Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪಠ್ಯದೊಂದಿಗೆ ಸಾಹಿತ್ಯ ಕೃತಿಗಳ ಓದು ವಿದ್ಯಾರ್ಥಿಗಳನ್ನು ಭೌದ್ದಿಕ ಸಂಪನ್ನರನ್ನಾಗಿಸುತ್ತದೆ. ನಿರಂತರ ಅಧ್ಯಯನ ವ್ಯಕ್ತಿಯನ್ನು ಚಿಂತನಶೀಲರನ್ನಾಗಿಸುತ್ತದೆ ಎಂದು ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು. ಅವರು ಬುಧವಾರ ಸರಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರು ಕನ್ನಡ ವಿಭಾಗದ ನೇತೃತ್ವದಲ್ಲಿ ಸುರಭಿ ರಿ. ಬೈಂದೂರು ಸಹಯೋಗದೊಂದಿಗೆ ಕಾಲೇಜಿನಲ್ಲಿ ಆಯೋಜಿಸಲಾದ ಕನ್ನಡ ಸಾಹಿತ್ಯ ವೇದಿಕೆ ಹಾಗೂ ಸಾಹಿತ್ಯ ಬಳಗ ಮತ್ತು ಕಥಾ ಸಿಂಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಒಂದಿಲ್ಲೊಂದು ಸಂದರ್ಭದಲ್ಲಿ ಉತ್ತಮ ಅವಕಾಶಗಳು ಎದುರಾಗುತ್ತವೆ. ಅದನ್ನು ಸದುಪಯೋಗಪಡಿಸಿಕೊಂಡಲ್ಲಿ ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಮ್ಮೆದುರಿನ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡು ಗುರಿಸೇರಲು ವಿದ್ಯಾರ್ಥಿಗಳು ನಿರಂತರವಾಗಿ ಶ್ರಮಿಸಬೇಕಿದೆ ಎಂದರು. ಹೆಸ್ಕತ್ತೂರು ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಹಾಗೂ ಸುರಭಿ ಉಪಾಧ್ಯಕ್ಷ ಅಬ್ದುಲ್‌ ರವೂಫ್‌ ಅವರು ಲೇಖನ ಸತೀಶ್‌ ಚಪ್ಪರಿಕೆ ಅವರ ವರ್ಜಿನ್‌ ಮೊಹಿತೋ ಕಥಾಸಂಕಲನದಿಂದ ಆಯ್ದ ಕಥೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಪುಟವಿಟ್ಟ ಚಿನ್ನದಂತಿರುವ ಆಳ್ವಾಸ್ ಸಂಸ್ಥೆಯ ಮಾಹಿತಿಯನ್ನು ಹೊತ್ತು ತರುವ ’ಆಳ್ವಾಸ್ ಹೊಂಗಿರಣವು ಪ್ರಕಾಶಮಾನವಾಗಲಿ’ ಎಂದು ಉಜಿರೆಯ ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಬಿ.ಎ.ಕುಮಾರಹೆಗ್ಡೆ  ಹೇಳಿದರು. ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜು ಹಾಗೂ ಶಾಲೆಗಳ ತ್ರೈಮಾಸಿಕ ಸಂಚಿಕೆ ’ಆಳ್ವಾಸ್ ಹೊಂಗಿರಣ’ವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮೂರು ದಶಕಗಳಿಗೂ ಅಧಿಕ ಯಶೋಗಾಥೆ ಹೊಂದಿದ್ದು, ಇಲ್ಲಿನ ಮಾಹಿತಿಯನ್ನು ನೀಡುವ ಪತ್ರಿಕೆಯನ್ನು ನಾನು ಅತ್ಯಂತ ಸಂತಸದಿಂದ ಬಿಡುಗಡೆ ಮಾಡುತ್ತಿದ್ದೇನೆ ಎಂದರು. ಹಾಲನ್ನು ’ಕ್ಷೀರ’ ಎನ್ನುವುದು ಉತ್ಪ್ರೇಕ್ಷೆಯಲ್ಲ. ಅಂತೆಯೇ ಆಳ್ವಾಸ್ ಅನ್ನು ನೀವು ಎಷ್ಟು ಬಣ್ಣಿಸಿದರೂ, ಅದು ವಿಶೇಷವಲ್ಲ. ಆಳ್ವಾಸ್ ’ಕ್ಷೀರ ಸಾಗರ’. ಆಳ್ವಾಸ್ ಆವರಣವು ನಮ್ಮೆಲ್ಲರಿಗೂ ಎರಡನೇ ಮನೆ. ಈ ಭಾವನೆ ಮೂಡಿಸಿದ ಡಾ.ಎಂ. ಮೋಹನ ಆಳ್ವರು, ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದಂತೆ ’ಮಹಾನ್ ಆಳ್ವರು’ ಎಂದು ಸಂತಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಎಸ್.ಎನ್.ವಿ. ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕರಾಟೆ ಪಂದ್ಯಾಟದ  52 ಕೆಜಿ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಧುರ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ  ಸುರೇಶ್ ಎಂ. ತಾಂಡೇಲ ಮತ್ತು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್‌. ತಾಂಡೇಲ ದಂಪತಿ ಅವರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ ಭವನದಲ್ಲಿ ನಡೆದ  ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ ಕ್ಲಾಸಿಕ್ ಮತ್ತು ಇಕ್ಯುಪ್ಡ್ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ  ಬೆಳ್ಳಿಯ ಪದಕಗಳನ್ನು ಗಳಿಸಿರುತ್ತಾರೆ.    ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್‌ ಈ ಸಂಸ್ಥೆಯ ಸದಸ್ಯರಾಗಿದ್ದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ  ಪಿಯುಸಿಯ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿನಿ ಆಗಿದ್ದಾರೆ. ಅಂತರಾಷ್ಟ್ರೀಯ ಪವರ್ ಲಿಫ್ತರ್ ಸತೀಶ್ ಖಾರ್ವಿ ಇವರು ತರಬೇತಿ ನೀಡಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ.ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ  ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಭಾಗವಹಿಸಿ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ದ.ಕ.ಹಾಲು ಒಕ್ಕೂಟ ಮಂಗಳೂರು ಕೊಡಮಾಡುವ ಪ್ರಶಸ್ತಿಗಳಲ್ಲಿ ಮೇಕೋಡು ಹಾಲು ಉತ್ಪಾದಕರ ಸಂಘಕ್ಕೆ 4 ಪ್ರಶಸ್ತಿಗಳು ಲಭಿಸಿವೆ. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಜಿಲ್ಲೆಯ ಉತ್ತಮ ಹೈನುಗಾರ ಪ್ರಶಸ್ತಿ ಮತ್ತು ಹಸಿರು ಮೇವು ಘಟಕದ ಪ್ರಶಸ್ತಿ ಹಾಗೂ ಸಂಘಕ್ಕೆ ತಾಲೂಕು ಮಟ್ಟದ ಪ್ರಥಮ ಉತ್ತಮ ಗುಣಮಟ್ಟದ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಪ್ರಥಮ ಉತ್ತಮ ಬಿ.ಎಂ.ಸಿ ಪ್ರಶಸ್ತಿ ಲಭಿಸಿರುತ್ತದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿಗಳಿಗಾಗಿ ಹಿರಿಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ & ರೇಷ್ಮಾ ಶೆಟ್ಟಿ, ಕಾರ್ಯದರ್ಶಿ ವಿನಾಯಕ್ ಎನ್. ಅಡಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪೂಜಾ & ಶ್ರೇಯಾ ಖಾರ್ವಿ ಪ್ರಾರ್ಥಿಸಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆಗಳು ಸಮನ್ವಯತೆ ಹೊಂದುವುದರ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ದುರ್ಬಲರಾದ ಮಕ್ಕಳ ರಕ್ಷಣೆಗೆ ಸರ್ಕಾರ ಅನೇಕ ಕಾಯಿದೆಗಳು ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಅವುಗಳ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಮಕ್ಕಳ ಸರ್ವಂಗೀಣಾ ಅಭಿವೃದ್ಧಿಗೆ ಮುಂದಾಗಬೇಕು ಎಂದರು. ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳ ಆವರಣದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಟ್ರಾನ್ಸ್ಫಾರ್ಮ್, ವಿದ್ಯುತ್ ತಂತಿಗಳು ಹಾದು ಹೋಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಬೇಕು ಎಂದರು. ಮಕ್ಕಳ ಸುರಕ್ಷತೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದ್ದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಹಾಗೂ ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಪ್ರಕರಣಗಳು ಕಂಡುಬಂದರೆ, ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ವಾಂತಿ ಬೇಧ ಪ್ರಕರಣಗಳು ಕಂಡುಬಂದು ಕಾಲರಾ ರೋಗ ಎಂದು ವರದಿ ಬಂದಿರುತ್ತದೆ. ಸಾರ್ವಜನಿಕರು ಕಾಲರಾ ರೋಗದ ಬಗ್ಗೆ ಮುಂಜಾಗೃತೆ ವಹಿಸಬೇಕು ಎಂದರು. ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಲ್ಲಾ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಊಟ ತಯಾರಿ ಹಾಗೂ ಊಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ್ ಪ್ರಸಾದ್, ಆದಿತ್ಯ, ನಿತಿನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More