Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರೌಢಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರೌಢಶಾಲಾ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಕೆಪಿಎಸ್ ಕೋಟೇಶ್ವರ ತಂಡವನ್ನು ಸೋಲಿಸಿದರೆ, ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಕುಂದಾಪುರದ ಸೈಂಟ್ ಪಿಯೂಸ್ ಶಾಲೆ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕುಂದಾಪುರದ ಸೈಂಟ್ ಪಿಯೂಸ್ ಶಾಲೆ ಬಾಲಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಜಿಲ್ಲೆಯ ಹಿರಿಯ ನಾಗರಿಕರು ಈ ಬಗ್ಗೆ ತಮ್ಮ ಪ್ರಸ್ತಾವನೆಗಳನ್ನು ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ ಆಗಸ್ಟ್ 31 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dwdsc.karnataka.gov.in ಅಥವಾ ಜಿಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್‍ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸನ್ವಿತ್ ಎಸ್. ಶೆಟ್ಟಿ 7ನೇ ತರಗತಿ ಮತ್ತು ಹರಿಜಿತ್ ಆರ್. ಪೂಜಾರಿ 7ನೇ ತರಗತಿ ಪ್ರಥಮ ಸ್ಥಾನಗಳಿಸಿ ವಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ 2024-26 ನೇ ಸಾಲಿನ  ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಇತ್ತೀಚಿಗೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಎಂ. ಜಿ. ಎಂ. ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಶಾನಾಡಿ ಸತೀಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ ಶೆಟ್ಟಿ ಹೊಸಮಠ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಜೀವನ ಕುಮಾರ ಶೆಟ್ಟಿ, ಹರ್ಕೂರ ಕಾರ್ಯದರ್ಶಿ ಮಂಜುನಾಥ ಜೋಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾದ ಘಟನೆ ಶನಿವಾರ ತಲ್ಲೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಿಗ್ಗೆ ನಡೆದಿದೆ. ತಲ್ಲೂರು ಪ್ರವಾಸಿ ಪೆಟ್ರೋಲ್‌ ಬಂಕ್‌ ಎದುರು ಬೈಂದೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಎ.ಕೆ.ಎಂ.ಎಸ್‌ ಸಂಸ್ಥೆಯ ಬಸ್ಸಿಗೆ ಹಿಂಬದಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡಿದಿದ್ದು, ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಭಾಗ ಹಾಗೂ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕುಂದಾಪುರದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್‌ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅದೇ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್‌ ಪೂಜಾರಿ, ದೀಪಶ್ರೀ, ತನುಷ್‌, ಪ್ರೀತಮ್‌, ಕೋಟ ಆಶ್ರಿತಾ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯರಾದ ಅಶ್ವಿನಿ ಹಾಗೂ ಅಶ್ಮಿತಾ, ಇತರ ಪ್ರಯಾಣಿಕರಾದ ಶಿವರಾಂ, ವಿದ್ಯಾ, ಸತೀಶ್‌,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೂರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಪ್ಪೂರು ಮೂಲದ ಸಂತೋಷ್‌ ಆಚಾರ್ಯ (45 ವರ್ಷ) ಮೃತ ವ್ಯಕ್ತಿ. ಕುಂದಾಪುರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೋಟೆಲ್‌ ಎದುರಿನ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಅವರ ಹಠಾತ್‌ ಸಾವು ಕುಟುಂಬಿಕರನ್ನು ಆತಂಕಕ್ಕೀಡುಮಾಡಿದೆ. ಅಲ್ಲಿಯೇ ಸಮೀಪ ವಾಸವಿದ್ದ ಮನೆಯಲ್ಲಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಗರ ಪಂಚಮಿಯಂದು ಸತೋಷ್‌ ಅವರು ಮನೆಗೆ ತೆರಳದೇ ಇದ್ದುದರಿಂದ ಅವರ ಸಹೋದರ ಸುರೇಶ್ ಆಚಾರ್ಯ ಕರೆ ಮಾಡಿದ್ದರು. ಈ ವೇಳೆ ಫೋನ್ ಸ್ವಿಚ್ ಆಫ್ ಆಗಿತ್ತು. ನಂತರ ಅವರು ಅಣ್ಣ ವಾಸವಿದ್ದ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಮನೆಯ ಒಳಗಿನಿಂದ ದುರ್ವಾಸನೆ ಬರುತ್ತಿದೆ ಎಂದು ತಿಳಿಸಿದ್ದಾರೆ. ಆಗಲೇ ಸಂತೋಷ್ ಆಚಾರ್ಯ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಕುಂದಾಪ್ರ ಡಾಟ್‌ ಕಾಂ ಸುದ್ದಿ. ಸಂತೋಷ್ ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲಿದ್ದರು. ಮನೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೀಜಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಟಿಪ್ಪರ್ ಗುದ್ದಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೀಜಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಹೋಗುತ್ತಿದ್ದ ಕಾರಿಗೆ ಕುಂಭಾಸಿಯಿಂದ ಕುಂದಾಪುರದ ಕಡೆಗೆ ಅತಿವೇಗವಾಗಿ ಬಂದ ಟಿಪ್ಪರ್ ಕಾರಿಗೆ ಗುದ್ದಿದ ಪರಿಣಾಮ ಕಾರು ಸಂಪೂರ್ಣ ಹಾನಿಯಾಗಿದೆ. ಟಿಪ್ಪರ್ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಮಧ್ಯದಲ್ಲಿ ನಿಂತಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್‌ ಸಮಸ್ಯೆ ಎದುರಾಯಿತು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಸೌಲಭ್ಯಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ತಂತ್ರಾಂಶ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗದಲ್ಲಿ ನಡೆದ ಓಪನ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024ರಲ್ಲಿ ಬಸ್ರೂರಿನ ಮಿಥುನ್. ಆರ್ 16 ರಿಂದ 17 ವರ್ಷದ ವಯೋಮಾನದ ವಿಭಾಗದಲ್ಲಿ ಕಟಾದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾನೆ. ಆರ್. ಎನ್. ಶೆಟ್ಟಿ ಕಂಪೋಸಿಟ್ ಪಿಯು ಕಾಲೇಜಿನ ಪ್ರಥಮ‌ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ.  ಅವರು ಬಸ್ರೂರಿನ ನಿವಾಸಿ ರಮೇಶ್ ಹಾಗೂ ಕುಸುಮ ದಂಪತಿಯ ಪುತ್ರ. ಸಾಧಕ ಕರಾಟೆಪಟು ಮಿಥುನ್ ಆರ್. ಕಾಲೇಜಿನ ಸಂಚಾಲಕರಾದ ಸುಕುಮಾರ್ ಶೆಟ್ಟಿ ಅವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಮುಂಗಾರು ಭತ್ತದ ಬೆಳೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More