ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ಉಡುಪಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗುರುಕುಲ ವಿದ್ಯಾಸಂಸ್ಥೆ 78ನೇ ಸ್ವಾತಂತ್ರ್ಯ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮಾ ಶೆಟ್ಟಿ ಅವರು 78ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣ ಆಚರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ತದನಂತರ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳ ನಡುವೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿವಿಧ ತಂಡಗಳ ವಿದ್ಯಾರ್ಥಿಗಳು ಏಕ ಪಾತ್ರಾಭಿನಯ ಮತ್ತು ಹಾಡಿನ ಮೂಲಕ ತಮ್ಮಲ್ಲಿರುವ ದೇಶಭಕ್ತಿಯನ್ನು ಇನ್ನಷ್ಟು ಇಮ್ಮಡಿಗೊಳಿಸಿಕೊಂಡು, ಎಲ್ಲರ ಕಣ್ಮನಗಳನ್ನು ತಣಿಸಿದರು. ಶಿಕ್ಷಕರು ಸೈನಿಕ ವಿಷಯವನ್ನಾಧರಿಸಿ ಕಿರುನಾಟಕವನ್ನು ಮಾಡುವ ಮೂಲಕ ಸೈನಿಕರ ಬದುಕಿನ ಮಹತ್ವವನ್ನು ಅರ್ಥಪೂರ್ಣವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸುನಿಲ್. ಪ್ಯಾಟ್ರಿಕ್ , ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂಜನ್ ನಿರೂಪಿಸಿದರು, ಉಮೇಶ್ ವಂದಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್. ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅವರು ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ವಿದ್ಯಾರ್ಥಿಗಳಾದ, ಹರಿದಾಸ್ ಆರ್. ಮಲ್ಯ ಹಾಗೂ ಶರ್ವಾಣಿ ಅವರು ಸ್ವಾತಂತ್ರ್ಯೋತ್ಸವದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ, ಎನ್. ಸಿ. ಸಿ, ಸ್ಕೌಟ್ಸ್ – ಗೈಡ್ಸ್ ಮತ್ತು ಶಾಲಾ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಸಹಶಿಕ್ಷಕಿ ಲೋನಾ ಡಿಸೋಜಾ ಸರ್ವರನ್ನು ಸ್ವಾಗತಿಸಿದರು. ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಸಹ ಶಿಕ್ಷಕಿ ದೀಪಾ ಆಚಾರ್ ಅವರು ಧನ್ಯವಾದ ಸಮರ್ಪಣೆಗೈದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ 2024 – 26ನೇ ಸಾಲಿನ ಗೌರವಾಧ್ಯಕ್ಷರಾಗಿ ಅಂಕದಕಟ್ಟೆಯ ಮಂಜುಶ್ರೀ ಕನ್ಸ್ಟ್ರಕ್ಷನ್ ಆಡಳಿತ ಪಾಲುದಾರರಾದ ವತ್ಸಲಾ ದಯಾನಂದ ಶೆಟ್ಟಿ ಆಯ್ಕೆಯಾಗಿರುತ್ತಾರೆ. ಕಳೆದ ಹತ್ತು ವರ್ಷಗಳಿಂದ ಯುವ ಬಂಟರ ಸಂಘದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಅವರು ದತ್ತಿನಿಧಿ ಪೋಷಕರಾಗಿ, ದಶಮಾನೋತ್ಸವದ ಗೌರವ ಮಹಾಪೋಷಕರಾಗಿ, ಪ್ರಸ್ತುತ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಪಂಚಾಯತ್ ತಾಲೂಕು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಬುಧವಾರ ನಡೆದಿದ್ದು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹಾಗೂ ತ್ರೈಮಾಸಿಕ ಕೆಡಿಪಿ ನಾಮನಿರ್ದೇಶಿತ ಸದಸ್ಯರ ನಡುವಿನ ಜಟಾಪಟಿಯಿಂದಾಗಿ ಶಾಸಕರು ಹೊರನಡೆದಿದ್ದು, ಸಭೆ ಅರ್ಧಕ್ಕೆ ಮೊಟಕುಗೊಂಡಿದೆ. ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ:ಸಭೆಯ ಆರಂಭದಲ್ಲಿ ಆರೋಗ್ಯ ಇಲಾಖೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ವಿವಿಧ ಸರಕಾರಿ ಆಸ್ಪತ್ರೆಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ತ್ರಾಸಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸುವ ಬಗ್ಗೆ ನಿವೇಶನ ಗುರುತಿಸಲು ಈಗಾಗಲೇ ಸೂಚಿಸಲಾಗಿದ್ದು, ಅವರ ಪ್ರಗತಿಯ ಬಗ್ಗೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಿರಿಮಂಜೇಶ್ವರ ಆರೋಗ್ಯ ಕೇಂದ್ರಕ್ಕೆ 20 ಸೆಂಟ್ಸ್ ನಿವೇಶನ ಕಡಿಮೆಯಿದ್ದು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ನಿವೇಶನ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದ ಬಗ್ಗೆ ಮಾಹಿತಿ ಕೇಳಿದರು. ಇದಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜೇಶ್ ಪ್ರತಿಕ್ರಿಯಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ. ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಕಾರ್ಕಳ ದೂ. ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ. ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶಿ ವ್ಯಾಸಾಂಗ ಯೋಜನೆಯ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848, 7899899039 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಭವಿಷ್ಯವನ್ನು ಕಟ್ಟುವವರು ಇಂದಿನ ಯುವ ವಿದ್ಯಾರ್ಥಿಗಳು ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ “ಕೌಶಲ್ಯ ತರಬೇತಿಯ ಅವಕಾಶ ಮತ್ತು ಸೌಲಭ್ಯಗಳು” ಕುರಿತ ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಯುವಶಕ್ತಿ ಬೆಳಗುತ್ತಾ ಇದೆ. ಆದರೆ ಅದಕ್ಕೆ ಸರಿಯಾದ ಮಾರ್ಗದರ್ಶನದ ಅವಶ್ಯಕತೆ ಇರುತ್ತದೆ. ಜೊತೆಯಲ್ಲಿ ಯುವಶಕ್ತಿ ತಮ್ಮ ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಾದರೆ ಅದಕ್ಕೆ ಪೂರಕ ಅವಕಾಶಗಳು ಮತ್ತು ಸೌಲಭ್ಯಗಳು ಬಗ್ಗೆ ಮಾಹಿತಿಯನ್ನು ಚೆನ್ನಾಗಿ ತಿಳಿದಿರಬೇಕು . ತಿಳಿದುಕೊಂಡು ಒಳ್ಳೆಯ ರೀತಿಯಲ್ಲಿ ಮುಂದುವರಿದಲ್ಲಿ ಉತ್ತಮ ಯಶಸ್ಸನ್ನು ಸಾಧಿಸಬಹುದು. ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಬೇಕಾದರೆ ನಿಮ್ಮ ಬದುಕಿನ ಶಿಲ್ಪಿಗಳು ನೀವಾಗಿರಬೇಕು. ನಿಮ್ಮ ಸಾಧನೆಯನ್ನು ಜಗತ್ತು ಮೆಚ್ಚುವಂತಿರಲಿ ಎಂದು ಆಶಿಸಿದರು. ಮಹಿಳಾ ವೇದಿಕೆಯ ಕುರಿತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಪ್ರೊ. ಮೀನಾಕ್ಷಿ ಎನ್. ಎಸ್. ಮಾತನಾಡಿದರು. ಡಿಜಿಟಲೈಜೇಶನ್ ಮತ್ತು ಐಟಿಸಿ ಕುರಿತು ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಮುಕುಂದ ಮಾತನಾಡಿದರು. ವಿವಿಧ ಸರ್ಟಿಫಿಕೇಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಗಳ ಸೌಲಭ್ಯ ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kaad.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832, 8050770004, 8050770005 ಮತ್ತು 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
