ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಘೋಷಣೆಯಾಗಿದ್ದು, ಕಾಂತಾರ ಸಿನಿಮಾದ ನಟನೆಗಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಮನರಂಜನಾ ಚಿತ್ರ ವಿಭಾಗದಲ್ಲಿಯೂ ‘ಕಾಂತಾರ’ ಸಿನಿಮಾಗೆ ಪ್ರಶಸ್ತಿ ಲಭಿಸಿದೆ. ಈ ಮೂಲಕ ಈ ಸಲದ ರಾಷ್ಟ್ರ ಪ್ರಶಸ್ತಿ ಪಟ್ಟಿಯಲ್ಲಿ ಕನ್ನಡದ ಸಿನಿಮಾಗಳು ಹೊಸ ದಾಖಲೆ ಬರೆದಿವೆ. ಹೊಂಬಾಳೆ ಫಿಲಂಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ, ಕೇವಲ 16 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿ, ಬರೋಬ್ಬರಿ 400 ಪ್ಲಸ್ ಕೋಟಿ ಗಳಿಕೆ ಕಂಡಿತ್ತು. 2022ರ ಸೆಪ್ಟೆಂಬರ್22ರಂದು ಕನ್ನಡದಲ್ಲಿ ಮಾತ್ರ ತೆರೆಕಂಡಿದ್ದ ಈ ಸಿನಿಮಾ, ಅದಾದ ಬಳಿಕ ಬೇರೆ ಭಾಷೆಗಳಿಗೂ ಡಬ್ ಆಗಿ ಮೋಡಿ ಮಾಡಿತ್ತು. ಇದೀಗ ಇದೇ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಗರಿ ಮುಡಿಗೇರಿದೆ. 2022ರ ಜನವರಿ 1ರಿಂದ ಡಿಸೆಂಬರ್ 31 ಅವಧಿಯಲ್ಲಿ ಸೆನ್ಸಾರ್ ಆಗಿರುವ ಸಿನಿಮಾಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಇದೀಗ ಈ ಪ್ರಶಸ್ತಿ ಪಟ್ಟಿಯ ಪೈಕಿ ಅತ್ಯುತ್ತಮ ನಟ ಪ್ರಶಸ್ತಿಗಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಒಂದು ಯುನಿಟ್ ರಕ್ತದಿಂದ ಮೂವರು ವ್ಯಕ್ತಿಗಳ ಜೀವ ರಕ್ಷಣೆ ಮಾಡಲು ಸಾಧ್ಯವಿದೆ. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಕೆಲವು ವಾರಗಳಲ್ಲಿ ದೇಹವು ರಕ್ತವನ್ನು ನವೀಕರಿಸಲು ಅನುವು ಮಾಡಿಕೊಡುವುದಲ್ಲದೇ ಪರೋಪಕಾರ ಮಾಡಿದಂತೆಯೂ ಆಗುತ್ತದೆ ಎಂದು ಕೆ.ಎಂ.ಸಿ ರಕ್ತನಿಧಿ ವಿಭಾಗದ ವೈದ್ಯ ಡಾ. ಆಶಿಷ್ ಚೋಪ್ರಾ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಶ್ರೀ ನಾರಾಯಣಗುರು ಕಲಾ ಮತ್ತು ಕ್ರೀಡಾ ಸಂಘ ಬಿಜೂರು, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಂಘ, ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಬೈಂದೂರು, ಆಸರೆ ಬಳಗ ಫಿಶರೀಸ್ ಕಾಲೋನಿ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಎಂ.ಸಿ ರಕ್ತನಿಧಿ ವಿಭಾಗದ ಮೂಲಕ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು. ಆರೋಗ್ಯವಂತ ಮನಷ್ಯಗೆ ವರ್ಷದಲ್ಲಿ ನಾಲ್ಕು ಭಾರಿ ರಕ್ತದಾನ ಮಾಡಲು ಅವಕಾಶವಿದೆ. ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವುದಲ್ಲದೇ ಜೀವನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾಂತಂತ್ರ್ಯೋತ್ಸವ ದಿನಾಚರಣೆ ಹಾಗೂ ಶಾಲಾ ವಾಹನ ಹಸ್ತಾಂತರ ಸಮಾರಂಭ ಗುರುವಾರ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿ, ಉದ್ಯಮಿ ಸುಭಾಷ್ ಪೂಜಾರಿ ಅವರು 9 ಲಕ್ಷ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸುರೇಶ್ ಪೂಜಾರಿ ಧ್ವಜಾರೋಹಣ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಶಂಕರ ಪೂಜಾರಿ, ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಸುಧಾಕರ ಮೋಗವೀರ, ಎಸ್.ಡಿ.ಎಂ.ಸಿ ಸದಸ್ಯೆ ನಾಗವೇಣಿ, ವಿಧ್ಯಾರ್ಥಿ ನಾಯಕ ವಿನಿತ್ ಕುಮಾರ್, ಉಪಸ್ಥಿತರಿದ್ದರು. ಈ ಸಂದರ್ಭ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ ಸುಭಾಷ್ ಪೂಜಾರಿ ಹಾಗೂ ವಾಹನಕ್ಕೆ ಇಂಧನಕ್ಕೆ ಧನಸಹಾಯ ಮಾಡಿದ ಉದ್ಯಮಿ ರಾಜೇಶ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಿ.ವಿ.ವಿ.ಮಂಡಳಿ ರಿ. ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು, ದೇಶ ಬಿಡುಗಡೆಗಾಗಿ ಹೋರಾಟಗೈದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ರಾಷ್ಟ್ರೀಯ ಮನೋಭಾವನೆಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಉಪಸ್ಥಿತರಿದ್ದು, ದೇಶಕ್ಕಾಗಿ ಹೋರಾಡುವ ಯೋಧರು, ಅನ್ನ ನೀಡುವ ರೈತ ಇವರು ನಮ್ಮ ದೇಶದ ರಿಯಲ್ ಹಿರೋಗಳೆಂದರು. ಸ್ವಾತಂತ್ರ್ಯ ಸಂಗ್ರಾಮದ ಯಶೋಗಾತೆಯನ್ನು ಸ್ಮರಿಸಿದರು. ಸಮಾರಂಭದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಕಾಲೇಜಿನ ಹಾಗೂ ಪ್ರೌಢಶಾಲೆಯ ಬೋಧಕ/ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ ಸ್ವಾಗತಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಶುಭ ಗಳಿಗೆಯಲ್ಲಿ ರಾಷ್ಟ್ರ ಪ್ರೇಮವನ್ನು ಬಿತ್ತುವ ಸಲುವಾಗಿ ಪ್ರತಿ ವರ್ಷ ದಂತೆ ಈ ಬಾರಿಯೂ ಹರ್ ಘರ್ ತಿರಂಗ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರ ಪ್ರತೀ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಪಣ ತೊಟ್ಟು ದುಡಿದರೆ ಸಾಲಿಗ್ರಾಮ ಕಯಾಕಿಂಗ್ ತಂಡ ವಿಭಿನ್ನವಾಗಿ ರಾಷ್ಟ್ರ ಪ್ರೇಮವನ್ನು ಮೆರೆಯುವ ಪ್ರಯತ್ನ ಮಾಡಿದೆ. ಸೀತಾ ನದಿಯಲ್ಲಿ ಕಯಕಿಂಗ್ ಮೂಲಕ ಪ್ರಕೃತಿ ವಿಸ್ಮಯಗಳನ್ನು ತೋರಿಸಿ ಜನರಲ್ಲಿ ಪ್ರಕೃತಿ ಪ್ರೇಮವನ್ನು ಬಿತ್ತುವ ಕೆಲಸ ಮಾಡುತ್ತಿರುವ ಸಾಲಿಗ್ರಾಮ ಕಯಾಕಿಂಗ್ ತಂಡ ಈ ಬಾರಿಯೂ ವಿಭಿನ್ನ ಪ್ರಯತ್ನ ನಡೆಸಿದೆ. ಕಳೆದ ಬಾರಿ ಸೀತಾ ನದಿಯ ಮದ್ಯದಲ್ಲಿ ಕಯಾಕಿಂಗ್ ಮೂಲಕ ತೆರಳಿ ಅಲ್ಲಿ ಧ್ವಜ ಸ್ತಂಭ ನೆಟ್ಟು ಧ್ವಜಾರೋಹಣ ನಡೆಸಿದ ತಂಡ ಈ ಬಾರಿ ನದಿಯ ಮದ್ಯದಲ್ಲಿ ಕಾಂಡ್ಲಾ ಮರದ ನಡುವೆ ಕಾಂಡ್ಲಾ ನಡಿಗೆ ಸೇತುವೆ ರಚಿಸಿ ಧ್ವಜಾರೋಹಣ ಮಾಡಿ ಅನ್ನವಿತ್ತ ಪ್ರಕೃತಿಯಲ್ಲಿ ರಾಷ್ಟ್ರಪ್ರೇಮವನ್ನು ಉತ್ತೇಜಿಸುವ ಪ್ರಯತ್ನ ಮಾಡಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ. ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ. ಸಿ. ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹುತಾತ್ಮರಾದ ವೀರ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಎಲ್ಲರೂ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪರಿಸರ ಸಂರಕ್ಷಣೆ ಅರಿವು ಮತ್ತು ಅಗತ್ಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್, ಎಮರಾಲ್ಡ್, ಸಪಾಯರ್, ರೂಬಿ, ಟೋಪಾಜ್ ತಂಡಗಳಿಂದ ಆಕರ್ಷಕ ಪಥಸಂಚಲನ ವೀಕ್ಷಿಸಿದರು. ಸಂಸ್ಥೆಯ ಆಡಳಿತಾಧಿಕಾರಿಗಳಾದ ರಿ. ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಸರ್ವರಿಗೂ ಸ್ವತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. …
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಂ. ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ. ವಿ. ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ ಸೇರಿ ಕಟ್ಟೋಣ’ ಎಂದ ಅವರು ʼವೈಯಕ್ತಿಕ ಸ್ವಾತಂತ್ರ್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ್ಯವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ’ ಎಂದು ಯುವ ಸಮುದಾಯವನ್ನು ಎಚ್ಚರಿಸಿದರು. ಯಾವುದೂ ಅಸಾಧ್ಯ ಎಂಬುದು ಇಲ್ಲ. ಪ್ರಕೃತಿ ಪೂರಕ ಸಂಸ್ಕೃತಿ ಬೆಳೆಯಬೇಕು. ಸ್ವಾತಂತ್ರ್ಯದ ಸಂಸ್ಕೃತಿ ನಮ್ಮದಾಗಬೇಕು. ಅದಕ್ಕೆ ಪ್ರತಿ ವ್ಯಕ್ತಿಯೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು. ದೇಶದಲ್ಲಿ ಅನೇಕ ಜಾತಿ – ಧರ್ಮಗಳಿವೆ. ಆದರೆ ವೈವಿಧ್ಯತೆಯ ನಡುವೆ ಐಕ್ಯತೆ ಹಾಗೂ ಸಾಮರಸ್ಯ ಇದೆ. ದೇಶದಲ್ಲಿನ ನದಿಗಳು ಸಮುದ್ರ ಸೇರಿದಂತೆ, ಇಲ್ಲಿ ಯಾರ ಪಾಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ ಗಂಗೊಳ್ಳಿಯಲ್ಲಿ ಗುರುವಾರ ನಡೆಯಿತು. ಗಂಗೊಳ್ಳಿ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಾಮಾಜಿಕ ಕಾರ್ಯಕರ್ತ ಆದರ್ಶ ಕೆಲ, ನಮಗೆ ಸ್ವಾತಂತ್ರ್ಯ ಸಿಕ್ಕಿದ ಖುಷಿ ಒಂದೆಡೆಯಾದರೆ ಅಖಂಡವಾಗಿದ್ದ ದೇಶವನ್ನು ವಿಭಜಿಸಿರುವ ದು:ಖ ಇನ್ನೊಂದೆಡೆ. ನಮ್ಮ ದೇಶವನ್ನು ಬ್ರಿಟಿಷರು ಮಾತ್ರವಲ್ಲ ಬೇರೆ ಬೇರೆಯವರು ನಮ್ಮ ದೇಶವನ್ನು ಆಳಿ ಒಡೆದು ಆಳುವ ನೀತಿ, ಮತಾಂಧತೆ ಮೊದಲಾದವುಗಳ ಮೂಲಕ ನಮ್ಮ ದೇಶವನ್ನು ಕೂಪಕ್ಕೆ ತಳುವಂತೆ ಮಾಡಿ ಹೋಗಿದ್ದರು. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಸಹಸ್ರಾರು ಮಂದಿ ಬಲಿದಾನ, ತ್ಯಾಗ, ಹೋರಾಟ ನಡೆಸಿದ್ದಾರೆ. ಆದರೆ ಸ್ವಾತಂತ್ರ್ಯ ಹೋರಾಟದಕಲ್ಲಿ ಕೆಲವೇ ಕೆಲವು ವ್ಯಕ್ತಿಗಳನ್ನು ಮಾತ್ರ ವೈಭವೀಕರಿಸಲಾಗುತ್ತಿದ್ದು, ನೈಜ ಸ್ವಾತಂತ್ರ್ಯ ಹೋರಾಟಗಾರರು ಮರೆ ಮಾಚಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಭವಿಷ್ಯದಲ್ಲಿ ಆದ ತಪ್ಪುಗಳು ಮುಂದಿನ ದಿನಗಳಲ್ಲಿ ಆಗಬಾರದು ಎಂದಾದರೆ ನಮ್ಮ ಸ್ವಾತಂತ್ರ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಬೆಳೆ ಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಬೆಳೆ ಸಾಲ ಹೊಂದಿದ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ಆಗಸ್ಟ್ 25ರ ವರೆಗೆ ಅವಧಿ ವಿಸ್ತರಣೆ ಮಾಡಿ ಅವಕಾಶ ಕಲ್ಪಿಸಲಾಗುತ್ತದೆ. ಬೆಳೆ ವಿಮೆಗೆ ಒಳಪಡದ ಬೆಳೆ ಸಾಲ ಹೊಂದಿರುವ ರೈತರು ಕೂಡಲೇ ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್‌ನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ಉಡುಪಿ…
