ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ಮಂಗಳವಾರದಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಅವರು ಮಾತನಾಡಿ ’ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸಂದೀಪ್ ಕುದ್ವ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ’ಮಾನಸಿಕ ಸಮತೋಲನ ಕಾಯ್ದುಕೊಳ್ಳುವಿಕೆಯಿಂದ ಆತ್ಮಹತ್ಯೆಯಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ’ ಎಂದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಶಿಧರ್ ಎಚ್. ಅವರು ’ವೈಜ್ಞಾನಿಕ ಚಿಕಿತ್ಸಾ ಪದ್ಧತಿಗಳಿಗೆ ಹೊಂದಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ಕಾರ್ಯಕ್ರಮವನ್ನು ಕುರಿತು ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ’ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುವುದಿದೆ. ಆತ್ಮಹತ್ಯೆ ಪರಿಹಾರವಲ್ಲ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸಾಂಯವಾಹಿನಿ ಸಂಘದ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೂಲಕ ಚಲಿಸಬಲ್ಲ ಇ-ತ್ರಿಚಕ್ರ ವಿದ್ಯುತ್ ಚಾಲಿತ ಸುಸಜ್ಜಿತ ಪರಿಸರ ಸ್ನೇಹಿ ಕಿಯಾಸ್ಕ್ “ಮತ್ಸಾಂಯವಾಹಿನಿ” ವಾಹನಗಳಲ್ಲಿ ತಾಜಾ ಮೀನು ಮಾರಾಟಕ್ಕೆ ಹಾಗೂ ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಪರವಾನಗಿ ಆಧಾರದಲ್ಲಿ ಪಡೆಯುವ ಬಗ್ಗೆ ಜಿಲ್ಲೆಯ ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ 1 ಲಕ್ಷ ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ವರ್ಗದವರಿಗೆ 0.50 ಲಕ್ಷ ಭದ್ರತಾ ಠೇವಣಿ ನಿಗದಿಪಡಿಸಲಾಗಿದ್ದು, ಆಯ್ಕೆಯಾದ ಪರವಾನಗಿದಾರರಿಗೆ ಪ್ರತಿ ವಾಹನಕ್ಕೆ 3000 ರೂ ಮಾಸಿಕ ಶುಲ್ಕ ನಿಗದಿಪಡಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರು ಕಸ್ತೂರ್ಬಾ ರಸ್ತೆಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ತರಬೇತಿ ಶಿಬಿರ ನಡೆಸಲಾಗಿದೆ. ತರಬೇತಿ ಶಿಬಿರದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 15 ದಿನಗಳ ಜಿಮ್ ಹಾಗೂ ಫಿಟ್ನೆಸ್ ತರಬೇತಿ, ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 3 ರವರೆಗೆ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳಿಗೆ 13 ದಿನಗಳ ಬ್ಯೂಟೀಷಿಯನ್ ತರಬೇತಿ ಹಾಗೂ ಅಕ್ಟೋಬರ್ 4 ರಿಂದ 9 ರವರೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ/ ಅನುತ್ತೀರ್ಣರಾದ 18 ರಿಂದ 40 ವರ್ಷ ವಯೋಮಿತಿಯ ಅಭ್ಯರ್ಥಿಗಳಿಗೆ 6 ದಿನಗಳ ಚಾಟ್ಸ್ ತಯಾರಿಕೆ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿಯ ಅರ್ಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಹರಿಪ್ರಸಾದ ಶೆಟ್ಟಿ ನೇಮಕಗೊಂಡಿದ್ದಾರೆ. ಸದಸ್ಯರಾಗಿ ಸದಾಶಿವ ಶೆಟ್ಟಿ, ವಸುಂಧರಾ ಹೆಗ್ಡೆ, ಚಂದ್ರ ಕಾಂಚನ್, ಅಭಿಜಿತ್ ಪೂಜಾರಿ, ವಾಣಿ ಆರ್ ಶೆಟ್ಟಿ, ಆಶಾ ಕರ್ವೇಲ್ಲೋ, ನಾರಾಯಣ ಆಚಾರ್, ಗಣೇಶ್, ಕೆ.ಪ್ರದೀಪ್ ಕುಮಾರ್ ಶೆಟ್ಟಿ, ಅರುಣಾ, ಹರ್ಷ ಶೆಟ್ಟಿ, ಸವಿತಾ ಪೂಜಾರಿ, ಮಂಜು ಕೊಟಾರಿ, ಜಹೀರ್ ಅಹಮದ್, ಪ್ರಧಾನ ಕಾರ್ಯದರ್ಶಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕೃಷ್ಣ ಬರಿ ನಾಯಕತ್ವ ಗುಣ ಹೊಂದಿದವನಲ್ಲ ಆತ ನಾಯಕತ್ವದ ನಿರ್ಮಾತೃ ಎಂದು ಯಕ್ಷಗಾನ ಸಂಘಟಕ ಹಾಗೂ ಪ್ರವಚನಕಾರ ಉಜಿರೆ ಅಶೋಕ ಭಟ್ಟ ನುಡಿದರು. ಅವರು ಮಂಗಳವಾರ ಆಳ್ವಾಸ್ ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಪ್ರಜ್ಞಾ ಜಿಜ್ಞಾಸ ವೇದಿಕೆ, ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ʼನಾಯಕತ್ವದ ನಿರ್ಮಾಣದಲ್ಲಿ ಕೃಷ್ಣನ ಕೊಡುಗೆ’ ವಿಷಯದ ಕುರಿತು ಮಾತನಾಡಿದರು. ರಾಮ, ಕೃಷ್ಣ ದೇವರಲ್ಲ, ಬದಲಾಗಿ ಅವರು ಯುಗಧರ್ಮದ ನಾಯಕರು. ಕೇವಲ ಭಾವುಕ ಭಕ್ತಿಯಿಂದ ಅವರನ್ನು ದೇವರು ಅಂತ ನೋಡಬೇಕಿಲ್ಲ, ಪ್ರಾಯೋಗಿಕವಾಗಿ ನೋಡಬೇಕು. ರಾಮ ಅತ್ಯಂತ ಶ್ರೇಷ್ಠ ಜಾತ್ಯಾತೀತ ಎಂದು ತಿಳಿಸಿದರು. ಭಗವದ್ಗೀತೆಯಲ್ಲಿ ತಿಳಿಸಿರುವಂತೆ ಮನುಷ್ಯ ತನ್ನ ಆತ್ಮವನ್ನು ತಾನು ಉದ್ಧರಿಸಿಕೊಳ್ಳಬೇಕು. ಕೃಷ್ಣ ವಿಕಾರಕ್ಕೆ ಆಕಾರ ಕೊಟ್ಟ. ಪ್ರಾಕೃತ ಸಂಗತಿಗಳಿಗೆ ಸಂಸ್ಕಾರ ಕೊಟ್ಟ. ಕ್ರಿಯೆಗೆ ಪ್ರಯೋಗಶೀಲತೆ ನೀಡಿದ. ಕೃಷ್ಣ ಕ್ಷೀರ ಹಾಗೂ ಅಕ್ಷರ ಕ್ರಾಂತಿಗಳ ಹರಿಕಾರ. ಎಲ್ಲರಲ್ಲೂ ಜಾಗೃತಿ ಮೂಡಿಸುವ ಕೃಷ್ಣ, ಸ್ಥಿತಪ್ರಜ್ಞೆಯ ಮೂರ್ತಸ್ವರೂಪ. ಯಾರು ಧರ್ಮ ಅನುಷ್ಠಾನ ಮಾಡ್ತಾರೋ ಅವರನ್ನು ಕೃಷ್ಣ ಸದಾ…
ಕುಂದಾಪ್ರ ಡಾಟ ಕಾಂ ಸುದ್ದಿ.ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಿದ್ಧಾರ್ಥ್ ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿ ಎರಡು ವರ್ಷ ಕಳೆದಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಬೈಂದೂರು ಕ್ಷೇತ್ರ ವ್ಯಾಪ್ತಿಯ ಕೊಲ್ಲೂರಿನಿಂದ ಯಡ್ತರೆ ತನಕ ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಕಾಮಗಾರಿ ಆರಂಭಿಸಲು ಹಿನ್ನಡೆಯಾಗಿದೆ. ಸಂಬAಧಿತ ಇಲಾಖೆ ಈ ಬಗ್ಗೆ ವಿಶೇಷ ಮುತುರ್ವಜಿವಹಿಸಿ, ರೈತರಿಗೆ ಯಾವುದೇ ಅನ್ಯಾಯವಾಗದಂತೆ ಗರಿಷ್ಠ ಪರಿಹಾರ ನೀಡುವ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 766ಸಿ ಭೂಸ್ವಾಧೀನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ದ್ವಿಪಥ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡ ಸಂಸದರು, ರೈತರು ತಮ್ಮ ಭೂಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅದಕ್ಕೆ ಬೆಲೆಕಟ್ಟಲಾಗದು. ಆದರೆ ಅಭಿವೃದ್ಧಿ ಕಾರ್ಯ ನಡೆಯಬೇಕಾದರೆ ಭೂಮಿ ಅಗತ್ಯವಾಗಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಸುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮರಣ ಬಲೆಯ ಮೀನುಗಾರಿಕೆಗೆ ತೆರಳಿದ್ದ ಸ್ಥಳೀಯ ನಿವಾಸಿ ಭಾಸ್ಕರ (51) ಅವರು ಸಮುದ್ರದ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ಪಾರಂಪಳ್ಳಿ- ಪಡುಕರೆಯಲ್ಲಿ ಸೋಮವಾರ ಸಂಭವಿಸಿದೆ. ಅವರು ಸಮುದ್ರದಲ್ಲಿ ಬಲೆ ಹಾಕಿ ಮರಳುತ್ತಿದ್ದಾಗ ಸಮುದ್ರದ ಸೆಳೆತಕ್ಕೆ ಸಿಲುಕಿದ್ದು, ಇವರನ್ನುಕೋಸ್ಟ್ ಗಾರ್ಡ್ನ ಸತೀಶ್ ಮತ್ತು ಸುದರ್ಶನ್ ಅವರು ಭಾಸ್ಕರ ಅವರನ್ನು ಸಾಕಷ್ಟು ಪ್ರಯತ್ನಪಟ್ಟು ದಡಕ್ಕೆ ತಂದು ಉಪಚರಿಸಿ ಕೋಟ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಕ್ಷೀಸಿದ ವೈದ್ಯರು ಪರೀಕ್ಷಿಸಿ ಭಾಸ್ಕರ ಮೃತಪಟ್ಟಿರುವುದನ್ನು ಧೃಢಪಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಉಳ್ಳೂರು ಗ್ರಾಮದ ನಿವಾಸಿ ಸುನೀತಾ (42) ಅವರು ಸೋಮವಾರದಂದು ಸಮೀಪದ ಕಾಲುವೆಗೆ ಹಾರಿ ಸಿಮೆಂಟ್ ದಂಡೆಯ ಮೇಲೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಮಾನಸಿಕ ಖಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ಮುಂತಾದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ twd.karnataka.gov.in (Post matric(PUC/ Degree/PG) prize money) ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಐ.ಟಿ.ಡಿ.ಪಿ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574814 ಅನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
