Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಂಡಾರ್‌ರ್ಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ “ಇಕೋಕ್ಲಬ್ ಉದ್ಘಾಟನೆ ಮತ್ತು ವಿಶ್ವಪರಿಸರ ದಿನಾಚರಣೆ” ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಕುಂದಾಪುರದ ಸರಕಾರಿ ಜ್ಯೂನಿಯರ್ ಕಾಲೇಜಿನ ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ವಿದ್ಯಾರ್ಥಿಗಳೆಲ್ಲರೂ ಜೀವನ ಪರ್ಯಂತ ಪರಿಸರ ಸಂರಕ್ಷಣೆಯ ಬಗೆಗೆ ಒಲವನ್ನು ತೋರಿಸಬೇಕು. ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಪರಿಸರದಿಂದ ಕೂಡಿದ ಸಮಾಜವನ್ನು ನಿರ್ಮಾಣ ಮಾಡಬೇಕು. ನೀರಿನ ದುರ್ಬಳಕೆಯನ್ನು ತಡೆಯಬೇಕು. ಹಾಗಿದ್ದರೆ ಮಾತ್ರ ಸಧೃಡ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ|. ಶುಭಕರಾಚಾರಿ ಮಾತನಾಡಿ ನಮ್ಮ ಸುತ್ತಲಿನ ಸಸ್ಯಶ್ಯಾಮಲೇಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಾಗಿದ್ದರೆ ಮಾತ್ರ ನಾವು ಶುದ್ಧವಾದ ಗಾಳಿಯನ್ನು ಉಸಿರಾಡಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್. ಗೊಂಡ ವಹಿಸಿದ್ದರು. ಜೀವಶಾಸ್ತ್ರ ಉಪನ್ಯಾಸಕಿ ಡಾ.ಸರೋಜ ಎಮ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ರಸಾಯನಶಾಸ್ತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಿಡಿಲು ಬಡಿತದಿಂದ ಈಗಾಗಲೇ ಮೂರು ಜನರು ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು ಎಂದು ಆದೇಶಿಸಿದರು. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಸಿಇಒಗೆ ಸೂಚನೆ ನೀಡಿದ ಸಚಿವರು, ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗವು ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳೊಂದಿಗೆ ಬ್ರಹ್ಮಾವರದ ಉಪ್ಪೂರಿನ ಕೆ.ಎಮ್.ಎಫ್. ನಂದಿನಿ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ತರಬೇತಿಗಳನ್ನು ನೀಡಲಾಯಿತು. ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಭೇಟಿ ನೀಡಲಾಯಿತು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವು ನಾವುಂದದಲ್ಲಿ ಜೂನ್ 15ರಂದು ಬೆಳ್ಳಿಗೆ 10.30ಕ್ಕೆ ನಡೆಯಲಿದೆ. ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರಾದ ಹಾಗೂ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನವೀಕೃತ ಪ್ರಧಾನ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ವಹಿಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ, ಉಡುಪಿಯ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ಎಂ ಮಹೇಶ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಎಚ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಅವಧೂತ ವಿನಯ್ ಗುರೂಜಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Read More

ಕುಂದಾಪ್ರ ಡಾಟ್ ಕಾಂ ಲೇಖನಮಳೆ ಬರುವಾಗ ಮನಸ್ಸು ಮುದಗೊಳ್ಳುತ್ತದೆ. ಅದೆಷ್ಟು ತಿಂದ್ರೂ ತಿನ್ತಾ ಇರ್ಬೇಕು ಅನ್ಸುತ್ತೆ. ಮಳೆಗಾಲದಲ್ಲಿ ಹಸಿವು ಜಾಸ್ತಿ ಎಂದು ಹೆಚ್ಚಿನವರು ಹೇಳುತ್ತಾರೆ. ಅದು ನಿಜ ಕೂಡಾ ಹೌದು. ಹೀಗೆ ಮಳೆಗಾಲದಲ್ಲಿ ಹಸಿವು ಹೆಚ್ಚಾಗೋಕೆ ನಿರ್ದಿರ್ಷ್ಟ ಕಾರಣ ಕೂಡಾ ಇದೆ. ಮಳೆಗಾಲದಲ್ಲಿ ಸೋಂಕು, ಅಲರ್ಜಿ, ಜ್ವರ ಮೊದಲಾದ ಕಾಯಿಲೆಗಳು ವಕ್ಕರಿಸುತ್ತವೆ. ವಾತಾವರಣವೂ ತಂಪಿರುತ್ತದೆ. ಈ ಸಂದರ್ಭದಲ್ಲಿ ಶೀತದ ವಿರುದ್ಧ ಹೋರಾಡಲು ದೇಹವು ತಾಪಮಾನವನ್ನು ಹೆಚ್ಚಿಸಲು ಪ್ರಯತ್ನಿಸುತ್ತದೆ. ಇದು ಚಯಾಪಚಯ ದರವನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ತೆಗೆದುಕೊಳ್ಳುತ್ತದೆ. ಹೀಗಾಗಿ ಆಗಿಂದಾಗೆ ಹಸಿವಾದಂತೆ ಅನುಭವ ಆಗುತ್ತಿರುತ್ತದೆ. ಆಗಿಂದಾಗೆ ಹಸಿವಾದಾಗಲ್ಲೆಲ್ಲಾ ತಿನ್ನುವುದು ಉತ್ತಮ ಅಭ್ಯಾಸವಲ್ಲ. ಬದಲಿಗೆ ನಿರ್ಧಿಷ್ಟ ಪ್ರಮಾಣದಲ್ಲಿ ತಿನ್ನಿ. ಆದರೆ ಪೋಷಕಾಂಶಭರಿತ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ತಿನ್ನುವಂತೆ ಸೂಚಿಸಲಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ತಿನ್ನಿ:ಮಾನ್ಸೂನ್ ಮೆನುವು ಪೌಷ್ಟಿಕಾಂಶಯುಕ್ತವಾಗಿರಬೇಕು. ಮಳೆಗಾಲದಲ್ಲಿ ಒಣಗಿದ ಹಣ್ಣುಗಳು ಮತ್ತು ಬಿಸಿ ಸೂಪ್ಗಳು ಕಟ್ಟುನಿಟ್ಟಾಗಿರಬೇಕು. ಜೊತೆಗೆ, ಸಿಹಿತಿಂಡಿಗಳು, ಹಾಲಿನ ಉತ್ಪನ್ನಗಳು ಮತ್ತು ಎಣ್ಣೆ ಮತ್ತು ತುಪ್ಪದಲ್ಲಿ ಬೇಯಿಸಿದ ಆಹಾರವನ್ನು ಸಹ ಆನಂದಿಸಬಹುದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತು ಸಂಗ್ರಹಾಲಯದ ನೇತೃತ್ವದಲ್ಲಿ ವಿಶೇಷ ಸಂಚಾರಿ ಬಸ್ಸಿನಲ್ಲಿ ʼಮ್ಯೂಸಿಯಂ ಆನ್ ವ್ಹೀಲ್ʼ ಅಪರೂಪದ ವಸ್ತು ಸಂಗ್ರಹಾಲಯದ ಪ್ರದರ್ಶನ ವೀಕ್ಷಣೆಗೆ ಕರ್ನಾಟಕದ ಕರಾವಳಿಯ ಆಯ್ದ ಶಾಲೆಗಳ ಮಕ್ಕಳಿಗೆ ಜೂನ್ 12 ಮತ್ತು 13ರಂದು ಅವಕಾಶ ಮಾಡಿಕೊಡಲಾಗಿದ್ದು, ಬೈಂದೂರು ವಲಯದ 20 ಶಾಲೆಗಳ ವಿದ್ಯಾರ್ಥಿಗಳಿಗೆ ಈ ಪ್ರದರ್ಶನ ನಡೆಯಲಿದೆ. ಜೂನ್ 12ರ ಬೆಳಿಗ್ಗೆ 10 ಗಂಟಗೆ ಬೈಂದೂರು ಮಾದರಿ ಶಾಲೆಯ ಆರಂಭದ ಪ್ರದರ್ಶನ ಇರಲಿದ್ದು, ವಿದ್ಯಾರ್ಥಿಗಳೊಂದಿಗೆ ಸಾರ್ವಜನಿಕರಿಗೂ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದ ನಿರ್ವಹಣೆಯನ್ನು ಕುಂದ ಅಧ್ಯಯನ ಕೇಂದ್ರ ಉಪ್ಪುಂದದ ಸಂಚಾಲಕರಾದ ಗಣಪತಿ ಹೋಬಳಿದಾರ್ ಮಾಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಶಿಕ್ಷಣ ಸಂಯೋಜಕ, ಸಿ.ಆರ್.ಸಿಗಳು ಸಹಕಾರ ನೀಡಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾದ ಗಂಗೊಳ್ಳಿಯಲ್ಲಿ ನಿರಂತರ ವಿದ್ಯುತ್ ಕಡಿತ ವಿರೋಧಿಸಿ ಗಂಗೊಳ್ಳಿ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಗಂಗೊಳ್ಳಿ ಮೆಸ್ಕಾಂ ಕಛೇರಿ ಎದುರು ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಕಳೆದ ಅನೇಕ ದಿನಗಳಿಂದ ಗಂಟೆಗಟ್ಟಲೆ ಹಗಲು ರಾತ್ರಿಯೆನ್ನದೆ ನಿರಂತರವಾಗಿ ವಿದ್ಯುತ್ ಕಡಿತ ಮಾಡುತ್ತಿದ್ದು, ಮೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡುವ ತನ ಮೆಸ್ಕಾಂ ಕಛೇರಿಯಿಂದ ತೆರಳುದಿಲ್ಲ ಎಂದು ಎಚ್ಚರಿಕೆ ನೀಡಿದ ಗ್ರಾಮಸ್ಥರು, ಸ್ಥಳೀಯ ವಿದ್ಯುತ್ ಕಡಿತ ಸಮಸ್ಯೆ ಬಗ್ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರನ್ನು ಸಂಪರ್ಕಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ತಲ್ಲೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಅವರನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ವಿದ್ಯುತ್ ಕಡಿತ ಸಮಸ್ಯೆ ಬಗೆಹರಿಸಲು ವಿಫಲವಾದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ: ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯ  ಚಿಕ್ಕ ಜಾಗದಲ್ಲೊಂದು ಒಳಾಂಗಣ ಮಳಿಗೆ. ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°c ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, 50ಕ್ಕೂ ಹೆಚ್ಚು ಅಂಗಡಿಗಳು, ಪ್ರತಿದಿನವೂ ಬಂದು ಆನಂದಿಸಿ, ಆಸ್ವಾದಿಸಿ, ಕೊಂಡು ತೆರಳುವ ಸಾವಿರಾರು ಜನರು. ಅಂದಹಾಗೇ ಇದು ನಡೆದಿದ್ದು  ಕತಾರಿನ ದೋಹಾದಲ್ಲಿರುವ  ಸೂಕ್ ವಾಕಿಫ್  ನಲ್ಲಿ ನಡೆದ ಮಾವಿನ ಮೇಳದಲ್ಲಿ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ  ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು  ಎಲ್ಲರ  ಇಂದ್ರಿಯಗಳನ್ನು ಆಕರ್ಷಿಸಿತು.ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ  ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು  ಇದ್ದವು, ಮತ್ತೊಂದೆಡೆ…

Read More