Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟದ ಸಹಭಾಗಿತ್ವದಲ್ಲಿ ಕೊಡಮಾಡುವ 2024ನೇ ಡಾ| ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ಸಾಹಿತಿ ಪ್ರೊ. ಕೃಷ್ಣೆಗೌಡ ಮೈಸೂರು ಆಯ್ಕೆಯಾಗಿದ್ದಾರೆ. ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಈ ಪುರಸ್ಕಾರಕ್ಕೆ ನೀಡುತ್ತಾ ಬಂದಿದ್ದು ವೀರಪ್ಪ ಮೊಯ್ಲಿ, ಶ್ರೀ ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ.ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್, ಡಾ. ವಿದ್ಯಾಭೂಷಣ್ ಅವರು  ಪುರಸ್ಕಾರಕ್ಕೆ ಭಾಜನರಾಗಿದ್ದರು. ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತು ಚೌಕಟ್ಟು ನೀಡಿದ  ಅಮೂಲ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ತಾಲೂಕು ಕಚೇರಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಹೊಂದಿದ್ದು, ಇಲ್ಲಿನ ಸಮಸ್ಯೆಗಳಿಗೆ ಶಾಸಕರ ಬೇಜವಾಬ್ದಾರಿ ಕೂಡ ಕಾರಣ. ಇವತ್ತು ವಿದ್ಯುತ್ ಇಲ್ಲದಾಗ ಜನರೇಟರ್ ಬಳಸಲು ಬೇಕಾದ ಡೀಸೆಲ್ ಇಲ್ಲಾ ಎನ್ನುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕಚೇರಿ ನಿರ್ವಹಣೆಗೆ ಸರ್ಕಾರದಿಂದ ಬಂದ ಹಣ ಎಲ್ಲಿಗೆ ಹೋಗುತ್ತಿದೆ ಎನ್ನುವುದನ್ನು ಸಂಬಂಧಿತರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು, ಜನಸಾಮಾನ್ಯರನ್ನು ಹೈರಾಣ ಮಾಡುವುದು ತಾಲ್ಲೂಕು ಕಚೇರಿಯ ಹೆಚ್ಚಿನ ಸಿಬ್ಬಂದಿಗಳಿಗೆ ಅವರ ಜೀವನದ ಒಂದು ಭಾಗವಾಗಿ ಬಿಟ್ಟಿದೆ  ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಹೇಳಿದರು. ಅವರು ಮಾಡಿದ ತಪ್ಪಿಗೆ ಜನಸಾಮಾನ್ಯರು ದಿನನಿತ್ಯ ತಾಲೂಕು ಕಚೇರಿಗೆ ಅಲೆದಾಡುವುದು ಕುಂದಾಪುರ ತಾಲೂಕು ಕಚೇರಿಯ ದಿನನಿತ್ಯದ ವ್ಯವಸ್ಥೆ. ಶಾಸಕರುಗಳು ಈ ಬಗ್ಗೆ ಮೌನ ವಹಿಸಿರುವುದೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ. ಅಧಿಕಾರಿಗಳು ಸಭೆಗಳಲ್ಲಿ ಹಾರಿಕೆಯ ಉತ್ತರ ಕೊಟ್ಟಾಗ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಗೋಜಿಗೆ ಹೆಚ್ಚಿನ ಜನಪ್ರತಿನಿದಿನಗಳು ಹೋಗದ ಕಾರಣ ಸರ್ಕಾರಿ ನೌಕರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮಲ್ಲಿನ ಸಾಮರ್ಥ್ಯಗಳು ಹುಟ್ಟಿನಿಂದ ಬರುವಂತದ್ದಲ್ಲ. ಸತತ ಪ್ರಯತ್ನದಿಂದ ಜೀವನದಲ್ಲಿ ಗುರಿಯನ್ನು ತಲುಪಲು ಸಾಧ್ಯ. ಆದ್ದರಿಂದ ವ್ಯಕ್ತಿಗೆ ಜೀವನದಲ್ಲಿ ಗುರಿಮುಖ್ಯ ಎಂದು ಎಫ್.ಎಂ.ರೇಡಿಯೋ ಮಂಗಳೂರಿನ ಆರ್.ಜೆ. ನಯನ ಹೇಳಿದರು. ಅವರು ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಹೈಸ್ಕೂಲ್‌ನಲ್ಲಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಯಾವುದೇ ಕೆಲಸ ಮಾಡಬೇಕೆಂದರೆ ಅದರಲ್ಲಿ ನಂಬಿಕೆ ಮುಖ್ಯ. ಹುಟ್ಟುವಾಗಲೇ ಮನುಷ್ಯನಿಗೆ ಪ್ರತಿಭೆ ಎನ್ನುವುದು ಬರುವುದಿಲ್ಲ. ಅದು ಮನುಷ್ಯನು ವಿಕಸನಗೊಂಡಾಗಲೇ ಬರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವಿಶಿಷ್ಟ ಪ್ರತಿಭೆ ಮತ್ತು ಆಸಕ್ತಿಗಳಿರುತ್ತದೆ. ನಾವು ಅದನ್ನು ಗ್ರಹಿಸಿ ಉತ್ತಮಪಡಿಸಿಕೊಳ್ಳಬೇಕು ಎಂದು ಅವರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಸೂತ್ರವನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ.ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಎಂ. ಮಹೇಶ ಹೆಗ್ಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಓದಿನೊಂದಿಗೆ ನಿಮ್ಮ ಗುಣ ನಡತೆಯನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಮಾತನಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ ಮಣ್ಣಿನ ಗಣಪತಿಯನ್ನು ರಚಿಸುವುದು ಉತ್ತಮ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ|. ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸ್ಪರ್ಧೆಯಲ್ಲಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಪ್ರಥಮ್ ಭಂಡಾರಿ ಪ್ರಥಮ ಸ್ಥಾನ, ದ್ವಿತೀಯ ಬಿ.ಕಾಂ. ವಿಭಾಗದ ಸುಜನ್ ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿಬಿಎ ವಿದ್ಯಾರ್ಥಿ ಸೃಜನ್ ತೃತೀಯ ಸ್ಥಾನ ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ರೋವರ್ಸ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ರೇಂಜರ್ಸ್ ಲೀಡರ್ ಪೂಜಾ ಕುಂದರ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಾರಾಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರಾಕ್‌ಸೂಟ್‍ ಉಚಿತ ವಿತರಣೆ ಹಾಗೂ ಚದುರಂಗ ತರಗತಿ ಉದ್ಘಾಟನಾ ಸಮಾರಂಭ ಗುರುವಾರ ಜರುಗಿತು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಕೃಷ್ಣ ಖಾರ್ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಉಚಿತವಾಗಿ 150 ಟ್ರಾಕ್‍ಸೂಟ್‍ಗಳನ್ನು ನೀಡಿದ ಶಾಲೆಯ ಹಳೆ ವಿದ್ಯಾರ್ಥಿ,  ಕೇಂದ್ರ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ ಸದಸ್ಯ ಯೋಗೇಶ್ ಕುಮಾರ್ ಪರವಾಗಿ, ಅವರ ತಾಯಿ ವೆಂಕಮ್ಮ ಅವರನ್ನು ಸನ್ಮಾನಿಸಲಾಯಿತು. ನಮ್ಮ ಶಾಲೆಯ ಮಕ್ಕಳಿಗೆ ಚೇಸ್‍ ತರಬೇತಿಯನ್ನು ಉಚಿತವಾಗಿ ನೀಡಲಿರುವ ನಮ್ಮ ಶಾಲೆಯ ಹಳೆ ವಿದ್ಯಾರ್ಥಿ ಬಾಬು ಜೆ. ಪೂಜಾರಿ, ದಾನಿಗಳಾದ ವಾಸುದೇವ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ಹರೀಶ್‍ ಪೂಜಾರಿ, ಗೋಪಾಲ ಮಲ್ಯ, ಭಾಸ್ಕರ ಕೋಣನಮನೆ, ನಿವೃತ್ತ ಮುಖ್ಯ ಶಿಕ್ಷಕ ಆನಂದ ಅವರು ಶುಭ ಹಾರೈಸಿದರು. ಪ್ರಭಾರ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಟಿಜಿಟಿ ಶಿಕ್ಷಕ ದಿನಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮ ಶತಾಬ್ದಿ ಆರಾಧನಾ ಮಹೋತ್ಸವದ ಅಂಗವಾಗಿ ಖ್ಯಾತ ಗಾಯಕ ಶಂಕರ ಶ್ಯಾನುಭಾಗ ಅವರ ವತಿಯಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಿತು. ದೇವಾಲಯದ ಆಡಳಿತ ಮೊಕ್ತೇಸರ ಕೆ.ರಾಧಾಕೃಷ್ಣ ಶೆಣೈ ಹಾಗೂ ಶಂಕರ ಶ್ಯಾನುಭಾಗ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರ ಶ್ಯಾನುಭಾಗ ಅವರೊಂದಿಗೆ ಶಂಕರ ಶೆಣೈ, ಲೋಕೇಶ, ಹರಿ, ಅಶ್ವಥ, ಅದೃತ ಪೈ ಹಾರ್ಮೋನಿಯಂ, ತಬಲಾ, ತಾಳ ಸಂವಾದಿನಿಯಲ್ಲಿ ಸಹಕರಿಸಿದ್ದರು. ಕಾರ್ಯಕ್ರಮ ಸಂಯೋಜಕರಾದ ಕೆ. ಪದ್ಮನಾಭ ಶೆಣೈ ಕಲಾವಿದರನ್ನು ಗೌರವಿಸಿದರು. ಪಿ.ಜಯವಂತ ಪೈ ನಿರೂಪಿಸಿದರು.

Read More

ಕುಂದಾಪ್ರ ಡಾ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಅಲ್ಲಿ ಬುಧವಾರ ನಡೆಯಿತು. ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಡಾ.ಪೂರ್ಣಿಮಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾ.ಪಂ ಸದಸ್ಯ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಹಾಗೂ ಕರ್ಕುಂಜೆ, ಹೊಸಾಡು, ಕೊಲ್ಲೂರು ಸಿ.ಆರ್.ಪಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ  ಡಿಜಿಟಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 5ರಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ  ಇವರ ಸಹಯೋಗದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದಿತಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.  ಅವರಿಗೆ, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ. ಸ್ಪರ್ಧೆಗಳ ವಿವಿರ:  ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಹೊಂದಿರುವವರು ಸೆಪ್ಟಂಬರ್ 27ರ ಸಂಜೆ 5.30 ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ, ಉಡುಪಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.

Read More