ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹೆಚ್ಚು ಭಾಷೆಗಳನ್ನು ನಾವು ಕಲಿತಷ್ಟು ನಮ್ಮ ಜ್ಞಾನದ ಪರಿಧಿ ವಿಸ್ತಾರಗೊಳ್ಳುತ್ತಾ ಹೋಗುತ್ತದೆ. ಭಾಷಾ ಸಾಮರಸ್ಯದ ಮೂಲಕ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿಯಾಗಿ ನಡೆದ ಭಾಷಾ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಅಮೂಲ್ಯ ಮತ್ತು ಮಾದರಿ, ಕನ್ನಡ ಭಾಷೆಯ ಮಹತ್ವದ ಕುರಿತು ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಕಾರ್ಯದರ್ಶಿ ಕಾರ್ತಿಕ್ ಬಿ. ಖಾರ್ವಿ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಲಕ್ಷ್ಮಿನಿಮಿತ ಉಪಸ್ಥಿತರಿದ್ದರು. ಎಸ್. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಾಯುಕ್ತ ಡಿವೈಎಸ್ಪಿ ವಿ. ಎಸ್. ಹಾಲಮೂರ್ತಿ ರಾವ್ ಅವರ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಹಾಗೂ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಿತು. ಈ ವೇಳೆ ಐದು ದೂರು ಅರ್ಜಿಯನ್ನು ಲೋಕಾಯುಕ್ತ ಕಾಯಿದೆಯಡಿ ನೋಂದಣಿ ಮಾಡಿಕೊಳ್ಳಲಾಯಿತು. ಆರು ದೂರು ಅರ್ಜಿಯನ್ನು ಸ್ವೀಕರಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಾಲಾವಕಾಶ ನೀಡಿ ಕೂಡಲೇ ಬಗೆಹರಿಸುವಂತೆ ಸೂಚನೆ ನೀಡಲಾಯಿತು. ಈ ವೇಳೆ ಇನ್ಸ್ಪೆಕ್ಟರ್ ಮಂಜುನಾಥ್, ಬೈಂದೂರು ತಹಸಿಲ್ದಾರ್ ರಾಮಚಂದ್ರಪ್ಪ ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ.ನಂ-204, ಮಣಿಪಾಲ ದೂ.ಸಂಖ್ಯೆ : 0820-2574978 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನಗಳ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ 2025-26 ಸ್ವರಾಜ್ ಮೈದಾನದಲ್ಲಿ ಉದ್ಘಾಟನೆಗೊಂಡಿತು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ಕುಲಸಚಿವ ಡಾ. ವಸಂತ ಶೆಟ್ಟಿ ಮಾತನಾಡಿ, ಸಶಕ್ತ ಭಾರತವನ್ನು ಸಶಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ನಿರ್ಮಾಣವಾಗಬೇಕೆಂದು ನಮ್ಮ ಕುಲಪತಿಗಳಾದ ಡಾ ಭಗವಾನ್ ಬಿ.ಸಿ ಅವರ ಕನಸು. ಆ ನೆಲೆಯಲ್ಲಿ ಈ ಕ್ರೀಡಾಕೂಟವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ದೀಪನಕ್ಕೆ ನೀಡುವ ಪ್ರೋತ್ಸಾಹವನ್ನು ಸಾಕ್ಷೀಕರಿಸುತ್ತದೆ. ಕ್ರೀಡೆ ಎನ್ನುವುದು ಕೇವಲ ಶಕ್ತಿ ಅಥವಾ ಕೌಶಲ್ಯದ ಸ್ಪರ್ಧೆಯಲ್ಲ. ಅದು ಮೌಲ್ಯಗಳ ಶಿಕ್ಷಣವಾಗಿದೆ. ಕ್ರೀಡೆ ವಿದ್ಯಾರ್ಥಿಗಳಲ್ಲಿ ಸೋಲು-ಗೆಲುವಿನ ನಡುವೆಯೂ ನಿಲ್ಲುವ ಸ್ಥೈರ್ಯ ಕಲಿಸುತ್ತದೆ. ವಿಶ್ವವಿದ್ಯಾಲಯಗಳು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಬೈಂದೂರು, ವಾಕ್ ಶ್ರವಣ ವಿಭಾಗ ಯನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಶ್ರವಣ ತಪಾಸಣೆ ಮತ್ತು ಆಟೋಟ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವೀಂದ್ರ ಹೆಚ್. ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ರೋಟರಿ ಪೂರ್ವಾಧ್ಯಕ್ಷರಾದ ಪ್ರಕಾಶ್ ಭಟ್ ಉಪ್ಪುಂದ, ಯನೆಪೋಯ ಕಾಲೇಜಿನ ಶ್ರವಣ ತಜ್ಞರು ಪ್ರತೀಕ್ಷಾ, ಪಾಲಕರ ಸಂಘದ ಅಧ್ಯಕ್ಷರಾದ ಶ್ರೀಲತಾ ಜೆ. ಶೆಟ್ಟಿ, ಕ್ಲಿನಿಕಲ್ ಮೇಲ್ವಿಚಾರಕರಾದ ರಚನಾ, ಪ್ರಣೀತಾ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಮಿಳಾ ಕಾರ್ಯಕ್ರಮ ಸ್ವಾಗತಿಸಿ, ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಮತ್ತು ಆರ್ಥಿಕ ಸ್ಥಿರತೆ ಸಾಧಿಸಿರುವ ಹಿನ್ನೆಲೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪ್ರದಾನ ಮಾಡಲಾದ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ಲಭಿಸಿದೆ. 67 ವರ್ಷಗಳ ಸೇವೆಯ ಇತಿಹಾಸ ಹೊಂದಿರುವ ಸಂಘವು 68ನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, 302 ಕೋಟಿ ರೂ. ಠೇವಣಿ, 251 ಕೋಟಿ ರೂ. ಸಾಲ ವಿತರಣೆ ಹಾಗೂ1386 ಕೋಟಿ ರೂ. ವಾರ್ಷಿಕ ವಹಿವಾಟು ದಾಖಲಿಸಿದೆ. ಸಂಸ್ಥೆ ಸತತ 16 ವರ್ಷಗಳ ಕಾಲ ‘ಅ’ ತರಗತಿ ಆಡಿಟ್ ವರ್ಗೀಕರಣ ಪಡೆಯುತ್ತಿರುವುದು ಅದರ ಪರಿಣಾಮಕಾರಿ ಆಡಳಿತ ಮತ್ತು ಜನನಂಬಿಕೆಯ ಸಂಕೇತವಾಗಿದೆ. 2024-25ನೇ ಸಾಲಿನಲ್ಲಿ ಸಂಸ್ಥೆ ಶೇ. 98.53 ರಷ್ಟು ಸಾಲ ವಸೂಲಾತಿ ಮತ್ತು 5.83 ಕೋಟಿ ರೂಪಾಯಿ ಲಾಭ ಸಾಧಿಸಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಸಹಕಾರಿ ಸಂಸ್ಥೆಯಾಗಿ ಅನುಷ್ಠಾನಗೊಳಿಸಿರುವ ವಿಶೇಷತೆ ಸಂಸ್ಥೆಗೆ ಸೇರಿದೆ. ರೈತರಿಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, ವಿಕಸನ ಹೊಂದಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳು ಸಮರ್ಪಕವಾಗಿ ಅನುಷ್ಠಾನವಾದಾಗ ಮಾತ್ರ ಮಕ್ಕಳ ಅಭಿವೃದ್ದಿ ಸಾಧ್ಯ ಇದಕ್ಕೆ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಳೆದ ಸಭೆಯಲ್ಲಿ ತೀಮಾನಿಸಲಾಗಿತ್ತು. ಆದರೂ ಇವರೆಗೂ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ. ಸರಕಾರಕ್ಕೆ ಮತ್ತೊಮ್ಮೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲೂರಿನಲ್ಲಿ ನಡೆದ ಜಿಲ್ಲಾಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 7 ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಪ್ರಜ್ಞಾ (8ನೇ ತರಗತಿ), ಅಪೇಕ್ಷಾ(8ನೇ ತರಗತಿ), ವೈಭವಿ (7ನೇ ತರಗತಿ) ಚಾರ್ವಿ (7ನೇ ತರಗತಿ) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 14ರ ವಯೋಮಾನದ ಹುಡುಗರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಇಬ್ಬರು ವಿದ್ಯಾರ್ಥಿಗಳಾದ ಅಭಿಲಾಶ್ (8ನೇ ತರಗತಿ) ಮತ್ತು ಶ್ರೇಯಸ್ (8ನೇ ತರಗತಿ) ರಾಜ್ಯಮಟ್ಟದಲ್ಲಿ ಆಡುವ ಅರ್ಹತೆಯನ್ನು ಗಳಿಸಿರುತ್ತಾರೆ. 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಾನ್ವಿ (9ನೇ ತರಗತಿ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಭರ್ಜರಿ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು. ಹೆಮ್ಮಾಡಿ ಜನತಾ ಪದವಿಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಲಾವಿದನೊರ್ವ ಪಾತ್ರ ನಿರ್ವಹಿಸುವುದು ಸುಲಭದ ಮಾತಲ್ಲ ಬದಲಾಗಿ ಅವನ ಪರಿಶ್ರಮ ಹಾಗೂ ರಂಗದಲ್ಲಿ ಕಠಿಣವಾಗಿ ಪಾತ್ರ ನಿರ್ವಹಣೆ ಆದರದ ಮೇಲೆ ಕಲಾಭಿಮಾನಿಗಳನ್ನು ಸಂಪಾದಿಸುತ್ತಾನೆ ಎಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಯಕ್ಷಗುರು ಸದಾನಂದ ಐತಾಳ್ ಹೇಳಿದರು. ಅವರು ಇಲ್ಲಿನ ಕೋಟದ ಅಮೃತೇಶ್ವರೀ ಶ್ರೀ ದೇಗುಲದ ವತಿಯಿಂದ ನಡೆಸಲ್ಪಡುವ ದಶಾವತಾರ ಮೇಳದ 2025-26ನೇ ಸಾಲಿನ ತಿರುಗಾಟದ ದೇವರ ಪ್ರಥಮ ಸೇವೆ ಆಟ ಆವಳಿ ಯಕ್ಷ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಕಲಾಭಿಮಾನಿಗಳಿಗೆ ರಂಗದೊಕುಳಿ ನೀಡುವುದರ ಜತೆಗೆ ಭಾಷಾ ಪರಿಜ್ಞಾನ ಹೆಚ್ಚಿಸಿ ಸಂಸ್ಕೃತಿಯನ್ನು ಅನಾವರಣಗೊಳಿಸುತ್ತಾರೆ, ಯಕ್ಷಕಲಾವಿದನೊರ್ವ ವೈಯಕ್ತಿಕ ಬದುಕಿನ ಬಗ್ಗೆ ಮರೆತು ಕಲೆಗೆ ಜೀವತುಂಬಿ ಸ್ವಸ್ಥ ಸಮಾಜ ನಿರ್ಮಾಣ ಕಾಯಕದಲ್ಲಿ ಪಾತ್ರ ವಹಿಸುತ್ತಾನೆ. ಅಂತಹ ಕಲಾವಿದರನ್ನು ಗುರುತಿಸಿ ನಾರಾಯಣಪ್ಪ ಉಪ್ಪೂರ ಹಾಗೂ ಕೋಟ ವೈಕುಂಠ ಪ್ರಶಸ್ತಿ ನೀಡಿರುವುದು ಅರ್ಥಪೂರ್ಣ ಎಂದರು. ಸಭೆಯ ಅಧ್ಯಕ್ಷತೆಯನ್ನು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ವಹಿಸಿದ್ದರು. ಇದೇ ವೇಳೆ ಶ್ರೀ ಕ್ಷೇತ್ರದಿಂದ ನೀಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ 2025 ಇದರ ಅಂಗವಾಗಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನಿಹಾರಿಕಾ ಆರ್. ದೇವಾಡಿಗ ಅವರು ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿರುತ್ತಾರೆ. ಸಾಂಸ್ಕೃತಿಕ, ಧಾರ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರೂ, ನಿಹಾರಿಕಾ ತೋರಿದ ಸ್ಪಷ್ಟಪಾಠ, ಸ್ವರಮಾಧುರ್ಯ ಮತ್ತು ಗೀತಾ ಶ್ಲೋಕಗಳ ಶುದ್ಧಉಚ್ಚಾರಣೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈಕೆ ಬೈಂದೂರು ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ದೇವಾಡಿಗ ಹಾಗೂ ಶಿಕ್ಷಕಿಯಾದ ರವಿಕಲಾ ದೇವಾಡಿಗ ದಂಪತಿಯ ಪುತ್ರಿ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕವೃಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
