ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಿಂದ ಅಂತಿಮ ಬಿ.ಕಾಂ. ವಿದ್ಯಾರ್ಥಿಗಳಿಗೆ ಸಿ.ಎಮ್.ಎ. (Cost and Management Accounting) ಕೋರ್ಸ್‌ನ ಮಹತ್ವದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಬೆಂಗಳೂರು ಜಿ.ಸಿ, ರಾವ್ ಅಕಾಡೆಮಿ ಇದರ ಮುಖ್ಯಸ್ಥರಾದ ಸಿ.ಎ, ಸಿ.ಎಮ್‌ಎ, ಜಿ.ಸಿ. ರಾವ್ ಅವರು ಮಾತನಾಡಿ, ಉದ್ಯೋಗಕ್ಕಾಗಿ ಪೈಪೋಟಿ ಎದುರಿಸುತ್ತಿರುವ ಈ ಕಾಲಘಟ್ಟದಲ್ಲಿ ಕೇವಲ ಸರಕಾರಿ ಉದ್ಯೋಗಕ್ಕಾಗಿ ಕಾಯದೇ ವೃತ್ತಿಪರ ಕೋರ್ಸ್ ಆದ ಕೋಸ್ಟ್ ಎಂಡ್ ಮ್ಯಾನೇಜ್‌ಮೆಂಟ್ ಅಕೌಂಟಿಂಗ್ ನತ್ತ ಗಮನ ಹರಿಸಿದರೆ ಉತ್ತಮ ಸಂಪಾದನೆ ಜೊತೆಗೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವನ್ನು ಗಳಿಸಬಹುದು ಎಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನಾಡಿದರು. ಇನ್ನೋರ್ವ ಅತಿಥಿ ಬೆಂಗಳೂರು ಜಿ.ಸಿ. ರಾವ್ ಅಕಾಡೆಮಿ ಅಧ್ಯಾಪಕ ನರೇಶ್ ಅವರು ಮಾತನಾಡಿ, ಕಠಿಣ ಪರಿಶ್ರಮದಿಂದ ಸಿಎಮ್‌ಎ ಕೋರ್ಸ್‌ನ್ನು ಸುಲಭವಾಗಿ ತೇರ್ಗಡೆಗೊಳ್ಳಬಹುದು ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ವಿದ್ಯಾರ್ಥಿಗಳು 22 ಚಿನ್ನ, 21 ಬೆಳ್ಳಿ, 12 ಕಂಚಿನ ಪದಕದೊಂದಿಗೆ ಒಟ್ಟು 55 ಪದಕಗಳನ್ನು ಪಡೆದುಕೊಂಡರು. ಆಗಸ್ಟ್ 23 ರಿಂದ 25ರವರೆಗೆ ಉಡುಪಿ ಜಿಲ್ಲೆಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕಿರಿಯರ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನಿಂದ ಕಿರಿಯರ ವಿಭಾಗದಲ್ಲಿ 60 ವಿದ್ಯಾರ್ಥಿಗಳು ಹಾಗೂ ಹಿರಿಯರ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 90 ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಲ್ಲಿ ಅತೀ ಹೆಚ್ಚು ಕ್ರೀಡಾಪಟುಗಳು ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನಿಂದ ಪ್ರತಿನಿಧಿಸುತ್ತಿದ್ದಾರೆ. ಫಲಿತಾಂಶ:14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ: ಸುಭಾಷ್ – ತ್ರಯತ್ಲನ್ ಸಿ (ಪ್ರಥಮ), ಕುಬೇರ – ತ್ರಯತ್ಲನ್ ಬಿ (ತೃತೀಯ), ಪ್ರಣವ್ – ತ್ರಯತ್ಲನ್ ಎ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ದುರ್ಗಾ ಮ್ಯೂಸಿಕ್ ಮೀಟ್ ಮಂಚಿ ಮಣಿಪಾಲ ಇವರು 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಅಮರ ವೀರ ಗೀತ ಗಾಯನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಂಗಳವಾರದಂದು ಕರಕುಶಲ ಕಲೆಗಳ ಪ್ರಾತ್ಯಕ್ಷತೆಯ ಕಾರ್ಯಕ್ರಮವು ’ಜ್ಞಾನನಿಕೇತನ’ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತ ಸರಕಾರದ ಜವಳಿ ಸಚಿವಾಲಯದ ಸಹಾಯಕ ನಿರ್ದೇಶಕರಾದ ರಾಜೇಶ್ವರಿ ಕೆ. ಎಮ್. ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಡಿಜಿಟಲೀಕರಣ ಇರುವುದು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೇ ವಿನಃ ಮನೋರಂಜನೆಗಾಗಿ ಅಲ್ಲ. ಭಾರತೀಯ ಪರಂಪರೆಯಲ್ಲಿ ಕರಕುಶಲಕಲೆಗಳು ವಿಶಿಷ್ಟವಾದ ಸ್ಥಾನಮಾನವನ್ನು ಪಡೆದುಕೊಂಡಿವೆ. ಈ ಕಲೆಗಳು ನಿಮ್ಮ ಜೀವನಕ್ಕೆ ಸಹಾಯಕವಾಗಿವೆ. ಮುಂದೆ ನೀವು ಉದ್ಯೋಗಕ್ಕೆ ಸೇರುವಾಗ ನಿಮ್ಮ ಪಠ್ಯವಿಷಯವು ಮಾತ್ರ ಕಾರಣವಾಗದೇ ನಿಮ್ಮ ಕೈಚಳಕ, ಆಸಕ್ತಿಗಳೂ ಕಾರಣವಾಗುತ್ತವೆ. ಈ ಕರಕುಶಲತೆಗಳು ಜೀವನಕ್ಕೆ ಬೆಳಕಾಗುತ್ತವೆ. ಎನ್ನುತ್ತಾ ವಿದ್ಯಾರ್ಥಿಗಳನ್ನು ಕರಕುಶಲತೆಗಳ ಅಧ್ಯಯನಕ್ಕೆ ಹುರಿದುಂಬಿಸಿದರು. ಸಂಪನ್ಮೂಲ ವ್ಯಕ್ತಿಯಾದ ಜನಾರ್ದನ ರಾವ್ ಹಾವಂಜೆ ಮಾತನಾಡಿ, ಕೊಂಕಣ ಕರಾವಳಿ ಭಾಗದ ಪುರಾತನ ಕಲೆ ಕಾವಿಕಲೆ. 13ನೇ ಶತಮಾನದಿಂದಲೂ ಈ ಕಲೆ ಬಹಳವಾಗಿ ಬಳಕೆಯಾಗುತ್ತಿದ್ದು, ಸುಣ್ಣದ ಗಾರೆಯನ್ನು ನಡೆಸಿದ ಕಟ್ಟಡಗಳಲ್ಲಿ ಇದನ್ನು ನಡೆಸುತ್ತಿದ್ದರು. ಮನೆ ಮತ್ತು ದೇವಾಲಯಗಳ ನಿರ್ಮಾಣದಲ್ಲಿ ಸುಣ್ಣದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ: ಐ.ಎ.ಎಸ್ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ಮತ್ತು https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 26 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಗುರುತಿಸಲಾದ ಅಪಘಾತವಾಗುವ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳುವ ಮೂಲಕ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಾಮಗಾರಿಗಳಲ್ಲಿ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದ್ವೀಪ ಬ್ಲಿರ್ಸ್ ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡುಬಂದಿದೆ. ಇದರಿಂದ ರಸ್ತೆ ಅಪಘಾತದಲ್ಲಿ ಸಾವು-ನೋವುಗಳ ಪ್ರಕರಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ, ಶಾಶ್ವತ ಕಾಮಗಾರಿ ಕೈಗೊಳ್ಳುವವರೆಗೆ ತಾತ್ಕಾಲಿಕ ಸುರಕ್ಷತಾ ಕಾಮಗಾರಿಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದರು. ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೀನುಗಾರಿಕೆ ಇಲಾಖೆ ಮಂಡ್ಯ ಜಿಲ್ಲೆ ಮತ್ತು ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಉಡುಪಿ ಜಿಲ್ಲೆ ಜಂಟಿಯಾಗಿ ಆಯೋಜಿಸಿದ ಮುತ್ತು ಕೃಷಿ ಪ್ರಾಯೋಗಿಕ ಮಾಹಿತಿ ಕಾರ್ಯಾಗಾರ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಜಟಕ ಗ್ರಾಮದಲ್ಲಿ ನಡೆಯಿತು. ಉಡುಪಿ ಕಿನಾರ ಎಫ್‌ಪಿಓ ಮಂಡ್ಯ ಜಿಲ್ಲೆಯಲ್ಲಿನ ಮುತ್ತು ಕೃಷಿ ಆಸಕ್ತ ರೈತರನ್ನು ಗುರುತಿಸಿ ಇವರುಗಳ ಮೂಲಕ 20 ಸಾವಿರ ಕಪ್ಪೆಚಿಪ್ಪಿಗೆ ನ್ಯೂಕ್ಲೆಸ್ ಅಳವಡಿಸಿ ಅವರ ಕೃಷಿ ಹೊಂಡದಲ್ಲಿ ಮುತ್ತು ಕೃಷಿ ಪ್ರಾರಂಭಿಸಲು ಉತ್ತೇಜನ ನೀಡಲಾಯಿತು. ಮಂಡ್ಯ ಜಿಲ್ಲೆಯ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಬಾಬಾಸಾಬ್..ಎಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಮಿಲನ ಭರತ್ ಅವರು ತಮ್ಮ ತಾಲೂಕಿನ 35 ಆಸಕ್ತ ಮುತ್ತು ಕೃಷಿ ರೈತರನ್ನು ಅಧ್ಯಯನ ಪ್ರವಾಸದ ಮೂಲಕ ಈ ಮಾಹಿತಿ ಕಾರ್ಯಾಗಾರದಲ್ಲಿ ರೈತರು ಭಾಗವಹಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಾದ್ಯಂತ ಮನೆ ಮನೆಯಲ್ಲಿ ಮುತ್ತು ಕೃಷಿ ಆರಂಭಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ,ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗಗಳವರೆಗೆ ವಿದ್ಯಾರ್ಥಿಗಳ ಹೆತ್ತವರ ಸಭೆಯು ಇತ್ತೀಚಿಗೆ ನಡೆಯಿತು. ಆಡಳಿತ ನಿರ್ದೇಶಕರು ಪೋಷಕರೊಂದಿಗೆ ಸೇರಿ ಸಭೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಾಯಕ ಮುಖ್ಯೋಪಾಧ್ಯಾಯರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ‘ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ‘ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿದರು. ಆಡಳಿತ ನಿರ್ದೇಶಕರಾದ ರೆನಿಟೋ ಲೋಬೊ ಅವರು ಮಾತನಾಡಿ ” ಮೊಬೈಲ್ ನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು ಹಾಗೂ ಮಕ್ಕಳಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡುವುದು ಪೋಷಕರ ಆದ್ಯ ಕರ್ತವ್ಯ ಎನ್ನುವುದನ್ನು ಮನಮುಟ್ಟುವಂತೆ ತಿಳಿಸಿದರು. ನಂತರ ಇನ್ನೋರ್ವ ಆಡಳಿತ ನಿರ್ದೇಶಕರಾದ ಶಮಿತಾ ರಾವ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕನಸಿಗೆ ಪ್ರೋತ್ಸಾಹದ ನೀರೆರೆಯುವುದು ಪೋಷಕರ ಕರ್ತವ್ಯ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದರು. ಪ್ರೌಢಶಾಲಾ ವಿಭಾಗದ ಹೆತ್ತವರ ಸಭೆಯಲ್ಲಿ ಪದವಿ ಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮುದೂರು ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮುದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮಂದರ್ತಿ ಶಿರೂರು ಮುದ್ದು ಮನೆ ಇವರ ಸಹಭಾಗಿತ್ವದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಠಾರದಲ್ಲಿ ಜರುಗಿತು. ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಶಾಸ್ತ್ರಿ ಮುದೂರು ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಎನ್‌ಸಿಡಿ ವೈದ್ಯಾಧಿಕಾರಿ ಡಾ. ನಿವೇದಿತಾ, ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯ ಸೂಲ್ಯ ಭೋವಿ ನಾಗದ್ದೆ, ಮುದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಭಾಕರ್ ಪೂಜಾರಿ, ಊರಿನ ಎಲ್ಲಾ ಶಿಬಿರ್ತಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಐಕ್ಯೂಎಸಿ ಘಟಕ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯು ಸೋಮವಾರ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಳಾವರ ವರದಾರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇದರ ಗ್ರಂಥಪಾಲಕರಾದ ರವಿಚಂದ್ರ ಹೆಚ್. ಎನ್. ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವುದು, ಅರ್ಥ ಮಾಡಿಕೊಳ್ಳುವುದರಿಂದ ಅವರ ಆಲೋಚನೆ ವಿಸ್ತರಿಸುವುದಲ್ಲದೇ ಜೀವನದ ಮೌಲ್ಯ ಮತ್ತು ಸಾರ್ಥಕತೆಯನ್ನು ತಿಳಿಸಿಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಗ್ರಂಥಾಲಯ ಸದ್ಭಳಕೆಯಿಂದ ಸ್ವಯಂ ವ್ಯಕ್ತಿತ್ವ ವಿಕಾಸ ಮತ್ತು ಶೈಕ್ಷಣಿಕ ಪ್ರಕ್ರಿಯೆಗಳ ಉತ್ತಮ ನಿರ್ವಹಣೆ ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ, ಐಕ್ಯೂಎಸಿ ಘಟಕ ಸಂಯೋಜಕರಾದ ಸಂದೀಪ ಕೆ., ಉಪಸ್ಥಿತರಿದ್ದರು. ಅಂತಿಮ ಬಿ.ಎ. ವಿದ್ಯಾರ್ಥಿ ಕೀರ್ತನ್ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ…
