ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಾಲಕನ ಮೇಲೆ ದೂರದ ಸಂಬಂಧಿಗಳಾದ ನಾಲ್ವರು ಹಲ್ಲೆ ನಡೆಸಿದ ಘಟನೆಯ ವೀಡಿಯೊ ವೈರಲ್ ಆಗಿದ್ದು ಮೇ.28ರಂದು ರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಣಕಾಸು ವಿಚಾರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು ಪ್ರಕರಣದ ಹಿನ್ನೆಲೆಯಲ್ಲಿ ಸಿನಾನ್, ರಿಝ್ವಾನ್, ಅಬಾನ್, ತೌಹೀದ್ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ಬೆನ್ನಲ್ಲೇ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ 29ರಂದು ಎಫ್ಐಆರ್ ದಾಖಲಾಗಿತ್ತು. ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತ ಅಪ್ರಾಪ್ತ ವಯಸ್ಸಿನವನಾಗಿರುವುದರಿಂದ, ವೀಡಿಯೊವನ್ನು ಪ್ರಸಾರ ಮಾಡುವುದು ಅಪರಾಧವೇ ಅಥವಾ ಇಲ್ಲವೇ ಎಂದು ಕಾನೂನು ಅಭಿಪ್ರಾಯವನ್ನು ಪಡೆದು ವೀಡಿಯೊವನ್ನು ಪ್ರಸಾರ ಮಾಡುವವರ ಮೇಲೆ ಮುಂದಿನ ಕ್ರಮವನ್ನು ನಿರ್ಧರಿಸಲಾಗುತ್ತದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬ ನಾಗರಿಕನೂ ಅಪರಾಧಗಳನ್ನು ಎಸಗದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಾಲ್ಯದಲ್ಯೇ ಮೌಲ್ಯ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಸವರಾಜ್ ಕನಕಶೆಟ್ಟಿ ಹೇಳಿಕೆ ಕೊಟ್ಟರು. ರೋಟರಿ ಕ್ಲಬ್ ಗಂಗೊಳ್ಳಿ, ನಮ್ಮ ಭೂಮಿ ಸಂಸ್ಥೆ ಹಾಗೂ ಗಂಗೊಳ್ಳಿ ಪೊಲೀಸ್ ಠಾಣೆ ಇವರ ಜಂಟಿ ಆಶ್ರಯ ಮೌಲ್ಯಾಧಾರಿತ ಶಿಕ್ಷಣ ಅಡಿಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ “ತೆರೆದ ಮನೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೊಲೀಸ್ ಠಾಣೆಯಲ್ಲಿ ಇರುವ ಆಯುಧಗಳು ಮತ್ತು ಅದನ್ನು ಯಾವಾಗ ಬಳಸಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ. ನಾಗೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಮ್ಮ ಭೂಮಿ ಸಂಸ್ಥೆಯ ಸದಸ್ಯರಾದ ಕೃಪಾ ಭಟ್, ಶ್ರೀನಿವಾಸ ಗಾಣಿಗ, ರೋಟರಿ ಕ್ಲಬ್ನ ಸದಸ್ಯರಾದ ವಾಸುದೇವ್ ಶೇರುಗಾರ್, ಜನಾರ್ದನ ಪೂಜಾರಿ, ದಿನಕರ್ ಶಾನಭಾಗ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತೀಕ್ಷಾ ಶೆಟ್ಟಿ 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ.ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ದತ್ತು ಸ್ವೀಕಾರ ಪಡೆದ ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಅವರು ವಾಹನ ಹಸ್ತಾಂತರಿಸಿ ಮಾತನಾಡಿ, ಸರಕಾರಿ ಉಳಿವಿಗೆ ಹಳೆ ವಿದ್ಯಾರ್ಥಿಗಳ ಹಾಗೂ ಊರಿನ ನಾಗರಿಕರ ಸಹಕಾರ ಅಗತ್ಯವಿದೆ. ನಮ್ಮೂರಿನ ಶಾಲೆಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಯೋಜನೆ ರೂಪಿಸಿಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು. ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಸಮವಸ್ತ್ರ, ಇಂಗ್ಲೀಷ್ ಮಾಧ್ಯಮದ ಪಠ್ಯ ಪುಸ್ತಕಗಳನ್ನು ನೀಡಲಾಗುವುದು. ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಲಾಗಿದ್ದು ಉತ್ತಮ ನುರಿತ ಶಿಕ್ಷಕರನ್ನು ನೇಮಿಸಲಾಗಿದೆ ಇದರ ಸದುಪಯೋಗಪಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶಾರದಾ ದೇವಾಡಿಗ, ಬಿಜೂರು ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ವಿ. ದೇವಾಡಿಗ, ಗ್ರಾ.ಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಸಹೋದ್ಯೋಗಿ ವೈದ್ಯೆಯೊಬ್ಬರು ನೀಡಿದ ದೂರಿನಂತೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಅವರ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವೈದ್ಯನನ್ನು ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸದ್ಯ ವೈದ್ಯ ತಲೆಮರೆಸಿಕೊಂಡಿದ್ದಾನೆ. ಕುಂದಾಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆಗೆ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಮಾನಭಂಗಕ್ಕೆ ಯತ್ನಿಸಿದ್ದಾಗಿ ಮಹಿಳಾ ವೈದ್ಯ ಗುರುವಾರ ಸಂಜೆ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು 354, 354A, 504, 506, 509 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿ ವಿರುದ್ಧ ಸಾರ್ವಜನಿಕರು ಆಕ್ರೋಶಿತರಾಗಿದ್ದು, ಆರೋಪಿ ರಾಬರ್ಟ್ ರೆಬೆಲ್ಲೋ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಜಿಲ್ಲಾಧಿಕಾರಿಗಳು ವೈದ್ಯನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. 32 ವರ್ಷ ಪ್ರಾಯದ ವಿವಾಹಿತ ಮಹಿಳಾ ವೈದ್ಯೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್, 2ನೇ ಹಂತದ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 165 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಉಳಿದಂತೆ ಕಾಲೇಜಿನ ವಿದ್ಯಾರ್ಥಿನಿಯರಾದ ವರ್ಣಾ ಆಚಾರ್ 130ಅಂಕಗಳು ಹಾಗೂ ಉನ್ನತಿ ಗೌಡ 113ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ. ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ಕಾರದ ಪ್ರಸಕ್ತ ಸಾಲಿಗೆ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಕ್ರಿಯಾಯೋಜನೆಗಳ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ ರೇಜು ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಳೆ, ಗಾಳಿ, ಸಿಡಿಲು ಸೇರಿದಂತೆ ಮತ್ತಿತರ ಪ್ರಕೃತಿ ವಿಕೋಪಗಳಿಂದ ಜೀವಹಾನಿ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಬೇಕು. ವಿಕೋಪ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು. ಮಳೆಗಾಲದಲ್ಲಿ ನೀರು ಹರಿಯುವ ಚರಂಡಿ ಹಾಗೂ ತೋಡುಗಳಲ್ಲಿ ಕಸದರಾಶಿಗಳು ತುಂಬಿ ಮಳೆಯ ನೀರು ಹರಿಯದೇ ಕೃತಕ ನೆರೆ ಉಂಟಾಗುವ ಸಾಧ್ಯತೆ ಇರುತ್ತದೆ. ಅಲ್ಲದೇ ಕುಡಿಯುವ ನೀರಿನ ಸಂಪರ್ಕಗಳಲ್ಲಿಯೂ ಸಹ ಮಿಶ್ರಣವಾಗಿ ಆರೋಗ್ಯ ಸಮಸ್ಯೆಗಳು ಉಂಟಾಗಬಹುದಾಗಿದ್ದು, ಇದನ್ನು ತಡೆಯಲು ಜಿಲ್ಲೆಯ ಎಲ್ಲಾ ನಗರ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಸವಿತಾ ಸಮಾಜ ಹಾಗೂ ಉಪ್ಪುಂದ ವಲಯ ಸವಿತಾ ಸಮಾಜ ಮತ್ತು ಸವಿತಾ ಸಮಾಜ ಕೊಲ್ಲೂರು ಮತ್ತು ನಾಗೂರು ಘಟಕ ಇದರ ಉದ್ಘಾಟನೆಯನ್ನು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಂಬಲಪಾಡಿ ಉಡುಪಿ ಇದರ ಅಧ್ಯಕ್ಷರಾದ ನವೀನ್ ಚಂದ್ರ ಭಂಡಾರಿ ಎಂ ಎಸ್ ಸಿ ಮಣಿಪಾಲ್ ಇವರು ಶ್ರೀ ರಾಘವೇಂದ್ರ ಮಠದ ಸಭಾ ವೇದಿಕೆಯಲ್ಲಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷರಾಗಿ ಬೈಂದೂರಿನ ಪ್ರಶಾಂತ್ ಭಂಡಾರಿ, ಅಧ್ಯಕ್ಷರಾಗಿ ಬೈಂದೂರು ತಾಲೂಕು ಸವಿತಾ ಸಮಾಜ, ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ವಿಶ್ವನಾಥ್ ಭಂಡಾರಿ, ನಿಂಜೂರು ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷರಾದ ಗೋವಿಂದ ಭಂಡಾರಿ, ಬನಂಜೆ ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಸುಭಾಷ್ ಭಂಡಾರಿ, ಗುಜ್ಜಾಡಿ ಬೈಂದೂರು ತಾಲೂಕು ಸವಿತಾ ಸಮಾಜದ ಗೌರವ ಅಧ್ಯಕ್ಷರಾದ ಸಂತೋಷ್ ಭಂಡಾರಿ ಉಪ್ಪುಂದ ಮೊದಲಾದವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಮೊದಲು ತಾಲೂಕು ಸವಿತಾ ಸಮಾಜದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ಲಾಂಛನ ಬಿಡುಗಡೆ ಸಮಾರಂಭ ಕುಂಭಾಶಿಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ದೇವರಾಯ ಎಂ.ಶೇರುಗಾರ್ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಗಣೇಶ ಕಿಣಿ ಬೆಳ್ವೆ, ಸಮಿತಿಯ ಹಿರಿಯ ಸದಸ್ಯ ಡಾ| ಕಾಶೀನಾಥ ಪೈ, ಬೆಣ್ಗೆರೆ ಶ್ರೀ ನಾಗದೇವಸ್ಥಾನದ ಕಾರ್ಯದರ್ಶಿ ಗುರುರಾಜ್ ಮೇಸ್ತ, ಗುಜ್ಜಾಡಿ-ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಅಧ್ಯಕ್ಷ ರಘುರಾಮ ಟಿ., ಚಂದ್ರ ಖಾರ್ವಿ, ಪ್ರಧಾನ ಕಾರ್ಯದರ್ಶಿ ನಿತಿನ್ ಖಾರ್ವಿ, ಕಾರ್ಯದರ್ಶಿ ಶ್ರೀಧರ ಸಕ್ಲಾತಿ, ಮಹಿಳಾ ಸಮಿತಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ, ಕಾರ್ಯದರ್ಶಿ ಸುಜಾತಾ ಬಾಬು ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು. ಸಮಿತಿಯ ಗೌರವಾಧ್ಯಕ್ಷ ಬಿ.ಲಕ್ಷ್ಮೀಕಾಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಜಗದಾಂಬ ಗೋಪಾಲಕೃಷ್ಣ (ಅಂಬಿಕಾ) ದೇವಸ್ಥಾನದ ದೇವರ ಪುನ: ಪ್ರತಿಷ್ಠಾ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮವಾರ ವಿಜೃಂಭಣೆಯಿಂದ ನಡೆಯಲಿದೆ. ದೇವರ ಪುನ: ಪ್ರತಿಷ್ಠಾ ವರ್ಧಂತಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆ ದೇವತಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ವರ್ಧಂತಿ ಉತ್ಸವದ ಪ್ರಯುಕ್ತ ದೇವರಿಗೆ ಶತಕಲಶಾಭಿಷೇಕ, ಸಾನ್ನಿಧ್ಯ ಹವನ, ಮಹಾ ಪೂಜೆ, ಮಹಾ ಸಮಾರಾಧನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಜಿ.ಅನಂತಕೃಷ್ಣ ಭಟ್, ಜಿ.ವಸಂತ ಭಟ್, ಜಿ.ವಿಠಲದಾಸ ಭಟ್, ಸೇವಾದಾರರಾದ ದಿ.ನಗರ ಸುದರ್ಶನ ಶ್ರೀಧರ ನಾಯಕ್ ಅವರ ಮಕ್ಕಳು, ಅರ್ಚಕ ಕುಟುಂಬಸ್ಥರು, ಪುರೋಹಿತರು, ಸಮಾಜ ಬಾಂಧವರು ಮೊದಲಾದವರು ಉಪಸ್ಥಿತರಿದ್ದರು.
