ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೃಂಗೇರಿ ಶಾರದಾ ಪೀಠದ ಚಾತುರ್ಮಾಸ್ಯ ಆಚರಣೆಯ ಸಂದರ್ಭದಲ್ಲಿ ಬೈಂದೂರು ಮತ್ತು ಕುಂದಾಪುರ ವಲಯದ 36 ಕೇರಿಯ ಸಮಸ್ತ ಮರಾಠಿ ಸಮಾಜ ಬಾಂಧವರು, ಗುರಿಕಾರರು ಮತ್ತು ಮುಖಂಡರನ್ನು ಒಳಗೊಂಡು ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿ ಅವರಿಗೆ ಗುರುವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗುರುವಂದನಾ ಸಮಿತಿಯ ಅಧ್ಯಕ್ಷರಾದ ಭೋಜ ನಾಯ್ಕ ಜಾಂಬ್ಳಿ ಹೊಂಡ, ಉಪಾಧ್ಯಕ್ಷರಾದ ಮಹಾಲಿಂಗ ನಾಯ್ಕ ಜೋಗಿಜಡ್ಡು, ನಾರಾಯಣ ನಾಯ್ಕ ಬ್ರಮ್ಮೇರಿ, ಜಯರಾಮ ನಾಯ್ಕ ಮಂಗನಮಕ್ಕಿ, ಶೇಷು ನಾಯ್ಕ ಮಾವಿನಕೊಡ್ಲು ಹಾಗೂ ಕಾರ್ಯದರ್ಶಿ ಉದಯ ನಾಯ್ಕ ಕನ್ಕಿಮಡಿ, ಹಾಗೂ ವೇ. ಮು. ಲೋಕೇಶ್ ಅಡಿಗ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಅವಶ್ಯ. ಸರಕಾರ ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಬೀದರ್‌ನಿಂದ ಚಾಮರಾಜನಗರದ ವರೆಗೆ ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಮೂಲಕ ವಿಭಿನ್ನವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದರು. ಇದರ ಭಾಗವಾಗಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:ತಾಲೂಕಿನ ಯಡ್ತರೆ ಗರ್ಜಿನ ಹಿತ್ಲು ದೊಡ್ಡಜ್ಜಿ ಮನೆ ನರಸಿಂಹ ಪೂಜಾರಿ (57) ಹೃದಯಘಾತದಿಂದ ಸೌದಿ ಅರಿಬಿಯದಲ್ಲಿ ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಸೌದಿ ಅರೆಬಿಯಾದಲ್ಲಿ ಉದ್ಯೋಗದಲ್ಲಿದ್ದ ನರಸಿಂಹ ಪೂಜಾರಿ ಅವರು 2 ಹೆಣ್ಣು ಮಕ್ಕಳು ಹಾಗೂ ಕುಟುಂಬದವರನ್ನು ಅಗಲಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್, ಕನ್ನಡ ಚಿತ್ರರಂಗದ ಖ್ಯಾತ ನಟ ರಿಷಬ್ ಶೆಟ್ಟಿ ಇನ್ನಿತರರು ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಅವರ ಪತ್ನಿ, ನಟ ಪ್ರಮೋದ್ ಶೆಟ್ಟಿ, ಜ್ಯೂ. ಎನ್‌ಟಿಆರ್ ತಾಯಿ ಶಾಲಿನಿ ಹಾಗೂ ಪತ್ನಿ, ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ರಿಷಬ್ ಶೆಟ್ಟಿ ಮೊದಲಾದವರು ಜೊತೆಗಿದ್ದರು. ದೇಗುಲದ ವತಿಯಿಂದ ನಟರನ್ನು ಸ್ವಾಗತಿಸಿಕೊಂಡು ಬಳಿಕ ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಶ್ರೀ ಕೃಷ್ಣಮಠಕ್ಕೆ ತೆಲುಗು ಚಿತ್ರರಂಗದ ಪ್ರಸಿದ್ದ ನಟ ಜ್ಯೂನಿಯರ್ ಎನ್‌ಟಿಆರ್ ಅವರು ತಮ್ಮ ಕುಟುಂಬ, ಪ್ರಶಾಂತ್ ನೀಲ್ ಅವರೊಂದಿಗೆ ಶನಿವಾರ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು. ತಮ್ಮ ತಾಯಿ ಶಾಲಿನಿ ನಂದಾಮುರಿ ಅವರೊಂದಿಗೆ ಉಡುಪಿಗೆ ಆಗಮಿಸಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹಲವು ವರ್ಷಗಳಿಂದ ನನ್ನ ಅಮ್ಮನಿಗೆ ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇದ್ದು ಅದು ಇವತ್ತು ಈಡೇರಿದೆ.ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ. ನನ್ನ ಅಮ್ಮನ ಪೂರ್ವಿಕರು ಮೂಲತಃ ಕುಂದಾಪುರದವರು. ಕೃಷ್ಣಮಠಕ್ಕೆ ಭೇಟಿಕೊಟ್ಟು ಮನಃಶಾಂತಿ ಸಿಕ್ಕಿದೆ ಎಂದರು. ರಿಷಬ್ ಶೆಟ್ಟಿ ತುಂಬಾ ಇಷ್ಟಪಟ್ಟ ದೇವರು ಕೊಟ್ಟ ಗೆಳೆಯ. ಅವರೊಂದಿಗೆ ಮಠಕ್ಕೆ ಬಂದಿರುವುದು ಖುಷಿಯಾಗಿದೆ. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ನಮ್ಮ ಜೊತೆಗಿದ್ದಾರೆ. ರಿಷಬ್ ಅವರ ಮುಂದಿನ ಸಿನಿಮಾ ಬಗ್ಗೆ ಎಲ್ಲರಿಗೂ ಗೊತ್ತಿದೆ ಎಂದ ಅವರು, ರಿಷಬ್ ಗೆ ನ್ಯಾಷನಲ್ ಅವಾರ್ಡ್ ಬಂದಿರೋದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರವು ದೇಶದ ಯುವಶಕ್ತಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಕೇಂದ್ರ ಬಜೆಟ್‌ನಲ್ಲಿ ಸುಮಾರು 2ಲಕ್ಷ ಕೋಟಿ ರೂ. ಅನುದಾನ ಮೀಸಲಿರಿಸಿದೆ, ಅದರಲ್ಲಿ ಕೌಶಲ್ಯಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಯುವಕ ಯುವತಿಯರು ಅದನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಉನ್ನತ ಉದ್ಯೋಗ ಪಡೆಯಲು ಮುಂದಾಗಬೇಕು ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹೇಳಿದರು. ಇಲ್ಲಿನ ಜೆಎನ್‌ಆರ್ ಕಲಾಮಂದಿರದಲ್ಲಿ ಶನಿವಾರ ಸಮೃದ್ಧ ಬೈಂದೂರು ಆಶ್ರಯದಲ್ಲಿ ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೋರೇಷನ್ ಹಾಗೂ ಆಜಿನೋರಾಹ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಅಂತರಾಷ್ಟ್ರೀಯ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಶೇ.75ರಷ್ಟು ಜನರು ಕೃಷಿಯಾಧಾರಿತ ಉದ್ಯೋಗ ನಡೆಸುತಿದ್ದರೇ, ಕೇವಲ ಶೇ.03ರಷ್ಟು ಜನರಿಗೆ ಮಾತ್ರ ಸರ್ಕಾರ ಉದ್ಯೋಗ ನೀಡುತ್ತಿದೆ, ಇನ್ನುಳಿದ ಶೇ.22ರಷ್ಟು ಜನರು ಖಾಸಗಿ ವಲಯದಲ್ಲಿ ಉದ್ಯೋಗವನ್ನು ಅವಲಂಬಿಸಿದ್ದಾರೆ. ಇಂತಹ ಯುವಶಕ್ತಿಗೆ ಕೌಶಲ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಯುವಕರು ಸರ್ಕಾರಿ ಉದ್ಯೋಗಕ್ಕೆ ಕಾಯದೇ ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಖಾಸಗಿ ವಲಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಜೀವನದಲ್ಲಿ ತಂಡ ನಿರ್ಮಾಣವು ಅತ್ಯಂತ ಮುಖ್ಯವಾದ ಭಾಗ. ಇದು ನಮಗೆ ಹೆಚ್ಚು ಗುರಿ ಸಾಧಿಸಲು ಪರಸ್ಪರ ಸಹಾಯ ಮಾಡಿಕೊಳ್ಳಲು ಮತ್ತು ಒಟ್ಟಾಗಿ ಯಶಸನ್ನು ಕಾಣಲು ನೆರವಾಗುತ್ತದೆ. ಇದರ ಜೊತೆಯಲ್ಲಿ ತಂಡ ನಿರ್ಮಾಣವು ಪರಸ್ಪರ ಸಹಾಯ ಮನೋಭಾವನೆ ರೂಪಿಸುವುದಲ್ಲದೆ ಇಂತಹ ಸಹಯೋಗವು ಗೆಲುವಿಗೆ ಮತ್ತು ಸಂತ್ರಪ್ತಿಗೆ ದಾರಿ ಮಾಡುತ್ತದೆ ಎಂದು ಉಡುಪಿಯ ಫ್ರೀಲೆನ್ಸ್ ತರಬೇತುದಾರರಾದ ಜಯಕಿಶನ್ ಭಟ್ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ “ಟೀಮ್ ಬಿಲ್ಡಿಂಗ್” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭದಲ್ಲಿ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪೂಜಾ ಕುಂದರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ನೀರಾವರಿ ಅಳವಡಿಸಲು ಇಚ್ಛಿಸುವ ಎಲ್ಲಾ ವರ್ಗದ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಗರಿಷ್ಟ 5 ಹೆ. ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ಹೂವಿನ ಬೆಳೆಗಳಿಗೆ ಗರಿಷ್ಟ 2 ಹೆ. ವರೆಗೆ ಹನಿ/ತುಂತುರು ನೀರಾವರಿ ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ 2 ಹೆ. ಪ್ರದೇಶದ ವರೆಗೆ ಶೇ. 90 ಹಾಗೂ 2 ಹೆ. ಮೇಲ್ಪಟ್ಟು 5 ಹೆ. ವರೆಗೆ ಶೇ. 45 ಸಹಾಯಧನ ನೀಡಲಾಗುವುದು. ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪೆನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಬೇಕು. ಹನಿ ನೀರಾವರಿ ಪದ್ದತಿಯನ್ನು ಅಳವಡಿಸಿಕೊಳ್ಳುವುದರಿಂದ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ರೈತರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಶಾನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ –ಎಸ್.ಎಸ್.ಪಿ ತಂತ್ರಾಂಶದಲ್ಲಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ:0820-2573596, ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ…
