರಿದೆ.ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ. ನನ್ನ ಅಮ್ಮನ ಪೂರ್ವಿಕರು ಮೂಲತಃ ಕುಂದಾಪುರದವರು. ಕೃಷ್ಣಮಠಕ್ಕೆ ಭೇಟಿಕೊಟ್ಟು ಮನಃಶಾಂತಿ ಸಿಕ್ಕಿದೆ ಎಂದರು. ರಿಷಬ್ ಶೆಟ್ಟಿ ತುಂಬಾ ಇಷ್ಟಪಟ್ಟ ದೇವರು ಕೊಟ್ಟ ಗೆಳೆಯ. ಅವರೊಂದಿಗೆ ಮಠಕ್ಕೆ ಬಂದಿರುವುದು ಖುಷಿಯಾಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ನಮ್ಮ ಜೊತೆಗಿದ್ದಾರೆ. ರಿಷಬ್ ಅವರ ಮುಂದಿನ ಸಿನಿಮಾ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದ ಅವರು, ರಿಷಬ್ ಗೆ ನ್ಯಾಷನಲ್ ಅವಾರ್ಡ್ ಬಂದಿರೋದು…

Read More