Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ವಿಭಾಗದಲ್ಲಿ, ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಹತ್ತನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಾದ ಪ್ರೀತಮ್ ಜಿ. ಹಾಗೂ ರಿಷಿ ಶೆಟ್ಟಿ ಅವರು ಪ್ರಥಮ ಸ್ಥಾನ ಗಳಿಸಿ ಅಮೋಘ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕೀರ್ತಿ ಹೆಚ್ಚಿಸಿರುವ ಈ ಹೆಮ್ಮೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ ಹಾಗೂ ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಲಾಯ್ಸ್ ಅಲ್ಫೇನ್ ಗಂಗೊಳ್ಳಿ, ನೂರ್ ಕ್ರಿಕೆಟರ್ಸ್ ಗಂಗೊಳ್ಳಿ ಹಾಗೂ ನಮ್ಮ ನಾಡ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಮುಬಾರಕ್ ಮೈದಾನದಲ್ಲಿ ನಡೆದ ಕಲಾಯ್ಸ್ ಅಲ್ಫೇನ್ ಪ್ರೀಮಿಯರ್ ಲೀಗ್  ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ’ಎನ್‌ಎನ್‌ಓ ಕಪ್ 2025’ದಲ್ಲಿ ಗಂಗೊಳ್ಳಿಯ ಸಹರಾ ಕ್ರಿಕೆಟರ್ಸ್‌ ತಂಡ ಪ್ರಥಮ ಸ್ಥಾನಿಯಾಗಿ 1,00,111 ರೂ. ನಗದು ಹಾಗೂ ’ಎನ್‌ಎನ್‌ಓ ಕಪ್ 2025ನ್ನು ತನ್ನದಾಗಿಸಿಕೊಂಡಿದೆ. ಮುಬಾರಕ್ ಗಂಗೊಳ್ಳಿ ತಂಡ ರನ್ನರ್ ಅಪ್ ಪ್ರಶಸ್ತಿ ಹಾಗೂ 50,555 ನಗದನ್ನು ಪಡೆದುಕೊಂಡಿತು. ಮುಬಾರಕ್ ಗಂಗೊಳ್ಳಿ ತಂಡದ ಮೊಹಮ್ಮದ್ ಅಜೀಂ ಸರಣಿ ಶ್ರೇಷ್ಟ ಆಟಗಾರ ಪ್ರಶಸ್ತಿ ಹಾಗೂ ದ್ವಿಚಕ್ರ ವಾಹನ ಪಡೆದುಕೊಂಡರು. ಫೈನಲ್ ಪಂದ್ಯದ ಪಂದ್ಯ ಶ್ರೇಷ್ಟ ಪ್ರಸ್ತಿಯನ್ನು ಸಹಾರ ಗಂಗೊಳ್ಳಿ ತಂಡದ ನವೀನ್ ಕುಂದಾಪುರ ಪಡೆದುಕೊಂಡರು. ಉತ್ತಮ ದಾಂಡಿಗ ಪ್ರಶಸ್ತಿಯನ್ನು ಸಹರಾ ಗಂಗೊಳ್ಳಿ ತಂಡದ ನವೀನ್ ಕುಂದಾಪುರ ಮೂಡಿಬಂದರು. ಉತ್ತಮ ಬೌಲರ್ ಆಗಿ ಡ್ರೈವರ್ ಫ್ರೆಂಡ್ ತಂಡದ ಪ್ರಮೋದ್ ಆಯ್ಕೆಯಾದರು. ಉತ್ತಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರ ಮತ್ತು ಪಾಲಕರ ಸಭೆಯನ್ನು ನಡೆಸಿ, ವಿದ್ಯಾರ್ಥಿಗಳ ಅಧ್ಯಯನದ ವಿಚಾರಗಳನ್ನು ಚರ್ಚಿಸಲಾಯಿತು.  ಶ್ರೀ ಸಿದ್ಧಿ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ಶರಣ ಕುಮಾರ ಪೋಷಕರ ಅಹವಾಲುಗಳಿಗೆ ಸ್ಪಂದಿಸಿ, ಮಾತನಾಡಿ, ಮಕ್ಕಳ ಸಂಜೆಯ ಅಧ್ಯಯನ ಸಮಯದಲ್ಲೂ ಪಾಠ ನಡೆಸಿದರೆ, ಮಕ್ಕಳಿಗೆ ಸ್ವತಃ ಅಧ್ಯಯನಕ್ಕೆ ಹಿಡಿತ ಕಡಿಮೆಯಾಗುತ್ತದೆ. ಆದ್ದರಿಂದ ನಾವು ಮಕ್ಕಳನ್ನು ಸ್ವತಃ ಓದುವುದಕ್ಕೂ ಆದ್ಯತೆ ನೀಡುತ್ತಿದ್ದೇವೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿದ್ದೇವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಬೇಸ್ ಸಂಸ್ಥೆಯವರಿಂದ ತರಗತಿಗಳನ್ನು ನಡೆಸುತ್ತಿದ್ದು, ಅವಶ್ಯವಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಎಂದು ತಿಳಿಸುತ್ತಾ ಮಕ್ಕಳ ಸುರಕ್ಷತೆಯ ಬಗ್ಗೆ ಕೆಲವಷ್ಟು ಮಾಹಿತಿಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ, ಶಿಕ್ಷಣ ಸಂಯೋಜಕರಾದ ಸವಿತಾ ಭಟ್, ಶ್ರೀಮಧು ಕೆ. ಎಲ್, ಲತಾ ದೇವಾಡಿಗ, ವಸತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಬಹುಮುಖ ಪ್ರತಿಭೆ, ಪ್ರತೀಕ್ಷಾ ಅವರು ಪ್ರಥಮ ಸ್ಥಾನ ಗಳಿಸಿ, ಅದ್ವಿತೀಯ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಈ ಶ್ಲಾಘನೀಯ ಸಾಧನೆ ಮಾಡಿರುವ ಈ ಉದಯೋನ್ಮುಖ ಪ್ರತಿಭಾನ್ವಿತೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ ಹಾಗೂ ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ವಿದ್ಯಾರ್ಥಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಲು ಸಿದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ತಂದೆಯ ಜತೆಯಲ್ಲಿ ಬೈಕಿನಲ್ಲಿ ಕುಳಿತಿರುವಾಗ ಟಿಪ್ಪರ್ ಚಾಲಕ ಅತೀ ವೇಗವಾಗಿ ಬಂದು ಬೈಕಿಗೆ ಢಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದಾಪುರ ಕೆಳಪೇಟೆಯ ಮಕ್ಕಿಮನೆ ರಾಘವೇಂದ್ರ ಪೂಜಾರಿ (38) ಅವರು ತಂದೆ ಕೃಷ್ಣ ಪೂಜಾರಿ. ಅವರನ್ನು ತನ್ನ ಬೈಕ್‌ನಲ್ಲಿ ಮನೆಯಿಂದ ಕುಳ್ಳಿರಿಸಿಕೊಂಡು ಬಂದು ಶಾಲೆಯ ಬಳಿ ನಿಂತುಕೊಂಡಿದ್ದರು. ಆ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಗಂಭೀರವಾಗಿ ಗಾಯಗೊಂಡ ಕೃಷ್ಣ ಪೂಜಾರಿ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಚಾಮರಾಜನಗರದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಸೃಜನ್ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಜರುಗಿದವು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿನಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು. ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ: ಪದವಿ ಬದುಕಿನಲ್ಲಿ ಆರಂಭಿಕ ಅವಕಾಶವನ್ನು ಒದಗಿಸಿದರೆ, ಶ್ರೇಷ್ಟತೆಯ ಶಿಖರ ತಲುಪುವುದು ನಮ್ಮ ನಿಲುವು ಹಾಗೂ ಚಿಂತನೆಯಿಂದ ಎಂದು ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕವಿನ್ಸೆಂಟ್ ಕುಟಿನ್ಹಾ ನುಡಿದರು.ಅವರು ಸೋಮವಾರ ಡಾ. ವಿಎಸ್ ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. ಬದುಕಿನ ಸಫಲತೆ ಕೇವಲ ಹುದ್ದೆ ಅಥವಾ ಪ್ರಮಾಣ ಪತ್ರದಲ್ಲಿಲ್ಲ. ಜ್ಞಾನ ಮೌಲ್ಯವನ್ನು ಉಂಟುಮಾಡಿ, ಕೆಲಸ ಸಮಾಜದ ಮೇಲೆ ಪ್ರಭಾವ ಬೀರಿ, ವ್ಯಕ್ತಿತ್ವದಿಂದ ವಿಶ್ವಾಸ ಬೆಳೆದಾಗ ಬದುಕು ಸಾರ್ಥಕ್ಯದೆಡೆಗೆ ಸಾಗಲು ಸಾಧ್ಯ. ಪ್ರಾಮಾಣಿಕತೆ ಮತ್ತು ಶಿಸ್ತು ಜೀವನದ ಯಶಸ್ಸಿನ ಕೀಲಿಕೈ, ಪ್ರಾಮಾಣಿಕತೆ ಮತ್ತು ಶಿಸ್ತು ಒಂದಕ್ಕೊಂದು ಪೂರಕ. ಪ್ರಾಮಾಣಿಕತೆ ವ್ಯಕ್ತಿತ್ವಕ್ಕೆ ನೈತಿಕ ಬಲ ನೀಡಿದರೆ, ಶಿಸ್ತು ಜೀವನಕ್ಕೆ ವೈಯಕ್ತಿಕ ಬಲ ನೀಡುತ್ತದೆ. ಈ ಎರಡು ಗುಣಗಳು ಬೆರೆತಾಗ ವ್ಯಕ್ತಿ ಯಶಸ್ವಿಯಾಗುತ್ತಾನೆ. 30 ಸಾವಿರದಿಂದ 450…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಶಿಸ್ತು ಹಾಜರಾತಿ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಚರ್ಚಿಸಲಾಯಿತು. ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಕಾಲೇಜಿನ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯವನ್ನು ನೀಡಿದರು. ತರಗತಿ ಉಪನ್ಯಾಸಕರಾದ ತಿಲಕಲಕ್ಷ್ಮೀ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಎಂಬಿಎ, ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿ ನಾಗವೇಣಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕೋದ್ಯಮಿಗಳು ಕೈಗಾರಿಕಾ ಘಟಕ ಸ್ಥಾಪನೆಗೆ ಪಡೆದಿರುವ ನಿವೇಶನಗಳಲ್ಲಿ ಉದ್ದಿಮೆ ಆರಂಭಿಸದೇ ಹೆಚ್ಚುವರಿ ಕಾಲಾವಕಾಶ ಕೋರಿ ಪದೇ ಪದೇ ಮನವಿ ಸಲ್ಲಿಸುತ್ತಿದ್ದಾರೆ. ಉತ್ಪನ್ನ ಹಾಗೂ ಘಟಕದ ಹೆಸರು ಬದಲಾವಣೆ, ಹೆಚ್ಚುವರಿ ಕಾಲಾವಕಾಶ ಸೇರಿದಂತೆ ಮತ್ತಿತರ ಅಸಮರ್ಪಕ ಕಾರಣ ನೀಡಿ ಕಾರ್ಯಚಟುವಟಿಕೆ ಆರಂಭಿಸದೇ ಇರುವವರ ನಿವೇಶನಗಳನ್ನು, ಕೈಗಾರಿಕೆ…

Read More