Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಅವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಅಜ್ಜರಕಾಡು ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೋಶನಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕ ಮಹಿಳಾ ಯಕ್ಷಗಾನ ರಿ. ಬೆಂಗಳೂರು ಸಂಸ್ಥೆಯ ವತಿಯಿಂದ ‘ಯಕ್ಷಗಾನ ಉತ್ಸವ-2024’ ಕಾರ್ಯಕ್ರಮವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಯಕ್ಷಗಾನ ವೇಷಭೂಷಣ ಹಾಗೂ ಮುಖವರ್ಣಿಕೆ ಕಮ್ಮಟ ಕಾರ್ಯಕ್ರಮವನ್ನು ತುಳುವರೆಂಕುಲು ಕಾರ್ಯದರ್ಶಿ, ಖ್ಯಾತ ಯಕ್ಷಗಾನ ಪ್ರಸಾಧನ ತಜ್ಞರಾದ ಮಟ್ಟಿ ರಾಮಚಂದ್ರ ರಾವ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಸಂಸ್ಥೆಯ ಕಲಾವಿದೆಯರಿಂದ ಯಕ್ಷಗಾನದ ಕಥಾಭಾಗದ ಮೊದಲು ನಡೆಯುವ ರಂಗಕ್ರಿಯೆಯಾದ ಯಕ್ಷಗಾನ ಪೂರ್ವರಂಗ ಪ್ರದರ್ಶನ, ಕುಶಲವ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರಸಂಗ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಹ್ಮಣ್ಯ ನಾವುಡ, ವಿಶ್ವನಾಥ ಶೆಟ್ಟಿ, ವಿನಯ್ ರಾಜೀವ್ ಶೆಟ್ಟಿ, ನರಸಿಂಹ ಆಚಾರ್, ಸಂಪತ್ ಆಚಾರ್ಯ, ಸುಬ್ರಹ್ಮಣ್ಯ ಗಾಣಿಗ ಐರೋಡಿ, ಕಾರ್ತಿಕ್ ಧಾರೇಶ್ವರ್. ಮುಮ್ಮೇಳದಲ್ಲಿ ಕಲಾವಿದೆಯರಾಗಿ ಕೆ. ಗೌರಿ, ಆಶಾ ರಾಘವೇಂದ್ರ, ಅನ್ನಪೂರ್ಣೇಶ್ವರಿ ಕಟೀಲು, ಶ್ವೇತಾ ನವೀನ್, ಲಕ್ಷ್ಮೀ ರಾವ್, ಶಶಿಕಲಾ, ಸುಮಾ ಅನಿಲ್ ಕುಮಾರ್, ಮನಸ್ವಿ, ಚೈತ್ರ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023 – 24ನೇ ಸಾಲಿನ ದ್ವಿತೀಯ  ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ  ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ. ದೇವಾಡಿಗ ಅವರಿಗೆ 1995 – 96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ  15,000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ  ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್‍ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ ಡಾ. ರಾಘವೇಂದ್ರ ಶೆಟ್ಟಿ ವಿದ್ಯಾರ್ಥಿಗೆ ಪ್ರೋತ್ಸಾಹಧನವನ್ನು ವಿತರಿಸಿದರು. ನಾವುಂದ ಸರಕಾರಿ ಕಾಲೇಜಿನ ಪ್ರಾಂಶುಪಾಲ ಗಣೇಶ್ ಎಮ್. ಶುಭ ಹಾರೈಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ನಿರೂಪಿಸಿ ವಂದಿಸಿದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹೆಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸೇತುಬಂಧ/ ಬ್ರೈಂಡ್ಜ್ ಕೋರ್ಸ್‍ ತರಗತಿಗಳನ್ನು ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳಿಗೆ ಕೈಗಾರಿಕೆ, ಉದ್ಯಮ, ವ್ಯಾಪಾರ ಮುಂತಾದವುಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ನೀಡುವುದು ಮತ್ತು ಪ್ರಾಯೋಗಿಕವಾಗಿ ವಾಣಿಜ್ಯ ವಿಷಯಗಳನ್ನು ಅರ್ಥೈಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ಘಟಕದ ಜಂಟಿ ಆಶ್ರಯದಲ್ಲಿ ಕಾರ್ಖಾನೆಗೆ ಭೇಟಿ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ಮ್ಯಾನೇಜರಾದ ದಯಾನಂದ ಗಾಣಿಗ, ಅಕೌಂಟೆAಟ್ ಸತೀಶ್ ಅಡಿಗ ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:  ಶಿಕ್ಷಣದ ಉದ್ದೇಶ ಮನುಷ್ಯನನ್ನು ಸಂಸ್ಕಾರವಂತರನ್ನಾಗಿಸುವುದಾಗಿದೆ. ಪಡೆದ ಶಿಕ್ಷಣದಿಂದ ಉದ್ಯೋಗಗಳಿಸುವುದು ಒಂದು ಗುರಿಯಾದರೆ ಬದುಕಿನ ಉದ್ದೇಶ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಜೀವಿಸುವುದಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯೊಂದಿಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜ ಮತ್ತು ದೇಶಕ್ಕೆ ಕೊಡುಗೆ ನೀಡಬೇಕು ಎಂದು ಖ್ಯಾತವಾಗ್ಮಿ ನಿವೃತ್ತ ಮುಖ್ಯೋಪಾಧ್ಯಾಯರಾದ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿಪೂರ್ವ ಕಾಲೇಜು ಕಲ್ಯಾಣಪುರದಲ್ಲಿ ನಡೆದ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಣದಲ್ಲಿ ಜೀವನ ಮೌಲ್ಯಗಳು ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿ ಜೀವನದಲ್ಲಿ ಕೆಲಸ ಮುಂದೂಡುವ, ಆಲಸ್ಯ, ಕೆಟ್ಟ ಆಕರ್ಷಣೆ ಗೆ ಒಳಗಾಗುವುದನ್ನು ಬಿಟ್ಟು ಉತ್ತಮ ವಿಚಾರದಲ್ಲಿ ಮನವಿಟ್ಟು ಕಾರ್ಯ ಸಾಧಿಸಬೇಕು ಎಂದು ಹೇಳಿದರು. ತ್ರಿಶಾ ಪ. ಪೂ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಹೆಗಡೆ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ಜೋಯೆಲ್ ಮನೋಜ್ ಫೆರ್ನಾಂಡಿಸ್ ಅತಿಥಿಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಿ. ಬೆಂಗಳೂರು ಮತ್ತು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭವು ದಾವಣಗೆರೆಯ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ನಡೆಯಿತು. ಆದಿವಾಸಿ ಸಿರಿ ಪ್ರಶಸ್ತಿಯನ್ನು ಕೊರಗ ಸಮುದಾಯದವರಾದ ಡಾ. ಸಬಿತಾ ಗುಂಡ್ಮಿ , ಡಾ. ದಿನಕರ ಕೆಂಜೂರು  ಮತ್ತು ಡಾ. ಕಲಾವತಿ ಸೂರಾಲು ಅವರಿಗೆ ಪ್ರದಾನಿಸಲಾಯಿತು. 30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭದ ವೇದಿಕೆಯಲ್ಲಿ ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳು ಶ್ರೀ ಕಾಗಿನೆಲೆ ಕನಕ ಗುರು ಪೀಠ ರಾಯಚೂರು, ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ್ ಸಿದ್ದಿ, ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಪಿ. ಹರೀಶ್, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಎಂ. ಮೈತ್ರಿ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಎಕ್ಸಲೆಂಟ್ ಪ್ರೌಢ ಶಾಲೆ ಸುಣ್ಣಾರಿ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕ- ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನಸಮಾನ್ಯರು ತಮ್ಮ ಕೆಲಸಗಳಿಗಾಗಿ ಕಛೇರಿಗೆ ತೆರಳಿದರೆ ಸರಕಾರಿ ನೌಕರರು ದುಡ್ಡಿನ ಮುಖನೋಡಿ ಕೆಲಸ ಮಾಡಿಕೊಡುವ ಸ್ಥಿತಿ ಇದ್ದು, ಉಡುಪಿ ಜಿಲ್ಲೆಯವರು ಸಾರ್ವಜನಿಕವಾಗಿಯೇ ಭ್ರಷ್ಟಾಚಾರವನ್ನು ಒಪ್ಪಿಕೊಂಡುಬಿಟ್ಟಿದ್ದಾರೆ. ಹಣ ನೀಡಿ ವರ್ಗಾವಣೆಯಾಗುವ ಅಧಿಕಾರಿಗಳಿಂದ ಹಾಗೂ ಜವಾಬ್ದಾರಿ ಮರೆತ ಜನಪ್ರತಿನಿಧಿಗಳಿಂದ ಮತ್ತೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅನ್ಯಾಯವಾಗುತ್ತಿದೆ ಎಂದು ತಿಳಿದಿದ್ದರೂ ಮೌನವಹಿಸಬೇಕಾದ ಸ್ಥಿತಿಯಲ್ಲಿ ರೈತರಿದ್ದಾರೆ. ನಾವು ಆತ್ಮವಲೋಕನದ ಕಾಲಘಟ್ಟದಲ್ಲಿದ್ದೇವೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್.ಎನ್. ಶೆಟ್ಟಿ ಸಭಾಭವನದ ಮಿನಿ ಹಾಲ್‌ನಲ್ಲಿ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದೇ ಪಕ್ಷದ ಜನಪ್ರತಿನಿಧಿಯೂ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಿಲ್ಲ. ಜನಪ್ರತಿನಿಧಿಗಳು ಜನರ ಪರವಾಗಿ ನಿಲ್ಲಬೇಕು. ಆದರೆ ಅವರು ಜಾತಿ ರಾಜಕಾರಣ, ಹಣ ಹಾಗೂ ಗುತ್ತಿಗೆದಾರರ ಓಲೈಕೆಗೆ ನಿಂತಿದ್ದಾರೆ ಎಂದು ಆರೋಪಿಸಿದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಇದು ರೈತರ ಸ್ವತ್ತು. ಅದರ ವಸ್ತುಗಳ ಮಾರಾಟ ವಿಚಾರದಲ್ಲಿ 18 ಕೋಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಬಸ್ರೂರಿನಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ – ರಾಕೇಶ್ ೭C, ಪ್ರಣತಿ 8F, ವಿವೇಕ್ ರಾಮರಾಯ್ ಪ್ರಭು 10D, ವಿಘ್ನೇಶ್ ರಾಜೇಶ್ ಪ್ರಭು 10E, ಸಾತ್ವಿಕ್. ಕೆ 8C ಆಯ್ಕೆಯಾಗಿದ್ದಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೆಂಗಳೂರು-ಮಂಗಳೂರು ರೈಲು ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ ಪರಿಣಾಮ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಶನಿವಾರ ಮುಂಜಾನೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ಮಾರ್ಗ ಮಧ್ಯೆ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಶುಕ್ರವಾರದಂದು ಹೊರಟಿದ್ದ ಬೆಂಗಳೂರು-ಕಣ್ಣೂರು (ಕಣ್ಣೂರು ಎಕ್ಸ್ ಪ್ರೆಸ್) ಮತ್ತು ಬೆಂಗಳೂರು-ಮರ್ಡೇಶ್ವರ (ಮುರ್ಡೇಶ್ವರ ಎಕ್ಸ್ ಪ್ರೆಸ್) ರೈಲುಗಳು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ರೈಲು ಇಲಾಖೆ ಟ್ವೀಟ್ ಮಾಡಿದೆ. ಜು.26ರಂದು ದೋಣಿಗಲ್‌-ಕಡಗರವಳ್ಳಿ ನಡುವೆ ಭಾರಿ ಪ್ರಮಾಣದಲ್ಲಿ ಗುಡ್ಡಕುಸಿತದಿಂದ ಮಣ್ಣು ಹಳಿಗೆ ಬಿದ್ದಿತ್ತಲ್ಲದೆ, ಕೆಳಗೆ ಭೂಕುಸಿತದಿಂದ ಪ್ರಪಾತ ಉಂಟಾಗಿತ್ತು. ಸ್ಥಳಕ್ಕೆ ಆಗಮಿಸಿದ ರೈಲ್ವೆ ತಾಂತ್ರಿಕ ವರ್ಗ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಾರಿ ಮಳೆಯ ನಡುವೆಯೂ ಹಗಲು ರಾತ್ರಿ ನಿರಂತರ ಕಾರ್ಯಾಚರಣೆ ನಡೆಸಿ ಕೊನೆಗೂ ಗುರುವಾರ ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಹಳಿ ಹಾಗೂ ತಡೆಗೋಡೆ ದುರಸ್ತಿ ಪೂರ್ಣಗೊಂಡು ಭಾನುವಾರದಿಂದ ಎರಡು ದಿನಗಳ ಕಾಲ ಪ್ರಾಯೋಗಿಕವಾಗಿ ಗೂಡ್ಸ್‌…

Read More