Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಸಂಸ್ಕೃತಿಯು ಊರಿಗೊಂದು ಪ್ರಾತಿನಿದ್ಯವನ್ನು ನೀಡುತ್ತದೆ. ರಾಜ್ಯದ ವಿವಿಧ ಕಲಾಪ್ರಕಾರಗಳನ್ನು ಆಸ್ವಾದಿಸುವ ಜೊತೆಗೆ ಕಲಾವಿದರಿಂದ ಪ್ರೇರಣೆಗೊಂಡು ನಮ್ಮಲ್ಲಿಯ ಪ್ರತಿಭೆಗಳೂ ರಾಜ್ಯ ಮಟ್ಟಕ್ಕೆ ಹೋಗುವಂತಾಗಬೇಕು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಾವಣ್ಯ ರಿ. ಬೈಂದೂರು, ಸುರಭಿ ರಿ. ಬೈಂದೂರು ಇವರ ಸಹಯೋಗದೊಂದಿಗೆ ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮೊಗೇರಿ ಗೋಪಾಲಕೃಷ್ಣ ಅಡಿಗ ರಂಗಮಂದಿರದಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೈಂದೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಿದೆ. ನವೆಂಬರ್ 1ರಂದು ಬೈಂದೂರಿನಲ್ಲಿ ಕನ್ನಡ ಉತ್ಸವ ಜರುಗಬೇಕು ಇದಕ್ಕೂ ಇಲಾಖೆಯ ಸಹಕಾರ ಇರಲಿ ಎಂದರು. ಬೈಂದೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ ಪಿ. ನಾಯ್ಕ್, ಉಪಪ್ರಾಂಶುಪಾಲರಾದ ಪದ್ಮನಾಭ ಪಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ನರಸಿಂಹ ನಾಯಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜ.03: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್ 03, ಆಸರೆ ಬೀಚ್ 02, ಮಲ್ಪೆ ಬೀಚ್ 04, ಸೈಂಟ್ ಮೇರೀಸ್ ಐಲ್ಯಾಂಡ್-03, ಕಾಪು ಬೀಚ್ 02, ಪಡುಬಿದ್ರಿ ಮುಖ್ಯ ಬೀಚ್ 02 ಹಾಗೂ ಕುಂದಾಪುರ ಕೋಡಿ ಬೀಚ್-02 ಗಳಲ್ಲಿ ಒಟ್ಟು 20 ಜೀವ ರಕ್ಷಕ ಸಿಬ್ಬಂದಿಗಳಿಗೆ ಇಲಾಖೆಯ ವತಿಯಿಂದ ಜೀವ ರಕ್ಷಕ ತರಬೇತಿ ನೀಡಿ ಮುಂದಿನ ದಿನಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಆಯ್ಕೆ ಪ್ರಕ್ರಿಯೆಯು ಜನವರಿ 8 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ಒಳಗೆ ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳ ಇಲ್ಲಿ ನಡೆಯಲಿದ್ದು, 18 ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾದೊಂದಿಗೆ ಹಾಜರಾಗಿ ನೊಂದಾಯಿಸಿಕೊAಡು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವರ ಸನ್ನಿಧಿಯಲ್ಲಿ 21 ಸಾವಿರ ತೆಂಗಿನಕಾಯಿ ಮೂಡು ಗಣಪತಿ ಸೇವೆ ನಡೆಯಿತು. ಬ್ರಹ್ಮಾವರದ ನಿವಾಸಿ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿರುವ ಡಾ.ಮೇಜರ್ ವಂದನ ಬಿರ್ತಿ ಮತ್ತು ಶ್ರೀ ಡಾ. ಮೇಜರ್ ಪ್ರವರ್ಧನ ಬಿರ್ತಿ ಅವರು 21 ಸಾವಿರ ತೆಂಗಿನಕಾಯಿ ಮೂಡು ಗಣಪತಿ ಸೇವೆ ಸಲ್ಲಿಸಿದರು. ದೇವಳದ ಆಡಳಿತ ಧರ್ಮದರ್ಶಿ ಕೆ. ರಮಣ ಉಪಾಧ್ಯಾಯ, ವಿಶ್ರಾಂತ ಧರ್ಮದರ್ಶಿ, ಸೂರ್ಯನಾರಾಯಣ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ಕೆ. ವಿಠಲ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಶ್ರೀಶ ಉಪಾಧ್ಯಾಯ, ಮ್ಯಾನೇಜರ್ ನಟೇಶ್ ಕಾರಂತ್, ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು, ಅರ್ಚಕರು ಉಪಸ್ಥಿತರಿದ್ದರು. ರವಿರಾಜ್ ಉಪಾಧ್ಯಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀಧರ್ ಉಪಾಧ್ಯಾಯ ಅವರು ವಿಶೇಷ ಪೂಜಾ ಕೈಂಕರ್ಯದಲ್ಲಿ ಸಹಕರಿಸಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕ್ನ ನಿವೃತ್ತ ಮ್ಯಾನೇಜರ್ ಕೋಟೇಶ್ವರದ ಕೆ. ಪಾಂಡುರಂಗ ಭಟ್ (81) ಅವರು ಮಂಗಳವಾರ ನಿಧನರಾಗಿದ್ದಾರೆ. ಕುಂಭಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದ ಪಾಂಡುರಂಗ ಭಟ್‌ ಅವರು ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ಸರಕಾರಿ ಶಾಲೆಗಳಿಗೂ ನೆರವು ನೀಡಿದ್ದರು. ಕೋಟೇಶ್ವರದ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನ, ಶ್ರೀರಾಮ ಸೇವಾ ಸಂಘ ಮೊದಲಾದ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಡ್ಕಲ್ ಇದರ ವಾರ್ಷಿಕೋತ್ಸವ ಸಮಾರಂಭ ́ಜಡ್ಕಲ್ ಸಂಭ್ರಮʼ ಇತ್ತೀಚಿಗೆ ಜರುಗಿತು. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮೃದ್ಧ ಬೈಂದೂರು ಯೋಜನೆಯ ಬಗ್ಗೆ ಮಾತನಾಡಿದರು ಮತ್ತು ಈ ಯೋಜನೆಯಡಿಯಲ್ಲಿ ಜಡ್ಕಲ್ ಶಾಲೆಯಲ್ಲಿ ಈಗಾಗಲೇ ಕಂಪ್ಯೂಟರ್ ತರಬೇತಿ ಕೇಂದ್ರ, ಗ್ರಂಥಾಲಯ ಹಾಗೂ ಆಟದ ಸಾಮಗ್ರಿಗಳನ್ನು ವಿತರಿಸಲಾಗಿದೆ. ಸ್ವಯಂಸ್ಫೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು ಯೋಜನೆಯ ಮೊದಲ ಕಾರ್ಯಕ್ರಮವನ್ನು ಜಡ್ಕಲ್, ಬಿಜೂರು ಮತ್ತು ಕಾಲ್ತೊಡು ಶಾಲೆಗಳಲ್ಲಿ ಉದ್ಘಾಟಿಸಿದನ್ನು ಮೆಲುಕು ಹಾಕಿದರು. ದಾನಿಗಳ ಮತ್ತು ಹಳೇ ವಿದ್ಯಾರ್ಥಿಗಳ ಸಹಾಯದಿಂದ ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ನಾಗರಾಜ್ ಶೆಟ್ಟಿ ಜಡ್ಕಲ್ ಸ್ವಸ್ಥಿವಾಚನಗೈದರು. ಜಡ್ಕಲ್ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಶಿವರಾಮ್ ಬೆಳಾರಿ, ಜಡ್ಕಲ್ ಚರ್ಚ್ ಧರ್ಮಗುರು ರೆ.ಫಾ. ಥೋಮಸ್ ವಾರೆಕಾಟಿಲ್, ಉದ್ಯಮಿ ಉದಯ ಕುಮಾರ್ ಶೆಟ್ಟಿ ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ನಾಯ್ಕ್ ಸದಸ್ಯರು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಪ್ರಸಾದ ರೂಪದಲ್ಲಿ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಜನವರಿ 1 ರಿಂದ 15ರವರೆಗೆ ದೇಶದ ಗ್ರಾಮ ಗ್ರಾಮಗಳಿಗೂ ತಲುಪಿಸುವ ಸಂಕಲ್ಪ ಹೊಂದಲಾಗಿದೆ. ಈ ಸಂಕಲ್ಪದಂತೆ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಶಿರೂರಿನ ಆಲಂದೂರಿನಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ, ಆಲಂದೂರು ಭಾಗದ ಮನೆ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಇದರ ಗೋಳಿಹೊಳೆ ಶಾಖೆಯ ವಾರ್ಷಿಕೋತ್ಸವ ಹಾಗೂ ಸೌಹಾರ್ದ ಸಹಕಾರಿ ದಿನಾಚರಣೆಯ ಅಂಗವಾಗಿ ಸೋಮವಾರ ಗೋಳಿಹೊಳೆಯ ಮಹಿಷಮರ್ಧಿನಿ ಸಭಾಭವನದಲ್ಲಿ ಗ್ರಾಹಕರ ಸಭೆ ಹಾಗೂ ಸಹಕಾರಿ ಸದಸ್ಯರು – ಸದಸ್ಯರ ಮಕ್ಕಳಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ನಿರ್ದೇಶಕ ಎಸ್. ಕೆ. ಮಂಜುನಾಥ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸರ್ಕಾರದ ಯಾವುದೇ ಅನುದಾನ ಮತ್ತು ಪ್ರೋತ್ಸಾಹವಿಲ್ಲದೆ ಸಂಘದ ಸದಸ್ಯರಿಂದಲೇ ಸೌಹಾರ್ದ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸಿವೆ. ಸಹಕಾರಿ ರಂಗದಲ್ಲಿ ವಿಶ್ವಾಸಾರ್ಹತೆಯನ್ನು ಕಾಯ್ದುಕೊಂಡು ಬಂದಿರುವುದು ಶ್ಲಾಘನಾರ್ಹ. ಸೌಹಾರ್ದ ಸೊಸೈಟಿಗಳು ಸರ್ಕಾರ ವಿಧಿಸಿದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ರಾಜಕೀಯ ಉದ್ದೇಶದಿಂದಾಗಿ ಒಳ್ಳೆಯ ಸಹಕಾರಿ ಸಂಸ್ಥೆಗಳು ಮೂಲೆ ಗುಂಪಾಗಿರುವುದು ವಿಷಾದನೀಯ ಎಂದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಶಾಖಾ ವ್ಯಾಪ್ತಿಯ ಕೊರಗ ಸಮುದಾಯದ ಮಕ್ಕಳಿಗೆ ಪ್ರತಿವರ್ಷದಂತೆ ಸಮವಸ್ತ್ರ ವಿತರಿಸಲಾಯಿತು. ಸಂಘದ ಅದೃಷ್ಟಶಾಲಿ ಸದಸ್ಯರನ್ನು ಆಯ್ಕೆ ಮಾಡಿ ವಿಶೇಷ ಬಹುಮಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಕಳವಾಡಿ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಮತ್ತು ಕಾರ್ಯದರ್ಶಿಯಾಗಿ ಪೂರ್ಣಚಂದ್ರ ಆಯ್ಕೆಯಾಗಿದ್ದಾರೆ. ನೂತನ ಸಮಿತಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ಕಳವಾಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಕಳವಾಡಿಯ ಎಂಪಿ.ಕೃಷ್ಣಯ್ಯ ಶೇರುಗಾರ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಯುವಕನೋರ್ವ ಜರ್ಮನಿಯ ಯುವತಿಯನ್ನು ವರಿಸಿದ್ದು, ಹಿಂದೂ ಸಂಪ್ರದಾಯದಂತೆ ಯುವಕನ ಹುಟ್ಟೂರಿನಲ್ಲಿಯೇ ನವಜೋಡಿ ಹಸೆಮಣೆ ಏರಿದ್ದಾರೆ. ಆಜ್ರಿ ಗ್ರಾಮದ ಕರಿಮನೆ ಸುವರ್ಣ ಹಾಗೂ ಪಂಜು ಪೂಜಾರಿ ದಂಪತಿಯ ಪುತ್ರನಾದ ಚಂದನ್ ಹಾಗೂ ಜರ್ಮನಿಯ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ತಾಲೂಕಿನ ಚಿತ್ತೇರಿ ಚೌಕಳಿಮಕ್ಕಿ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಎರಡು ಕಡೆಯ ಬಂಧುಗಳು ಉಪಸ್ಥಿತರಿದ್ದು ನವಜೋಡಿಗಳಿಗೆ ಹಾರೈಸಿದ್ದಾರೆ. ಚಂದನ್ ಜರ್ಮನಿಯ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರೊಂದಿಗೆ ಪ್ರೇಮಾಂಕುರವಾಗಿತ್ತು. ಬಳಿಕ ಎರಡೂ ಕುಟುಂಬಿಕರನ್ನು ಒಪ್ಪಿಸಿ ವಿವಾಹವಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಶ್ವಕರ್ಮರು ಸ್ಥಾನಕ್ಕಾಗಿ ಕೆಲಸಮಾಡದೇ ಆತ್ಮ ತೃಪ್ತಿಗಾಗಿ ಕೆಲಸಮಾಡುವವರಾಗಿದ್ದಾರೆ. ರಾಜಕೀಯವಾಗಿ ನಮಗೆ ಯಾವುದೇ ಬೆಂಬಲವಿಲ್ಲದಿದ್ದರೂ ಸರ್ಕಾರವನ್ನು ಅವಲಂಬಿಸದೇ ಸ್ವಂತ ಪ್ರತಿಭೆ, ಬಲ ಹಾಗೂ ಪರಿಶ್ರಮದಿಂದ ಬೆಳೆದು ಸರಕಾರ – ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು ಎಂದು ಕಟಪಾಡಿ ಪಡುಕುತ್ಯಾರು ಶ್ರೀಮತ್ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠಾಧಿಪತಿ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು. ಅವರು ಬೈಂದೂರು ರೋಟರಿ ಭವನದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಬೈಂದೂರು ಇದರ 14ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ, ಆಶೀರ್ವಚಿಸಿ ಮಾತನಾಡಿ ಶಿಕ್ಷಣದ ಜೊತೆಗೆ ದೈವದತ್ತವಾಗಿ ಬಂದಿರುವ ಪಂಚ ಕುಲಕಸುಬನ್ನು ಸರಿಯಾಗಿ ಬಳಸಿ ಬೆಳೆಸಿ ನಮ್ಮ ಮುಂದಿನ ಜನಾಂಗಕ್ಕೆ ದೊಡ್ಡ ಆಸ್ತಿಯನ್ನು ನೀಡುವಂತಾಗಬೇಕು ಎಂದರು. ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರ ಆಚಾರ್ಯ ಮಾತನಾಡಿ, ವಿಶ್ವಕರ್ಮ ಜನಾಂಗಕ್ಕೆ ನೈಪುಣ್ಯತೆಯು ಪರಂಪರಾಗತವಾಗಿ, ರಕ್ತಗತವಾಗಿ ಬಂದಿರುವ ಕಲೆಯಾಗಿದೆ. ಹಲವಾರು ವಿಸ್ಮಯಗಳನ್ನು ಜಗತ್ತಿಗೆ ನೀಡಿರುವ ವಿಶ್ವಕರ್ಮರು ಬೇಲೂರು, ಹಳೆಬೀಡು, ಶ್ರವಣಬೆಳಗೂಳ, ಹಂಪಿ, ಅಜಂತ, ಎಲ್ಲೊರಾ ಮುಂತಾದ…

Read More