Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ. ಇ. ಟಿ, ಡಿ-ಸಿ.ಇ. ಟಿ, ಪಿ. ಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಹುದಾದ ಕೋರ್ಸ್‌ಗಳು ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ. ಡಿ. ಎಸ್, ಎಂ. ಡಿ. ಎಸ್), ಆಯುಷ್ (ಬಿ. ಆಯುಷ್, ಎಂ. ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ. ಇ, ಬಿ. ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ. ಆರ್ಕ್, ಎಂ. ಆರ್ಕ್), ಎಂ. ಬಿ. ಎ, ಎಂ. ಸಿ. ಎ, ಎಲ್. ಎಲ್.ಬಿ, ಬಿ. ಎಸ್ಸಿ ಇನ್ ಹರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೇರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರಿನರಿ ಅಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್ ಫುಡ್ ನ್ಯೂಟ್ರಿಷನ್ಸ್ ಅಂಡ್ ಡಯಟಿಟಿಕ್ಸ್, ಬಿ ಫಾರ್ಮಾ, ಎಂ.ಫಾರ್ಮಾ, ಫಾರ್ಮಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತವರು ಕುಗ್ಗದೆ, ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಗೆಲುವಿಗಾಗಿ ಶ್ರಮಿಸಬೇಕು. ಹೆಚ್ಚೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಕೆ.ರಾಮನಾಥ ನಾಯಕ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಖೋ-ಖೋ ಪಂದ್ಯಾಟವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ರಕ್ಷಕ-ಶಿಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್, ರಕ್ಷಕ-ಶಿಕ್ಷಕ ಸಮಿತಿ ಸದಸ್ಯರು, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿಯರಾದ ಮಾಲಾಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಓರ್ವ ಸಮಾಜ ಸುಧಾರಕರಾಗಿ ನಾರಾಯಣ ಗುರು ಒಂದು ಜಾತಿ ಧರ್ಮದ ಗುರುವಲ್ಲ.  ಅವರು ಹೇಳಿದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವುದು ಮನುಷ್ಯ ಧರ್ಮದ ಸಾರ. ಚತುರ್ವರ್ಣ ಕರಾಳ ವ್ಯವಸ್ಥೆಯ ವಿರುದ್ಧದ ಹೋರಾಟವೇ ನಾರಾಯಣ ಗುರುಗಳ ಸಮಾಜ ಸುಧಾರಣೆ  ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ನುಡಿದರು. ಯುವವಾಹಿನಿ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಆಯೋಜಿಸಿದ್ದ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಶ್ರೀ ನಾರಾಯಣ ಗುರುಗಳ ಭಾವಚಿತ್ರ ರಚನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ ’ಗುರು ಸ್ಮರಣೆ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾರಾಯಣ ಗುರುಗಳ ಧಾರ್ಮಿಕ ಸುಧಾರಣಾ ಚಳುವಳಿಗಳು ಬೇರೆ ಚಳುವಳಿಗಾರರ ಚಳುವಳಿಗಿಂತ ಭಿನ್ನವಾಗಿದ್ದವು. ಯುದ್ಧಕ್ಕೆ ಬಂದವರನ್ನು ಶಾಸ್ತ್ರವಿಲ್ಲದೆ ಹಿಮ್ಮೆಟ್ಟಿದ ಕೀರ್ತಿ ಅವರದು. ಪೂಜೆಗಾಗಿ ಕೆಳಜಾತಿಯವರನ್ನು ನೇಮಿಸಿದ ಅವರು, ವಿವಾಹಗಳನ್ನು ಸರಳಗೊಳಿಸಿ, ಮಧ್ಯಪಾನದ ವಿರುದ್ಧ ಹೋರಾಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬುಡಕಟ್ಟು ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು ಅವರುಗಳ ಕಲ್ಯಾಣಕ್ಕೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸರಕಾರ ಜಾರಿಗೆ ತಂದಿದೆ. ಇವುಗಳ ಸಮರ್ಪಕ ಅನುಷ್ಠಾನ ಮಾಡುವುದರೊಂದಿಗೆ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದುರ್ಬಲ ಬುಡಕಟ್ಟು ಜನರಿಗೆ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಿಕ್ಷಣ, ಆರೋಗ್ಯ, ರಸ್ತೆ, ಟೆಲಿಕಾಂ ಸಂಪರ್ಕ ಸೇರಿದಂತೆ ಮತ್ತಿತರ ಸುಸ್ಥಿರ ಜೀವನೋಪಾಯದ ಅವಕಾಶ ದಂತಹ ಮೂಲಭೂತ ಸೌಲಭ್ಯಗಳನ್ನು ಅವರುಗಳಿಗೆ ಕಲ್ಪಿಸಲು ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸಮರ್ಪಕ ಅನುಷ್ಠಾನಗೊಳಿಸಬೇಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in  ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574990 ಅಥವಾ ಸಹಾಯವಾಣಿ ಸಂಖ್ಯೆ : 8277799990 ಮತ್ತು ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಅವರ ನಿರ್ದೇಶನದಂತೆ ಒಂದು ದಿನದ ಪ್ರಥಮ ಭಾಷಾ ಶಿಕ್ಷಕರ ಕಾರ್ಯಗಾರವು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ರಿ. ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿಕ್ಷಕರು ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸಬೇಕು ಎಂದು ಹೇಳಿದರು ಹಾಗೂ ಉಡುಪಿ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಫಲಿತಾಂಶಕ್ಕಾಗಿ ಶಿಕ್ಷಕರನ್ನು ಅಭಿನಂದಿಸಿದರು. ಕುಂದಾಪುರ ವಲಯದ ಇ. ಸಿ. ಓ ಆಗಿರುವ ಶೇಖರ್ ಅವರು ಕಾರ್ಯಗಾರದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾಷಾ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಜಯಶೀಲ ಶೆಟ್ಟಿ, ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಅಲ್ಬಾಡಿ ಆರ್ಡಿ, ಹರಿಶ್ಚಂದ್ರ ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಹಾಲಾಡಿ ಹಾಗೂ ರಮೇಶ್ ಕುಲಾಲ್, ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಕೆದೂರು ಇವರುಗಳು ಕಲಿಕೆಯಲ್ಲಿ ಹಿಂದುಳಿದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್‌ ಗಂಗೊಳ್ಳಿ ಮತ್ತು ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 12ನೇ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಮೇಲ್‌ ಗಂಗೊಳ್ಳಿಯ ಡಾ.ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಿರ್ದೇಶಕಿ ಯಾಮಿನಿ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಮಾಜಿ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಶುಭಾಶಂಸನೆಗೈದರು. ನಿವೃತ್ತ ಶಿಕ್ಷಕ ಪ್ರೇಮಾನಂದ ಕೆ. ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಆಶಾ ಮತ್ತು ಜ್ಯೋತಿ ಹಾಗೂ ಸವಿತಾ ಉಮಾನಾಥ ದೇವಾಡಿಗ ತೀರ್ಪುಗಾರರಾಗಿ ಸಹಕರಿಸಿದರು. ಯುವಕ ಮಂಡಲದ ಅಧ್ಯಕ್ಷ ನಾಗೇಶ ಸ್ವಾಗತಿಸಿದರು. ಯುವತಿ ಮಂಡಲದ ಕಾರ್ಯದರ್ಶಿ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಕೊಡಪಾಡಿಯ ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಭವನದಲ್ಲಿ ಇತ್ತೀಚಿಗೆ ಜರಗಿತು. ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನ ಲಾಭಾಂಶದಲ್ಲಿ ಸದಸ್ಯರಿಗೆ ಶೇ.5 ಡಿವಿಡೆಂಡ್ ನೀಡಲು ನಿರ್ಧರಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೀಪಾ ಅವರು ಸರಕಾರದಿಂದ ಮಹಿಳಾ ಸದಸ್ಯರಿಗೆ ಸಿಗುವ ಹೊಸ ಯೋಜನೆಗಳ ಮಾಹಿತಿ ನೀಡಿದರು. ಸಂಘದ ನಿರ್ದೇಶಕರಾದ ವಿಜಯಾ ಬಿ., ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ರೇಖಾ ಖಾರ್ವಿ, ಶಾಂತ, ಶಾಂತಿ ಖಾರ್ವಿ, ಸುನೀತಾ ಪೂಜಾರಿ, ರೇಣುಕಾ, ಶ್ಯಾಮಲಾದೇವಿ, ಲಲಿತಾ ಖಾರ್ವಿ, ಶಾಂತಾ ಮರಾಠಿ ನಾಯ್ಕ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ್ ಅವರು 2023-24ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಭಾಸ್ಕರ ಗಾಣಿಗ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷೆ ರತ್ನ ಟಿ. ದೇವಾಡಿಗ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಬಳಿಯ ಕೆಂಚನೂರಿನಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಮರವೊಂದು ಬಿದ್ದು ಮಹಿಳೆ ಮತ್ತು ಎರಡು ದನ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಕೆಂಚನೂರು ಗ್ರಾಮದ ಮಲ್ಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರ್ಯ ಅವರ ಪತ್ನಿ ಸುಜಾತಾ ಆಚಾರ್ಯ(44) ಮೃತಪಟ್ಟವರು. ಮನೆಯ ಸಮೀಪ ಮೇಯಲು ಕಟ್ಟಿರುವ ದನವನ್ನು ತರಲು ಬಂದಿದ್ದಾಗ ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಆಕೆಯ ಮೇಲೆ ಮತ್ತು ಎರಡು ದಿನಗಳ ಮೇಲೆ ಬಿದ್ದಿದೆ. ಸುಜಾತಾ ಅವರು ಪತ್ನಿ ಅಣ್ಣಪ್ಪಯ್ಯ ಆಚಾರ್ಯ ಅಂಗಡಿ ಮಾಡಿಕೊಂಡಿದ್ದು, ನಷ್ಟ ಅನುಭವಿಸಿದ ಕಾರಣ ನಿತ್ಯ ಜೀವನಕ್ಕೆ ದಿನಕೂಲಿ ಕೆಲಸವನ್ನು ಮಾಡುತ್ತಿದ್ದರು.ಅವರಿಗೆ ಓರ್ವ ಪುತ್ರ ಮನೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಖಾಸಗಿ ಶಾಲೆ ಶಿಕ್ಷಕಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಸುಗಳ ಹಾಲನ್ನು ಮಾರಿ ಹಣ ಸಂಪಾದಿಸುತ್ತಿದ್ದರು. ಕಷ್ಟಪಟ್ಟು ದುಡಿದ ಹಣವನ್ನು ಮನೆ ಕಟ್ಟಲು ಬಳಸುತ್ತಿದ್ದರು. ಈ ದುರ್ಘ‌ಟನೆಯಿಂದಾಗಿ ಇಡೀ ಕುಟುಂಬ ಕಂಗಾಲಾಗಿದೆ. ಘಟನಾ ಸ್ಥಳಕ್ಕೆ ಗ್ರಾ.ಪಂ. ಸದಸ್ಯರಾದ ರಾಜೀವ ಶೆಟ್ಟಿ…

Read More