ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರಾಟೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗುತ್ತದೆ ಮತ್ತು ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಕರಾಟೆ ಕಲೆಯನ್ನು ಕಲಿಯಲು ಉತ್ಸಾಹ ತೋರಬೇಕು. ಇದರಿಂದ ನಮ್ಮಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕೋಡಿ ವಿಠಲ ಕಾಮತ್ ಹೇಳಿದರು. ಗಂಗೊಳ್ಳಿಯ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಗಂಗೊಳ್ಳಿಯಲ್ಲಿ ಕರಾಟೆ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಮ್ಮಾಡಿ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಹೆಮ್ಮಾಡಿ ಜನತಾ ಹೈಸ್ಕೂಲಿನ ಉಪನ್ಯಾಸಕ ಜಗದೀಶ ಶೆಟ್ಟಿ, ಉದ್ಯಮಿ ಸಂತೋಶ ಗುಡ್ರಿ ಶುಭ ಹಾರೈಸಿದರು. ಗಂಗೊಳ್ಳಿಯ ಮತ್ಸ್ಯೋದ್ಯಮಿ ರಾಘವೇಂದ್ರ ಖಾರ್ವಿ (ಇಂದ), ರಾಘವೇಂದ್ರ ಖಾರ್ವಿ, ವೆಂಕಟೇಶ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಕರಾಟೆ ಶಿಕ್ಷಕ ಅಕ್ಷಯ್ ಪೂಜಾರಿ ಸ್ವಾಗತಿಸಿದರು. ಶಿಕ್ಷಕ ಸಂತೋಷ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ಹರೀಶ ಆರ್. ಸೋಮವಾರ ಅಧಿಕಾರ ಸ್ವೀಕರಿಸಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿದ್ದ ವಿನಯ್ ಕೊರ್ಲಹಳ್ಳಿ ಅವರು ಹರೀಶ್ ಆರ್. ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ವಿನಯ್ ಕೊರ್ಲಹಳ್ಳಿ ಕುಂದಾಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕಡೂರು ಸಂಚಾರ ಠಾಣೆಯ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಆರ್. ಅವರನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರ ಜೀವನವೇ ನಮಗೊಂದು ಪಾಠವಿದ್ದಂತೆ, ಅವರ ಬದುಕು ಬರಹವನ್ನು ಮುಂದಿನ ಜನಾಂಗಕ್ಕೆ ತಲುಪಿಸಲು ಕಾರಂತ ಥೀಮ್ ಸಹಕಾರಿ, ಅಲ್ಲದೇ ಮಕ್ಕಳಿಗಾಗಿ ಇಲ್ಲಿ ನಡೆಸುವ ಚಟುವಟಿಕೆಗಳು ಅನುಕರಣೀಯ ಎಂದು ಕಾರವಾರ ಸಹಾಯಕ ಆಯುಕ್ತರು ಜಯಲಕ್ಷ್ಮೀ ರಾಯಕೋಡ್ ಅವರು ಹೇಳಿದರು. ಅವರು ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ಕಿರು ಸಭಾಂಗಣ, ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಟ್ಕಳ ಸಹಾಯಕ ಆಯುಕ್ತರು ಮಮತಾ ದೇವಿ ಜಿ.ಎಸ್ ಮಾತನಾಡಿ ಸಾಹಿತ್ಯ ಕ್ಷೇತ್ರಕ್ಕೆ ಕಾರಂತರ ಕೊಡುಗೆ ಅಪಾರವಾದುದು, ಅವರ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹತ್ತಿರವಾಗಿದೆ, ಥೀಮ್ ಪಾರ್ಕ್ ಇನ್ನಷ್ಟು ಪ್ರಸಿದ್ಧಿ ಪಡೆಯಲಿ ಎಂದರು. ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಶ್ರೀ ಸುಬ್ರಾಯ ಆಚಾರ್ಯ, ಮಾಜಿ ಕುಂದಾಪುರ ತಾಲ್ಲೂಕು ಪಂಚಾಯತ್ ಸದಸ್ಯ ಶ್ರೀ ಕರಣ್ ಪೂಜಾರಿ, ಕೋಟ ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸುತ್ತಲಿನ ಸ್ಪಚ್ಛತೆ ಹಾಗೂ ಪಾವಿತ್ರತೆಯನ್ನು ಕಾಪಾಡಿಕೊಳ್ಳುವುದು ಅತಿ ಅಗತ್ಯವಾಗಿದೆ. ಅದನ್ನು ಸಾಧ್ಯವಾಗಿಸಲು ಮೊದಲು ಮನವೊಲಿಕೆ, ಸಾಧ್ಯವಾಗದಿದ್ದರೆ ಹೋರಾಟದ ಹಾದಿಯನ್ನೇ ಹಿಡಿಯಬೇಕಾಗುತ್ತದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಕೊಲ್ಲೂರು ಕಾಶಿಹೊಳೆಯಲ್ಲಿ ಆರ್.ಎಸ್. ವೆಂಚರ್ ಹಾಗೂ ಮೂಕಾಂಬಿಕಾ ಡೆವಲಪರ್ಸ್ ಜಂಟಿಯಾಗಿ ನಿರ್ಮಿಸಿದ ದೇವಿ ಮೂಕಾಂಬಿ ಸರ್ವಿಸ್ ಅಪಾರ್ಟ್ಮೆಂಟ್ ಹಾಗೂ ರಾಜ್ಯದ ಮೊದಲ ಬಯೋ ಡೈಜಿಸ್ಟ್ ಎಸ್ಟಿಪಿ ಉದ್ಘಾಟಿಸಿ ಮಾತನಾಡಿ ಸ್ವಚ್ಛತೆಯ ಬಗ್ಗೆ ನಾವು ಮಾತನಾಡುತ್ತಿರುವಾಗಲೇ ಬಯೋ ಡೈಜಿಸ್ಟರ್ ಸೆಫ್ಟಿಕ್ ಟ್ಯಾಂಕ್ ಉಪಯೋಗಿಸಿ ನೈರ್ಮಲ್ಯತೆಗೆ ಒಂದು ಮಾದರಿ ಸಿದ್ಧಪಡಿಸಿಕೊಟ್ಟಿದೆ. ಇದರ ಬಳಕೆ ಎಲ್ಲೆಡೆಯೂ ಆದರೆ ನೈರ್ಮಲ್ಯ ತಾನಾಗಿಯೇ ಬರಲಿದೆ ಎಂದರು. ಬೈಂದೂರು ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ. ಇಕೋ ಟೂರಿಸಂ, ಟೆಂಪಲ್ ಟೂರಿಸಂ ಅಭಿವೃದ್ಧಿಗೆ ಸರಕಾರ, ಜನಪ್ರತಿನಿಧಿಗಳೊಂದಿಗೆ ಜನರೂ ಕೂಡ ಮನಸ್ಸು ಮಾಡಬೇಕಿದೆ. ಮನಸ್ಥಿತಿ ಬದಲಾಗದ ಅಭಿವೃದ್ಧಿ ಸಾಧ್ಯವಿಲ್ಲ. ಸಮೃದ್ದ ಬೈಂದೂರಿನ ಕನಸನ್ನು ಸಾಕಾರಗೊಳಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆ ಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ G H ರಾಷ್ಟ ಮಟ್ಟದಲ್ಲಿ category wise(ವರ್ಗವಾರು )2126 ನೇ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕನಸಿನ ಯೋಜನೆಯಾದ ಸಮೃದ್ಧ ಬೈಂದೂರಿನ ಭಾಗವಾದ ಕ್ಲೀನ್ ಕಿನಾರದ ಮೂರನೇ ವಾರ ಕಿರಿಮಂಜೇಶ್ವರದ ಗಂಗೆಬೈಲು ಸಮುದ್ರ ತೀರ ಸ್ವಚ್ಛತೆಯಲ್ಲಿ ಪಾಲ್ಗೊಂಡರು. ಈ ವೇಳೆ ಕೇಸರಿ ದಳದ ಕಾರ್ಯಕರ್ತರು, ಸ್ಥಳೀಯರ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು. ಕಳೆದರಡು ವಾರ ಬೈಂದೂರು ಸೋಮೇಶ್ವರ ಹಾಗೂ ಉಪ್ಪುಂದ ಮಡಿಕಲ್ ಬೀಚ್ ಸ್ವಚ್ಛತಾ ಕಾರ್ಯ ಜರುಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ದೇಶ ಪ್ರೇಮದ ಸ್ಫೂರ್ತಿ ಕಡಿಮೆಯಾಗುತ್ತಾ ಬರುತ್ತಿದೆಯೋ ಎಂಬ ಕಾಳಜಿ ಸಹಜವಾದರೂ ಆಸಕ್ತ ಪ್ರಜೆಗಳು ತಮ್ಮ ವೃತ್ತಿ ಪ್ರವೃತ್ತಿಯಲ್ಲಿ ನಿಷ್ಠೆ, ಪ್ರಾಮಾಣಿಕತೆ ತೋರಿ ಇತರರಿಗೆ ಮಾದರಿಯಾದರೆ ಸಹಜವಾಗಿ ಅವರಿಂದ ಪ್ರೇರಣೆ ಪಡೆದವರು ದೇಶ ಪ್ರೇಮಿಗಳಾಗುತ್ತಾರೆ. ನಮ್ಮ ದೇಶದ ಸಂಸ್ಕೃತಿ, ಕೌಶಲ್ಯಗಳನ್ನು ನಾಶ ಮಾಡಲು ತುಂಬ ಆಕ್ರಮಣಕಾರರು ಪ್ರಯತ್ನ ಪಟ್ಟರೂ ಆಗಲಿಲ್ಲ. ಅಲೆಕ್ಸಾಂಡರ್ ಕಥೆ ಅದಕ್ಕೆ ತಕ್ಕ ಉದಾಹರಣೆ. ಆದರೆ ನಮ್ಮ ಆಡಳಿತ ವ್ಯವಸ್ಥೆ ಆಕ್ರಮಣಗಾರರನ್ನು ಪರಿಚಯಿಸಿದಷ್ಟು ನಮ್ಮ ದೇಶಕ್ಕಾಗಿ ಹೋರಾಡಿದವರನ್ನು ಮಕ್ಕಳಿಗೆ ಪರಿಚಯಿಸಲಿಲ್ಲ. ನಮ್ಮದೇ ಪರಿಸರದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ನಮಗೆ ತಿಳಿದಿಲ್ಲ. ದೇಶ ಪ್ರೇಮ ನಮ್ಮ ಹೃದಯದಿಂದಲೇ ಸ್ಪುರಿಸಬೇಕೇ ಹೊರತು ಯಾರ ಒತ್ತಡದಿಂದಲ್ಲ. ಎಂದು ಸ್ವರಾಜ್ಯ 75ಸಂಘಟನೆಯ ಸ್ಥಾಪಕ ಪ್ರದೀಪ್ ಬಸ್ರೂರು ಹೇಳಿದರು. ರೋಟರಿ ಕುಂದಾಪುರ ದಕ್ಷಿಣ ಏರ್ಪಡಿಸಿದ ದೇಶ ಪ್ರೇಮ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಅವರು ಮಾತನಾಡುತ್ತಿದ್ದರು. ನಮ್ಮ ಜಿಲ್ಲೆಯಲ್ಲಿ ನೂರಾರು ಮಂದಿ ಸ್ವಾತಂತ್ರ್ಯ ಹೋರಾಟಗಾರರಿದ್ದು ೫೬ ಸ್ವಾತಂತ್ರ್ಯ ಹೋರಾಟಗಾರರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.17: ವಾರಾಹಿ ನೀರಾವರಿ ಯೋಜನೆಯನ್ನು ಆರಂಭಿಸಿರುವುದೇ ಕುಂದಾಪುರ ವಿಧಾನಸಭಾ ಕ್ಷೇತ್ರ, ಬೈಂದೂರು ಹಾಗೂ ಹಿಂದಿನ ಬಹ್ಮಾವರ ಕ್ಷೇತ್ರಗಳ ಕೃಷಿ ಭೂಮಿಗೆ ನೀರಾವರಿ ಒದಗಿಸುವುದಕ್ಕಾಗಿ. ಆದರೆ ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯ ಬೇರೆ ಕಡೆಗಳಿಗೆ ವಾರಾಹಿ ಯೋಜನೆಯ ನೀರನ್ನೇ ಕೊಂಡೊಯ್ಯಲಾಗುತ್ತಿದೆ. ಕುಡಿಯುವ ನೀರು ಒದಗಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಇದರ ಹೆಸರಿನಲ್ಲಿ ವಾರಾಹಿ ಅಚ್ಚುಕಟ್ಟು ಪ್ರದೇಶದವರನ್ನು ನಿರ್ಲಕ್ಷಿಸಿದ್ದಲ್ಲದೇ, ವಾರಾಹಿ ನೀರಾವರಿ ಯೋಜನೆಯನ್ನೇ ಮುಗಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ವಿಧಾನಪರಿಷತ್ ಮಾಜಿ ಸಭಾಪತಿ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪ್ಚಂದ್ರ ಶೆಟ್ಟಿ ಆರೋಪಿಸಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಮಿನಿ ಹಾಲ್ನಲ್ಲಿ ಶನಿವಾರ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಉಡುಪಿ, ಕಾರ್ಕಳ ಹಾಗೂ ಶಿವಪುರಕ್ಕೆ ಕುಡಿಯುವ ನೀರು ಪೂರೈಸುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಆದರೆ ವಾರಾಹಿ ಅಚ್ಚುಕಟ್ಟು ಪ್ರದೇಶದವರನ್ನು ನಿರ್ಲಕ್ಷಿಸುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಮೂಲ ಯೋಜನೆಯಲ್ಲಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ನಡೆಯುವ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆ ಕೆ-ಸಿಇಟಿ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಐಶ್ವರ್ಯ ಖಾರ್ವಿ B.sc Agri-450,BNYS-1050,ಇಂಜಿನಿಯರಿಂಗ್-1189 ರ‍್ಯಾಂಕ್ ಗಳನ್ನು,ನೇಶಲ್ -ಇಂಜಿನಿಯರಿಂಗ್ 1966ನೇ ರ‍್ಯಾಂಕ್, ಆಯುಷ್ ಜೆ.ಸಿ- ಇಂಜಿನಿಯರಿಂಗ್ -2060ನೇ ರ‍್ಯಾಂಕ್, ತಿಲಕ್ ಇಂಜಿನಿಯರಿಂಗ್-2500ನೇ ರ‍್ಯಾಂಕ್, ಧನುಷ್ಯ-ಇಂಜಿನಿಯರಿಂಗ್-3958ನೇ ರ‍್ಯಾಂಕ್, ಸುಮಂತ್- ಇಂಜಿನಿಯರಿಂಗ್-4062ನೇ ರ‍್ಯಾಂಕ್, ಓಂಕಾರ್ ಪ್ರಭು-ಇಂಜಿನಿಯರಿಂಗ್-4203ನೇ ರ‍್ಯಾಂಕ್,ಸಂಪದ-ಇಂಜಿನಿಯರಿಂಗ್-5620ನೇ ರ‍್ಯಾಂಕ್, ತನಿಷಾ-ಇಂಜಿನಿಯರಿಂಗ್-5923ನೇ ರ‍್ಯಾಂಕ್ ಶ್ರೀಶ್ ಶೆಟ್ಟಿ-6560ನೇ ರ‍್ಯಾಂಕ್‌ಗಳನ್ನು ಪಡೆದು ಅರ್ಹತೆಯನ್ನು ಪಡೆದಿರುತ್ತಾರೆ. 100ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,40ಕ್ಕೂ ಹೆಚ್ಚು ವಿದ್ಯಾರ್ಥಿಗಳು 10,000 ಒಳಗಿನ ರ‍್ಯಾಂಕ್‌ಗಳನ್ನು ಪಡೆದಿರುತ್ತಾರೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ‘ಯುವ ಮೆರಿಡಿಯನ್’ ಮಾಲೀಕರಾದ ಉದಯ್ ಕುಮಾರ್ ಶೆಟ್ಟಿ ಅವರು ಕೊಡುಗೆಯಾಗಿ ನೀಡಿದ ಸುಮಾರು 21,000 ರೂಪಾಯಿ ಮೌಲ್ಯದ ಬ್ಯಾಗುಗಳನ್ನು ಶನಿವಾರ ವಿತರಿಸಲಾಯಿತು. ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ ಗಾಣಿಗ ಹಾಗೂ ಮಾಜಿ ಎಸ್ಡಿಎಂಸಿ ಅಧ್ಯಕ್ಷರಾದ ವೀರಭದ್ರ ಗಾಣಿಗ ಬ್ಯಾಗುಗಳನ್ನು ವಿತರಿಸಿದರು. ಈ ಕೊಡುಗೆ ಶಾಲೆಗೆ ತರುವಲ್ಲಿ ಶ್ರಮಿಸಿದ ಮಾಧ್ಯಮ ಪ್ರತಿನಿಧಿ ಮಂಜುನಾಥ ಗಾಣಿಗ, ತಿರುಮಲ ಎಫ್.ಸಿ ಫ್ರೆಂಡ್ಸ್ ತಗ್ಗರ್ಸೆ ಸದಸ್ಯರಾದ ಹರ್ಷೇಂದ್ರ , ದಿಲೀಪ್ ಕುಮಾರ್, ಅಣ್ಣಪ್ಪ ಎಸ್. ಉಪಸ್ಥಿತರಿದ್ದರು. ಈ ವೇಳೆ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
