Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು. ಸಹೋದರಿಯರಾದ ಸರೋಜಿನಿ ಹೆಗ್ಡೆ ಹಾಗೂ ಶಶಿಕಲಾ ಹೆಗ್ಡೆ ಅವರೊಂದಿಗೆ ಮತಗಟ್ಟೆಗೆ ಆಗಮಿಸಿದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಮತದಾನದ ಬಳಿಕ ಅವರು ಪ್ರತಿಕ್ರಿಯಿಸಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಗೆಲ್ಲುವ ನಿರೀಕ್ಷೆ ಇದೆ. ಮತದಾರರು ಬೆಂಬಲಿಸುತ್ತಿರುವುದು ಗೆಲುವಿನ ವಿಶ್ವಾಸ ಹೆಚ್ಚಿಸಿದೆ ಎಂದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ ಹಾಗೂ ಕುಂದಾಪುರ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬುಧವಾರ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಕುಂದಾಪುರದಲ್ಲಿ ಪಂಜಿನ ಮೆರವಣಿಗೆ ಜರುಗಿತು. ಕುಂದಾಪುರ ತಾಲೂಕು ಪಂಚಾಯತ್ ಆವರಣದಲ್ಲಿ ಪಂಜಿನ ಮೆರವಣಿಗೆಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ಪ್ರತಿಯೊಬ್ಬ ನಾಗರಿಕನೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು. ಅದಕ್ಕಾಗಿ ಸಾಕಷ್ಟು ಮತದಾನ ಜಾಗೃತಿ ಮೂಡಿಸಲಾಗಿದೆ. ಮತಗಟ್ಟೆಗಳಲ್ಲಿ ಕನಿಷ್ಟ ಸೌಲಭ್ಯವಿರುವಂತೆ ನೋಡಿಕೊಳ್ಳಲಾಗಿದೆ. ಮಹಿಳೆಯರು, ವಿಕಲಚೇತನರು ಹಾಗೂ ಯುವ ಸಮುದಾಯವನ್ನು ಮತಗಟ್ಟೆಯತ್ತ ಆಕರ್ಷಿಸಲು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ 17 ವಿಶೇಷ ಮತಗಟ್ಟೆಗಳನ್ನು ಮಾಡಲಾಗಿದೆ ಎಂದರು. ತಾಲೂಕು ಪಂಚಾಯತಿ ಆವರಣದಿಂದ ಕುಂದಾಪುರ ಶಾಸ್ತ್ರೀ ವೃತ್ತದ ತನಕ ಅಧಿಕಾರಿಗಳು ಹಾಗೂ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪಂಜಿನ ಮೆರವಣಿಗೆ ಜರುಗಿತು. ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಮೊಂಬತ್ತಿಯನ್ನು ಬೆಳಗಿ, ಪ್ಲೈಓವರ್ ಮೇಲ್ಭಾಗದಲ್ಲಿ ಪಂಜುಗಳನ್ನು ಪ್ರದರ್ಶಿಸಿ ಜಾಗೃತಿ ಮೂಡಿಸಲಾಯಿತು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಪ್ರೆಮಾನಂದ, ಮೆಸ್ಕಾಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಎ.25: ಬಡಗುತಿಟ್ಟಿನ ಯಕ್ಷರಂಗದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಇಂದು ಬೆಳಗ್ಗೆ 4:30ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಪೆರ್ಡೂರು ಮೇಳದಲ್ಲಿ ಸುಧೀರ್ಘ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ತೊಡಿಗಿಸಿಕೊಂಡಿದ್ದರು. 1957ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶ ಚೆನ್ನಾಗಿರಬೇಕಾದರೆ ಬಿಜೆಪಿ ಆಡಳಿತದಲ್ಲಿ ಇರಬೇಕು ಎಂದು ಜನರಿಗೂ ತಿಳಿದಿದೆ. ಹಾಗಾಗಿ ಈ ಭಾರಿಯೂ ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ. ನಮ್ಮ ಕಾರ್ಯಕರ್ತರು ಕುಟುಂಬಿಕರು ಹಾಗೂ ಸ್ನೇಹಿತರನ್ನು ಮತ ಹಾಕುವಂತೆ ಪ್ರೇರೆಪಿಸಿ ಬಿಜೆಪಿ ಅಭ್ಯರ್ಥಿಯು ಅತ್ಯಧಿಕ ಅಂತರದಿಂದ ಗೆಲುವು ಸಾಧಿಸಲು ಶ್ರಮಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದರು. ಅವರು ಮಂಗಳವಾರ ಬಿಜೆಪಿ ಕುಂದಾಪುರ ಮಂಡಲದ ವತಿಯಿಂದ ಮಾಬುಕಳದಿಂದ ಕುಂದಾಪುರ ಹೊಸ ಬಸ್ ನಿಲ್ದಾಣದ ತನಕ ಜರುಗಿದ ಬೃಹತ್ ಬೈಕ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ 28 ಸೀಟು ಬರಲೇಬೇಕು. ಬಿಜೆಪಿಯ ಕಾರ್ಯಕರ್ತರು ಯಾರ ಅಪ್ಪಣೆಗೂ ಕಾಯದೇ ಗೆಲುವಿಗೆ ಶ್ರಮಿಸಬೇಕಿದೆ ಎಂದ ಅವರು ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸರಿಸಮನಾದ ನಾಯಕರಿಲ್ಲ. ಸರಳತೆ, ಭ್ರಷ್ಟಾಚಾರದ ಆರೋಪವಿಲ್ಲದ ನಾಯಕನ್ನು ಲೋಕಸಭೆಗೆ ಕಳುಹಿಸುವುದು ನಮ್ಮ ಜವಾಬ್ದಾರಿ ಎಂದರು. ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೇಂದ್ರ ಇಷ್ಟೊಂದು ಶೌಚಾಲಯ ಮಾಡಿದ್ದರೂ ಕಾಂಗ್ರೆಸ್ ಇನ್ನೂ ಚೊಂಬು ಹಿಡಿಕೊಂಡಿರುವುದು ದುರ್ದೈವ. ಪರಿವಾರ ರಾಜಕೀಯದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ರಾ.ಹೆ – 66ರ ಬಸ್ ನಿಲ್ದಾಣದ ಹತ್ತಿರ ಮಂಗಳವಾರ ನಡೆದಿದೆ. ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತ ದುರ್ದೈವಿ ಬೆಳಿಗ್ಗೆ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಬಸ್ ನಿಲ್ದಾಣ ಸಮೀಪ ಬೈಕ್ ಸವಾರನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಸೇರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಿದ್ದಾರೆ. ಕೋಟ ಪೊಲೀಸರು ಸ್ಥಳಕ್ಕಾಗಿಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಪ್ರಸಿದ್ದ ಹೋಟೆಲ್ ಪಾರಿಜಾತದ ಮಾಲಕ ರಾಮಚಂದ್ರ ಭಟ್ (82 ವರ್ಷ) ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ರಾಮಚಂದ್ರ ಭಟ್ ಅವರು ಪಾರಿಜಾತ ಭಟ್ರು ಎಂದೇ ಪ್ರಸಿದ್ಧರಾಗಿದ್ದರು. ಅವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿ ಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ತಾಲೂಕಿನ ಕಿರಿಮಂಜೇಶ್ವರದಲ್ಲಿ ಬಿಜೆಪಿ ಬೈಂದೂರು ಮಂಡಲದಿಂದ ನಡೆದ ಶಕ್ತಿಸಿಂಧು – ಬೃಹತ್ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ.33ರಷ್ಟು ಸ್ಥಾನ ಹಾಗೂ ರಾಜ್ಯದಲ್ಲಿ ಜಿ.ಪಂ-ತಾಪಂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೇ. 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಿದವರು ಪ್ರಧಾನಿ ಮೋದಿ ಹಾಗೂ ಬಿ.ಎಸ್. ಯಡಿಯೂರಪ್ಪನವರು. ಆದರೆ ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಇರಬೇಕಾ ಎಂಬುದನ್ನು ಮತದಾರರು ಯೋಚಿಸಬೇಕಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಇದೂ ಕೇಂದ್ರ ಸರಕಾರದ ನೀಡುತ್ತಿರುವ ಅಕ್ಕಿಯಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಸುಳ್ಳು ಹೇಳಿಕೊಂಡು ರಾಜಕಾರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹುಬ್ಬಳ್ಳಿಯಲ್ಲಿ ಅಮಾಯಕ ಹಿಂದೂ ಯುವತಿ ನೇಹಾಳನ್ನು ಮತಾಂಧ ಕ್ರೂರವಾಗಿ ಕೊಲೆ ಗೈದಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಗುರುರಾಜ ಗಂಟಿಹೊಳೆ ಅವರ ನೇತೃತ್ವದಲ್ಲಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ತನ್ನ ಪ್ರೀತಿಯನ್ನು ಒಪ್ಪಿಲ್ಲ ಎನ್ನುವ ಕಾರಣಕ್ಕೆ ನೇಹಗಳನ್ನು ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಲವ್ ಜಿಹಾದ್ ನ ಒಂದು ಭಾಗ. ಈ ಸರ್ಕಾರ ಕೊಲೆಯಾದ ನೇಹಳ ಕುಟುಂಬಕ್ಕೆ ರಕ್ಷಣೆ ನೀಡುವುದನ್ನು ಬಿಟ್ಟು ಕೊಲೆ ಮಾಡಿದವನ ಮನೆಗೆ ರಕ್ಷಣೆ ನೀಡಿದೆ. ರಾಮ ನವಮಿ ಪಾನಕ ಹಂಚಿದವರ ವಿರುದ್ಧ ಕೇಸ್ ದಾಖಲಿಸುತ್ತಾರೆ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಾಡು ಬರೆದರೆ ಹಲ್ಲೆ ಮಾಡುತ್ತಾರೆ. ಮಡಿಕೇರಿಯ ಕುಟ್ಟಪ್ಪ, ಶಿವಮೊಗ್ಗದ ಹರ್ಷ, ಭಟ್ಕಳ ಸಮೀಪದ ಪರೇಶ್ ಮೆಸ್ತಾ ಹೀಗೆ ನಮ್ಮ ಕಾರ್ಯಕರ್ತರನ್ನು ಕಳೆದುಕೊಳ್ಳುತ್ತಿದ್ದೇವೆ. ಇದೆಲ್ಲದಕ್ಕೂ ಉತ್ತರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಶಿರೂರು ನೇಮಕಗೊಂಡಿದ್ದಾರೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ ಬ್ಲಾಕ್ ಅಧ್ಯಕ್ಷ ಅರವಿಂದ ಪೂಜಾರಿ ಅವರು, ಪ್ರಸನ್ನ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶಿರೂರು ಭಾಗದ ಯುವ ಮುಖಂಡರಾಗಿರುವ ಪ್ರಸನ್ನ, ಉದ್ಯಮದೊಂದಿಗೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರೆಂಟಿ ಕಾರ್ಡ್ ಇಂದು ಅನುಷ್ಠಾನಕ್ಕೆ ತರಲಾಗಿದೆ. ಇದರಿಂದಾಗಿ ಜನರಲ್ಲಿಯೂ ವಿಶ್ವಾಸ ಮೂಡಿದೆ. ಈ ಭಾರಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವೂ ಗ್ಯಾರೆಂಟಿ ಜಾರಿಗೊಳಿಸುತ್ತಿದ್ದು, ಇದನ್ನು ಜನರಿಗೆ ಮನದಟ್ಟು ಮಾಡುವ ಪ್ರಬಲ ಮಾಧ್ಯಮ ನಮ್ಮ ಕಾರ್ಯಕರ್ತರೇ ಆಗಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಅನಿಲ್ ಹೇಳಿದರು. ಅವರು ಶನಿವಾರ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಬಿಡುಗಡೆಗೊಳಿಸಿ ಬಳಿಕ ಮಾತನಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು 5 ಲಕ್ಷದಷ್ಟು ಕುಟುಂಬ ಫಲಾನುಭವಿಗಳು ಕಾಂಗ್ರೆಸ್ ಗ್ಯಾರೆಂಟಿಯ ಫಲಾನುಭವಿಗಳಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಸರಕಾರದ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನೀಡಲಿರುವ ಗ್ಯಾರೆಂಟಿಯನ್ನು ಮನವರಿಕೆ ಮಾಡುವ ಕೆಲಸ ಮಾಡಬೇಕು. ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬರನ್ನು ಕಾರ್ಯಕರ್ತರು ವೈಯಕ್ತಿಕವಾಗಿ ಭೇಟಿಯಾಗಿ ಮನವರಿಕೆ ಮಾಡುವ ಕೆಲಸ ಮಾಡಬೇಕು ನಿಮ್ಮ ಬೂತ್ ನಿಮ್ಮ ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬ ನಾಯಕರು ಅರಿತು ಕೆಲಸ ಮಾಡಬೇಕಾಗಿದೆ…

Read More