Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತದ ನಿಜವಾದ ಶಕ್ತಿ ಅದರ ವೈವಿಧ್ಯತೆಯಲ್ಲಿ ಅಡಗಿದೆ. ದೇಶದ ಪ್ರತಿಯೊಂದು ಭಾಗದ ಸಂಸ್ಕೃತಿ ಮತ್ತು ಪರಂಪರೆಗಳು ಭಾರತದ ಅಸ್ತಿತ್ವವನ್ನು ಶ್ರೀಮಂತಗೊಳಿಸಿವೆ. ಪರಸ್ಪರ ಗೌರವ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಮನೋಭಾವವೇ ನಿಜವಾದ ಏಕತೆಯ ಮೂಲ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡು ರಾವ್ ಹೇಳಿದರು. ಅವರು ಮಿಜಾರಿನ ಆಳ್ವಾಸ್ ತಾಂತಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಾರ್ತ್ ಈಸ್ಟರ್ನ್ ಪೀಪಲ್ಸ್ ಅಸೋಸಿಯೇಷನ್ (ನೇಪಮ್)  ಹಾಗೂ ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ  ಸಂಯುಕ್ತ ಆಶ್ರಯದಲ್ಲಿ ನಡೆದ ನೇಪಮ್ ಫ್ರೆಶರ್ಸ್ ಮೀಟ್ 2025 ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಸೌಂದರ್ಯ ಅದರ ವೈವಿಧ್ಯತೆಯಲ್ಲಿ ಅಡಗಿದೆ. ಪರಸ್ಪರದ ಭಿನ್ನತೆಯನ್ನು ಗೌರವಿಸಿ, ಸಾಮಾನ್ಯ ಮೌಲ್ಯಗಳಲ್ಲಿ ಒಂದಾಗುವ ಮನೋಭಾವವೇ ನಮ್ಮ ದೇಶದ ಶಕ್ತಿ. ಈಶಾನ್ಯ ಭಾರತದ ಜನರು ಕರ್ನಾಟಕದ ಜೀವನದ ಅಂಗವಾಗಿ ಬೆರೆತು, ರಾಷ್ಟ್ರದ ಏಕತೆಯನ್ನು ಬಲಪಡಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾತನಾಡಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ, ಕುಂದಾಪುರ ತಾಲೂಕು ಮಟ್ಟದ 14  ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಮದರ್ ತೆರೆಸಾ ವಿದ್ಯಾಸಂಸ್ಥೆಯ 10ನೇ ತರಗತಿಯ  ಅತ್ಯುತ್ತಮ ಕ್ರೀಡಾಪಟು ರೋಶನ್ ಆರ್.  100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾನೆ. 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ಬೆಳ್ಳಿಯ ಪದಕ ಪಡೆದಿದ್ದಾನೆ. ಈ ಎರಡೂ ವಿಭಾಗಗಳಲ್ಲಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಲು ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ರೋಶನ್ ಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಶಾಲಾ ಆಡಳಿತ ಮಂಡಳಿ, ಪಿಯು ವಿಭಾಗದ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯಿನಿ, ವಿವಿಧ ವಿಭಾಗಗಳ ಮುಖ್ಯಸ್ಥರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮವನ್ನು ಅರ್ಥಪೂರ್ಣಗೊಳಿಸಿದೆ ಎಂದು ಪಟ್ಟಣಪಂಚಾಯತ್ ಹಿರಿಯ ನಾಗರಿಕರಾದ ರಾಧಕೃಷ್ಣ ಮಯ್ಯ ಹೇಳಿದರು. ಅವರು ಸಾಲಿಗ್ರಾಮದ ತೋಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ ಊಟೋಪಚಾರ ವಿತರಣೆ ಹಾಗೂ ವಿವಿಧ ಪರಿಕರ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಲಿಗ್ರಾಮ ಪಟ್ಟಣಪಂಚಾಯತ್ ಕಾರ್ಯಕ್ರಮ ಆಯೋಜಿಸಿ ಹೊಸ ದಿಕ್ಕಿಗೆ ಮುನ್ನುಡಿ ಬರೆದಿದೆ ಅಲ್ಲದೆ ಆಶ್ರಮಕ್ಕೆ ನೆರವು ನೀಡುವ ಯೋಚನೆ ಯೋಜನೆ ಶ್ಲಾಘನೀಯ ಕಾರ್ಯ ಎಂದರು. ಇದೇ ವೇಳೆ ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಅವರು ಆಶ್ರಮದ ಮುಖ್ಯಸ್ಥ ಹ.ರಾ ವಿನಯಚಂದ್ರ ಸಾಸ್ತಾನ ಅವರಿಗೆ ಪರಿಕರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸದಸ್ಯರಾದ ರವೀಂದ್ರ ಕಾಮತ್, ಸಂಜೀವ ದೇವಾಡಿಗ, ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ, ಮಾಜಿ ಸದಸ್ಯ ಕರುಣಾಕರ ಪೂಜಾರಿ, ಗ್ರಾಮದ ಪ್ರಮುಖರಾದ ಜಯೇಂದ್ರ ಪೂಜಾರಿ, ಸಂಜೀವ ಮರಕಾಲ ಉಪಸ್ಥಿತರಿದ್ದರು. ಪಟ್ಟಣಪಂಚಾಯತ್ ಮಾಜಿ ಅಧ್ಯಕ್ಷ ಪ್ರಸ್ತುತ ಸದಸ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ದೇವಸ್ಥಾನ ಹಾಗೂ ಪೂಜಾ ಮಂದಿರದ ಅಭಿವೃದ್ಧಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿದ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಡಿ.ಜಿ.ಎಂ ವಾದಿರಾಜ್ ಕೆ ಡಿ.ಡಿಯನ್ನು ಶ್ರೀ ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಶ್ರೀಗಳಿಗೆ ಹಸ್ತಾಂತರಿಸಿದರು. ಈ ವೇಳೆ ಶ್ರೀಗಳು ಕೃತಜ್ಞತೆ ಸಲ್ಲಿಸಿ ಆಶ್ರೀವಚನಗೈದು ಮಂತ್ರಾಕ್ಷತೆ ನೀಡಿದರು. ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಕುಂದಾಪುರ ಕ್ಲಸ್ಟರ್ ಹೆಡ್ ವಿಷ್ಣುಮೂರ್ತಿ ಉಪಾಧ್ಯಾಯ, ಕರ್ಣಾಟಕ ಬ್ಯಾಂಕ್ ಐರೋಡಿ ಶಾಖಾ ಪ್ರಭಂದಕ ಮಂಜುನಾಥ್ ಶೇಟ್.ಬಿ, ಸಿಬ್ಬಂದಿ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಕ್ವಾಡಿಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ 14  ರಿಂದ 17 ವರ್ಷ ವಯೋಮಾನದ ಬಾಲಕ- ಬಾಲಕಿಯರ  ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮದರ್ ತೆರೆಸಾ ವಿದ್ಯಾಸಂಸ್ಥೆಯ 8ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಕಿಶನ್ ಶೆಟ್ಟಿ ಇವರು ಅತ್ಯುತ್ತಮ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ . 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಮೂರು ಚಿನ್ನದ ಪದಕಗಳನ್ನು ಪಡೆದು ,ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಶಿಪ್ ಪಡೆದು ಅದ್ಭುತ ಸಾಧನೆ ಮಾಡಿ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಮದರ್ ತೆರೇಸಾ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ಈ ಪ್ರತಿಭಾವಂತ ಹುಡುಗನಿಗೆ ಹಾಗೂ ಅವನಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಕರಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕನ್ನಡ ನಾಡು ನುಡಿಯ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ ಬದಲಾಗಿ ಅದರ ಬಗ್ಗೆ ವಿಶೇಷ ಕಾಳಜಿ ವಹಿಸಿ ಉಳಿಸಿ ಬೆಳೆಸಲು ಕೋಟ ಆರಕ್ಷಕ ಠಾಣಾಧಿಕಾರಿ ಪ್ರವೀಣ್ ಕುಮಾರ್ ಕರೆ ನೀಡಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ 28ನೇ ವರ್ಷ ಸದ್ಭಾವನಾ ನಾಡುನುಡಿಗೆ ಭಾವ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೇರೆ ಭಾಷೆಗಳನ್ನು ಗೌರವಿಸುವುದರ ಜತೆಗೆ ಮಾತೃ ಭಾಷೆಗೆ ವಿಶೇಷ ಆಸಕ್ತಿ ತೋರಬೇಕು,ನಮ್ಮ ಭಾಷೆ ಮನೆ ಮನಗಳಲ್ಲಿ ನಿತ್ಯ ನಿರಂತರವಾಗಿಸಿಸಲು ಸಲಹೆ ನೀಡಿದರು. ಪ್ರಸ್ತುತ ಕನ್ನಡ ಮಾಧ್ಯಮ ಶಾಲೆಗಳ ಉಳಿಸುವ ಕಾರ್ಯದಲ್ಲಿ‌ ಕನ್ನಡ ಸಂಘಟನೆಗಳು ಕೈಜೋಡಿಸಬೇಕಿದೆ. ಪಂಚವರ್ಣ ಸಂಘಟನೆ  ಕ್ರೀಯಾಶೀಲ ಸಂಘಟನೆಯಾಗಿ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಸುತ್ತಿದೆ ಎಂದರು. ಕಾರ್ಯಕ್ರಮವನ್ನು ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್. ಕುಂದರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ‌.ಮನೋಹರ್ ಪೂಜಾರಿ ವಹಿಸಿದ್ದರು. ಕನ್ನಡ ಧ್ವಜವನ್ನು ಕೋಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಮಕ್ಕಳಿಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು 70ನೇಯ ಕನ್ನಡ ರಾಜ್ಯೋತ್ಸವದ ದಿನಾಚರಣೆಯ ಕುಂದಾಪುದರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಇವರಿಂದ ಆಯೋಜಿಸಲಾದ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು. ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕನ್ನಡದ ಜ್ಯೋತಿ ಬೆಳಗುವುದರ ಮೂಲಕ ಕನ್ನಡ ಮನಸುಗಳೆಲ್ಲ ಒಂದಾಗಿ  ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದಂತಹ ಗಣೇಶ ಮೊಗವೀರ ಅವರು ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಯೋಜಕರಾದಂತ ಸುಬ್ರಹ್ಮಣ್ಯ ಮರಾಠಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಜನತಾ ಚಿತ್ರ ಸಿರಿ’ ಎನ್ನುವಂತಹ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಬಿಡಿಸಿದಂತಹ ಚಿತ್ರಗಳನ್ನು ಪ್ರದರ್ಶಿಸಿ, ಅತ್ಯುತ್ತಮ ಚಿತ್ರಗಳಿಗೆ ಮುಂದೆ ನಡೆಯುವಂತಹ ಜನತಾ ವ್ಯವಹಾರ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿಯರು ಕನ್ನಡ ನಾಡು ನುಡಿಗಳನ್ನು ಬಿಂಬಿಸುವಂತಹ ಗೀತೆಗಳಿಗೆ ದನಿಯಾದರು. ಶಿಕ್ಷಕಿ ಶ್ವೇತಾ ಅವರು ಕನ್ನಡ ನಾಡು ನುಡಿಯ ಕುರಿತಾದ ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಶಿಕ್ಷಕಿಯರಾದ ಸುಜಾತ ಅವರು ಸ್ವಾಗತಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ಅವರು ಆಯೋಜಿಸಿದ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರದಂದು ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘಟನೆ, ಜಾನಪದ ಅಧ್ಯಯನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2025ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಸರ್ಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳಕರ್ ಹಾಗೂ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿಯ ಅಧ್ಯಕ್ಷರು, ಜಿಲ್ಲಾಧಿಕಾರಿಗಳಾಗಿರುವ ಸ್ವರೂಪಾ ಟಿ.ಕೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಯಶ್‌ಪಾಲ್ ಸುವರ್ಣ ವಹಿಸಿದ್ದರು. ಕಾಪು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿ ಮಂಗಳೂರು ಇದರ ಅಧ್ಯಕ್ಷರಾದ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಇಂತಹ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆ ‘ಉಗಮ-2025′ ರ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನೇರಳಕಟ್ಟೆ ನಾರಾಯಣ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆ ವಿದ್ಯಾರ್ಥಿಗಳಿಗೆ ತೆರೆದಿಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ…

Read More