ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇದೆ. ಪ್ರತಿಭೆಯನ್ನು ಹೊರಹೊಮ್ಮಿಸಲು ಸಿಗುವ ಅವಕಾಶಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದ್ದು, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸುವಂತಾಗಬೇಕು ಎಂದು ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಡಯಾನಾ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ ಬಿಆರ್ಪಿ ಮಿಲ್ಟನ್ ಕ್ರಾಸ್ತಾ, ಸಿಆರ್ಪಿ ಪ್ರದೀಪ ಕುಮಾರ್ ಶೆಟ್ಟಿ, ಗಂಗೊಳ್ಳಿ ಗ್ರಾಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಾಗತೀಕರಣದ ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಭಾಷೆಯಾಗಿ ಮನ್ನಣೆ ಪಡೆದ ಇಂಗ್ಲೀಷ್ ಭಾಷೆಯ ಹಿಡಿತ ಅನಿವಾರ್ಯ. ಅದರಲ್ಲಿಯೂ ಪದವಿ ಶಿಕ್ಷಣದ ಸಂದರ್ಭದಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಸರ್ವತೋಮುಖ ಯಶಸ್ಸು ಸಾಧ್ಯ ಎಂದು ಉಡುಪಿಯ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಯಾಸಿನ್ ಮನ್ನಾ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗವು ಆಯೋಜಿಸಿದ “ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ”ವಿಶೇಷ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಇಂಗ್ಲೀಷ್ ಭಾಷೆಯ ಅರಿವಿನ ಅನಿವಾರ್ಯತೆಯನ್ನು ತಿಳಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರವಿನಾ ಸಿ. ಪೂಜಾರಿ ಅತಿಥಿಗಳನ್ನು ಪರಿಚಯಿಸಿ, ಸ್ವಾತಿ ಜಿ. ರಾವ್ ವಂದಿಸಿ, ಸ್ಟಾಲಿನ್ ಡಿಸೋಜಾ ನಿರೂಪಿಸಿದರು.
ಕುಂದಾಪ್ರ ಆಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಂ. ಜಿ. ಎಂ. ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಮಣಿಪಾಲ್ ಮರೀನಾ ಈಜು ಕೊಳದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಹಾಗೂ 7 ಬೆಳ್ಳಿ ಪದಕ ಪಡೆದಿರುತ್ತಾರೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರೋಹಿತ್ 1 ಚಿನ್ನ ಮತ್ತು 1 ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಶ್ವಿನ್ 1 ಚಿನ್ನ, 1ಬೆಳ್ಳಿ ಪದಕ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಂಜನಾ 2 ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ನಿಶಾಂತ್ ಖಾರ್ವಿ 1 ಬೆಳ್ಳಿ , ನಿಶ್ಚಿತ್ ಖಾರ್ವಿ 1 ಬೆಳ್ಳಿ ಪದಕ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಯೋಗ್ 1 ಬೆಳ್ಳಿ ಪದಕ ಪಡೆಯುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಹಾಗೂ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ. ಇ. ಟಿ, ಡಿ-ಸಿ.ಇ. ಟಿ, ಪಿ. ಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬಹುದಾದ ಕೋರ್ಸ್ಗಳು ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ. ಡಿ. ಎಸ್, ಎಂ. ಡಿ. ಎಸ್), ಆಯುಷ್ (ಬಿ. ಆಯುಷ್, ಎಂ. ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ. ಇ, ಬಿ. ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ. ಆರ್ಕ್, ಎಂ. ಆರ್ಕ್), ಎಂ. ಬಿ. ಎ, ಎಂ. ಸಿ. ಎ, ಎಲ್. ಎಲ್.ಬಿ, ಬಿ. ಎಸ್ಸಿ ಇನ್ ಹರ್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೇರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರಿನರಿ ಅಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್ ಫುಡ್ ನ್ಯೂಟ್ರಿಷನ್ಸ್ ಅಂಡ್ ಡಯಟಿಟಿಕ್ಸ್, ಬಿ ಫಾರ್ಮಾ, ಎಂ.ಫಾರ್ಮಾ, ಫಾರ್ಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತವರು ಕುಗ್ಗದೆ, ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಗೆಲುವಿಗಾಗಿ ಶ್ರಮಿಸಬೇಕು. ಹೆಚ್ಚೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಕೆ.ರಾಮನಾಥ ನಾಯಕ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಖೋ-ಖೋ ಪಂದ್ಯಾಟವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ರಕ್ಷಕ-ಶಿಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್, ರಕ್ಷಕ-ಶಿಕ್ಷಕ ಸಮಿತಿ ಸದಸ್ಯರು, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿಯರಾದ ಮಾಲಾಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಓರ್ವ ಸಮಾಜ ಸುಧಾರಕರಾಗಿ ನಾರಾಯಣ ಗುರು ಒಂದು ಜಾತಿ ಧರ್ಮದ ಗುರುವಲ್ಲ. ಅವರು ಹೇಳಿದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವುದು ಮನುಷ್ಯ ಧರ್ಮದ ಸಾರ. ಚತುರ್ವರ್ಣ ಕರಾಳ ವ್ಯವಸ್ಥೆಯ ವಿರುದ್ಧದ ಹೋರಾಟವೇ ನಾರಾಯಣ ಗುರುಗಳ ಸಮಾಜ ಸುಧಾರಣೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ನುಡಿದರು. ಯುವವಾಹಿನಿ ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಆಯೋಜಿಸಿದ್ದ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಮೂಡುಬಿದಿರೆ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಶ್ರೀ ನಾರಾಯಣ ಗುರುಗಳ ಭಾವಚಿತ್ರ ರಚನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ ’ಗುರು ಸ್ಮರಣೆ ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾರಾಯಣ ಗುರುಗಳ ಧಾರ್ಮಿಕ ಸುಧಾರಣಾ ಚಳುವಳಿಗಳು ಬೇರೆ ಚಳುವಳಿಗಾರರ ಚಳುವಳಿಗಿಂತ ಭಿನ್ನವಾಗಿದ್ದವು. ಯುದ್ಧಕ್ಕೆ ಬಂದವರನ್ನು ಶಾಸ್ತ್ರವಿಲ್ಲದೆ ಹಿಮ್ಮೆಟ್ಟಿದ ಕೀರ್ತಿ ಅವರದು. ಪೂಜೆಗಾಗಿ ಕೆಳಜಾತಿಯವರನ್ನು ನೇಮಿಸಿದ ಅವರು, ವಿವಾಹಗಳನ್ನು ಸರಳಗೊಳಿಸಿ, ಮಧ್ಯಪಾನದ ವಿರುದ್ಧ ಹೋರಾಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬುಡಕಟ್ಟು ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿ ಸುಧಾರಿಸಲು ಅವರುಗಳ ಕಲ್ಯಾಣಕ್ಕೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸರಕಾರ ಜಾರಿಗೆ ತಂದಿದೆ. ಇವುಗಳ ಸಮರ್ಪಕ ಅನುಷ್ಠಾನ ಮಾಡುವುದರೊಂದಿಗೆ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯ ಕಾರ್ಯಕ್ರಮ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದುರ್ಬಲ ಬುಡಕಟ್ಟು ಜನರಿಗೆ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ, ಶಿಕ್ಷಣ, ಆರೋಗ್ಯ, ರಸ್ತೆ, ಟೆಲಿಕಾಂ ಸಂಪರ್ಕ ಸೇರಿದಂತೆ ಮತ್ತಿತರ ಸುಸ್ಥಿರ ಜೀವನೋಪಾಯದ ಅವಕಾಶ ದಂತಹ ಮೂಲಭೂತ ಸೌಲಭ್ಯಗಳನ್ನು ಅವರುಗಳಿಗೆ ಕಲ್ಪಿಸಲು ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸಮರ್ಪಕ ಅನುಷ್ಠಾನಗೊಳಿಸಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ 18 ರಿಂದ 55 ವರ್ಷದೊಳಗಿನ ಅರ್ಹ ಫಲಾಪೇಕ್ಷಿಗಳಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ ಹಾಗೂ ಸಿಖ್ಖ್ಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ವೆಬ್ಸೈಟ್ https://kmdconline.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಝಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574990 ಅಥವಾ ಸಹಾಯವಾಣಿ ಸಂಖ್ಯೆ : 8277799990 ಮತ್ತು ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ ಅವರ ನಿರ್ದೇಶನದಂತೆ ಒಂದು ದಿನದ ಪ್ರಥಮ ಭಾಷಾ ಶಿಕ್ಷಕರ ಕಾರ್ಯಗಾರವು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ರಿ. ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಿಕ್ಷಕರು ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳ ಫಲಿತಾಂಶವನ್ನು ಉನ್ನತೀಕರಿಸಬೇಕು ಎಂದು ಹೇಳಿದರು ಹಾಗೂ ಉಡುಪಿ ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶಕ್ಕಾಗಿ ಶಿಕ್ಷಕರನ್ನು ಅಭಿನಂದಿಸಿದರು. ಕುಂದಾಪುರ ವಲಯದ ಇ. ಸಿ. ಓ ಆಗಿರುವ ಶೇಖರ್ ಅವರು ಕಾರ್ಯಗಾರದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭಾಷಾ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾದ ಜಯಶೀಲ ಶೆಟ್ಟಿ, ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಅಲ್ಬಾಡಿ ಆರ್ಡಿ, ಹರಿಶ್ಚಂದ್ರ ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಹಾಲಾಡಿ ಹಾಗೂ ರಮೇಶ್ ಕುಲಾಲ್, ಸಹಶಿಕ್ಷಕರು, ಸರಕಾರಿ ಪ್ರೌಢ ಶಾಲೆ ಕೆದೂರು ಇವರುಗಳು ಕಲಿಕೆಯಲ್ಲಿ ಹಿಂದುಳಿದ…
