ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕನ್ನಡ ಶಾಲೆ ಉಳಿವಿಗಾಗಿ ಮತ್ತು ಪ್ರೋತ್ಸಾಹಕ್ಕಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ‘ನಾ ಕಂಡಂತೆ ಪೊಲೀಸ್’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಕುಂದಾಪುರ ಕಲಾಮಂದಿರದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಅವರು, ಪೊಲೀಸರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಭಾವನೆ ಮೂಡಿಸುವ ಕೆಲಸ ವಿದ್ಯಾರ್ಥಿ ದಿಸೆಯಿಂದಲೇ ಆದರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ‘ನಾ ಕಂಡಂತೆ ಪೊಲೀಸ್’ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಿರುವುದು ಅರ್ಥಪೂರ್ಣ ಎಂದು ಹೇಳಿದರು. ಪೊಲೀಸರ ಬಗ್ಗೆ ವ್ಯಕ್ತವಾಗುವ ಅಭಿವ್ಯಕ್ತಿ ಮುಕ್ತವಾಗಿರಲಿ. ವಿದ್ಯಾರ್ಥಿಗಳ ಕಂಡ ಹಾಗೆ ಪೊಲೀಸರ ಬಗ್ಗೆ ಬರೆಯಿರಿ. ಅದರಲ್ಲಿ ವಿಷಯಗಳು ನಮಗೆ ಅಗತ್ಯವಾಗುತ್ತದೆ. ತಿದ್ಧಿಕೊಳ್ಳಲು, ಬದಲಾವಣೆ ತಂದುಕೊಳ್ಳಲು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿ ನಾಯಕ ಕಾರ್ತಿಕ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಿಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಪ್ರಾಯೋಜಿಸಿದ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಮಹಾದೇವ .ಎಮ್. ಬಿಲ್ಲವ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅತ್ತ್ಯುತ್ತಮ ವಿದ್ಯಾರ್ಥಿ ಪುರಸ್ಕಾರ, ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಸಾಂಸ್ಕೃತಿಕ ಚಟುವಟಿಕೆ ನಡೆಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ (ಉಡುಪಿ ವಲಯ) ಪುರುಷರ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದ ಸಮಾರೋಪ ಸಮಾರಂಭ ಗುರುವಾರ ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಬೈಂದೂರಿನ ಜನತೆ ಕಬಡ್ಡಿ ಕ್ರೀಡೆಗೆ ತುಂಬಾ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಲ್ಲದೆ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ. ಮಕ್ಕಳಲ್ಲಿ ಆತ್ಮ ವಿಶ್ವಾಸವನ್ನು ಬೆಳಸಲು ಕ್ರೀಡೆ ಅತ್ಯವಶ್ಯಕ ಎಂದು ತಿಳಿಸಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀಮುತ್ತಯ್ಯ ಪೂಜಾರಿ ಅವರು ಮಾತನಾಡಿ ತಾವು ಪದವಿ ಹಂತದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಂದರ್ಭ ಹಾಗೂ 30 ವರ್ಷಗಳ ಹಿಂದೆ ಬೈಂದೂರಿನ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಿದ ಸಂದರ್ಭವನ್ನು ನೆನೆಸಿಕೊಂಡರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಮಾತನಾಡಿ ಈ ಒಂದು ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲು ಸಹಕರಿಸಿದ ಎಲ್ಲರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಅಗ್ನಿ ಆಕಸ್ಮಿಕ ನಡೆದ ಸ್ಥಳವನ್ನು ವೀಕ್ಷಿಸಿದ ಸಚಿವರು, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಅಗ್ನಿ ದುರಂತದಿಂದ ಸುಮಾರು 13 ರಿಂದ 15 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15 ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಸ್ಥಳದಲ್ಲಿದ್ದ ಮೀನುಗಾರರು ಹಾಗೂ ಬೋಟ್ ಕಳೆದುಕೊಂಡ ಮಾಲೀಕರಿಗೆ ಸ್ವಾಂತನ ಹೇಳಿದರು. 9 ಬೋಟ್’ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು ಎಂದರು. ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ ಪೂಜಾರಿ ತಮಿಳುನಾಡು ರಾಜ್ಯದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಗಿದ್ದಾಳೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ ಶಿಕ್ಷಣ ವಿಭಾಗ) ಚಾಮರಾಜನಗರದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿಜೇತಳಾಗಿ ಛಾಯಾ ಚಿನ್ನದ ಪದಕ ಪಡೆದಿದ್ದಳು. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರುಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್ಕೆಪಿಎ ದ.ಕ -ಉಡುಪಿ ಜಿಲ್ಲೆ ಕುಂದಾಪುರ – ಬೈಂದೂರು ವಲಯದ ವತಿಯಿಂದ ನ15 ಬುಧವಾರ ಮಕ್ಕಳದಿನಾಚರಣೆ ಅಂಗವಾಗಿ ಶ್ರೀ ಕೆ.ಎಸ್.ಎಸ್.ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ವಿಧ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ಶಾಲಾ ಚಿತ್ರಕಲಾ ಶಿಕ್ಷಕರಾದ ರಾಜಶೇಖರ್ ಎಮ್.ತಾಳಿಕೋಟೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಕೆಪಿಎ ಕುಂದಾಪುರ – ಬೈಂದೂರು ವಲಯದ ಅಧ್ಯಕ್ಷರಾದ ದಿವಾಕರ ಶೆಟ್ಟಿ ಉಪ್ಪುಂದ ವಹಿಸಿದ್ದರು. ಈ ಸಂಧರ್ಭ ಶ್ರೀ.ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಡಾ. ಕಿಶೋರ್ ಶೆಟ್ಟಿ, ಎಸ್ಕೆಪಿಎ ಕುಂದಾಪುರ, ಬೈಂದೂರು ಇದರ ನಿಕಟಪೂರ್ವ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಉಪಾಧ್ಯಕ್ಷರಾದ ಚಂದ್ರಕಾಂತ್, ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ, ಕಾರ್ಯಕ್ರಮದ ಸಂಯೋಜಕರು ನಮ್ಮ ವಲಯದ ಸದಸ್ಯರುಗಳಾದ ರಘುರಾಮ್ ಸಿ.ಜೆ, ವಿಶ್ವನಾಥ್ ಸುಮುಖ, ಶಾಲಾ ಶಿಕ್ಷಕ ವೃಂದದವರು,ವಲಯದ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿಧ್ಯಾರ್ಥಿಗಳು ಪ್ರಾರ್ಥಿಸಿದರು. ದಿವಾಕರ್ ಶೆಟ್ಟಿ ಸ್ವಾಗತಿಸಿದರು ಹಾಗೂ ಚಂದ್ರಕಾಂತ್ ವಂದಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಅವರೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೋಮವಾರ ಗಂಗೊಳ್ಳಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಹಾನಿಯಾದ ಬೋಟುಗಳ ಮಾಲಿಕರಿಗೆ ಪರಿಹಾರ ಒದಗಿಸಿಕೊಡುವಂತೆ ಮನವಿ ಮಾಡಿದರು. ಗಂಗೊಳ್ಳಿ ದೋಣಿ ದುರಂತದಲ್ಲಿ 8 ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿ, 2 ಡಿಂಗಿ ಹಾಗೂ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈ ಅವಘಡದಿಂದ ಮೀನುಗಾರರು ಆಘಾತಗೊಂಡಿದ್ದಾರೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ದೋಣಿಗಳಿಗೆ ರೂ.10 ಕೋಟಿ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದ ಗಡಿ ಭದ್ರತಾ ಪಡೆಗೆ ಸೇರ್ಪಡೆಗೊಂಡು, ಪಂಜಾಬ್ನ ಬಿಎಸ್ಎಫ್ ಶಿಬಿರದಲ್ಲಿ 11 ತಿಂಗಳ ಕಾಲ ತರಬೇತಿ ಮುಗಿಸಿ, ದೇಶದ ಗಡಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡು ಮೊದಲ ಬಾರಿಗೆ ಊರಿಗೆ ಆಗಮಿಸಿದ ಹೆಮ್ಮಾಡಿ ಸುನೀತಾ ಪೂಜಾರಿ ಅವರಿಗೆ ಊರವರ ಪರವಾಗಿ ಹೆಮ್ಮಾಡಿ ರಿಕ್ಷಾ ನಿಲ್ದಾಣದ ಬಳಿ ಆಯೋಜಿಸಲಾದ ಹುಟ್ಟೂರ ಸಮ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಗೃಹ ರಕ್ಷಕ ದಳದ ಜಿಲ್ಲಾ ಸೆಕೆಂಡ್ ಇನ್ ಕಮಾಂಡ್, ಪತ್ರಕರ್ತ ಕೆ.ಸಿ. ರಾಜೇಶ್ ಅವರು ಮಾತನಾಡಿ ನಾವೆಲ್ಲ ಈ ದಿನ ನಿಶ್ಚಿಂತೆಯಿಂದ ಮನೆಗಳಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸುತ್ತಿರುವುದಕ್ಕೆ ದೇಶದ ಗಡಿಯಲ್ಲಿ ಹಗಲಿರುಳು ಕಾಯುವ ಯೋಧರು ಕಾರಣ. ಸೇನೆಗೆ ಸೇರುವ ಮೂಲಕ ಹೆಮ್ಮಾಡಿಯ ಹೆಮ್ಮೆಯಾಗಿರುವ ಸುನೀತಾ ಪೂಜಾರಿ ಅವರನ್ನು ಗೌರವಿಸುವುದರೊಂದಿಗೆ ಹೆಮ್ಮಾಡಿಯ ಜನ ಈ ದಿನ ಅರ್ಥಪೂರ್ಣ ದೀಪಾವಳಿ ಆಚರಿಸಿದ್ದಾರೆ ಹೇಳಿದರು. ಹೆಮ್ಮಾಡಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಂಜು ಕಾಳಾವರ ಮಾತನಾಡಿ, ಈ ಇಬ್ಬರು ಯುವತಿಯರು ಊರಿನ ಇನ್ನಷ್ಟು ಮಕ್ಕಳಿಗೆ, ಯುವಕರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತಿಚಿಗೆ ನಡೆದ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಯೋಧ ಬೈಂದೂರಿನ ಮಣಿಕಂಠ ಹೋಬಳಿದಾರ್ ಅವರು, 100ಮೀ. ಓಟವನ್ನು 10.23 ಸೆಕೆಂಡುಗಳಲ್ಲಿ ಪೂರೈಸಿ ‘ಭಾರತದ ಅತ್ಯಂತ ವೇಗದ ಓಟಗಾರ’ ಎಂಬ ದಾಖಲೆ ಮಾಡಿರುವುದನ್ನು ಗುರುತಿಸಿ, ಭಾನುವಾರ ಬೈಂದೂರಿನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅವರಿಗೆ ಹುಟ್ಟೂರ ಸನ್ಮಾನ ನೆರವೇರಿಸಲಾಯಿತು. ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ 21 ವರ್ಷದ ಮಣಿಕಂಠ ಹೋಬಳಿದಾರ್ ಅವರು, 100ಮೀ. ಓಟದ ಸೆಮಿಫೈನಲ್ನಲ್ಲಿ 10.23 ಸೆಕೆಂಡುಗಳಲ್ಲಿ ಓಡಿ ‘ಭಾರತದ ಅತ್ಯಂತ ವೇಗದ ಓಟಗಾರ’ ದ ದಾಖಲೆ ಮಾಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೊದಲು 10.26 ಸೆಕೆಂಡುಗಳಲ್ಲಿ ಓಡಿದ್ದ ದಾಖಲೆಯನ್ನು ಅವರು ಮುರಿದಿದ್ದರು. ಮಣಿಕಂಠ ಅವರನ್ನು ಬೈಂದೂರು ಬೈಪಾಸ್ನಿಂದ ಮೆರವಣಿಗೆಯಲ್ಲಿ ಸ್ವಾಗತಿಸಿಕೊಂಡು, ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಿವಿಧ ಸಂಘಟನೆಗಳು ಹಾಗೂ ನಾಗರಿಕರು ಅವರನ್ನು ಅಭಿನಂದಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.13: ಮೀನುಗಾರಿಕಾ ಬೋಟುಗಳಿಗೆ ಬೆಂಕಿ ತಗುಲಿ ಬೋಟುಗಳು ಸುಟ್ಟು ಕರಕಲಾಗಿರುವ ಘಟನೆ ಇಂದು ಮುಂಜಾನೆ ತಾಲೂಕಿನ ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯ ಬಂದರಿನಲ್ಲಿ ನಡೆದಿದೆ. ಘಟನೆಯಲ್ಲಿ 7 ಬೋಟು, 2 ದೋಣಿ, 2 ಬೈಕ್, ಜನರೇಟರ್ ಹಾಗೂ ಮೀನುಗಾರಿಕಾ ಸಲಕರಣೆಗಳಿಗೆ ಬೆಂಕಿ ತಗುಲು ಸುಟ್ಟು ಕರಕಲಾಗಿದೆ. ದುರ್ಘಟನೆಯಲ್ಲಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ. ಕುಂದಾಪುರ ಬೈಂದೂರು ಹಾಗೂ ಇತರೆಡೆಯ ಅಗ್ನಿಶಾಮಕ ದಳ ತಂಡ, ಬಂದರು ಠಾಣೆ ಪೊಲೀಸರು, ಸಾರ್ವಜನಿಕರು ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೂಜೆಯ ವೇಳೆ ಸಿಡಿಸಿದ ಪಟಾಕಿಯಿಂದ ಬೆಂಕಿ ತಗುಲಿರುವ ಬಗ್ಗೆ ಮಾಹಿತಿ ಇದ್ದು, ತನಿಕೆಯ ಬಳಿಕ ಕಾರಣ ತಿಳಿಯಲಿದೆ.
