ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ಬಸ್ರೂರಿನಲ್ಲಿ ಶನಿವಾರ ನಡೆದಿದೆ. ಮನೆಯ ಬಾಗಿಲು ಲಾಕ್ ಮಾಡಿಕೊಂಡು ಪತ್ನಿಗೆ ಹಲ್ಲೆ ಮಾಡಿ ಹುಟ್ಟಾಟವಾಡುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿಯಲು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟಿದ್ದಾರೆ. ಘಟನೆಯಲ್ಲಿ ಗಂಡನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಪತ್ನಿ ಅನಿತಾ (38) ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಲಕ್ಷ್ಮಣ (40) ಎಂಬಾತನನ್ನು ಬಂಧಿಸಲಾಗಿದೆ. ಸೊರಬ ಮೂಲದರಾದ ಅನಿತಾ – ಲಕ್ಷ್ಮಣ ದಂಪತಿ ಬಸ್ರೂರಿನ ರೆಸಿಡೆನ್ಶಿಯಲ್ ಬ್ಲಾಕ್ʼನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಾಶಿ ಮಠದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಯಾವುದೋ ವಿಚಾರಕ್ಕೆ ಇವರಿಬ್ಬರ ನಡುವೆ ನಡೆದ ಜಗಳವು ವಿಕೋಪಕ್ಕೆ ತಿರುಗಿದೆ. ಬಳಿಕ ಆರೋಪಿ ಪತಿಯು, ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಬಳಿಕ ಆರೋಪಿಯು ಮನೆಯ ಒಳಗಿನಿಂದ ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದಾನೆ. ಅಡುಗೆ ಮನೆಯಲ್ಲಿ ಪತ್ನಿ ಅನಿತಾ (38) ರಕ್ತದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪ್ರ ಕನ್ನಡ ಭಾಷೆಗೆ ಅದರದ್ದೇ ಆದ ಗತ್ತು ಗೈರತ್ತಿದೆ. ಹತ್ತಾರು ಬಗೆಯ ಪದಪ್ರಯೋಗಳಿರುವ ಕುಂದಾಪ್ರ ಕನ್ನಡವು ಕನ್ನಡ ಭಾಷೆಯ ವಿಶಿಷ್ಟ ಪ್ರಾಕಾರವಾಗಿದೆ ಎಂದು ಹಿರಿಯ ಸಾಹಿತಿ, ವಕೀಲರಾದ ಎ.ಎಸ್.ಎನ್. ಹೆಬ್ಬಾರ್ ಹೇಳಿದರು. ಅವರು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ವತಿಯಿಂದ ವಿಶ್ವ ಕುಂದಾಪ್ರ ಕನ್ನಡದ ದಿನಾಚರಣೆಯ ಅಂಗವಾಗಿ ಅಗಸ್ಟ್ 25ರ ಭಾನುವಾರ ಆಯೋಜಿಸಲಾಗಿರುವ ‘ಕೆಸರಲ್ಲೊಂದು ದಿನ – ಗಮ್ಮತ್’ ಬೃಹತ್ ಗ್ರಾಮೀಣ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ ಭಾಷೆ ಬದುಕಿನೊಂದಿಗೆ ಬೆಸೆದುಕೊಂಡು ಸಂಭ್ರಮಿಸುವ ದಿನಗಳನ್ನು ನೋಡುವುದೇ ಖುಷಿ. ಭಾಷೆಯ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಗಳು ಎಂದಿಗೂ ಮೆರಗು. ಗಮ್ಮತ್ ಕಾರ್ಯಕ್ರಮಕ್ಕೂ ಶುಭವಾಗಲಿ ಎಂದರು. ಬೈಂದೂರು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಪ್ರತಿನಿಧಿಗಳಾದ ಶರತ್ ಶೆಟ್ಟಿ ಉಪ್ಪುಂದ, ಪ್ರಸಾದ್ ಪ್ರಭು ಶಿರೂರು, ದಿವಾಕರ ಶೆಟ್ಟಿ ನೆಲ್ಯಾಡಿ, ಕಿಶೋರ್ ಪೂಜಾರಿ ಸಸಿಹಿತ್ಲು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಸುನಿಲ್ ಹೆಚ್. ಜಿ. ಬೈಂದೂರು, ಎ.ಎಸ್.ಎನ್. ಹೆಬ್ಬಾರ್…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪ್ರ ಕನ್ನಡದ್ ತಾಕತ್ತೇ ಅಂತದ್ ಕಾಣಿ. ಅದ್ರೊಳಗ್ ಭಾವ-ಬಂಧ ಎರಡೂ ಇತ್ತ್. ಹಂಗಾಯೇ ಕುಂದಾಪ್ರ ಭಾಷಿ ಮಾತಾಡ್ವರ್ ಯಾರ್ ಯಾರ್ ಎಲ್ಲೆಲ್ಲಿದ್ರೋ ಅಲ್ಲಲ್ಲೇ ಭಾಷಿ ಉಳ್ಸಿ-ಬೆಳ್ಸು ಬಗ್ಗ್ ಒಂಚೂರಾರೂ ನಿಗಾ ವಯ್ಸ್ಲಿ ಅಂದೇಳಿ ಆಟಿ ಅಮಾಸಿ ದಿನವೇ ’ವಿಶ್ವ ಕುಂದಾಪ್ರ ಕನ್ನಡ ದಿನ ‘ ಅಂದೇಳಿ ಆಚರಿಸ್ತಿದ್ರ್ ಈ ಸರ್ತಿ ಊರಂಗೆ, ಪರೂರಂಗೆ ಬೇರ್ಬೇರೆ ಕಾರ್ಯಕ್ರಮ ಆತಿತ್ತ್. ಬ್ರಹ್ಮಾವರದಿಂದ ಹಿಡ್ದ್ ಶಿರೂರ್ ತನಕ, ಕಾರ್ಕಳ, ಹೆಬ್ರಿ, ಬೆಂಗಳೂರು, ಧಾರವಾಡದಂಗೂ ಕಾರ್ಯಕ್ರಮ ಮಾಡ್ತಿದ್ರ್. ಊರಂಗ್ ಕಾರ್ಯಕ್ರಮ ಮಾಡುದ್ ಒಂದ್ ನಮ್ನಿ. ಆರೆ ಪರೂರಂಗ್ ಇಪ್ಪು ಕುಂದಾಪ್ರ ಕನ್ನಡ ಮಾತಾಡ್ವರೆಲ್ಲಾ ಒಟ್ಟಾಯಿ ಕಾರ್ಯಕ್ರಮ ಮಾಡುದ್ ಸಣ್ಣಾಟದ್ ಮಾತಲ್ಲ ಕಾಣಿ. ಅಂದಂಗೆ ಕುಂದಾಪ್ರ ಡಾಟ್ ಕಾಂ ಬಳಗದವ್ರೂ ವರ್ಷಂಪ್ರತಿ ಕಾರ್ಯಕ್ರಮ ಮಾಡ್ತ್ರ್. ವಿಶ್ವ ಕುಂದಾಪ್ರ ಕನ್ನಡ ದಿನ:ಕುಂದಾಪ್ರ ಕನ್ನಡ ಭಾಷೆಗೆ ತನ್ನದೇ ಆದ ಹಿರಿಮೆ-ಗರಿಮೆ ಇದೆ. ಕನ್ನಡ ಭಾಷೆಯ ಅತ್ಯಂತ ಸರಳ ಹಾಗೂ ಸಂಕ್ಷಿಪ್ತ ರೂಪವೆನಿಸಿಕೊಂಡಿರುವ ಕುಂದಾಪ್ರ ಕನ್ನಡ ಸರಿಸುಮಾರು ಬ್ರಹ್ಮಾವರದಿಂದ…
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಶಿಥಿಲಾವಸ್ಥೆ ತಲುಪಿದ ಮನೆ. ಅನಾರೋಗ್ಯದಿಂದ ದಣಿದು ಕುಳಿತ ದುಡಿಯುವ ಕೈಗಳು. ವಯಸ್ಸಾದ ತಾಯಿ. ಇದರ ನಡುವೆಯೇ ಮೂವರು ಹೆಣ್ಣು ಮಕ್ಕಳು ಮತ್ತು ಏಳು ಮಂದಿ ಶಾಲೆಗೆ ತೆರಳುವ ಮಕ್ಕಳು ನಿತ್ಯವೂ ಆತಂಕದ ಬದುಕು ಸಾಗಿಸುತ್ತಿದ್ದಾರೆ. ಇದು ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಕುರ್ಕುಂಡಿ ಗುಡ್ಡೆಮನೆ ಮರ್ಲಿ ಪೂಜಾರ್ತಿ ಕುಟುಂಬದ ಕರುಣಾಜನಕ ಕಥೆ. ಕುರ್ಕುಂಡಿಯಲ್ಲಿ ವಾಸವಿರುವ ಗುಡ್ಡಿಮನೆ ಕುಟುಂಬ ಸುಮಾರು 40 ವರ್ಷದ ಹಿಂದೆ ಕಟ್ಟಿದ ಮನೆ ಇದೀಗ ಸಂಪೂರ್ಣ ಶಿಥಿಲಾವಸ್ಥೆ ತಲುಪಿದೆ. ಮಣ್ಣಿನ ಗೋಡೆಗಳು ಬಿರುಕು ಬಿಟ್ಟಿದ್ದು, ಗಾಳಿ ಮಳೆಗೆ ಮೇಲ್ಛಾವಣಿಯ ಹಂಚುಗಳು ಹಾರಿಹೋಗಿವೆ. ರೀಪು – ಪಕಾಸುಗಳು ಗೆದ್ದಿಲು ಹಿಡಿದಿದ್ದು ಯಾವುದೇ ಸಂದರ್ಭದಲ್ಲಿ ಮನೆ ಧರಾಶಾಹಿಯಾಗುವ ಆತಂಕ ಎದುರಾಗಿದೆ. ಆಗಲೋ ಇಗಲೋ ಎನ್ನುವಂತಿರುವ ಮನೆಯಲ್ಲಿಯೇ ಇರುವ ವಯೋವೃದ್ಧ ತಾಯಿ, ಹಾಸಿಗೆ ಹಿಡಿದ ಅಳಿಯ ಹಾಗೂ ಏಳು ಮಕ್ಕಳು ಆತಂಕದಲ್ಲಿಯೇ ಕಾಲಕಳೆಯಬೇಕಾದ ಪರಿಸ್ಥಿತಿ ಇದೆ. ಅವರಿಗೆ ಉಳಿಯಲು ಬೆರೆಡೆಯೂ ಸೂಕ್ತವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳ್ವೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೈಕಾಡಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳ್ವೆ ನಿವಾಸಿ ನಾಗರಾಜ್ (40) ಎಂದು ಗುರುತಿಸಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ನಾಗರಾಜ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ನೀಡಲಾಗುತ್ತಿದೆ. ಶಿಕ್ಷಣಕ್ಕೆ ಪ್ರಥಮ ಆದ್ಯತೆ ಎಂಬ ನೆಲೆಯಲ್ಲಿ ಪೋಷಕರಿಗೆ ಹೊರೆಯಾಗದಂತೆ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪಾಠೇತರ ಚಟುವಟಿಕೆಗಳಿಗೂ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ ಎಂದು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್ ಹೇಳಿದರು. ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿದ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಮಿತಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಕಳೆದ ವರ್ಷ ಅನೇಕ ವಿದ್ಯಾರ್ಥಿಗಳು ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ್ದಾರೆ. ಸರಕಾರದ ಮಾನದಂಡ ಹಾಗೂ ಮಾರ್ಗಸೂಚಿಯಂತೆ ಮಕ್ಕಳ ಕಲಿಕಾ ಅಭಿವೃದ್ಧಿಗೆ ಶಾಲೆಯ ಆಡಳಿತ ಮಂಡಳಿ ಶ್ರಮಿಸುತ್ತಿದ್ದು, ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಬೆನ್ನೆಲುಬಾಗಿ ನಿಂತು ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು. ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ವರ್ಷದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಕತೆಗಾರ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನಕ್ಕೆ ದೊರೆತಿದೆ. ಬೆಂಗಳೂರಿನಲ್ಲಿ ಮಾಧ್ಯಮ ಅಧ್ಯಾಪಕರಾಗಿ ಕಾರ್ಯನಿರ್ವಸುತ್ತಿರುವ ಅವರು ಕತೆಗಳು ಈಗಾಗಲೇ ಅಪಾರ ಓದುಗರ ಪ್ರೀತಿ ಮತ್ತು ವಿಮರ್ಶಕರ ಮೆಚ್ಚುಗೆಗಳನ್ನು ಪಡೆದಿವೆ. ಹಿರಿಯ ಲೇಖಕರಾದ ಎಚ್. ಆರ್. ಸುಜಾತ, ಗೊರವರ ಟಿ. ಎಸ್. ಗದಗ ಮತ್ತು ಫಣಿರಾಜ್, ಉಡುಪಿ ಇವರು ನಿರ್ಣಾಯಕರಾಗಿ ಸಹಕರಿಸಿರುತ್ತಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ಹಾಗೂ ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಮುಂದಿನ ದಿನಗಳಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ. ದಯಾನಂದ ಅವರ ಪರಿಚಯ:ದಯಾನಂದ ಅವರು ಹುಟ್ಟಿದ್ದು 1988ರ ಅಂಬೇಡ್ಕರ್ ಜಯಂತಿಯಂದು ನಾಗಮಂಗಲ ತಾಲ್ಲೂಕಿನ ಬೆಳ್ಳೂರು, ಓದಿ ಬೆಳೆದಿದ್ದು ಬೆಂಗಳೂರಿನಲ್ಲಿ. ಕನ್ನಡ ಸಾಹಿತ್ಯ, ಇಂಗ್ಲಿಷ್ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. ‘ಸಮಯ ಟಿವಿ’, ‘ಪ್ರಜಾವಾಣಿ’ ಮತ್ತು ‘ಸಮಾಚಾರ. ಕಾಂ’ ಸುದ್ದಿ ಸಂಸ್ಥೆಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಪ್ರಯುಕ್ತ ಗಂಗೊಳ್ಳಿಯ ಸ. ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಗಣಪತಿ ಖಾರ್ವಿ ಬಸ್ರೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಗಿಲ್‌ನಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಎಂ. ನಾಗೇಂದ್ರ ಪೈ, ಮಾಜಿ ಅಧ್ಯಕ್ಷರಾದ ಉಮೇಶ್ ಎಲ್. ಮೇಸ್ತ, ವಾಸುದೇವ ಶೇರುಗಾರ್, ಜನಾರ್ದನ ಪೂಜಾರಿ ಪೆರಾಜೆ, ದಯಾನಂದ ಗಾಣಿಗ, ಪ್ರದೀಪ ಡಿ. ಕೆ., ಬಿ. ಲಕ್ಷ್ಮೀಕಾಂತ ಮಡಿವಾಳ, ಸುಗುಣಾ ಆರ್. ಕೆ., ರೋಟರಿ ಪದಾಧಿಕಾರಿಗಳು ಹಾಗೂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಕೆ. ರಾಮನಾಥ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಶಿಕ್ಷಣ ಕ್ಷೇತ್ರದಲ್ಲಿ ನಾಟಕ ಮತ್ತು ಕಲೆ ಕೇವಲ ಪಠ್ಯೇತರ ಚಟುವಟಿಕೆಗಳಲ್ಲ. ಬದಲಾಗಿ ಅವು ಸೃಜನಶೀಲತೆ, ಬೌದ್ಧಿಕ ಬೆಳವಣಿಗೆಯನ್ನು ಅಭಿವೃದ್ಧಿ ಪಡಿಸಲಿರುವ ಪ್ರಬಲ ಸಾಧನಗಳಾಗಿವೆ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯು ತಿಳಿಸಿದರು. ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯ ಶಿವರಾಮ ಕಾರಂತ ಸಭಾಭವನದಲ್ಲಿ ಹಮ್ಮಿಕೊಂಡ ’ಶಿಕ್ಷಣದಲ್ಲಿ ಕಲೆ ಹಾಗೂ ನಾಟಕದ ಪಾತ್ರ’ದ ಕುರಿತು ಕಾರ‍್ಯಗಾರದಲ್ಲಿ ಮಾತನಾಡಿದರು. ಶಿಕ್ಷಣದಲ್ಲಿ ಕಲೆಯನ್ನು ರೂಢಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ವಯಂ ಅಭಿವ್ಯಕ್ತಿ ಮತ್ತು ಸಂವಹನಕ್ಕಾಗಿ ಮೌಲ್ಯಯುತವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ನೃತ್ಯ, ಸಂಗೀತ, ನಾಟಕ, ಸೃಜನಶೀಲ ಬರವಣಿಗೆ, ರಂಗಭೂಮಿ ಇತ್ಯಾದಿಗಳನ್ನು ಒಳಗೊಂಡಿರಬೇಕು. ನಾಟಕಗಳು ನಮ್ಮ ಸುತ್ತಮುತ್ತಲಿನ ಸುಂದರ ದೃಶ್ಯಗಳನ್ನು ನಮ್ಮ ಕಣ್ಣ ಮುಂದೆ ಸೃಷ್ಟಿಸುವುದರಿಂದ ವಿದ್ಯಾರ್ಥಿಗಳಿಗೆ ಬಹುಬೇಗನೆ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ. ಕಲೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಸುಧಾರಿಸಲು ಸಹಾಯಕ. ಪ್ರದರ್ಶನದ ಕಲೆಗಳು ಮಕ್ಕಳಲ್ಲಿ ತಮ್ಮ ಭಾವನೆ ಮತ್ತು ಕಲ್ಪನೆಗಳನ್ನು ಹಾಗೂ ತಮ್ಮದೇ ಆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ. ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪ್ರಸಕ್ತ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ…
