ಕುಂದಾಪ್ರ ಡಾಟ್ ಕಾಂ ಸುದ್ದಿ,.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ವೈಯಕ್ತಿಕ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈಯಕ್ತಿಯ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ ಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪ್ರತಿ, ನಿಗಧಿತ ಮೊತ್ತದ ಛಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಆಗಸ್ಟ್ 20 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಾಗೂ ಬೇಲರ್ ಅನ್ನು ಕಡ್ಡಾಯವಾಗಿ ಖರೀದಿಸಬೇಕು. ಇವುಗಳೊಂದಿಗೆ ಹಾರ್ವೆಸ್ಟರ್ ಹಬ್ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳೀಯ ಅವಶ್ಯಕತೆಗಳಿಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಪ್ರತಿ ಹಾರ್ವೆಸ್ಟರ್ ಹಬ್ಗೆ ಉಪಕರಣವಾರು ಗರಿಷ್ಠ ಮಿತಿಗೊಳಪಟ್ಟು ಶೇ. 50 ರ ಸಹಾಯಧನ ಅಥವಾ 40 ಲಕ್ಷ ರೂ. ಮೀರದಂತೆ ಸಹಾಯಧನವನ್ನು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮುಖಾಂತರ ಒದಗಿಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಆಗಸ್ಟ್ 18 ರ ಭಾನುವಾರ ಯುವ ಮೆರಿಡಿನ್ನಲ್ಲಿ ನಡೆಯಲಿರುವ ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರೂ, ಸಾಹಿತ್ತಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಪ್ರಕರ ವಾಗ್ಮಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು “ಕುಂದಪ್ರಭ” ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ – ಆಪರೇಟಿವ್ ಸೊಸೈಟಿಯ 2024 – 26 ನೇ ಸಾಲಿನ ಅಧ್ಯಕ್ಷರಾಗಿ ಜಿ. ವೆಂಕಟೇಶ ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರಿಯ ಸಭಾ ಭವನದಲ್ಲಿ ಸೋಮವಾರ ನಡೆದ ಅಧ್ಯಕ್ಷರ ಸ್ಥಾನಕ್ಕೆ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಆದ ಕಾರಣ ಜಿ. ವೆಂಕಟೇಶ ಶೆಣೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ನಿರ್ವಾಚನಾಧಿಕಾರಿ ಜಯರಾಮ ಕೆ. ಘೋಷಿಸಿದರು. ಸಹಕಾರಿಯ ಅಧ್ಯಕ್ಷರಾಗಿದ್ದ ಎಚ್. ಗಣೇಶ ಕಾಮತ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಹಕಾರಿಯ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಸಹಕಾರಿಯ ಉಪಾಧ್ಯಕ್ಷ ಜಿ. ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಎಚ್. ಗಣೇಶ ಕಾಮತ್, ಎನ್. ಮಾಧವ ಕಿಣಿ, ಎಸ್. ವೆಂಕಟರಮಣ ಆಚಾರ್ಯ, ಬಿ. ರಾಘವೇಂದ್ರ ಪೈ, ಜಿ. ವೇದವ್ಯಾಸ ಆಚಾರ್ಯ, ಕೆ. ಪರಮೇಶ್ವರ ನಾಯಕ್, ನಾಗಪ್ರಸಾದ ಪೈ. ಎಂ. ಜಿ., ಕೆ. ಗೋಪಾಲಕೃಷ್ಣ ನಾಯಕ್, ಮಹಾಬಲ ಪೂಜಾರಿ, ಕಿರಣ್ ಫಿಲಿಪ್ ಪಿಂಟೊ, ಮಾಲಾ ಕೆ. ನಾಯಕ್, ಗೀತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎ.ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ಆಯೋಜಿಸಿದ ಇಂಟರ್ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2024ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ಸಿಂಚನಾ ಕುಂದಾಪುರ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾಳೆ. ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿಂಚನ, ಕೋಡಿಯ ಸತೀಶ್ ಮತ್ತು ನಾಗವೇಣಿ ದಂಪತಿ ಪುತ್ರಿ. ಸಿಂಚನ ಕರಾಟೆ ತರಬೇತಿಯನ್ನು ಕೆಡಿಎಫ್ ಕುಂದಾಪುರ ಸಂಸ್ಥೆಯಲ್ಲಿ ಶಿಕ್ಷಕರಾದ ಶಿಯಾನ್ ಶೇಕ್ ಮತ್ತು ಶಶಾಂಕ್ ಶೆಣೈ ಅವರಿಂದ ತರಬೇತಿ ಪಡೆದಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದೊಂದಿಗೆ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳಾದ ಸಿಧ್ವಿಕ್ ಪೂಜಾರಿ ೭B , ಯು.ವಿಶ್ರುತ್ ಮೇಲಾಡಿ 7D, ಸಾತ್ವಿಕ್ ಪೂಜಾರಿ 8̧D ಹರಿದಾಸ್ ಆರ್.ಮಲ್ಯ 9E, ವರ್ಣಿತಾ ವಿ.ಕುಂದರ್ 9F, ಮೇಘನ ಪ್ರಕಾಶ್ ಶ್ಯಾನಭಾಗ್ 7E, ದೇವಿಕಾ ಶೆಣೈ 8F ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಮಕ್ಕಳ ಸಾಹಿತ್ಯದ ಕೃತಿಗಳನ್ನು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಯಾ ಸಾಲಿನ ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಹಾಗೂ ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಈ ಮೇಲ್ಕಾಣಿಸಿದ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಆಗಸ್ಟ್ 26ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ – ಔಟ್ ಹಿಂಭಾಗ, ಕೆ. ಹೆಚ್. ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ -580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಪ್ರಶಸ್ತಿಯ ಅರ್ಜಿ ನಮೂನೆ ಹಾಗೂ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ ಕೇವಲ ಮಾತನಾಡುವ ಭಾಷೆಯಾಗಿ ಉಳಿಯದೇ ಜನರ ಭಾವನೆಯ ನಾಡಿಮಿಡಿತವಾಗಿದೆ. ಯಾವುದೇ ಸಂದರ್ಭದಲ್ಲಿ ಹಿಂಜರಿಕೆ ಪಡೆಯದೇ ಕುಂದಾಪ್ರ ಭಾಷೆಯನ್ನು ಬಳಸಬೇಕು. ಇಲ್ಲಿನ ಸಂಸ್ಕೃತಿಯ ವೈವಿಧ್ಯತೆಯ ಅನಾವರಣಕ್ಕೆ ವಿಶ್ವ ಕುಂದಾಪ್ರ ದಿನಚರಣೆ ಸಾಕ್ಷಿಯಾಗುತ್ತಿರುವುದು ಸಂತಸದ ವಿಷಯ ಎಂದು ಪ್ರಗತಿಪರ ಕೃಷಿಕ ಜಯರಾಮ್ ಶೆಟ್ಟಿ ಅವರು ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಡಾ ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಕುಂದಾಪ್ರ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಯು – ಚಾನೆಲ್ ಆಶ್ರಯದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ ಕುಂದಾಪ್ರ ಕನ್ನಡ ಉತ್ಸಾವ ಹೊಸ ಹೂಂಗು ಕೋಲೆ… ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಸಾಂಸ್ಕೃತಿಕ ಚಿಂತಕ ಪ್ರದೀಪ್ ಬಸ್ರೂರು, ಚಿತ್ರಕಲಾ ಶಿಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023-24 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ – ಔಟ್ ಹಿಂಭಾಗ, ಕೆ. ಹೆಚ್. ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ – 580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್ಸೈಟ್ https://balavikasaacademy.karnataka.gov.in ಅಥವಾ ದೂ. ಸಂ:0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪುರ ಕನ್ನಡ ದಿನ ಗಜ್ಮೈಕ್ 2024 ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಬಾನುಲಿ ಕೇಂದ್ರ ಕುಂದಾಪುರದ ಕಾರ್ಯಕ್ರಮ ನಿರ್ವಾಹಕರಾದ ಜ್ಯೋತಿ ಅವರು ಹೃದಯದ ಭಾಷೆ ಅಂದರೆ ಅದು ಕುಂದಾಪ್ರ ಕನ್ನಡ, ಈ ನೆಲದ ಸಂಸ್ಕ್ರತಿ ಸಂಪ್ರದಾಯವನ್ನು ಉಳಿಸಿ ಬೆಳೆಸೋಣ,ಕುಂದಾಪುರದ ಸಂಸ್ಕ್ರತಿಯೇ ನಮ್ಮ ಆಸ್ತಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ, ಭಾಷಾಭಿಮಾನ ನಮ್ಮೆಲ್ಲರ ಆದ್ಯ ಕರ್ತವ್ಯ, ಭಾಷೆಯ ಬಲವರ್ಧನೆಗಾಗಿ ಕಾಲೇಜಿನಲ್ಲಿ ಹತ್ತಾರು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗಾಗಿ ಶ್ರಮಿಸುತ್ತಿದ್ದೇವೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪ್ರ ಕನ್ನಡದ ಹಾಸ್ಯ ಕಲಾವಿದರಾದ ಚೇತನ್ ಕುಮಾರ್ ನೈಲಾಡಿ ಅವರು ಕುಂದಾಪ್ರ ಭಾಷೆಯಲ್ಲಿ ಕುಂದಾಪುರ ಕನ್ನಡದ ವಿವಿಧ ಸಂಪ್ರದಾಯಗಳನ್ನು ಹಾಸ್ಯ…
