Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉತ್ತಮ ಕಲಾವಿದರನ್ನು ಒಳಗೊಂಡಂತಹ ಹಿಂದಿನ ವರ್ಷ 125ಕ್ಕೂ ಹೆಚ್ಚಿನ ಪ್ರದರ್ಶನವನ್ನು ನೀಡಿದ ಕಳವಾಡಿ ಮೇಳವು ಈ ಒಂದು ಸುಸಂದರ್ಭದಲ್ಲಿ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ ಎಂದು ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಶ್ರೀ ಈಶ್ವರ ಮಾರಿಕಾಂಬ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಕಳವಾಡಿ ಅಲ್ಲಿ ನಡೆದ ಪ್ರಥಮ ದೇವರ ಸೇವೆ ಆಟದ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ನೂತನ ರಂಗಸ್ಥಳ ಉದ್ಘಾಟಿಸಿರುವವರು ಬೈಂದೂರು ಬಂಟರಯಾನೆ ನಾಡವರ ಸಂಘದ ಅಧ್ಯಕ್ಷ ಗೋಕುಲ್ ಶೆಟ್ಟಿ  ಹಾಗೂ ಪ್ರಸಂಗ ಕರ್ತರಾದ ಡಾಕ್ಟರ್ ಬಸವರಾಜ್ ಶೆಟ್ಟಿಗಾರ್ ಅವರು ಮಾತನಾಡಿ, ಈ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸಿ ಮತ್ತು ಮುಂದಿನ ತಲೆಮಾರಿಗೆ ಅರ್ಪಿಸಬೇಕು ಎನ್ನುವುದರೊಂದಿಗೆ ಶುಭಶಂಸನೆಯನ್ನು ನೀಡಿದರು. ಮುಂಬೈ ಹೋಟೆಲ್ ಉದ್ಯಮಿ  ಸಂತೋಷ್ ಕುಮಾರ್ ಶೆಟ್ಟಿ ಅವರು ಎಲ್ಲಾ ಅತಿಥಿ ಗಣ್ಯರೊಂದಿಗೆ ಸೇರಿ ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗೌರವ ಉಪಸ್ಥಿತಿಯಲ್ಲಿ ಉಪ್ಪುಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮೂರ್ತೆದಾರರ ಹೋರಾಟಕ್ಕೆ ಶಕ್ತಿ ಕೊಟ್ಟವರು ಕೊರಗ ಪೂಜಾರಿ ಅವರು. ಅವರ ನೇತೃತ್ವದಲ್ಲಿ ಮೂರ್ತೆದಾರರ ಹಲವು ಹೋರಾಟಗಳು ನಡೆದ ಇತಿಹಾಸವಿದೆ. ದುಡಿದು ತಿನ್ನುವ ವರ್ಗಕ್ಕೆ ಕೊರಗ ಪೂಜಾರಿ ಅವರು ದೊಡ್ಡ ಶಕ್ತಿಯಾಗಿದ್ದರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಎಸ್. ಬಂಗಾರಪ್ಪ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಅವರ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರದ ಶಾಸಕ ಎ. ಕಿರಣ ಕುಮಾರ್ ಕೊಡ್ಗಿ ಮಾತನಾಡಿ, ಕೊರಗ ಪೂಜಾರಿ ಅವರಿಗೆ ಏಕ ಕಾಲದಲ್ಲಿ ಎರಡು ಪ್ರಶಸ್ತಿ ಸಂದಿದೆ. ಅದು ಆ ಪ್ರಶಸ್ತಿಯ ಗೌರವವು ಹೆಚ್ಚಿದೆ ಎಂದರು. ಇದೇ ಸಂದರ್ಭದಲ್ಲಿ ಕೊರಗ ಪೂಜಾರಿ, ಪತ್ನಿ ಶಾರದಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ.28ರಂದು ನಡೆಯುವ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಹಟ್ಟಿಯಂಗಡಿ ಸಿದ್ದಿ ವಿನಾಯಕ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ರಿಷಿಕಾ ದೇವಾಡಿಗ ಬೈಂದೂರು ಆಯ್ಕೆಯಾಗಿದ್ದಾರೆ ಎಂದು ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಉಪೇಂದ್ರ ಸೋಮಯಾಜಿ ತಿಳಿಸಿದ್ದಾರೆ. ಸಾಹಿತ್ಯ ರಚನೆಯಲ್ಲೂ ತೊಡಗಿಸಿಕೊಂಡಿರುವ ರಿಷಿಕಾ ದೇವಾಡಿಗ ಅವರ ‘ಮೊದಲ ಹೆಜ್ಜೆ’ ಎಂಬ ಕಥಾ ಸಂಕಲನ ಪ್ರಕಟಗೊಂಡಿದೆ. ಕಳೆದ ವರ್ಷ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ ಪಡೆದಿದ್ದರು. ಅವರು ಸಿದ್ದಿವಿನಾಯಕ ವಸತಿ ಶಾಲೆಯ ವೈಸ್ ಪ್ರಿನ್ಸಿಪಾಲ್ ರಾಮ ದೇವಾಡಿಗ ಮತ್ತು ಶಿಕ್ಷಕಿ ರೂಪಾ ದಂಪತಿ ಪುತ್ರಿ. ಸಮ್ಮೇಳನದ ಉದ್ಘಾಟಕರಾಗಿ ಧನ್ಯಶ್ರೀ ಜೋಗಿ ಕೋಟ, ಕವನಗೋಷ್ಠಿಯ ಅಧ್ಯಕ್ಷರಾಗಿ ಸೃಜನ್ ಬೆಂಗಳೂರು ಹಾಗೂ ಕಥಾಗೋಷ್ಠಿಯ ಅಧ್ಯಕ್ಷರಾಗಿ ಸಿದ್ದೇಶ್ ಮೈಸೂರು ಆಯ್ಕೆಯಾಗಿದ್ದಾರೆ. ಇದರ ಜತೆಯಲ್ಲಿ ಅಂದು ನಡೆಯುವ ಎಲ್ಲ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳೇ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ಆಳ್ವಾಸ್ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳ ಕಾಡು ಮಾವಿನ ಪ್ರಭೇದಗಳ ಆನುವಂಶಿಕ ವ್ಯತ್ಯಾಸದ ಮೌಲ್ಯಮಾಪನ ಮಹಾಪ್ರಬಂಧ ಮಂಡಿಸಿದ್ದರು. ರುಚಿಕಾ ಅವರು ಬಂಟ್ವಾಳ ತಾಲೂಕಿನ ವಾಮದಪದವು ಪಿಲಿಮೊಗರು ಗ್ರಾಮದ ಜಿನ್ನಪ್ಪ ಪೂಜಾರಿ-ಲೀಲಾವತಿ ದಂಪತಿಯ ಪುತ್ರಿ. ಕಾರ್ಕಳ ಪತ್ತೊಂಜಿಕಟ್ಟೆಯ ವಿಠಲ್ ಎಂ. ಸಾಲ್ಯಾನ್ ಹಾಗೂ ವಸಂತಿ ವಿ. ಅವರ ಸೊಸೆ ಹಾಗೂ ರೋಶನ್ ಸಾಲ್ಯಾನ್ ಅವರ ಪತ್ನಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಣಿ ಅಬ್ಬಕ್ಕನ ವಿರೋಜಿತವಾದ ಬದುಕು ಇಂದಿನ ಯುವಕ, ಯುವತಿಯರಿಗೆ ಪ್ರೇರಣೆಯಾಗಬಲ್ಲುದು ಎಂದು ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇಲ್ಲಿನ ಸಂದರ್ಶಕ ಪ್ರಾಧ್ಯಾಪಕ, ಸಂಶೋಧಕ ಜಯರಾಮ ಶೆಟ್ಟಿಗಾರ್ ಅಭಿಪ್ರಾಯ ಪಟ್ಟರು. ಅವರು ಇತ್ತೀಚಿಗೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇತಿಹಾಸ ವಿಭಾಗ ಹಾಗೂ ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ, ಶಿಕ್ಷಕ ಸಂಘ ಮಂಗಳೂರು,ವಿಭಾಗಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಅಬ್ಬಕ್ಕ @500 ಪ್ರೇರಣದಾಯಿ ಉಪನ್ಯಾಸದ ಸಂಪನ್ಮೂಲ ವ್ಯಕ್ಕಿಯಾಗಿ ಮಾತನಾಡಿದರು. ಈ ನೆಲದ ಸ್ವಾತಂತ್ರ್ಯಾಕ್ಕಾಗಿ, ಸ್ವಾಭಿಮಾನಕ್ಕಾಗಿ ಪೋರ್ಚುಗೀಸರ ವಿರುದ್ದ ಕೆಚ್ಚೆದೆಯಿಂದ ಹೋರಾಡಿದ ರಾಣಿ ಅಬ್ಬಕ್ಕನ ಕುಶಾಗ್ರಮತಿ ವ್ಯಕ್ತಿತ್ವ ರೋಮಾಂಚನಕಾರಿಯಾದದ್ದು. ಅವಳ ಸಾಹಸ ಗಾಥೆಯನ್ನು ಮನನ ಮಾಡುವುದರಿಂದ ನಮ್ಮ ಅಂತರಂಗದಲ್ಲಿಯೂ ಈ ನಾಡು, ನುಡಿ, ನೆಲದ ಕುರಿತಾದ ಅಭಿಮಾನ ಯಾವತ್ತೂ ಜಾಗ್ರತಾವಸ್ಥೆಯಲ್ಲಿಇರುವಂತತಾಗುತ್ತದೆ. ಇಂತಹ ಸಾಹಸಗಾಥೆಯನ್ನು ಮೆರೆದ ಮಹಾನ್ ವ್ಯಕ್ತಿತ್ವ ಉಳ್ಳವರನ್ನು ಆಗಾಗ ಸ್ಮರಿಸುವುದು ಇಂದಿನ ತುರ್ತು ಎಂದರು. ಗೀತಾನಂದ ಪೌಂಢೇಶನ್ ಮಣೂರು ಪ್ರವರ್ತಕ ಆನಂದ ಸಿ. ಕುಂದರ್ ಕಾರ್ಯಕ್ರಮವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿ ಮತ್ತು ಪ್ರಥಮ್ ಮೋಸ್ಟ್ ಮಸ್ಕುಂಯಲರ್ ಪ್ರಶಸ್ತಿಯನ್ನು ಪಡೆದುಕೊಂಡರು. 16ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧಾರ್ಮಿಕ ಕೈಂಕರ್ಯಗಳು ಧರ್ಮದ ತಳಹದಿಯನ್ನುಗಟ್ಟಿಗೊಳಿಸುತ್ತದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಇಲ್ಲಿನ ಮಹಾಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ಛಾಯಾ ತರಂಗಿಣಿ ಸಂಗೀತ ಶಾಲೆ ಹರ್ತಟ್ಟು ಮಣೂರು ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ಹಾಗೂ ಹೇರಂಬ ಮಹಾಗಣಪತಿ ದೇಗುಲದ ಆಡಳಿತ ಮಂಡಳಿ, ಸ್ನೇಹ ಕೂಟ ಮಣೂರು, ಗೀತಾನಂದ ಫೌಂಡೇಶನ್ ಮಣೂರು ಸಹಭಾಗಿತ್ವದಲ್ಲಿ ಶತಕಂಠ ಗಾಯನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು. ಸನಾತನ ಹಿಂದೂ ಧರ್ಮದ ವಿವಿಧ ಆಚರಣೆಗಳು ಧರ್ಮಜಾಗೃತಿಗೆ ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಯ ವಾತಾವರಕ್ಕೆ ಇಂತಹ ಶತಕಂಠ ಗಾನಗಳು ಹೆಚ್ಚು ಮಹತ್ವ ಪಡೆದುಕೊಂಡಿದೆ ಎಂದರು. ಮುಖ್ಯ ಅಭ್ಯಾಗತರಾಗಿ ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್, ಸ್ನೇಹ ಕೂಟದ ಸಂಚಾಲಕಿ ಭಾರತಿ ವಿ.ಮಯ್ಯ ಮಣೂರು, ವಿದ್ವಾನ್ ಮಧುರ ಪಿ. ಬಾಲಸುಬ್ರಹ್ಮಣ್ಯಂ, ವಿಧೂಷಿ ಉಷಾ ಹೆಬ್ಬಾರ್, ವೈಲಿನ್ ವಾದಕಿ ವಿಧೂಷಿ ಶರ್ಮಿಳಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ. ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಕ್ರೀಡೆಗಳು ಸಹಕಾರಿಯಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಿತಿಯ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಂಚಾಲಕ ಎನ್. ಸದಾಶಿವ ನಾಯಕ್ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಕುಂದಾಪುರ ವಲಯ ದೈಹಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ಅಯೋಮಾನದ ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನಗಳಿಸಿ ಚಿಕ್ಕಮಗಳೂರಿನಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವಾರ್ಷಿಕೋತ್ಸವನ್ನು ಇತ್ತೀಚಿಗೆ ಆಚರಿಸಲಾಯಿತು.ಕೋಟೇಶ್ವರ ಸರಕಾರಿ ಪಿಯು ಕಾಲೇಜಿನಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕೇವಲ ಓದಿನಲ್ಲಿ ಮಾತ್ರ ಸೀಮಿತವಾಗದೇ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಕಾಲೇಜಿನ ಸಾಧನೆ ಮತ್ತು ಪ್ರಗತಿಯನ್ನು ಹೊಗಳಿದರಲ್ಲದೇ ಕಾರ್ಯಕ್ರಮಕ್ಕೆ, ವಿಧ್ಯಾರ್ಥಿಗಳಿಗೆ ಶುಭಹಾರೈಸಿದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೇಜಸ್, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್ ಮತ್ತು. ಎಸ್ ಎನ್ ಎ ಸಂಯೋಜಕ ಚಂದ್ರಶೇಖರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದಲ್ಲಿ ವಿಶಿಷ್ಟ ದರ್ಜೆ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ವಿಶಿಷ್ಟ ಸಾಧಕರುಗೌರವಿಸಲ್ಪಟ್ಟರು. ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ…

Read More