ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕನ್ನಡ ಬದುಕಿನೊಂದಿಗೆ ಬೆಸೆದ ಭಾಷೆಯಾಗಿದೆ. ಅವರು ತಮ್ಮ ತಾಯಿಗೆ ನೀಡುವಷ್ಟೇ ಗೌರವವನ್ನು ತಮ್ಮ ಭಾಷೆ ನೀಡುತ್ತಾರೆ. ನಮ್ಮ ಭಾಷೆಯ ಮಹತ್ವ ತಿಳಿದುಕೊಂಡು ಪ್ರತಿಯೊಬ್ಬರೂ ವ್ಯವಹರಿಸಬೇಕು ಎಂದು ಚಿತ್ರ ನಟ ರಮೇಶ್ ಭಟ್ ಹೇಳಿದರು. ಅವರು ಟೀಂ ಕುಂದಾಪುರಿಯನ್ಸ್ ತಂಡದಿಂದ ಭಾನುವಾರ ಬಸವೇಶ್ವರ ನಗರದ ನೇತಾಜಿ ಮೈದಾನದಲ್ಲಿ ಹಮ್ಮಿಕೊಂಡ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕುಂದಾಪ್ರ ಕನ್ನಡವು ಬದುಕಿನ ಭಾಷೆಯೇ ಹೊರತು ಉದ್ಯಮದ ಭಾಷೆಯಲ್ಲ. ಹಾಗಾಗಿ ಇಂದಿಗೂ ಕುಂದಾಪುರ ಭಾಷೆ ಜೀವಂತವಾಗಿದೆ. ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಮಾತೃ ಭಾಷೆ ಹಾಗೂ ಮನೆಯ ಮೂಲ ಭಾಷೆ ಮರೆಯಬಾರದು ಎಂದರು. ಕಾರ್ಯಕ್ರಮದಲ್ಲಿ ಕುಂದಾಪುರ ರತ್ನ ಪ್ರಶಸ್ತಿ ಕಲೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಸಾಧನೆ ಮಾಡಿದ ಅರೆಹೊಳೆ ಸದಾಶಿವ ರಾವ್, ಚಿತ್ರ ನಿರ್ದೇಶಕ ಯಾಕುಬ್ ಖಾದರ್ ಅವರಿಗೆ ನೀಡಿ ಗೌರವಿಸಲಾಯಿತು. ‘ಕುಂದಾಪುರ ಸಮ್ಮಾನ’ ಗೌರವವನ್ನು ಯಕ್ಷಗಾನ ಕಲಾವಿದ ಶ್ರೀನಿವಾಸ ಸಾಸ್ತಾನ, ಗೌರಿ ಕೆ., ಮುಳುಗುತಜ್ಞ ಮಂಜುನಾಥ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆ ಆಡುಮಾತಿನಲ್ಲಿ ಮಾತ್ರವೇ ಉಳಿಯದೇ ದಾಖಲೀಕರಣದತ್ತ ಶ್ರಮವಹಿಸಿದಾಗ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ಯಾವುದೇ ಭಾಷೆಗೆ ಶಾಸ್ತ್ರೀಯ ತಳಗಟ್ಟು ದೊರೆತಾಗ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು. ಅವರು ಕುಂದ ಅಧ್ಯಯನ ಕೇಂದ್ರ ಉಪ್ಪುಂದ, ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಹಾಗೂ ಕುಂದಾಪ್ರ ಡಾಟ್ ಕಾಂ ನ್ಯೂಸ್ ಪೋರ್ಟೆಲ್ ಸಹಯೋಗದೊಂದಿಗೆ ಭಾನುವಾರ ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಆಯೋಜಿಸಲಾದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಣ, ಪ್ರತಿಷ್ಠೆ, ಅಧಿಕಾರವೇ ಪ್ರಧಾನವಾಗಿರುವ ಹಾಗೂ ಅದಕ್ಕಾಗಿಯೇ ಸಾಂಸ್ಕೃತಿಕ ನಾಯಕರಂತೆ ಬಿಂಬಿಸಿಕೊಳ್ಳುವ ಈ ಕಾಲಘಟ್ಟದಲ್ಲಿ ನಶಿಸುತ್ತಿರುವ ಕಲೆ, ಸಂಸ್ಕೃತಿ, ಸಂಪ್ರದಾಯಗಳ ಪುನರುತ್ಥಾನಕ್ಕೆ ಶ್ರಮಿಸುವ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದರು. ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ಕುಂದಾಪ್ರ ಕನ್ನಡ ಬದುಕಿನೊಂದಿಗೆ ಬೆಸೆದುಕೊಂಡಿದೆ. ನಮ್ಮ ಪ್ರಧಾನ ಕಾಯಕವಾದ ಕೃಷಿಯಲ್ಲಿ, ಮೀನುಗಾರಿಕೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರವು ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಯೋಜನವು ಮೊದಲ ಎರಡು ಜೀವಂತ ಮಕ್ಕಳಿಗೆ ಲಭ್ಯವಾಗಲಿದ್ದು, ಎರಡನೇ ಮಗುವು ಹೆಣ್ಣು ಮಗುವಾಗಿರಬೇಕು. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ 5,000 ರೂ. ಹಾಗೂ ಎರಡನೇ ಮಗು ಹೆಣ್ಣು ಮಗುವಾದಲ್ಲಿ 6,000 ರೂ. ಗಳನ್ನು ಜನನದ ನಂತರ ಒಂದೇ ಕಂತಿನಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾಯಿಸಲಾಗುವುದು. ಈ ಯೋಜನೆಯ ನೊಂದಾವಣೆಗೆ ಸಮೀಪದ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಕಳ, ಕುಂದಾಪುರ, ಉಡುಪಿ ಹಾಗೂ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕೋಲಜಿ ಮಂಗಳೂರು ಮತ್ತು ಸೋಶಿಯಲ್ ವೆಲ್ಫೇರ್ ಫೆಡರೇಶನ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ತೌಹೀದ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು. ಸೋಶಿಯಲ್ ವೆಲ್ಫೇರ್ ಫೆಡರೇಶನ್ ಗಂಗೊಳ್ಳಿ ಇದರ ಅಧ್ಯಕ್ಷ ಅಬ್ದುಲ್ ರಶೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಾಮೀಯಾ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ತೌಹೀದ್ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ತಾಹೀರ್ ಹಸನ್, ಸೋಶಿಯಲ್ ವೆಲ್ಫೇರ್ ಫೆಡರೇಶನ್ ಉಪಾಧ್ಯಕ್ಷ ಅಯೂಬ್ ಬೆದ್ರೆ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಶುಭಾಂಕರ ಮತ್ತು ಡಾ. ಪ್ರವೀಣಾ ಜಿ. ಉಪಸ್ಥಿತರಿದ್ದರು. ಸೋಶಿಯಲ್ ವೆಲ್ಫೇರ್ ಫೆಡರೇಶನ್‌ನ ಮಹಮ್ಮದ್ ಜಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ವನಾಜ್ ಮಾರಿ ಕಿರಾತ್ ಪಠಿಸಿದರು. ಜಫ್ರಿ ಎಂ. ಎಚ್. ವಂದಿಸಿದರು. ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ನೇತ್ರ ತಪಾಸಣೆ, ದಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಪ್ರತಿಷತಃ ನೂರರಷ್ಟು ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ವಿಶ್ವಕರ್ಮ ಯೋಜನೆ ಮತ್ತು ಸೂರ್ಯ ಘರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಅನುಕೂಲಕ್ಕಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರುತ್ತವೆ. ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಅವುಗಳ ಫಲಾನುಭವಿಗಳನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಸಮರ್ಪಕವಾಗಿ ಮಾಡಿದಾಗ ಮಾತ್ರ ಅವು ಜನರಿಗೆ ತಲುಪುತ್ತವೆ ಎಂದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಉತ್ತಮ ಪರಿಕರಣಗಳನ್ನು ಬಳಸಿ, ಬೆಳೆಗಳ ಆರೋಗ್ಯ ನಿರ್ವಹಣೆ ಮಾಡಿ, ಉತ್ತಮ ಇಳುವರಿ ಪಡೆಯುವುದರೊಂದಿಗೆ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಆರಂಭಿಸಲಾಗಿದ್ದು, ಮುಂಗಾರು ಭತ್ತದ ಬೆಳೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ “ವೀರಭೋಗ್ಯಾ ವಸುಂಧರಾ” ಎಂಬ ವಿಷಯದ ಕುರಿತು ಸ್ಪೂರ್ತಿ ಮಾತು 4ನೇ ಕಾರ್ಯಕ್ರಮ ’ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಕಾರ್ಕಳದ ಆದರ್ಶ ಗೋಖಲೆ ಅವರು “ವೀರಭೋಗ್ಯಾ ವಸುಂಧರಾವು ಸಾರ್ಥಕ ಜೀವನವನ್ನು ನಡೆಸಲು ಶೌರ್ಯ ಮತ್ತು ಧೈರ್ಯವು ಅಗತ್ಯ ಲಕ್ಷಣಗಳಾಗಿವೆ ಎಂದರು. ನಂತರ ಈ ಭೂಮಿಯನ್ನು ಆಳುವ ಸಾಮರ್ಥ್ಯ ಇರುವುದು ವೀರರಿಗೆ ಮಾತ್ರ. ದೇಶದ ಸಂಸ್ಕೃತಿ, ನಾಗರಿಕತೆಯನ್ನು ಉಳಿಸಿ – ಬೆಳೆಸುವಲ್ಲಿ ಸ್ವಾತಂತ್ರ್ಯ ಹೋರಾಟಗಾರರ, ಯೋಧರ ತ್ಯಾಗ – ಬಲಿದಾನಗಳು ಮಹತ್ವಪೂರ್ಣತೆಯನ್ನು ಪಡೆದುಕೊಂಡಿವೆ ” ಎಂದು ತಿಳಿಸಿ, ದೇಶಪ್ರೇಮದ ಕುರಿತ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಸಮಾರಂಭದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು, ಉಪನ್ಯಾಸಕ ವರ್ಗದವರು, ಬೋಧಕೇತರ ವೃಂದ, ಎಲ್ಲಾ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್. ಕೆ. ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ರ್ಟೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಶುಶ್ರೂಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು. ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದ ಅನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಯ-4 ಮತ್ತು ಪ್ರವರ್ಗ ಸಿ ಯ-38 ದೇವಸ್ಥಾನಗಳಲ್ಲಿ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಅಥವಾ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಆಗಸ್ಟ್ 24 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206 ಬಿ, ಮೊದಲನೇ ಮಹಡಿ, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಛೇರಿ ಅಥವಾ ಸಹಾಯಕ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆಯ ನದಿ-ಕಡಲು ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಭಾನುವಾರ ಸಂಪನ್ನಗೊಂಡಿತು. ಮಳೆ ಬಿಡುವು ನೀಡಿದ್ದರಿಂದ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಾಲಯದೊಳಗೆ ಆಡಳಿತ ಮಂಡಳಿ ಮತ್ತು ಸೇವಾ ವರ್ಗದ ಸದಸ್ಯರು ಸ್ವಯಂಸೇವಕರ ಜತೆ ಸೇರಿ ಶುಚಿತ್ವ, ಪೂಜೆ, ಭಕ್ತರ ಆಗಮನ-ನಿರ್ಗಮನ, ಪ್ರಸಾದ ವಿತರಣೆ ಸುಗಮವಾಗಿ ನಡೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಿದ್ದರು. ಜಾತ್ರೆಯ ಅಂಗವಾಗಿ ದೇವಾಲಯಕ್ಕೆ ಆಕರ್ಷಕ ಪುಷ್ಪಾಲಂಕಾರ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿತು. ಒಂದೆಡೆ ಸಮುದ್ರ, ಇನ್ನೊಂದೆಡೆ ನದಿ, ನಡುವೆ ಹಾದು ಹೋಗುವ ಹೆದ್ದಾರಿ ಕಾರಣದಿಂದ ತೀರ…
