Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ́ಕುಂದಾಪ್ರ ಕನ್ನಡ ಹಬ್ಬʼವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಹೇಳಿದರು. ಅವರು ಬೆಂಗಳೂರಿನ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡದರು. ಆ.17ರ ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ. ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಪಿ. ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಕುಂದಾಪುರ, ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರೆವೇರಿತು. . ಸಂಸ್ಥೆಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟ ನಂತರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ವಹಿಸಿದ್ದರು . ಪ್ರಕಾಶ್‌ಚಂದ್ರ ಶೆಟ್ಟಿ ಚಿತ್ತೂರು, ಮಾಜಿ ಅಧ್ಯಕ್ಷರು ರೋಟರಿ ಕ್ಲಬ್ ಕುಂದಾಪುರ ಅವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ರೋಟರಿ ಕ್ಲಬ್‌ ಬೆಳೆದು ಬಂದ ಹಾದಿ ಹಾಗೂ ಅದರ ಧ್ಯೇಯೋದ್ದೇಶಗಳನ್ನು ತಿಳಿಯಪಡಿಸಿದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಲಿಯಾಕತ್ ಅಲಿ, ಅಧ್ಯಕ್ಷರು ರೋಟರಿ ಕ್ಲಬ್ ಕುಂದಾಪುರ ಅವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ’ ನಶಾಮುಕ್ತ ಭಾರತ ಅಭಿಯಾನ ’ 5ನೇ ವರ್ಷದ ಆಚರಣೆಯ ಪ್ರಯುಕ್ತವಾಗಿ ಡ್ರಗ್ಸ್ ವಿರುದ್ಧ ಸಾಮೂಹಿಕ ಪ್ರತಿಜ್ಞಾವಿಧಿ ಕಾರ್ಯಕ್ರಮವು ಇತ್ತೀಚಿಗೆ ಜರುಗಿತು. ಮಾದಕ ವ್ಯಸನವು ವ್ಯಸನಿ, ವ್ಯಕ್ತಿ, ಕುಟುಂಬ ಮತ್ತು ಸಮಾಜದ ಮೇಲೆ ಯಾವ ರೀತಿಯ ವಿನಾಶಕಾರಿ ಪರಿಣಾಮ ಬೀರಿದೆ ಎಂಬ ಅಂಶಗಳನ್ನು ತಿಳಿಸಿ, ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಹಿಂದಿ ಭಾಷಾ ವಿಭಾಗ ಮುಖ್ಯಸ್ಥರಾದ ವಿನಾಯಕ ಜೋಗ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ. ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 04 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004, 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲ ಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರ  ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸಾಲ – ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಶಾಸಕರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಬೈಂದೂರು ಆಡಳಿತ ಸೌಧದ ಎದುರು ಸೋಮವಾರ ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದಾರೆ. ಈ ವೇಳೆ ಅವರು ಮಾತನಾಡಿ, ಜನರು ಕರೆದಲ್ಲಿಗೆ ತೆರಳಿ ಅಹವಾಲುಗಳನ್ನು ಸ್ವೀಕರಿಸುತ್ತೇನೆ. ಅವರ ಅನುಕೂಲಕ್ಕಾಗಿಯೇ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಛೇರಿ ತೆರೆದು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ಅಧಿಕಾರಿಗಳಿಗೂ ಕೂಡ ಜನರ ಸಮಸ್ಯೆಗೆ ಸ್ಪಂದಿಸುವ ಜವಾಬ್ದಾರಿ ಇದ್ದು, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಾನು ಕರೆದಲ್ಲಿಗೆ ಬರುವುದು ಅವರ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಧಿಕಾರದಲ್ಲಿ ಇರುವುದನ್ನು ಬಳಸಿಕೊಂಡು ಸ್ಥಳೀಯ ಕಾಂಗ್ರೆಸ್ ನಾಯಕರು ಅಧಿಕಾರಿಗಳ ದಾರಿ ತಪ್ಪಿಸುತ್ತಿದ್ದು, ಶಾಸಕರು ಆಯೋಜಿಸುವ ಸಭೆಗಳಿಗೆ ತೆರಳದಂತೆ ಪರೋಕ್ಷವಾಗಿ ಒತ್ತಡ ಹಾಕುತ್ತಲೇ ಬಂದಿದ್ದಾರೆ ಎಂದು ಆರೋಪಿಸಿದರು. ಹಿಂದಿನ ಸರಕಾರದ ಅವಧಿಯಲ್ಲಿ ಬೈಂದೂರು ಕ್ಷೇತ್ರಕ್ಕೆ ರೂ. 3 ಸಾವಿರ ಕೋಟಿ ಅನುದಾನ ಬಂದಿದ್ದು, ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪಾಶ್ಚ್ಯಾತ್ಯ ಸಂಸ್ಕೃತಿಯಿಂದ ಜಾನಪದ ನಶಿಸಿ ಹೋಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಜಾನಪದ ಯಾವುದೇ ಕಾರಣಕ್ಕೂ ಮರೆಯಾಗದೇ ಕಿವಿಯಿಂದ ಕಿವಿಗಳಿಗೆ, ಬಾಯಿಂದ ಬಾಯಿಗೆ ಪಸರಿಸುವ ಮೂಲಕ ನಮ್ಮ ಹೆಜ್ಜೆ ಹೆಜ್ಜೆಯೊಂದಿಗೆ ಸದಾ ಇರುತ್ತದೆ. ಜಾನಪದದ ಸಂಪತ್ತು, ಸಂಸ್ಕೃತಿ, ಪರಂಪರೆ ಮತ್ತು ಎಲ್ಲಾ ಆಯಾಮಗಳನ್ನು ಎಲ್ಲರಿಗೂ ತಿಳಿಯಪಡಿಸಲು ರಾಜ್ಯಾದ್ಯಂತ ವಿಕಸಿತ ಜಾನಪದ ಎಂಬ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಕನ್ನಡ ಜಾನಪದ ಪರಿಷತ್ತು ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಹೇಳಿದರು. ಉಪ್ಪುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಕನ್ನಡ ಜನಪದ ಪರಿಷತ್ತು ಉಪ್ಪುಂದ ಘಟಕದ ಪದಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವಜ ಮಹಿಳೆಯರಿಂದ ಸಂದರ್ಭೋಚಿತವಾಗಿ ಗದ್ಯ, ಪದ್ಯಗಳ ಮೂಲಕ ಆರಂಭಗೊಂಡ ಮೌಕಿಕ ಪರಂಪರೆಯಾಗಿ ಬೆಳೆದು ಬಂದ ಜಾನಪದಕ್ಕೆ ಯಾವುದೇ ಚೌಕಟ್ಟಿಲ್ಲ. ಜನಪದ ಮೂಲೆಗುಂಪಾದರೆ ಅಥವಾ ನಶಿಸಿ ಹೋದರೆ ಇತಿಹಾಸ, ಪರಂಪರೆ ಬರಡಾದಂತೆ. ತೊಟ್ಟಿಲಿನಿಂದ ಚಟ್ಟದ ವರೆಗೆ ಜೀವನದಲ್ಲಿ ಜನಪದ ಹಾಸುಹೊಕ್ಕಾಗಿವೆ. ಜಾನಪದಕ್ಕೆ ಜಾತಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಬೈಂದೂರು ಜನತೆಯ ದಶಕಗಳ ಹೋರಾಟ ಫಲವಾಗಿದ್ದು, ಇದರ ಹಿಂದೆ ಹಲವರ ಶ್ರಮವಿದೆ. ಯಾರ ವೈಯಕ್ತಿಕ ಹಿತ್ತಾಸಕ್ತಿ ಇದರಲ್ಲಿಲ್ಲ. ಬೈಂದೂರು ತಾಲೂಕಾಗಿ ಘೋಷಣೆಗೊಂಡಾಗ ತಾಲೂಕಿನಲ್ಲಿ ಹೆಚ್ಚಿನ ಪ್ರಕರಣಗಳಿರುವುದನ್ನು ಗಮನಿಸಿ ತಾಲೂಕಿಗೊಂದು ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚೆ ಆರಂಭಗೊಂಡು, ಅಂತಿಮವಾಗಿ ನ್ಯಾಯಾಲಯ ಉದ್ಘಾಟನೆಗೊಂಡಿತ್ತು. ಈಗ ಬೈಂದೂರು ನ್ಯಾಯಾಲಯದಲ್ಲಿ ಮೂರು ಸಾವಿರಕ್ಕಿಂತಲೂ ಹೆಚ್ಚಿನ ವಿವಿಧ ಪ್ರಕರಣಗಳಿದೆ. ಬೈಂದೂರಿಗೆ ಇನ್ನೂ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ಅವಶ್ಯಕತೆ ಇದೆ ಎಂದು ಬೈಂರೂರು ತಾಲೂಕು ಬಾರ್ ಅಸೋಸಿಯೇಶನ್ ಹೇಳಿದೆ. ಕುಂದಾಪುರದ ವಕೀಲರಾದ ಕೆ. ಸಿ. ಶೆಟ್ಟಿ ಇವರು ತಮ್ಮ ದೂರಿನಲ್ಲಿ ಹೇಳಿಕೊಂಡಂತೆ ಬೈಂದೂರು ನ್ಯಾಯಾಲಯದ ಸ್ಥಿತಿ ಇರುವುದಿಲ್ಲ. ಬೈಂದೂರಿನಲ್ಲಿ ನ್ಯಾಯಾಲಯ ಪ್ರಾರಂಭಿಸುವ ಮೊದಲು ಕರ್ನಾಟಕದ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಪಂಚಾಯತ್ ಕಟ್ಟಡವನ್ನು ನ್ಯಾಯಾಲಯದ ಕಾರ್ಯಕಲಾಪಗಳಿಗೆ ಅನುಕೂಲವಾಗುವಂತೆ ಮಾರ್ಪಡಿಸಿ ಪ್ರಾರಂಭಿಸಲಾಗಿತ್ತು. ಬೈಂದೂರು ನ್ಯಾಯಾಲಯವನ್ನು ನಡೆಸಲು ಯಾವುದೇ ಪ್ರಾಥಮಿಕ ಅವಶ್ಯಕತೆಗಳ ಕೊರತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಅವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಅಜ್ಜರಕಾಡು ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೋಶನಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕ ಮಹಿಳಾ ಯಕ್ಷಗಾನ ರಿ. ಬೆಂಗಳೂರು ಸಂಸ್ಥೆಯ ವತಿಯಿಂದ ‘ಯಕ್ಷಗಾನ ಉತ್ಸವ-2024’ ಕಾರ್ಯಕ್ರಮವು ಬೆಂಗಳೂರಿನ ನಯನ ಸಭಾಂಗಣದಲ್ಲಿ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಯಕ್ಷಗಾನ ವೇಷಭೂಷಣ ಹಾಗೂ ಮುಖವರ್ಣಿಕೆ ಕಮ್ಮಟ ಕಾರ್ಯಕ್ರಮವನ್ನು ತುಳುವರೆಂಕುಲು ಕಾರ್ಯದರ್ಶಿ, ಖ್ಯಾತ ಯಕ್ಷಗಾನ ಪ್ರಸಾಧನ ತಜ್ಞರಾದ ಮಟ್ಟಿ ರಾಮಚಂದ್ರ ರಾವ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಸಂಸ್ಥೆಯ ಕಲಾವಿದೆಯರಿಂದ ಯಕ್ಷಗಾನದ ಕಥಾಭಾಗದ ಮೊದಲು ನಡೆಯುವ ರಂಗಕ್ರಿಯೆಯಾದ ಯಕ್ಷಗಾನ ಪೂರ್ವರಂಗ ಪ್ರದರ್ಶನ, ಕುಶಲವ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರಸಂಗ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸುಬ್ರಹ್ಮಣ್ಯ ನಾವುಡ, ವಿಶ್ವನಾಥ ಶೆಟ್ಟಿ, ವಿನಯ್ ರಾಜೀವ್ ಶೆಟ್ಟಿ, ನರಸಿಂಹ ಆಚಾರ್, ಸಂಪತ್ ಆಚಾರ್ಯ, ಸುಬ್ರಹ್ಮಣ್ಯ ಗಾಣಿಗ ಐರೋಡಿ, ಕಾರ್ತಿಕ್ ಧಾರೇಶ್ವರ್. ಮುಮ್ಮೇಳದಲ್ಲಿ ಕಲಾವಿದೆಯರಾಗಿ ಕೆ. ಗೌರಿ, ಆಶಾ ರಾಘವೇಂದ್ರ, ಅನ್ನಪೂರ್ಣೇಶ್ವರಿ ಕಟೀಲು, ಶ್ವೇತಾ ನವೀನ್, ಲಕ್ಷ್ಮೀ ರಾವ್, ಶಶಿಕಲಾ, ಸುಮಾ ಅನಿಲ್ ಕುಮಾರ್, ಮನಸ್ವಿ, ಚೈತ್ರ ಕೋಟ, ಚೈತ್ರ ಭಟ್, ದೀಕ್ಷಾ ಭಟ್, ಸೌಜನ್ಯ…

Read More