Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ23: ಜಿಲ್ಲೆಗೆ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರುಗಳ ಮೇಲೆ ದೌರ್ಜನ್ಯಗಳಾಗದಂತೆ ಎಚ್ಚರವಹಿಸಲು ಕ್ರಮ ಕೈಗೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ ಹಾಗೂ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಹೊರ ಜಿಲ್ಲೆಗಳಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾರ್ಮಿಕರುಗಳೆ ಉದ್ಯೋಗ ಅರಸಿ ಜಿಲ್ಲೆಗೆ ಬರುತ್ತಿದ್ದಾರೆ. ಅವರುಗಳಿಗೆ ಉದ್ಯೋಗ ನೀಡುವ ಗುತ್ತಿಗೆದಾರರು, ಮಾಲೀಕರು, ಕಾರ್ಮಿಕ ಕಾಯ್ದೆಯಡಿ ಘೋಷಿಸಿರುವ ಕನಿಷ್ಠ ವೇತನ, ಭವಿಷ್ಯ ನಿಧಿ, ಇ.ಎಸ್.ಐ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು. ಅವರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಗಳಿಗೆ ಕರೆದೊಯ್ಯುವಾಗ ಗೂಡ್ಸ್ ವಾಹನಗಳನ್ನು ಬಳಸಬಾರದು. ಕಾರ್ಮಿಕರಿಗೆ ತಂಗಲು ಅವಕಾಶ ನೀಡಿದ ಸ್ಥಳದಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ದೇಶದ ಅಮೂರ್ತ ಪ್ರಾಕೃತಿಕ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಸೇವೆ ಸಲ್ಲಿಸುತ್ತಿರುವ, ರಾಜಧಾನಿ ದೆಹಲಿಯಲ್ಲಿ ಮುಖ್ಯ ಕಛೇರಿ ಹೊಂದಿರುವ ಇಂಟ್ಯಾಕ್ (INTACH) ಸಂಸ್ಥೆ, ಕುಂದಾಪುರದ ಪಂಚಗಂಗಾವಳಿಯನ್ನು ಅಧ್ಯಯನಕ್ಕಾಗಿ ಆರಿಸಿಕೊಂಡು ಈಗಾಗಲೇ ತನ್ನ ಕೆಲಸ ಆರಂಭಿಸಿದೆ. ಇಂಟ್ಯಾಕ್‌ನ ನ್ಯಾಚುರಲ್ ಹೆರಿಟೇಜ್ ಡಿವಿಜನ್‌ನ ಮೂವರು ತಜ್ಞರು ಈಗಾಗಲೇ ಜೂನ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಬಾರಿ ಆಗಮಿಸಿ ಮಾಹಿತಿ ಸಂಗ್ರಹದ ಪೂರ್ವಭಾವಿ ಕೆಲಸ ಆರಂಭಿಸಿದ್ದಾರೆ. ಇದು ಕುಂದಾಪುರಕ್ಕೆ ಹೆಮ್ಮೆಯ ವಿಚಾರವಾಗಿದೆ. ಇಂಟ್ಯಾಕ್, ನಾಲ್ಕು ದಶಕಗಳ ಇತಿಹಾಸ ಹೊಂದಿರುವ ಪ್ರಪಂಚದ ಶ್ರೇಷ್ಠ ಸರಕಾರೇತರ ಸಂಸ್ಥೆಯಾಗಿದೆ. ಆದರೆ ಕೇಂದ್ರ ಸರಕಾರದ ಇಲಾಖೆಗಳು ಸಂಸ್ಥೆಯ ಅಧ್ಯಯನ ಸಂರಕ್ಷಣೆಯ ಕಾರ್ಯಕ್ಕೆ ನೆರವು ನೀಡುತ್ತಿವೆ. ಪರಿಸರ, ಕಲೆ, ಪಾರಂಪರಿಕ, ಸಂಸ್ಕೃತಿ, ಶಿಲ್ಪಕಲೆ ಮುಂತಾದ ಹಲವು ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಈ ಸಂಸ್ಥೆಯ ನ್ಯಾಚುರಲ್ ಹೆರಿಟೇಜ್ ಡಿವಿಜನ್‌ನ ಪ್ರಿನ್ಸಿಪಾಲ್ ಡೈರೆಕ್ಟರ್ ಮನು ಭಟ್ನಾಕರ್, ಸಾಯಿಂಟಿಫಿಕ್ ಆಫೀಸರ್ ಡಾ. ಸುಮೇಶ ಎನ್. ಡುದಾನಿ ಮತ್ತು ಎನ್‌ವಿರೊನ್‌ಮೆಂಟಲ್ ಪ್ಲಾನರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ನವರಾತ್ರಿ ಪರ್ವಕಾಲ ವಿಜಯದಶಮಿಯಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ತೆರಳಿದ ನೂರಾರು ಭಕ್ತರು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ ಮಂಟಪದ ಮುಂಭಾಗದಲ್ಲಿ ಪ್ರಾಥಃಕಾಲದಿಂದಲೇ ಅಕ್ಷರಾಭಾಸ ಮಾಡಿಸಲಾಯಿತು. ದೇಗುಲದಲ್ಲಿ ಹೆತ್ತವರು ಕಾಲಿನ ಮೇಲೆ ಮಕ್ಕಳನ್ನು ಕುರಿಸಿಕೊಂಡು ವಿದ್ಯಾರಂಭ ಮಾಡಿಸಲಾಗುತ್ತದೆ. ಅರ್ಚಕರು ಚಿನ್ನದಿಂದ ಮಗುವಿನ ನಾಲಗೆಯ ಮೇಲೆ ಓಂ ಎಂದು ಬರೆಯುತ್ತಾರೆ, ಬಳಿಕ ಹೆತ್ತವರು ಮಗುವಿನ ಬೆರಳಿಂದ ಅಕ್ಕಿ ತುಂಬಿದ ಹರಿವಾಣದಲ್ಲಿ ಓಂ ಎಂದು ಬರೆಯಿಸಿ ಬಳಿಕ ಮಾತೃಭಾಷೆಯಲ್ಲಿ ಅ,ಆ,ಇ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಲಾಗುತ್ತದೆ. ಇದರಿಂದ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಅವರ ಶೈಕ್ಷಣಿಕ ಭವಿಷ್ಯ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ► ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಹಾನವರಾತ್ರಿ ರಥೋತ್ಸವಕ್ಕೆ ಸಾಕ್ಷಿಯಾದ ಭಕ್ತ ಸಮೂಹ – https://kundapraa.com/?p=69717 . ನವಾನ್ನಪ್ರಾಶನ: ಎಳೆಯ ಕಂದಮ್ಮಗಳಿಗೆ ನವಾನ್ನಪ್ರಾಶನದ ಮೂಲಕ ಮೊದಲ ಭಾರಿಗೆ ಅನ್ನವನ್ನು ತಿನ್ನಿಸಲಾಗುತ್ತದೆ. ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೃಷಿ ಕೆಲಸ ಮುಗಿಸಿ ಸಂಜೆಯ ವೇಳೆ ಕೈಕಾಲು ತೊಳೆಯುವ ವೇಳೆ ಕಾಲು ಜಾರಿ ಹೊಳೆದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಬೇಳೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರಶಾಂತ ಆಚಾರ್ಯ (22) ಮೃತಪಟ್ಟ ದುರ್ದೈವಿ. ಆಚಾರ್ಯ ಅವರು ತೋಟದ ಸಸಿ ಬುಡ ಮಾಡುವ ಕೆಲಸಕ್ಕಾಗಿ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಕೈಕಾಲು ತೊಳೆಯಲು ಕೊಮೆ ಹೊಳೆ ಆರ್ ಬೆಟ್ಟು ಗುಂಡಿ ಎಂಬಲ್ಲಿ ಇಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಭಂಡಾರ್ಕರ್ಸ್ ಕಾಲೇಜಿನ ರೇಡಿಯೋ ಕುಂದಾಪುರ 89.6 ಎಫ್ ಎಂ ನ ಲಾಂಛನ ಮತ್ತು ಅಧಿಕೃತ ರಾಗ ಬಿಡುಗಡೆ ಸಮಾರಂಭ ಅಕ್ಟೋಬರ್ 27ರಂದು ಕಾಲೇಜಿನ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಲಾಂಛನ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಓಂ ಗಣೇಶ ಸಿಗ್ನೇಚರ್ ಟ್ಯೂನ್ ಬಿಡುಗಡೆ ಮಾಡಲಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರು ಕೆ. ಶಾಂತರಾಮ್ ಪ್ರಭು ಅವರು ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾಗಿರುವ ಎ ಎಸ್ ಎನ್ ಹೆಬ್ಬಾರ್ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮತ್ತು ಕಲಾಸಕ್ತರು ಪಾಲ್ಗೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ಆಮಂತ್ರಿಸಿದ್ದಾರೆ. ಭಂಡಾರ್ಕರ್ಸ್ ಕಾಲೇಜಿನ ಮಹತ್ವದ ಸಮುದಾಯ ಯೋಜನೆ “ರೇಡಿಯೋ ಕುಂದಾಪುರ 89.6 ಎಫ್ ಎಮ್ “ಸಿದ್ಧಗೊಳ್ಳುತ್ತಿದ್ದು ತಾಂತ್ರಿಕ ಕಾರ್ಯ ಪೂರ್ಣಗೊಳ್ಳುತ್ತಿದೆ.ಈ ಬಾನುಲಿ ಕೇಂದ್ರ 25 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕೇಳಬಹುದಾಗಿದ್ದು, ಧ್ವನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ಶಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಶಿಲಾನ್ಯಾಸ ನೆರವೇರಿಸಿ, ಸಹಕಾರ ಸಂಘಗಳು ಗ್ರಾಮಾಂತರ ಪ್ರದೇಶದ ಜನರ ಒಡನಾಡಿಯಂತೆ ಕಾರ್ಯನಿರ್ವಹಿಸುತ್ತಿದೆ. ಆ ಹಿನ್ನೆಲೆ ಹೊಸೂರಿನಲ್ಲಿ ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘವು ಜನರ ಅವಶ್ಯಕತೆಗಳನ್ನು ಪೂರೈಸುವ ಮೂಲಕ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್,ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ನಮ್ಮ ಸಂಘವು ಕಾರ್ಯವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶಾಖೆ ಆರಂಭಿಸಲಾಗಿದೆ. ಇಡೂರು ಶಾಖೆಗೆ ಸ್ವಂತ ಸ್ಥಳದಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಕೆರಾಡಿಯಲ್ಲಿ ಸ್ವಂತ ಕಟ್ಟಡ ಹೊಂದಿದೆ. ಬೆಳ್ಳಾಲದಲ್ಲಿ ಶಾಖಾ ಕಟ್ಟಡಕ್ಕೆ ಸ್ಥಳ ಗುರುತಿಸಲಾಗಿದೆ. ಹೊಸೂರು ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು ಮಾರ್ಚ್ ಒಳಗೆ ಕಟ್ಟಡ ನಿರ್ಮಾಣವಾಗಲಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ, ಕೊಲ್ಲೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಡಾಲಿ ಪಿಚ್ಚರ್ ಅಡಿಯಲ್ಲಿ ನಿರ್ಮಾಣ ಆಗಿರುವಂತಹ ಟಗರುಪಲ್ಯ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.. ಟಗರುಪಲ್ಯ ಸಿನಿಮಾದಲ್ಲಿ ನಾಗಭೂಷಣ್ ನಾಯಕನಾಗಿ ಅಭಿನಯ ಮಾಡಿದ್ದು ಅಮೃತ ಪ್ರೇಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ… ಸಿನಿಮಾ ಈಗಾಗಲೇ ಟ್ರೈಲರ್ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ… ಟಗರುಪಲ್ಯ ಸಿನಿಮಾ ಈಗಾಗಲೇ ಮನೆಮನೆಗೂ ತಲುಪಿದೆ.. ಇದೆ ಅಕ್ಟೋಬರ್ 27ರಂದು ಸಿನಿಮಾ ತೆರೆಗೆ ಬರುತ್ತಿದ್ದು ಈ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಇತ್ತೀಚಿಗಷ್ಟೇ ನಟ ಡಾಲಿ ಧನಂಜಯ್ ಚಿತ್ರೀಕರಣದಲ್ಲಿ ಬಿಸಿಯಾಗಿದ್ದಾಗ ಹಿರಿಯರು ಒಬ್ಬರು ಡಾಲಿಯನ್ನ ಭೇಟಿ ಮಾಡಿ ಟಗರುಪಲ್ಯ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.. ಟಗರುಪಲ್ಯ ಸಿನಿಮಾ ಬಗ್ಗೆ ಡಾಲಿ ಹೇಳಲು ಹೊರಟಾಗ ಅವರೇ ಟಗರುಪಲ್ಯ ಸಿನಿಮಾ ಬರ್ತಾ ಇದೆ ನನಗೆ ಗೊತ್ತಿದೆ ನಾವು ನೋಡುತ್ತೇವೆ ಎಂದು ಹೇಳಿ ಡಾಲಿ ಧನಂಜಯ್ ಅವರಿಗೆ ಹಾಗೂ ಅವರ ಸಿನಿಮಾಗೆ ಆಶೀರ್ವಾದ ಮಾಡಿದ್ದಾರೆ…. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿತ್ತು ಇದೇ ವಾರ ತೆರೆಗೆ ಬರುತ್ತಿರುವಂತಹ ಟಗರುಪಲ್ಲಿ ಸಿನಿಮಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ‘ಜೋಕಾಲಿ’, ‘ರಾಜಹಂಸ’ ಎನ್ನುವ ಸಿನಿಮಾಗಳು ಕನ್ನಡ ಚಿತ್ರಪ್ರಿಯರಿಗೆ ನೆನಪಿರಬಹುದು. ಸಿನಿಮಾ ಮರೆತಿದ್ದರೂ ‘ಚುಚ್ಚಿ ಚುಚ್ಚಿ ಕೊಂದೆಯಲ್ಲೇ..’ ಎನ್ನುವ ಹಾಡು ಮರೆಯಲು ಸಾಧ್ಯವಿಲ್ಲ. ಯಾಕಂದ್ರೆ ಇದೇ ಹಾಡಿನಲ್ಲಿ ಗೌರಿ ಶಂಕರ್ ನಾಯಕನಾಗಿ ಮಿಂಚಿದ್ದರು. ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ ಮೇಲಾಗಿದೆ. ಇದೀಗ ಆ ಸಿನಿಮಾಗಳ ಬಗ್ಗೆ ಯಾಕೆ ಅಂತಿರ. ನಾಯಕ ಗೌರಿ ಶಂಕರ್ ಇದೀಗ ಮತ್ತೊಂದು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಗೌರಿ ಶಂಕರ್ ಅಭಿನಯದ ‘ರಾಜಹಂಸ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸದಭಿರುಚಿಯ ಕೌಟುಂಬಿಕ ಚಿತ್ರವಾಗಿತ್ತು. ಆ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿದ್ದವು. ನಾಯಕ ಗೌರಿ ಶಂಕರ್ ಅಭಿನಯಕ್ಕೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿತ್ತು. ಇದೀಗ ಮತ್ತೊಂದು ಉತ್ತಮ ಸಿನಿಮಾ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸ್ಜಾಗಿದ್ದಾರೆ. ಗ್ಯಾಪ್ನ ಬಳಿಕ ಗೌರಿ ಶಂಕರ್ ಹಳ್ಳಿ ಸೊಗಡಿನ ಸಿನಿಮಾ ಮೂಲಕ ಮಿಂಚಲು ಸಜ್ಜಾಗಿದ್ದಾರೆ. ಕನ್ನಡ ಚಿತ್ರರಂದಲ್ಲಿ ವಿನೂತನ ಸಿನಿಮಾಗಳಿಗೇನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವದ ಅಂಗವಾಗಿ ಮಂಗಳವಾರ ನಡೆದ ಶ್ರೀ ದೇವಿಯ ವೈಭವದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ನವರಾತ್ರಿ ಒಂಬತ್ತು ದಿನಗಳ ಕಾಲ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಗಳು ಸಾಂಗವಾಗಿ ನೆರವೇರಿದ್ದು, ಮಹಾನವಮಿಯ ಮಧ್ಯಾಹ್ನ ಬಲಿ ಸೇವೆ ಹಾಗೂ ಪ್ರದಕ್ಷಿಣಿ ನಡೆಸಿದ ಬಳಿಕ ಶ್ರೀ ದೇವಿಯ ಉತ್ಸವ ಮೂರ್ತಿಯನ್ನು ಅಲಂಕರಿಸಿದ ಮರದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ, ತಂತ್ರಿ ನಿತ್ಯಾನಂದ ಅಡಿಗ ಅವರು ರಥಾರೋಹಣಳಾದ ಶ್ರೀ ದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ರಥ ಪೂಜೆಯ ನಡೆಸಲಾಯಿತು. ನಂತರ ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ಬಂದ ಬಳಿಕ ರಥದ ಮೇಲಿನಿಂದ ಅರ್ಚಕರು ಎಸೆದ ನಾಣ್ಯವನ್ನು ಪಡೆಯಲು ಭಕ್ತರು ಮುಗಿಬಿದ್ದರು. ಉತ್ಸವ ಮೂರ್ತಿಯನ್ನು ರಥದಿಂದ ಕೆಳಕ್ಕೆ ತರುವ ಕ್ಷಣಗಳಿಗಾಗಿ ಕಾಯುತ್ತಿದ್ದ ಭಕ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕೆಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ಹೆಚ್ಚುವರಿ ಸಿವಿಲ್ ನ್ಯಾಯಾಲಯ ದಾಖಲು ಮಾಡಿಕೊಂಡಿದೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋರ್ಟ್ ನ್ಯಾಯಾಧೀಶರು ಆದೇಶಿಸಿದ್ದಾರೆ. ಗುಜರಿ ಮಾರಾಟದಲ್ಲಿನ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾರ್ಖಾನೆಯ ಆಡಳಿತ ಮಂಡಳಿ ಗುಜರಿ ಸರಕುಗಳನ್ನು 21 ಕೋಟಿ ರೂಪಾಯಿಗೆ ಮಾರಿ, ಅದರಲ್ಲಿ 14 ಕೋಟಿಗಿಂತಲೂ ಹೆಚ್ಚು ಹಣವನ್ನು ಸರ್ಕಾರ ಮತ್ತು ರೈತರಿಗೆ ವಂಚನೆ ಮಾಡಿದೆ. ಇದರಲ್ಲಿ ಬಿಜೆಪಿಯ ಕೈವಾಡವೂ ಇದೆ ಎಂದು ಆರೋಪಿಸಿತ್ತು. ಗುಜರಿ ಮಾರಾಟದ ಪ್ರಕ್ರಿಯೆಯನ್ನು ಶಾಸನಬದ್ಧವಾಗಿ ಇ-ಪ್ರಾಕ್ಯುರ್ಮೆಂಟ್ ಟೆಂಡರ್ ಮುಖೇನ ಮಾಡಬೇಕಿತ್ತು. ಅಥವಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸೆಂಟ್ರಲ್…

Read More