Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಂಪರೆಯಿಂದ ಬಂದ ಹೈನುಗಾರಿಕೆ ಕಸುಬನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಯುವಜನತೆಯ ಮೇಲಿದೆ. ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಬಗೆಯ ಮೌಲ್ಯವರ್ಧಿತ ನಂದಿನಿ ಉತ್ಪನ್ನಗಳ ಮಾರಾಟ, ಪ್ರೋತ್ಸಾಹಧನ, ಗರಿಷ್ಠ ಲಾಭದ ವರ್ಗವಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು. ಅವರು ಗುರುವಾರ ಇಲ್ಲಿನ ಮಿನಿ ವಿಧಾನಸೌಧದ ಆವರಣದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿ ಮಾತನಾಡಿ ಅವಿಭಜಿತ ದ.ಕ ಜಿಲ್ಲೆಯಲ್ಲಿ 732 ಹಾಲು ಉತ್ಪಾದಕರ ಸಂಘಗಳಿದ್ದು, ರೈತರು ಹೈನುಗಾರಿಕೆಯ ಮೂಲಕ ನೀಡುವ ಹಾಲನ್ನು ಸಂಸ್ಕರಿಸಿ ನಂದಿನಿ ಬ್ರ್ಯಾಂಡ್ ಮೂಲಕ ಮಾರಾಟ ಮಾಡಲಾಗುತ್ತಿದೆ. 150ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ತಯಾರಿಸಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ 1.38ಲೀ ಹಾಲು, 1 ಸಾವಿರ ಲೀ ತುಪ್ಪ, 28…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಏಕತೆಗೆ ಧಕ್ಕೆ ಆಗುವಂತೆ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ ರಾಜ್ಯದಲ್ಲಿ ದಂಗೆ ಎಬ್ಬಿಸಲು ಪ್ರೇರೇಪಿಸಿದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಅಗ್ರಹಿಸಿ ಕುಂದಾಪುರ ಡಿವೈಎಸ್ಪಿ ಅವರ ಕಛೇರಿಯಲ್ಲಿ ಹಾಗೂ ವೃತ್ತ ನೀರಿಕ್ಷಕರ ಕಛೇರಿ ಬೈಂದೂರಿನಲ್ಲಿ ಬೈಂದೂರು ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರ ನೇತೃತ್ವದಲ್ಲಿ ದೂರನ್ನು ಕೊಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕುಂದಾಪುರ ಮಂಡಲದ ಮಾಜಿ ಅಧ್ಯಕ್ಷರಾದ ಶಂಕರ ಅಂಕದ ಕಟ್ಟೆ, ಬೈಂದೂರು ಬಿಜೆಪಿ ಪ್ರಮುಖರಾದ ಕರಣ್ ಪೂಜಾರಿ, ತಲ್ಲೂರು ಪಂಚಾಯತ್ ಅಧ್ಯಕ್ಷರಾದ ಗಿರೀಶ್ ನಾಯ್ಕ್, ಸುರೇಂದ್ರ ಕಾಂಚನ್ ಬೈಂದೂರು ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಪ್ರಸಾದ್ ಬೈಂದೂರು, ಕಾರ್ಯದರ್ಶಿಯಾದ ಲಕ್ಷ್ಮಿ ರಾಜ ತಲ್ಲೂರು, ರವೀಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ  ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ  ನಿ. 2023-24ನೇ ಮಹಾಸಭೆ ಬುಧವಾರ ಹೋಟೆಲ್  ಪರಿಚಯದ ದೇವಕಿ ಸಭಾಭವನದಲ್ಲಿ ನಡೆದಿದೆ. ಸಂಘದ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಸಹಕಾರಿಯು ರೂಪಾಯಿ 20.44 ಲಾಭಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುತ್ತಿದೆ. ಪ್ರಧಾನ ಕಚೇರಿ ಉಪ್ಪುಂದ ಹಾಗೂ ಬೈಂದೂರು ಶಾಖೆ, ತ್ರಾಸಿ ಶಾಖೆ ಉತ್ತಮ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಬೈಂದೂರು ಶಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಜಯರಾಮ ಶೆಟ್ಟಿ, ರಾಘವೇಂದ್ರ ಎಂ. ಪೂಜಾರಿ, ದೇವನ್‍ ಕೆ. ಪೂಜಾರಿ, ಮಾಲತಿ ಪೂಜಾರಿ, ಪಾರ್ವತಿ ಪೂಜಾರಿ, ಗಿರೀಶ್ ಹೊಳ್ಳ, ಮಾಚಯ್ಯ ಬಿಲ್ಲವ ಉಪಸ್ಥಿತರಿದ್ದರು. ಬೈಂದೂರು ಶಾಖೆಯ ವ್ಯವಸ್ಥಾಪಕ ನಾಗರಾಜ್ ಪಿ. ವಾರ್ಷಿಕ  ವರದಿ ವಾಚಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಆರ್. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ನಿರ್ದೇಶಕರಾದ ಜಯರಾಮ್ ಶೆಟ್ಟಿ ಅವರು ಸ್ವಾಗತಿಸಿದರು. ತ್ರಾಸಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಆಚಾರ್ಯ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇದೇ ಆ.30,31ಮತ್ತು ಸೆ.1ರಂದು ಅಮೇರಿಕಾದ ವಾಷಿಂಗ್ಟನ್ ಡಿಸಿಯ ರಿಚ್‌ಮಂಡ್ ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 12ನೇ ‘ಅಕ್ಕ’ ವಿಶ್ವ ಕನ್ನಡ ಸಮ್ಮೇಳನದಲ್ಲಿ (ಅಮೇರಿಕ ಕನ್ನಡ ಕೂಟಗಳ ಆಗರ) ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಸೂಕ್ಷ್ಮ ಸಂವೇದನೆಯ ಸಿನಿಮಾ ‘ಟ್ರಿಪಲ್ ತಲಾಖ್’ ಪ್ರದರ್ಶನ ಮತ್ತು ಸಂವಾದ ನಡೆಯಲಿದೆ. 2018 ರಲ್ಲಿ ಅಮೇರಿಕಾದ ಡಲ್ಲಾಸ್ ನಡೆದ ಸಮ್ಮೇಳನದಲ್ಲಿ ಕೂಡ ಇವರ ನಿರ್ಮಾಣದ ರಾಷ್ಟ್ರ ಪ್ರಶಸ್ತಿ ಪಡೆದ ‘ರಿಸರ್ವೇಶನ್’ ಸಿನಿಮಾದ ಪ್ರದರ್ಶನ ನಡೆದಿದ್ದು 2016ರಲ್ಲಿ ನ್ಯೂಯಾರ್ಕ್ ನ್ಯೂಜೆರ್ಸಿಯಲ್ಲಿ, 2014 ರಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ನಡೆದ ಸಮ್ಮೇಳನದ ಬಹುಭಾಷ ಕವಿಗೋಷ್ಟಿಯ ಭಾಗವಹಿಸುವ ಮೂಲಕ ಸತತ ನಾಲ್ಕು ಸಮ್ಮೇಳನಗಳಲ್ಲಿ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. 2006 ರಲ್ಲಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರಗಳ ಮೂಲಕ ಸಿನಿಮಾ ರಂಗ ಪ್ರವೇಶಿಸಿದ ಯಾಕೂಬ್ ಖಾದರ್ ಗುಲ್ವಾಡಿ ಕನ್ನಡದ ಖ್ಯಾತ ನಿರ್ದೇಶಕರಾದ ಡಾ. ಗಿರೀಶ ಕಾಸರವಳ್ಳಿ ಅವರ ‘ಗುಲಾಬಿ ಟಾಕೀಸ್’ ನಿರ್ದೇಶಕ ನಿಖಿಲ್ ಮಂಜು ಲಿಂಗೇಗೌಡ ಅವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯ ಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂಬುದಾಗಿ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ” ಒಂದು ಬೊಗಸೆ ಹಸಿರು” ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ ಕ್ರಿಯೇಟಿವ್ ಸ್ಫೂರ್ತಿ ಮಾತು 6 ನೇ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು, ಬೋಧಕ ವರ್ಗದವರು, ವಸತಿ ನಿಲಯ ಪಾಲಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆರ್ಗಾಲು ಮಟ್ಟಕಟ್ಟೆ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೊಗೇರಿ ಸೂರ್ಯ ಸಿದ್ಧಾಂತ ಫೌಂಡೇಶನ್ ಮತ್ತು ಕುಂದಾಪುರ ದ್ರಾವಿಡ ಬ್ರಾಹ್ಮಣ ಪರಿಷತ್ ಉಪ್ಪುಂದ ವಲಯ ಇವರ ಸಹಯೋಗದೊಂದಿಗೆ ಶ್ರಾವಣ ಸಂಧ್ಯಾ ಕಾರ್ಯಕ್ರಮ ಮತ್ತು ಸೂರ್ಯ ಸಿದ್ಧಾಂತ ಫೌಂಡೇಶನ್ ದಶಮಾನೋತ್ಸವದ ಆ.25 ರವಿವಾರ ಮಧ್ಯಾಹ್ನ 2.30ರಿಂದ ನಡೆಯಲಿದೆ. ಸೂರ್ಯ ಸಿದ್ಧಾಂತ ಫೌಂಡೇಶನ್ ನಿರ್ದೇಶಕರಾದ ಉಪ್ಪುಂದ ಚಂದ್ರಶೇಖರ ಹೊಳ್ಳರು ಕಾರ್ಯಕ್ರಮದ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಲಿದ್ದಾರೆ. ವಿದ್ವಾನ್ ಭರತ್‌ ಐತಾಳ್ ಅವರು ಪಂಚಾಂಗ ಶ್ರವಣ ಮತ್ತು ಧಾರ್ಮಿಕ ಪ್ರವಚನ ನೆಡೆಸಿಕೊಡುವರು. ಸಭಾಧ್ಯಕ್ಷರಾಗಿ ಯು. ಸಂದೇಶ್ ಭಟ್, ಅಧ್ಯಕ್ಷರು ದ್ರಾವಿಡ ಬ್ರಾಹ್ಮಣ ಪರಿಷತ್ ಉಪ್ಪುಂದ ವಲಯ, ಮುಖ್ಯ ಅತಿಥಿಗಳಾಗಿ ವರಮಹಾಲಕ್ಷ್ಮಿ ಹೊಳ್ಳ, ಅರುಣ್ ಶಾನುಭೋಗ, ಅನುಪಮ ಅಡಿಗ, ವೀಣಾ ಕೆ. ಹೆಬ್ಬಾರ್ ಭಾಗವಹಿಸುವರು. ಪರಿಷತ್‌ ಸದಸ್ಯೆಯರಿಂದ ವಿಷ್ಣು ಸಹಸ್ರನಾಮ ಮತ್ತು ಲಲಿತ ಸಹಸ್ರನಾಮ ಪಠಣ ಮತ್ತು ರಕ್ಷಾ ಬಂಧನದ ಕಾರ್ಯಕ್ರಮವಿರುತ್ತದೆ. ಪರಿಷತ್‌ ಸದಸ್ಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಗೌರವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೋಗಿ ಸಮಾಜ ಸೇವಾ ಸಂಘ ರಿ. ಘಟಕ ಇದರ 2024 -26ನೇ ಸಾಲಿನ ಅಧ್ಯಕ್ಷರಾಗಿ ಕೊಲ್ಲೂರಿನ ಚಂದ್ರ ಜೋಗಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಜೋಗಿ ಹಳಗೇರಿ, ಕೋಶಾಧಿಕಾರಿಯಾಗಿ ರವೀಂದ್ರ ಜೋಗಿ ನಾಡ ಗುಡ್ಡೆಯಂಗಡಿ, ಉಪಾಧ್ಯಕ್ಷರಾಗಿ ನಾಗೇಶ್ ಜೋಗಿ ಹಳಗೇರಿ, ಜಗದೀಶ್ ಜೋಗಿ ಹಳಗೇರಿ, ನಾಗೇಂದ್ರ ಜೋಗಿ ಕೊಲ್ಲೂರು ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಳ್ಳಾಡಿಯ ಯುವ ನಿರೂಪಕ ನಿತಿನ್ ಶೆಟ್ಟಿ ಅವರಿಗೆ ಟಿಎನ್‌ಐಟಿ ಸೌತ್ ಇಂಡಿಯನ್ ಮೀಡಿಯಾ ಅವಾರ್ಡ್ಸ್ 2024ರಲ್ಲಿ ಅವರ ಹಿನ್ನೆಲೆ ಧ್ವನಿಗಾಗಿ ಬೆಸ್ಟ್ ವಾಯ್ಸ್ ಓವರ್ ಪ್ರಶಸ್ತಿ ಲಭಿಸಿದೆ. ಮೂಲತಃ ಕುಂದಾಪುರದ ಬೇಳೂರು ಗ್ರಾಮದ ಗುಳ್ಳಾಡಿಯವರಾಗಿದ್ದು, ಅದ್ಭುತ ಕಂಠಸಿರಿ, ಇಂಪಾದ ಹಿನ್ನೆಲೆ ಧ್ವನಿ ಯೊಂದಿಗೆ ಮನೆ ಮಾತಾಗಿರುವ ನಿತಿನ್ ಶೆಟ್ಟಿ ಟಿವಿ9 ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಇದರ 51ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಬಿಡುಗಡೆಗೊಳಿಸಲಾಯಿತು. ಧಾರವಾಡದ ಯು. ಬಿ. ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಯು. ಬಿ. ಶೆಟ್ಟಿ ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೇಶ್ ಭಟ್, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸತೀಶ್ ಶೆಟ್ಟಿ, ಸದಸ್ಯರಾದ ರವೀಂದ್ರ ಪ್ರಭು, ರಂಜನಾ ಶೆಟ್ಟಿ, ಮಂಜು ದೇವಾಡಿಗ ಅರೆಹಾಡಿ, ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಪಂಚಾಯತ್ ಮಾಜಿ ಸದಸ್ಯರಾದ ಗೌರಿ ದೇವಾಡಿಗ, ಪಾಂಡುರಂಗ ಖಾರ್ವಿ, ಶಂಕರ್ ನಾರಾಯಣ ಭಟ್, ವೆಂಕಟರಮಣ ಭಟ್, ಓಂಕಾರ್ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Read More