Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದನ್ನು ತಾಲೂಕಿನ ಬಿಜೂರು ಗ್ರಾಮದ ಹರಕೇರಿ ಎಂಬಲ್ಲಿ ಆಹಾರ ಇಲಾಖಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೈಂದೂರಿನ ಆಹಾರ ನಿರೀಕ್ಷಕರಾದ ವಿನಯ್ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಬಿಜೂರು ಗ್ರಾಮದ ಹರಕೇರಿ ನಿವಾಸಿ ಅಬ್ದುಲ್ ಬಿನ್ ಅಬ್ಬಾಸ್ ಎಂಬುವವರ ಮನೆಯಲ್ಲಿ ಸರ್ಕಾರದಿಂದ ಉಚಿತವಾಗಿ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಕುಚ್ಚಲಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಲಾಗಿತ್ತು. ಜನವರಿ 30 ರಂದು ಬೆಳಿಗ್ಗೆ 09:40 ಗಂಟೆಗೆ ಪಂಚರ ಸಮಕ್ಷಮದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ, ಒಟ್ಟು 16 ಪಾಲಿಥಿನ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 7.14 ಕ್ವಿಂಟಾಲ್ ತೂಕದ ಕುಚ್ಚಲಕ್ಕಿ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ ರೂ. 16,422/- ಎಂದು ಅಂದಾಜಿಸಲಾಗಿದೆ. ಆರೋಪಿ ಅಬ್ದುಲ್ ಬಿನ್ ಅಬ್ಬಾಸ್ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಯಾರಿಂದಲೋ ಕಾನೂನು ಬಾಹಿರವಾಗಿ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ಹೆಮ್ಮಾಡಿ-ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ಮರಳುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭಾಸ್ಕರ್ ಆಚಾ‌ರ್ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಆದರೆ, ಆಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಸ್ವಲ್ಪ ಹೊತ್ತಿನಲ್ಲೇ ಇಡೀ ಕಾರು ಸುಟ್ಟು ಕರಕಲಾಗಿದೆ. ಭಾಸ್ಕರ್ ಆಚಾ‌ರ್ ಸಮಯಕ್ಕೆ ಕಾರಿನಿಂದ ಇಳಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಡೆಯುಪರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್‌. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅವರ ಅಂಕಣ ಬರಹಗಳ ಸಂಕಲನ ‘ಅವಳ ನಿಟ್ಟುಸಿರು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೃತಿಯನ್ನು ಅನಾವರಣಗೊಳಿಸಿ ಮಾತನಾಡಿದರು.  ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರಯೋಗಾಲಯ ಸಹಾಯಕರಾದ ವಿಜಯಕುಮಾರ್ ಎನ್. ಮಾತನಾಡಿ, ಸೃಜನಶೀಲ ಸಾಹಿತ್ಯ ಇಂದಿನ ಅಗತ್ಯ. ಉತ್ತಮ ವಿಚಾರಗಳ ಓದು ನಮ್ಮ ವ್ಯಕ್ತಿತ್ವವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅವಳ ನಿಟ್ಟುಸಿರು ಕೃತಿ ಈ ನಿಟ್ಟಿನಲ್ಲಿ ಉತ್ತಮ ಕೊಡುಗೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಲೇಖಕ ನರೇಂದ್ರ ಎಸ್. ಗಂಗೊಳ್ಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಿಚ್ ಲೈಫ್ ಕೇರ್ ಕಂಪೆನಿ ಹೆಸರಲ್ಲಿ ಹಣ ಹೂಡಿಕೆ ಮಾಡಿದರೆ ತಿಂಗಳಲ್ಲಿ ಹಣ ದ್ವಿಗುಣಗೊಳ್ಳುತ್ತದೆ ಎಂದು ಹೇಳಿ ಬರೋಬ್ಬರಿ 26ಲಕ್ಷ ರೂ. ಗೂ ಮಿಕ್ಕಿ ಹಣ ಪಡೆದು ಖಾಸಗಿ ಕಾಲೇಜು ಉಪನ್ಯಾಸಕರೊಬ್ಬರಿಗೆ ವಂಚಿಸಿದ ಘಟನೆ ನಡೆದಿದೆ. ಮಂಗಳೂರಿನ ಖಾಸಗಿ ಕಾಲೇಜು ಉಪನ್ಯಾಸಕ ಸುಬ್ರಹ್ಮಣ್ಯ ವಿಜಯ್ ಆರ್. (38) ವಂಚನೆಗೊಳಗಾದವರು. ಅವರಿಗೆ ಬಾರ್ಕೂರಿನ ರಾಘವೇಂದ್ರ ಮೂಲಕ ಪರಿಚಯವಾದ ಮುಂಬಯಿಯ ಸಂತೋಷ್ ಮಹೇಂದ್ರ (43) ಎಂಬಾತ ವಂಚಿಸಿದ ಆರೋಪಿ. 2022ರ ಜೂನ್ ನಲ್ಲಿ ಕಾವಾಡಿಯ ಕಂಪ್ಯೂರಲ್ಲಿ ರಾಘವೇಂದ್ರ ಜತೆ ಸುಬ್ರಹ್ಮಣ್ಯ ವಿಜಯ್ ಅವರು ಆರೋಪಿ ಸಂತೋಪ್ ಮಹೇಂದ್ರನನ್ನು ಭೇಟಿಯಾಗಿ, ಹಣ ಹೂಡಿಕೆ ಬಗ್ಗೆ ಮಾಹಿತಿ ಪಡೆದಿದ್ದು, ಆತನ ಮಾತನ್ನು ನಂಬಿ ಅಲ್ಲಿಯೇ 2.96 ಲಕ್ಷ ರೂ. ನೀಡಿದ್ದರು. 30 ಲಕ್ಷ ರೂ. ಗಿಂತ ಹೆಚ್ಚಿನ ಹೂಡಿಕ ಮಾಡಿದರೆ, ಒಂದು ಕಾರು ನೀಡುವುದಾಗಿಯೂ ಆರೋಪಿ ತಿಳಿಸಿದ್ದಾನೆ. ಅನಂತರ ಸುಬ್ರಹ್ಮಣ್ಯ ವಿಜಯ್ ಅವರ ಖಾತೆಯಿಂದ ಆರೋಪಿಯ ಬ್ಯಾಂಕ್ ಖಾತೆಗೆ 26.50 ಲಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿವೇಕ ವಿದ್ಯಾರ್ಥಿ-2025, ಇವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ತಾಲ್ಲೂಕು ಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿಯಾದ ಸಾನ್ವಿ ಅವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಅವರಿಗೆ ಕಾರ್ಯಕ್ರಮ ಸಂಘಟಕರಾದ ನಿವೃತ್ತ ಶಿಕ್ಷಕ ಬಸ್ರೂರು ದಿನಕರ ಶೆಟ್ಟಿ ಅವರು ಬಹುಮಾನವನ್ನು ವಿತರಿಸಿ ಸನ್ಮಾನಿಸಿದರು. ಅವರು ತಾಲ್ಲೂಕು ಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ. ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ನಗರದ ಹೋಟೆಲ್ ಶರೋನ್‌ನಲ್ಲಿ ಫೆಬ್ರವರಿ 06, 07, 08ರಂದು ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 08:00ರ ವರೆಗೆ ಪಿಎಸ್‌ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ನಡೆಯಲಿದೆ. ಕೇವಲ 400 ರೂಪಾಯಿಯಿಂದ ಶುರುವಾಗುವ ಪಿಎಸ್ಆರ್ ಸೀರೆಗಳ ಎಕ್ಸಿಬಿಷನ್ ಕಮ್ ಸೇಲ್ ಇದೀಗ ನಮ್ಮ ಕುಂದಾಪುರದಲ್ಲಿ ನಡೆಯಲಿದೆ. ಕುಂದಾಪುರದ ಮಹಿಳೆಯರೇ ನಿಮಗೆ ಇಷ್ಟವಾಗುವಂತಹ ಸೀರೆಗಳನ್ನು ಸೇಲ್‌ನಲ್ಲಿ ಖರೀದಿಸಬಹುದು. ಈ ಅವಕಾಶ ಕೇವಲ ಮೂರು ದಿನಗಳು ಮಾತ್ರ. ಕೊಯಮುತ್ತೂರಿನ ಪಿಎಸ್ಆರ್ ಫ್ಯಾಕ್ಟ್ರಿಯಾ ಸೀರೆಗಳು ಇಲ್ಲಿ ಲಭ್ಯವಿದೆ. ತಪ್ಪದೇ ಭೇಟಿ ನೀಡಿ.ಮಾಹಿತಿಗಾಗಿ: 9150016573

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಯೋಜನೆಯಡಿ ಆಟೋಮೊಬೈಲ್ ವಿಭಾಗದಲ್ಲಿ ಅಭ್ಯಸಿಸುತ್ತಿರುವ ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಚಿಹ್ನೆಗಳ ಬಗ್ಗೆ ವಿಶೇಷ ಅತಿಥಿ ಉಪನ್ಯಾಸ ಏರ್ಪಡಿಸಲಾಗಿತ್ತು. ಈ ಸಂದರ್ಭ ಕುಂದಾಪುರ ಸಂಚಾರ ಠಾಣೆಯ ಉಪನಿರೀಕ್ಷಕರಾದ ಅನೂಪ್ ನಾಯಕ್ ಹಾಗೂ ಸುಧಾ ಪ್ರಭು ಮತ್ತು ಎಎಸ್‌ಐ ನರೇಶ್ ಕೋಟ್ಯಾನ್‌ ಸಂಚಾರಿ ನಿಯಮಗಳ ಬಗ್ಗೆ ಉಪಯುಕ್ತ ಮಾಹಿತಿ ಹಂಚಿಕೊಂಡರು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಕೆ. ಕಿರಣ್ ಹೆಗ್ಡೆ, ಆಟೋಮೊಬೈಲ್ ತರಬೇತುದಾರ ಅರುಣ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಎನ್.ಜಿ ಗ್ಯಾಸ್ ಸರಬರಾಜಿನಲ್ಲಿ ಉಂಟಾಗುವ ಸಮಸ್ಯೆಯನ್ನು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಿ.ಎನ್. ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ಮತ್ತಿತರರ ವಾಹನಗಳಿಗೆ ಗ್ಯಾಸ್ ತುಂಬಿಸಲು ಬಂಕ್ ಗಳ ಮುಂದೆ ಎರಡು-ಮೂರು ಗಂಟೆಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಿ ಗ್ಯಾಸ್ ವಿತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹಿರೇಮಹಾಲಿಂಗೇಶ್ವರ ದೇಗುಲ ತನ್ನದೆ ಆದ ಐತಿಹಾಸಿ ಪುರಾಣ ಪ್ರಸಿದ್ಧ ದೇಗುಲವಾಗಿದ್ದು ಇಲ್ಲಿನ ಮಿತ್ರವೃಂದ ಸಂಸ್ಥೆ ಸಾಂಸ್ಕೃತಿಕವಾಗಿ ಜನಮನದಲ್ಲಿ ಪಸರಿಸಿಕೊಂಡಿದೆ ಎಂದು ಕೋಟ ಅಮೃತೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್ ಹೇಳಿದರು. ಅವರು ಗುರುವಾರ ಗೀತಾನಂದ ವೇದಿಕೆಯಲ್ಲಿ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಕೋಟ ಇದರ ವಾರ್ಷಿಕ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರವೃಂದ ಕೋಟ ಇವರ ಸುವರ್ಣ ಮಹೋತ್ಸವದ ಹಿನ್ನಲ್ಲೆಯಲ್ಲಿ ಹಮ್ಮಿಕೊಂಡ ಏಳು ದಿನಗಳ ಸಾಂಸ್ಕೃತಿಕ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇವಸ್ಥಾನದ ಉತ್ಸವದಲ್ಲಿ ಮಿತ್ರವೃಂದ ಸಂಸ್ಥೆ ತನ್ನ ಐವತ್ತು ಸಂವತ್ಸವ ಪೂರೈಸಿ ಯಶಸ್ಸಿನತ್ತ ಸಾಗುತ್ತಿದೆ, ದೇವಸ್ಥಾನದ ಅಭಿವೃದ್ಧಿಗೆ ಮಿತ್ರವೃಂದದ ಕೊಡುಗೆ ಅಪಾರವಾಗಿದೆ. ಪ್ರಸ್ತುತ ವ್ಯವಸ್ಥಾಪನಾ ಸಮಿತಿಯೊಂದಿಗೆ ಕೈಜೋಡಿಸಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಕೈಗೊಳ್ಳಲು ಸಹಕಾರಿಯಾಗಲಿ ಎಂದರು. ಈ ಸಂದರ್ಭದಲ್ಲಿ 50ನೇ ಸುವರ್ಣ ಸಂಭ್ರಮದ ಅಂಗವಾಗಿ ಮಿತ್ರವೃಂದದ ಬೆಳವಣಿಗೆಗೆ ಸಹಕಾರ ನೀಡಿದ ಸ್ಥಳೀಯ ಉದ್ಯಮಿ ಕುಶಲ ಪೂಜಾರಿ ಬೆಂಗಳೂರು, ಗಿರಿಜಾ ದೇವಾಡಿಗ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಅಂಗನವಾಡಿ ಶಿಕ್ಷಕರಾಗಿ ಹಾಗೂ ಸಹಾಯಕರಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಈಗಾಗಲೇ ನಿವೃತ್ತರಾದವರು  ತಮ್ಮ ಸೇವಾವಧಿಯಲ್ಲಿ ಅತೀ ಕಡಿಮೆ ಗೌರವ ಧನದಲ್ಲಿ ಸೇವೆ ಸಲ್ಲಿಸಿ, ಯಾವುದೇ ಇತರೆ ಸೌಲಭ್ಯಗಳಿಲ್ಲದೇ ಈಗಾಗಲೇ ನಿವೃತ್ತಿ ಗೊಂಡಿರುವುದರಿಂದ ಅಂತವರಿಗೆ ಸೂಕ್ತ ಗ್ರಾಚುವಿಟಿ ಸೌಲಭ್ಯ ಒದಗಿಸಿ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಸದನದಲ್ಲಿ ಒತ್ತಾಯಿಸಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದಿನಾಂಕ 04-02-2023ರ ಸರ್ಕಾರದ ಆದೇಶದಂತೆ 2023- 24ನೇ ಸಾಲಿನಿಂದ ನಿವೃತ್ತಿಯಾದ 2,358 ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ 2097 ಅಂಗನವಾಡಿ ಸಹಾಯಕರಿಗೆ ಗ್ರಾಚುವಿಟಿ ಮೊತ್ತ ಮಂಜೂರು ಮಾಡಲಾಗಿದೆ. 2011ನೇ ಸಾಲಿನಿಂದ 2022 -23ನೇ ಸಾಲಿನವರೆಗೂ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗ್ರಾಚುವಿಟಿ ಮೊತ್ತ ಪಾವತಿಸಲು ಆರ್ಥಿಕ ಇಲಾಖೆ ಅಭಿಪ್ರಾಯದ…

Read More