Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯಾದ್ಯಂತ ಆಯೋಜಿಸಲಾದ ಮಾನವ ಸರಪಳಿಗೆ ಭಾನುವಾರ ಜಿಲ್ಲಾದ್ಯಂತ ಏಕಕಾಲದಲ್ಲಿ ಚಾಲನೆ ದೊರೆಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿಯೂ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ತನಕ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ  ಪ್ರತಿ ಗ್ರಾಮ ವ್ಯಾಪ್ತಿ, ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತ್‌ ವ್ಯಾಪ್ತಿಕಯಲ್ಲಿ ಮಾನವ ಸರಪಳಿ ರಚಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಾಡಗೀತೆಯಿಂದ ಆರಂಭಗೊಂಡು ಸಂವಿಧಾನ ಪ್ರಸ್ತಾವನೆ ಓದುವುದು, ಮಾನವ ಸರಪಳಿಗೆ ಕೈ ಹಿಡಿದು ನಿಂತ ಬಳಿಕ ಎರಡು ಕೈಯಗಳನ್ನು ಮೇಲೆತ್ತಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆ ಕೂಗುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ಬಳಿಕ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡಲಾಯಿತು. ಕುಂದಾಪುರದಲ್ಲಿ ಶಾಸಕ ಕಿರಣ್‌ ಕುಮಾರ್‌ ಕೊಡ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ಪುರಸಭೆ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24 ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.  ವೀರೇಶ್ ಖಾರ್ವಿ, ಶಮಿತ್ ಖಾರ್ವಿ, ಶರಣ್ ಎಸ್. ಪೂಜಾರಿ, ಯುವರಾಜ್ ಖಾರ್ವಿ,  ಪ್ರೀತೇಶ್ ಖಾರ್ವಿ, ಕಾರ್ತಿಕ್ ಖಾರ್ವಿ, ತರುಣ್ ಖಾರ್ವಿ ಹಾಗೂ ಧನುಷ್ ಖಾರ್ವಿ. ನಿತಿನ್ ರೆಬೆರೋ ಮತ್ತು ವಿಶ್ವಾಸ್ ತಂಡವನ್ನು ಪ್ರತಿನಿಧಿಸಿದ್ದರು. ಶಮಿತ್ ಖಾರ್ವಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ತರಬೇತಿ ನೀಡಿದ್ದರು. ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ,  ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದವು ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಶು ಆಹಾರ ಉತ್ಪನ್ನಗಳ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆಸಿರುವುದು, ಉತ್ತಮ ಬೆಳವಣೆಗೆಯಾಗಿದ್ದು, ಇದು ಹೈನುಗಾರರಿಗೆ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹಾಗೂ ಮೇಕೋಡು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಮೇಕೊಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಸಭಾಭವನದಲ್ಲಿ ಶನಿವಾರ ನಡೆದ ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ, ಕರು ಸಾಕಾಣಿಕೆ ಯೋಜನೆಯ ನೋಂದಾಯಿತ ಕರುಗಳ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಹಾಲು ಉತ್ಪಾದಕರ ಸಹಕಾರಿ ಸಂಘವು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದು ಸುಮಾರು 70ಲಕ್ಷ ಸ್ಥಿರಾಸ್ತಿಯನ್ನು, ಸುಮಾರು 20ಲಕ್ಷ ರೂ. ನಿರಖು ಠೇವಣೆಯನ್ನು ಹೊಂದಿದೆ. ಕಳೆದ ಸಾಲಿನಲ್ಲಿ ಹಾಲು ಉತ್ಪಾದನೆಗಾಗಿ ಸುಮಾರು 2.28ಕೋಟಿ ರೂ. ಒಕ್ಕೂಟದಿಂದ ಸಂದಾಯವಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಆರಕ್ಷಕ ಠಾಣೆ ಅಲ್ಲಿ ಆಯೋಜಿಸಿದ ತೆರೆದ ಮನೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯ  10ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾನೂನಿನ ಮಾಹಿತಿಯನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಬೈಂದೂರು ಆರಕ್ಷಕ ಠಾಣೆಯ ಸಬ್ಇನ್ಸ್‌ಪೆಕ್ಟರ್ ತಿಮ್ಮೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನಿನ ಅರಿವಿನ ಮಾಹಿತಿಯ  ಮನವರಿಕೆ ಮಾಡಿಸಿಕೊಟ್ಟರು. ವಿದ್ಯಾರ್ಥಿಗಳು ಪೊಲೀಸ್ ಠಾಣಾ ಕಾರ್ಯವೈಖರಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ವಿಷಯ ಸಂಗ್ರಹಿಸಿಕೊಂಡರು.ತದನಂತರ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ನೇರವಾಗಿ ನೋಡಿ ಅರ್ಥೈಸಿಕೊಂಡರು ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುಬ್ರಹ್ಮಣ್ಯ ಮತ್ತು ವಿಶ್ವನಾಥ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆ.12 ರಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ  ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ  ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾರೈಸಿದರು. ಅವರು ಅಂದು ನಗರದ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಹು ಭಾಷೆ, ಬಹು ಕಲೆ – ಸಂಸ್ಕೃತಿಯ ಈ ಕರಾವಳಿ ಭಾಗದಲ್ಲಿ ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಸೆ.06: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ಸೆಪ್ಟೆಂಬರ್ 15 ರಂದು ಬೆಳಗ್ಗೆ  9.30 ರಿಂದ 10.30 ರ ವರೆಗೆ ಜಿಲ್ಲೆಯ ಗಡಿಭಾಗ ಗಳಾದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಿಂದ ಕಾಪು ತಾಲೂಕಿನ ಹೆಜಮಾಡಿ ಸೇತುವೆ ವರೆಗೆ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ  ಸುಮಾರು 107 ಕಿ. ಮೀ ಉದ್ದದ ಮಾನವ ಸರಪಳಿ ರಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮವನ್ನು ಉಡುಪಿಯ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಆಯೋಜಿಸಲಾಗಿದ್ದು, ತಾಲೂಕು ಮಟ್ಟದಲ್ಲಿ ಮರವಂತೆ ಕುಂದಾಪುರ ಬ್ರಹ್ಮಾವರ ಹಾಗೂ ಉಚ್ಚಿಲದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9:30 ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವರು ಸರತಿ ಸಾಲಿನಲ್ಲಿ ನಿಲ್ಲುವುದು, 9:37 ರಿಂದ 9.40 ರವರೆಗೆ ನಾಡಗೀತೆ ,ರಿಂದ9-40ರಿಂದ 9-55ರವರೆಗೆ ಮುಖ್ಯ ಅತಿಥಿಗಳ ಭಾಷಣ,9-55 ರಿಂದ 9 -57 ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು ,9:57 ರಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಬೋರ್ಡ್ ಹೈಸ್ಕೂಲು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರೌಢ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡವು ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡವು ನೇರವಾಗಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದುಕೊಂಡಿತು ವಿಜೇತ ತಂಡಗಳಿಗೆ ಕುಂದಾಪುರ ಸರಕಾರಿ ಪದವಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕೋಡಿ ಶ್ರೀರಾಮ ವಿದ್ಯಾಕೇಂದ್ರ ಇವರ ಆಶ್ರಯದಲ್ಲಿ ವಡೇರಹೋಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕೋಡಿ ಶ್ರೀರಾಮ ನಗರದ ಶ್ರೀ ರಾಮ ವಿದ್ಯಾ ಕೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾ ಕೇಂದ್ರ ಸಂಚಾಲಕ ಕೆ.ನಾಗೇಶ್ ಕಾಮತ್ ವಹಿಸಿದ್ದರು. ಕುಂದಾಪುರ ಪುರಸಭಾ ಸದಸ್ಯ ಮೊಹಮ್ಮದ್ ಅಶ್ಫಾಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ಶೇಖರ್ ಪಡುಕೋಣೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸಂತೋಷ್‍ ಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಕುಮಾರ್ ಶೆಟ್ಟಿ, ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕಾರ್ಯದರ್ಶಿ ಪಿಯೂಸ್ ಡಿಸೋಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಶ್ರೀನಾಥ್ ಪೂಜಾರಿ, ಪತ್ರಕರ್ತ ಬಿ. ರಾಘವೇಂದ್ರ…

Read More