ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾ ಸಂಸ್ಥಾನದವರ ಆಶಯದಂತೆ ಕುಂದಾಪುರ ವಲಯದ ವಲಯೋತ್ಸವ ಕಾರ್ಯಕ್ರಮವು ಉಪ್ಪುಂದ ಶ್ರೀ ರಾಘವೇಂದ್ರ ಸ್ವಾಮೀ ಮಠದಲ್ಲಿ ಭಾನುವಾರ ದಿನ ನಡೆಯಿತು. ಮಂಗಳೂರು ಹವ್ಯಕ ಮಂಡಲದ ಅಧ್ಯಕ್ಷ ಉದಯಶಂಕರ ನಿರ್ಪಾಜೆ ವಲಯೋತ್ಸವವನ್ನು ಧ್ವಜಾರೋಹಣದೊಂದಿಗೆ ಉದ್ಘಾಟನೆ ಮಾಡಿ ಮಾತನಾಡಿ, ಶ್ರೀ ಸಂಸ್ಥಾನದವರ ಆಶಯದಂತೆ ಯುವಕರು, ಮಹಿಳೆಯರು, ವಿಷೇಶವಾಗಿ ಮಕ್ಕಳನ್ನು ಒಂದು ಕಡೆ ಸೇರಿಸುವ ಕಾರ್ಯವೇ ವಲಯೋತ್ಸವದ ಮೂಲ ಉದ್ಧೇಶ. ಯುವಕರಿಗೆ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ ಸಂಘಟನೆಯ ಪರಿಚಯ ಮಾಡಲು ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪ್ರದರ್ಶನ ಹಾಗೂ ಎಲ್ಲಾ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸುವ ಉದ್ಧೇಶ ಹೊಂದಿರುತ್ತದೆ ಎಂದು ಹೇಳಿದರು. ಕುಂದಾಪುರ ವಲಯಾಧ್ಯಕ್ಷ ಡಾ| ಎಂ.ವಿ ನಾರಾಯಣ ಸ್ವಾಮೀ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಥ್ವೀಶ ಉಡುಪಿ ಜಿಲ್ಲಾ ಪ್ರಧಾನರು ಯುವವಿಭಾಗ, ಕಾರ್ಯದರ್ಶಿ ನಾಗರಾಜ ಭಟ್, ಕಾರ್ಯಕ್ರಮದ ಸಂಯೋಜಕ ಭರತ್, ಮಂಗಳೂರು ಮಂಡಲದ ರಮೇಶ್ ಸರವೂ, ಮಂಡಲದ ಉಪಾಧ್ಯಕ್ಷ ರಾಜಶೇಖರ ಕಾಕುಂಜೆ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’ಆಳ್ವಾಸ್ ವಿರಾಸತ್’ಗೆ ಈ ವರ್ಷ 30ರ ಹರೆಯ. ಈ ಸಂದರ್ಭದಲ್ಲಿ ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು ’ಆಳ್ವಾಸ್ ವಿರಾಸತ್ – 2024 ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ, ಅವರು ವಿದ್ಯಾಗಿರಿಯ ಆವರಣದಲ್ಲಿ ಆಳ್ವಾಸ್ ವಿರಾಸತ್ – 2024 ಡಿಸೆಂಬರ್ 10, 2024ನೇ ಮಂಗಳವಾರದಂದು ಪ್ರಾರಂಭವಾಗಿ ಡಿಸೆಂಬರ್ 15, 2024ನೇ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ಒಟ್ಟು 6 ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 05 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ ರಾಘವೇಂದ್ರ ಅವರನ್ನು ಕೇಂದ್ರ ಸರ್ಕಾರವು ಎರಡು ಪ್ರಮುಖ ಸಂಸದೀಯ ಸಂಸ್ಥೆಗಳಿಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿಗೆ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ (DRSC) ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ. ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸುತ್ತದೆ. ಈ ನೇಮಕ ಕುರಿತು ಸಂಸದರಾದ ಬಿ.ವೈ ರಾಘವೇಂದ್ರ ಅವರು ಸಂಸತ ವ್ಯಕ್ತ ಪಡಿಸಿದ್ದು, ನರೇಂದ್ರ ಮೋದೀಜಿ ಅವರಿಗೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇದರ ಜೀರ್ಣೋದ್ಧಾರ ಸಮಿತಿ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಬೈಂದೂರು ತಾಲೂಕು ಮಟ್ಟದ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. 9 ಮಾತೆಯರು ಜ್ಯೋತಿ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶ್ರೀ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಉದ್ಯಮಿ ಕೆ. ವಾಸುದೇವ ಶೆಟ್ಟಿ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಕಾಪು ಅಮ್ಮನ ದೇವಾಲಯವನ್ನು ಅಂದಾಜು 100 ಕೋಟಿ ವೆಚ್ಚದಲ್ಲಿ ಸುವ್ಯವಸ್ಥಿತವಾಗಿ ಜೀರ್ಣೋದ್ಧಾರ ಮಾಡಲು ನಿಶ್ಚಿಯಿಸಲಾಗಿದೆ. 1ನೇ ಹಂತದ 30 ರಿಂದ 4೦ ಕೋಟಿ ರೂ. ಗಳ ಕಾಮಗಾರಿ ಮುಗಿದಿದ್ದು, ಕಾಪು ಅಮ್ಮನ ವಾಖ್ಯ ನುಡಿಯಂತೆ ನಾವು ದೇವಳದ ಅಭಿವೃದ್ಧಿಯ ಬಗ್ಗೆ ಮಾತ್ರ ಪ್ರಚಾರವನ್ನು ಜಿಲ್ಲೆ, ರಾಜ್ಯ, ರಾಷ್ಟ್ರ, ವಿದೇಶದಲ್ಲೂ ಮಾಡುತ್ತಿದ್ದು ಹಣ ಸಂಗ್ರಹ ಮಾಡಲು ಎಲ್ಲಿಗೂ ಹೋಗುವುದಿಲ್ಲ, ಅಮ್ಮನ ಭಕ್ತರು ಕ್ಷೇತ್ರಕ್ಕೆ ಬಂದು ದೊಡ್ಡ ಮೊತ್ತದ ದೇಣಿಗೆ ನೀಡುತ್ತಿದ್ದು ಅಭಿವೃದ್ಧಿ ಕಾರ್ಯ ಉತ್ತಮವಾಗಿ ನಡೆಯತ್ತಿದ್ದು, ಲೇಖನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಬೈಂದೂರು, ರಾಮಕ್ಷತ್ರಿಯ ಸಮಾಜ ಬೈಂದೂರು, ರಾಮಕ್ಷತ್ರಿಯ ಮಾತೃ ಮಂಡಳಿ ಬೈಂದೂರು ಹಾಗೂ ರಾಮಕ್ಷತ್ರಿಯ ಯುವಕ ಸಮಾಜ ಬೈಂದೂರು ಇವರ ಜಂಟಿ ಆಶ್ರಯದಲ್ಲಿ ಭಾನುವಾರ ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ನಿಧನರಾದ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಹಾಗೂ ಪುರಸಭಾ ಮಾಜಿ ಅಧ್ಯಕ್ಷರಾದ ಹೊಸಾಡು ಸುಬ್ರಾಯ ಶೇರುಗಾರ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ರಾಮಕ್ಷತ್ರಿಯ ಸಮುದಾಯದಲ್ಲಿ ಜನಿಸಿದ ಇಬ್ಬರು ಮಹನೀಯರು ಸಮುದಾಯ ಹಾಗೂ ಸಮಾಜದಲ್ಲಿ ತಮ್ಮ ಅವಿರತ ಸೇವೆಯ ಮೂಲಕ ಗುರುತಿಸಿಕೊಂಡಿದ್ದರು. ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು ಕಷ್ಟದಿಂದ ಓದಿ ಸರಕಾರಿ ಉದ್ಯೋಗ ಪಡೆದ ಬಳಿಕವೂ ಉನ್ನತವಾದುದನ್ನು ಸಾಧಿಸಬೇಕು ಎಂಬ ಛಲದಿಂದ ಸ್ವಂತ ಉದ್ಯಮ ಸ್ಥಾಪಿಸಿ ಹೆಸರು ಮಾಡಿದ್ದರು. ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದು ಒಂದು ಭಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಅಂಪಾರು ವೃತ್ತಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ವಲಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ರತ್ನಕುಮಾರ್ ಮತ್ತು ಪ್ರಿಯಾಂಕಾ ತರಬೇತಿ ನೀಡಿರುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಪಂಚಾಯತ್ ಉಡುಪಿ, ಜಿಲ್ಲಾಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ನಿಮಿತ್ತ ಕುಂದಾಪುರ ತಾಲೂಕು ಮಟ್ಟದ ಸಾಕ್ಷರತೆ ಕುರಿತು ನಡೆದ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿನಿ ರಶ್ಮಿತಾ ಆರ್ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಅವರಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎತ್ತರ ಜಿಗಿತದಲ್ಲಿ ಸಿನನ್ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನಪಥ ಇನ್ನಷ್ಟು ಬೆಳೆಯಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವೇದಿಕೆಗಳು ನಿರ್ಮಾಣಗೊಳ್ಳಬೇಕುʼ ಎಂದು ಬಂಟರ ಮಹಿಳಾ ಸಂಘದ ಮೂಡುಬಿದಿರೆ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ’ಸಕ್ಷಮ – ಆಳ್ವಾಸ್ ಮಹಿಳಾ ಸಂಘಟನೆಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಹಿಳೆ ಹಲವಾರು ಸಮಸ್ಯೆಗಳನ್ನು ತೋರ್ಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಇಂತಹ ವೇದಿಕೆಗಳ ಮೂಲಕ ಆಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬೇಕು ಎಂದು ಅವರು ಆಶಿಸಿದರು. ಮುಂದಿನ ದಿನಗಳಲ್ಲಿ ಸಕ್ಷಮ ಸಂಘಟನೆಯ ಮೂಲಕ ಅನೇಕ ಸಮಾಜಮುಖಿ ಕಾರ್ಯ ನಡೆಯಲಿ. ಸಂಘಟನೆಯ ಎಲ್ಲಾ ನೂತನ ಪದಾಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಯನ್ನು ಮುತುವರ್ಜಿ ಹಾಗೂ ಚಾಕಚಕ್ಯತೆಯಿಂದ ನಿಭಾಯಿಸಬೇಕು ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಸರಿಯಾದ ಶಕ್ತಿ ಮತ್ತು ಸಾಮರ್ಥ್ಯದ ಶಕ್ತಿಯೇ ಸಕ್ಷಮ. ಮಹಿಳೆಯರು ತಮ್ಮ ಶಕ್ತಿಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ಉದ್ದೇಶದಿಂದ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ಅವಧಿಯಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹುಡುಗ ಮತ್ತು ಹುಡುಗಿಯರಿಗೆ ನಾಲ್ಕು ತಂಡಗಳನ್ನಾಗಿ (ಎಮರಾಲ್ಡ್, ಸಪಾಯರ್, ರೂಬಿ ಮತ್ತು ಟೋಪಾಜ್ ) ರಚಿಸಿ ಜೂನ್ ಆರಂಭದಿಂದ ಸೆಪ್ಟೆಂಬರ್ ಅಂತ್ಯದವರೆಗೆ ವಿವಿಧ ರೀತಿಯ ಒಳಾOಗಣ ಮತ್ತು ಹೊರಾಂಗಣ ಕ್ರೀಡೆ, ಸಾಂಸ್ಕೃತಿಕ ಸಹಪಠ್ಯಚಟುವಟಿಕೆ ಮತ್ತು ಶಿಸ್ತು ಇತ್ಯಾದಿ ವಿಭಾಗಗಳಲ್ಲಿ ತೋರಿದ ಸರ್ವಾಂಗೀಣ ಪ್ರಗತಿಯನ್ನು ಪರಿಗಣಿಸಿ ನೀಡಲಾಗುವ ಪ್ರತಿಷ್ಠಿತ ವಿಕ್ಟರ ಅವಾರ್ಡ್ ಪ್ರಶಸ್ತಿಯನ್ನು ವರ್ಷದ ಪ್ರಥಮಾರ್ದದಲ್ಲಿ ಸಪಾಯರ್ ತಂಡ ತನ್ನ ಮಡಿಗೇರಿಸಿಕೊಂಡಿತು. ಅಪರಾಹ್ನ ನಾಲ್ಕು ತಂಡದ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದೊಂದಿಗೆ ಕಾರ್ಯಕ್ರಮ ಚಾಲನೆಗೊಂಡಿತು. ಜಿದ್ದಾಜಿದ್ದಿನಿಂದ ಕೂಡಿದ ಹಗ್ಗಜಗ್ಗಾಟ, ಒಂಟಿ ಕಾಲಿನ ರಿಲೇ ಸ್ಪರ್ಧೆಯಲ್ಲಿ ಎಲ್ಲಾ ತಂಡದ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಮಿನುಗುತ್ತಿರುವ ಆಕರ್ಷಕ ರಜತ ಟ್ರೋಫಿಯನ್ನು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರ ಸಮ್ಮುಖದಲ್ಲಿ ಸಪಾಯರ್ ತಂಡದ ನಾಯಕ ಪ್ರಜ್ವಲ್…
