Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಬಂಧಿಕರ ಮನೆಯ ಮದುವೆ ಕಾರ್ಯಕ್ರಮಕ್ಕೆ ತಿಪಟೂರಿನಿಂದ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಬುಧವಾರ ಸಂಜೆ ಬಿಜಾಡಿ ಗ್ರಾಮದಲ್ಲಿ ಸಮುದ್ರಕ್ಕಿಳಿದಿದ್ದು ಒಬ್ಬ ನಾಪತ್ತೆಯಾಗಿದ್ದಾನೆ. ತಿಪಟೂರಿನ ನಿವಾಸಿ ಯೋಗೀಶ್ (23) ಸಮುದ್ರದಲ್ಲಿ ಕೊಚ್ಚಿಹೋಗಿ ನಾಪತ್ತೆಯಾದ ವಿದ್ಯಾರ್ಥಿ. ಯೋಗೀಶನ ಸ್ನೇಹಿತ ಸಂದೀಪನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ತಿಪಟೂರಿನಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ಯೋಗೀಶ್ ಹಾಗೂ ಸಂದೀಪ್ ಕುಂದಾಪುರದ ಸಂಬಂಧಿಕರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದರು. ಬುಧವಾರ ಸಂಜೆ ಬೀಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾರಸ್ ಮನೆ ಸಮೀಪದ ಕಡಲತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದು. ನೀರಿನ ಅಲೆಗಳನ್ನು ಕಂಡ ಯುವಕರು ಸಮುದ್ರಕ್ಕೆ ಇಳಿದಿದ್ದಾರೆ ಎನ್ನಲಾಗಿದೆ. ► ಎದೆ ಹಾಲು ಕುಡಿದ ಕೆಲಹೊತ್ತಿನಲ್ಲಿ ಹಸುಗೂಸು ಸಾವು- https://kundapraa.com/?p=73312 . ನೀರಿಗಿಳಿದ ಸಂದರ್ಭ ಅಲೆಗಳ ಹೊಡೆತಕ್ಕೆ ಯೋಗೀಶ್ ಕೊಚ್ಚಿ ಹೋಗುತ್ತಿದ್ದ ಸಂದರ್ಭ ಸಂದೀಪ ಕಾಪಾಡಲು ಹೋದರು ಕೂಡ ತೀವ್ರ ತರಹದ ಅಲೆಗಳ ಆರ್ಭಟ ಇದ್ದಿದ್ದರಿಂದ ಏನೂ ಮಾಡಲು ಸಾಧ್ಯವಾಗದೇ ಬೊಬ್ಬೆ ಹಾಕಿದ್ದಾನೆ. ಯುವಕನ ಬೊಬ್ಬೆ ಕೇಳಿದ ತಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೇ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯಗಳ ವಿವರ: ಉಡುಪಿ ತಾಲೂಕಿನ ಬನ್ನಂಜೆಯ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮಶಾಲೆ, ಆದಿ ಉಡುಪಿಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯ, ಉಡುಪಿ ಟೌನ್‌ನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ನಿಲಯ ಹಾಗೂ ಉಡುಪಿ ಟೌನ್‌ನ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕರ ನಿಲಯ. ಕುಂದಾಪುರ ತಾಲೂಕಿನ ಕುಂದಾಪುರ ಹಾಗೂ ಬೈಂದೂರಿನ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, ಶಂಕರನಾರಾಯಣದ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ನಿಮ್ಮ ವ್ಯಕ್ತಿತ್ವ ಹಾಗೂ ಕೌಶಲಗಳ ಮೂಲಕವೇ ಸಮಾಜಕ್ಕೆ ಪರಿಚಿತರಾಗಿ ಎಂದು ಆಳ್ವಾಸ್ ಕಾಲೇಜಿನ ಕುಲಸಚಿವ ಡಾ ಟಿ. ಕೆ. ರವೀಂದ್ರನ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಚಾರ ಸಂಕಿರಣ ಸಭಾಂಗಣದಲ್ಲಿ ಪದವಿ ಸಮಾಜ ಕಾರ್ಯ ವಿಭಾಗದ ಸ್ಪಟಿಕ ವಿದ್ಯಾರ್ಥಿ ವೇದಿಕೆಯ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ದೊಡ್ಡದಾಗಿ ಕನಸು ಕಾಣಬೇಕು. ಇದರಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ವರ್ತಮಾನದಲ್ಲಿ ಜಗತ್ತು ಒಂದು ಪುಟ್ಟ ಹಳ್ಳಿ ಆಗಿದೆ. ಅವಕಾಶಗಳು ವಿಸ್ತಾರಗೊಂಡಿದ್ದು, ಸ್ಪರ್ಧೆ ಹೆಚ್ಚಿದೆ ಎಂದರು. ಸಮಾಜ ಕಾರ್ಯದ ವಿದ್ಯಾರ್ಥಿಗಳಿಗೆ ಅವಕಾಶಗಳ ಕೊರತೆ ಬರಲು ಸಾಧ್ಯವಿಲ್ಲ. ಈ ವೃತ್ತಿಯೂ ನೀಡುವ ಸಂತೃಪ್ತಿ ಬೇರೆ ಕಡೆಯೂ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು. ವಿದ್ಯಾರ್ಥಿ ಜೀವನದ ಮಹತ್ವ ತಿಳಿಯುವುದು ಕಾಲೇಜಿನಿಂದ ಹೊರ ಹೋದ ಮೇಲೆ. ನಿಜವಾದ ಜೀವನ ಪ್ರಾರಂಭವಾಗುವುದು ನೀವು ವಿದ್ಯಾಭ್ಯಾಸ ಮುಗಿಸಿದ ನಂತರ. ವಿದ್ಯಾರ್ಥಿ ಜೀವನದಲ್ಲಿ ಕೆಲವರು ತಮ್ಮ ತಪ್ಪುಗಳಿಗೆ ಕಾಲೇಜನ್ನು ದೂರುತ್ತಾರೆ. ಆದರೆ ವೃತ್ತಿ ಜೀವನದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಗೌರವಧನ ಆಧಾರದಲ್ಲಿ ಆಪ್ತ ಸಮಾಲೋಚಕರಾಗಿ ಕಾರ್ಯನಿರ್ವಹಿಸಲು ಎಮ್.ಎಸ್.ಡಬ್ಲೂಯ ವಿದ್ಯಾರ್ಹತೆ ಹೊಂದಿದ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820-2526394 ಅಥವಾ ಇ-ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ, ಉಚ್ಛ ನ್ಯಾಯಾಲಯ ಹಾಗೂ ಇತರೇ ನ್ಯಾಯಾಲಯಗಳಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕಂದಾಯ ಆಯುಕ್ತಾಲಯದಲ್ಲಿ ಕಾನೂನು ಕೋಶವನ್ನು ಸ್ಥಾಪಿಸಲು ಕಾನೂನು ಅಧಿಕಾರಿ (ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದರಂತೆ)- 04 ಹುದ್ದೆಗಳು ಹಾಗೂ ಸಹಾಯಕ ಕಾನೂನು ಅಧಿಕಾರಿ -04 ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಅಧಿಕಾರಿ ಹುದ್ದೆಗೆ ನಿವೃತ್ತ ಸರ್ಕಾರಿ ಕಾನೂನು ಅಧಿಕಾರಿ ಅಥವಾ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಎಲ್.ಎಲ್.ಬಿ ವಿದ್ಯಾರ್ಹತೆ ಹೊಂದಿರುವ ನಿವೃತ್ತ ಕಂದಾಯ ಅಧಿಕಾರಿ/ ನಿವೃತ್ತ ಕೆ.ಎ.ಎಸ್ ಅಧಿಕಾರಿ ಅಥವಾ ಕನಿಷ್ಠ 10 ವರ್ಷಗಳ ಕಾಲ ಭೂ ಕಂದಾಯ ವ್ಯಾಜ್ಯಗಳ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ವಕೀಲರು ಮತ್ತು ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಇಂಟರ್ನ್ಶಿಪ್‌ನಲ್ಲಿರುವ ಕಾನೂನು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯಲ್ಲಿ ವೈಯಕ್ತಿತ ಮಾಹಿತಿ, ವಿದ್ಯಾರ್ಹತೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಪದಕ ವಿಜೇತ ವಿರ್ದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯಲ್ಲಿ ಅಭಿನಂದಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್‌ನ ಗೌರವಾಧ್ಯಕ್ಷ ಡಾ. ಎಂ ಮೋಹನ್ ಆಳ್ವ ಮಾತನಾಡಿ, ನಮ್ಮ ದೇಶದಲ್ಲಿ ಪರಿಚಿತ ಆಟವಾಗಿ, ಆದರೆ ಈ ಭಾಗದಲ್ಲಿ ಅಷ್ಟೊಂದು ಖ್ಯಾತಿಗೆ ಬಾರದ ಕ್ರೀಡೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ವುಶು ಅಸೋಸಿಯೇಷನ್, ಕಳೆದ ಐದು ವರ್ಷಗಳ ಸತತ ಪರಿಶ್ರಮದಿಂದಾಗಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನಿರ್ಮಾಣ ಮಾಡಿದೆ ಎಂದು ಹರ್ಷ ವ್ಯಕ್ತ ಪಡಿಸಿದರು. ಮಾನವ ಸಂಪತ್ತಿನ ಸರಿಯಾದ ಬಳಕೆಯಿಂದ ದೇಶದ ಸಮೃದ್ಧಿ ಸಾಧ್ಯ. ಮುಂದುವರಿದ ಯಾವ ದೇಶದಲ್ಲೂ ನಮ್ಮಲ್ಲಿರುವಷ್ಟು ಯುವ ಶಕ್ತಿಯಿಲ್ಲ. ಈ ಯುವ ಶಕ್ತಿಯ ಸರಿಯಾದ ಸದ್ಭಳಕೆ ಮುಖ್ಯ. ನಮ್ಮನ್ನಾಳುವ ಸರ್ಕಾರಗಳು ಇದರೆಡೆಗೆ ಗಮನವಹಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾರ್ಕೂರು ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಕಾಲೇಜಿನ ಉಪನ್ಯಾಸಕ ಸಂಘದ ಆಶ್ರಯದ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಕ್ರಿಕೆಟ್ ಲೀಗ್ ಪಂದ್ಯಾಟದಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಬ್ರಹ್ಮಾವರದ ಎಸ್.ಎಮ್.ಎಸ್. ಕಾಲೇಜು ತಂಡದ ಎದುರು ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇವರಿಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವೃಂದ ತಂಡವನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಬಾರಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.) ಇದರ ಪ್ರಾಯೋಜಕತ್ವದಲ್ಲಿ ‘ ನಿಂದೊಳ್ಳೆ ಕತಿಯಾಯ್ತಲ್ಲ ಮಾರಾಯ್ತಿ! ‘ ಎನ್ನುವ ಶೀರ್ಷಿಕೆಯಲ್ಲಿ ಕುಂದಾಪ್ರ ಕನ್ನಡದ ಸಣ್ಣ ಕಥಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಾರ್ಕೂರು ದೀಪಕ್ಕುಮಾರ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನವಾಗಿ ₹10,000, ಎರಡನೆಯ ಬಹುಮಾನವಾಗಿ ₹7,000, ಮೂರನೆಯ ಬಹುಮಾನವಾಗಿ ₹4,000 ಹಾಗೂ 7 ಸಮಾಧಾನಕರ ಬಹುಮಾನಗಳು ನೀಡಲಾಗುವುದು. ಕಥೆ ಸಂಪೂರ್ಣವಾಗಿ ಕುಂದಾಪ್ರ ಕನ್ನಡದಲ್ಲಿಯೇ ಇರಬೇಕು. ಈ ಮೊದಲು ಕಥೆ ಯಾವುದೇ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಎಲ್ಲಿಯೂ ಪ್ರಕಟಗೊಂಡಿರಬಾರದು. ಒಬ್ಬರು ಒಂದೇ ಕಥೆಯನ್ನು ಕಳುಹಿಸಬೇಕು. ಕಥೆ 600 ಪದಗಳ ( ಎ4 ಗಾತ್ರದ ಎರಡು ಪುಟ) ಮಿತಿಯೊಳಗಿರಬೇಕು. ಕಥೆಯ ಜೊತೆ ಸ್ಪರ್ಧಿಗಳು ತಮ್ಮ ಹೆಸರು, ಸಂಪೂರ್ಣ ಅಂಚೆ ವಿಳಾಸ ಹಾಗೂ ಸಂಪರ್ಕ ಸಂಖ್ಯೆಗಳನ್ನು ನಮೂದಿಸಬೇಕು. ಜುಲೈ20 ರ ಮೊದಲು ಸ್ವರ್ಣರೇಖಾ ಇಂಟೀರಿಯರ್ಸ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಯಿಯ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ 43 ದಿನದ ಹಸುಗೂಸು ಸಾವನ್ನಪ್ಪಿದ ಘಟನೆ ಗುಜ್ಜಾಡಿಯಲ್ಲಿ ನಡೆದಿದೆ. ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಮಗುವೇ ಸಾವನ್ನಪ್ಪಿದ ಮಗು. ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ತಾಯಿ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡುತ್ತಿಲ್ಲ ಎನ್ನುವ ಅನುಮಾನ ಬಂದಿದೆ. ತಕ್ಷಣ ಮಗುವನ್ನು ಮುಟ್ಟಿದಾಗಲೂ ಯಾವುದೇ ಪ್ರತಿಕ್ರಿಯೆ ಇಲ್ಲದೇ ಇದ್ದು ಮಗುವಿನ ಮೈ ತಣ್ಣಗಾಗಿದ್ದು ನಂತರ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಗಂಗೊಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ► ಬಿಜಾಡಿ: ಸಮುದ್ರದಲ್ಲಿ ಕೊಚ್ಚಿಹೋದ ಐಟಿಐ ವಿದ್ಯಾರ್ಥಿ- https://kundapraa.com/?p=73305 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಅರ್ಜಿಯಲ್ಲಿ ಸ್ವ ವಿವರದ ಮಾಹಿತಿಯೊಂದಿಗೆ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪ ಚಿತ್ರಕಲೆಗಳ ಕಲಾ ಪ್ರದರ್ಶನಗಳು ಹಾಗೂ ಛಾಯಾಚಿತ್ರಗಳನ್ನು ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ದೂ.ಸಂಖ್ಯೆ: 0820-2986168 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ…

Read More