ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿರಂತರ ಮಳೆಯಿಂದಾಗಿ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶನಿವಾರ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಭೇಟಿ ನೀಡಿದರು. ಜಿಲ್ಲೆಯಲ್ಲಿ ಈ ಭಾರಿ ಅಧಿಕ ಮಳೆಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿಯೂ ಹೆಚ್ಚಿನ ಮಳೆ ಸುರಿದಿದೆ. ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ದೊಂಬೆ ಸಮೀಪದ ಸೋಮೇಶ್ವರದ ಶೇಡಿಗುಡ್ಡ ಜರಿತಗೊಂಡಿದ್ದು, ಮತ್ತಷ್ಟು ಹಾನಿಯ ಸೂಚನೆ ಇದೆ. ಈ ಭಾಗಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಜೆಡಿಮಣ್ಣು ನೀರಿನೊಂದಿಗೆ ಬೆರೆತು ಕುಸಿಯುವ ಸಂಭವ ಜಾಸ್ತಿ ಇರುವುದರಿಂದ ಅಧಿಕ ಜರಿತ ಇರುವ ಪ್ರದೇಶದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಮುಚ್ಚಿ ಮೇಲಿನ ನೀರು ಜಾರಿಹೋಗುವಂತೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದರು. ಮಳೆಗಾಲದ ಬಳಿಕ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ ಜಿಲ್ಲಾಧಿಕಾರಿಗಳು, ಗುಡ್ಡ ಕಡಿದು ರಸ್ತೆ ನಿರ್ಮಾಣ ಕಾಮಗಾರಿ ಮಾಡುವಲ್ಲಿ ಕಾನೂನು ಮೀರಿದ್ದರೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಒತ್ತಿನಣೆ ಪ್ರದೇಶದಲ್ಲಿರುವ ಕಸ ವಿಲೇವಾರಿ ಪ್ರದೇಶ, ಹೇನಬೇರು ತೆರಳುವ ರಸ್ತೆ, ದೊಂಬೆ ಪ್ರದೇಶದಲ್ಲಿ ಉಂಟಾಗಿರುವ ಕಡಲಕೊರೆತ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು – ಮಂಗಳೂರು – ಕಾರವಾರ ನಡುವೆ ಭೂಕುಸಿತ ಹಾಗೂ ಹಲವು ರಸ್ತೆಗಳು ಬಂದ್ ಆಗಿರುವ ಕಾರಣ ಸಾವಿರಾರು ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದು, ಅದಕ್ಕಾಗಿ ಬೆಂಗಳೂರು ಮಂಗಳೂರು ರೈಲಿಗೆ ಲಿಂಕ್ ಆಗಿ ಮಡಗಾಂವ್ ಮಂಗಳೂರು ಜಂಕ್ಷನ್ ಮಧ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರು ಮಂಗಳೂರು ರೈಲಿಗೆ ಮಡಗಾಂವ್ ಮಂಗಳೂರು ಜಂಕ್ಷನ್ ಮದ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಮಡಗಾಂವ್ ಮಂಗಳೂರು ಜಂಕ್ಷನ್ ವಿಶೇಷ ಲಿಂಕ್ ರೈಲಿಗೆ ಉಡುಪಿ, ಬಾರ್ಕೂರು, ಕುಂದಾಪುರ, ಸೇನಾಪುರ, ಬಿಜೂರು, ಬೈಂದೂರು, ಶಿರೂರು, ಭಟ್ಕಳ, ಮುರುಡೇಶ್ವರ ಮೊದಲಾದ ಸ್ಟೇಷನ್ಗಳಲ್ಲಿ ನಿಲುಗಡೆ ಇರಲಿದೆ. ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಾವಣೆ, ನೀರು ತುಂಬುವಿಕೆಯಂತ ವಿಳಂಭಧ ಕಾರಣದಿಂದ ಪ್ರತ್ಯೇಕ ಲಿಂಕ್ ರೈಲಿಗಾಗಿ ಮಾಡಲಾಗಿದ್ದ ಸಂಸದರ ಪತ್ರಕ್ಕೆ ರೈಲ್ವೇ ಸಚಿವಾಲಯ ಸ್ಪಂದಿಸಿದೆ. ಇದರಿಂದಾಗಿ ಬೆಂಗಳೂರು ಮಂಗಳೂರು ವಿಶೇಷ ರೈಲು ಬಂದ ಕೆಲವೇ ಹೊತ್ತಲ್ಲಿ ಲಿಂಕ್ ರೈಲು ಉಡುಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯ ಜೊತೆಗೆ ಪಠ್ಯೇತರ ಚಟುವಟಿಕೆ ಮಾತ್ರ ಅಲ್ಲ ವಿದ್ಯಾರ್ಥಿಗಳಿಗೆ ಇವತ್ತಿನ ಸಾಮಾಜಿಕವಾದ ಸವಾಲಿನ ಬಗ್ಗೆ ಅರಿವು ಮೂಡಿಸುವಂಥ ಅನೇಕ ಶಿಬಿರಗಳನ್ನು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಿದ್ದೇವೆ. ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ನಶಮುಕ್ತ ಭಾರತ ಈ ವಿಷಯದ ಬಗ್ಗೆ ಮಾಹಿತಿ ಕೊಡಲು ಕೋಟ ಪೊಲೀಸ್ ಠಾಣೆಯ ಪಿ.ಎಸ್.ಐ ಗುರುನಾಥ್ ಬಿ. ಹಾದಿಮನಿ ಅವರು ಮಾಹಿತಿಯನ್ನು ನೀಡಿದರು. ಮಾದಕ ದ್ರವ್ಯದ ವ್ಯಸನದಿಂದ ಯಾವ ರೀತಿ ನಮ್ಮ ದೇಹದ ಮೇಲೆ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಯಾವೆಲ್ಲ ದುಷ್ಪರಿಣಾಮಗಳು ವ್ಯಕ್ತಿಗಳಿಗೆ ಹಾಗೂ ಅವರ ಕುಟುಂಬಕ್ಕೆ ಮತ್ತು ಸಮಾಜಕ್ಕೆ ಆಗುತ್ತದೆ ಇದರ ಬಗ್ಗೆ ಸುಧೀರ್ಘ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಇವತ್ತಿನ ಯುವಜನತೆ ಮಾದಕ ದ್ರವ್ಯದ ವ್ಯಸನಗಳಿಗೆ ಅಧಿಕವಾಗಿ ಬಲಿಯಾಗುತ್ತಿದ್ದಾರೆ ನಾವು ಇವತ್ತು ವಿದ್ಯಾರ್ಥಿಗಳನ್ನು ಒಬ್ಬ ವೈದ್ಯ, ಇಂಜಿನಿಯರ್, ಕಂಪನಿ ಸೆಕ್ರೆಟರಿ, ಸಿಎ ಇಂಥ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 15ನೇ ಹಣಕಾಸು ಯೋಜನೆಯ 2024-25ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಮಧುಕರ, ಸರಕಾರದ ವಿವಿಧ ಇಲಾಖೆಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ವಹಿಸಿದ ಕಾಮಗಾರಿಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಕಾಮಗಾರಿಗಳಲ್ಲಾದ ಲೋಪದೋಷಗಳನ್ನು ತಿಳಿದುಕೊಳ್ಳಲು ಹಾಗೂ ಕಾಮಗಾರಿಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಜನರ ಅಹವಾಲು ಆಲಿಸಲು ಈ ವಿಶೇಷ ಗ್ರಾಮಸಭೆ ಸಹಕಾರಿಯಾಗಲಿದೆ ಎಂದರು. ಕುಂದಾಪುರ ಅಮೂಲ್ಯ ಸಾಕ್ಷರತಾ ಕೇಂದ್ರದ ಆಶಾಲತಾ ಬ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶಶಿಕಲಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ, ಗ್ರಾಪಂ ಲೆಕ್ಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್) ನ ವಿದ್ಯಾರ್ಥಿಗಳು ಇನ್ಸ್ಟಿಟೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯ ಮೇ 2023ರಲ್ಲಿ ನೆಡೆಸಿದ ಸಿಎ ಫೈನಲ್ ಮತ್ತು ಸಿಎ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ರಕ್ಷಿತ ಶೆಟ್ಟಿ (333), ನಿಕೋಲಾ ರೋಶನಿ ಡಯಾಸ್ (329) ಅಂಕಗಳೊಂದಿಗೆ ಸಿಎ ಅಂತಿಮ ಪರೀಕ್ಷೆಯ ಎರಡು ಹಂತದ ಪರೀಕ್ಷೆಯನ್ನು ತೇರ್ಗಡೆ ಹೊಂದುವುದರ ಮೂಲಕ ಲೆಕ್ಕ ಪರಿಶೋಧಕರಾಗಿ ಹೊರಹೊಮ್ಮಿದ್ದಾರೆ. ಆದಿತ್ಯ ಆರ್ ಶೆಟ್ಟಿ(194) ಅಂಕಗಳೊಂದಿಗೆ ಸಿಎ ಫೈನಲ್ ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ನಮಿತಾ ಶೇಟ್ 310 ಅಂಕಗಳೊಂದಿಗೆ ಸಿಎ ಇಂಟರ್ಮೀಡಿಯಟ್ ಎರಡು ಹಂತದ ಪರೀಕ್ಷೆಯನ್ನು ತೇರ್ಗಡೆ ಹೊಂದುವುದರ ಮೂಲಕ ಸಿಎ ಅಂತಿಮ ಹಂತಕ್ಕೆ ಪ್ರವೇಶ ಪಡೆದಿದ್ದಾರೆ. ಶ್ರದ್ಧಾ ಬಿ (161), ರಕ್ಷಿತಾ (148), ಪಂಚಮಿ ಕಿಣಿ (146), ಸಂಪ್ರೀತ (124), ಬಂಗೇರ ಶಾಂಭವಿ (120), ರಂಜನ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಿದ್ದ ವಸ್ತ್ರ ಮಳಿಗೆ ಸತ್ಯನಾಥ್ ಸ್ಟೋರ್ಸ್ – ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ ಸೀಮಿತ ಅವಧಿಯ ವಿಶೇಷ ಆಫರ್ ನೀಡಲಾಗಿದೆ. ಒಂದು ಸೀರೆ ಖರೀದಿಸಿದಲ್ಲಿ ಇನ್ನೊಂದು ಸೀರೆಗೆ ಕೇವಲರೂ.75 ಮಾತ್ರ ಪಾವತಿಸುವುದು, ಒಂದು ಶರ್ಟ್ ಖರೀದಿಸಿದಲ್ಲಿ ಇನ್ನೊಂದು ಶರ್ಟಿಗೆ ರೂ.75 ಮಾತ್ರ ಪಾವತಿಸುವ ವಿಶೇಷ ಆಫರ್ ಜುಲೈ 16ರಿಂದ ಆರಂಭಗೊಂಡಿದೆ. ಕುರ್ತಿಸ್ ಮೇಲೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಆಯ್ದ ಉಡುಗೆಗಳ ಮೇಲೆ ಮಾತ್ರ ಈ ಆಫರ್ ಇರಲಿದೆ. ಸಂಸ್ಥೆಯ ಬ್ರಹ್ಮಾವರ, ತೀರ್ಥಹಳ್ಳಿ ಹಾಗೂ ಕೊಪ್ಪ ಮಳಿಗೆಯಲ್ಲಿ ಜುಲೈ 16ರಿಂದ ಈ ವಿಶೇಷ ಆಫರ್ ಆರಂಭವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ಉದ್ಘಾಟನೆಯನ್ನು ದೀಪ ಪ್ರಜ್ವಲಿಸುವ ಮೂಲಕ ನೆರವೆರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ರಾಜೇಶ್ ನಾಯಕ್ ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರದ್ದೆ, ಶಿಸ್ತು, ಸತತ ಪ್ರಯತ್ನದೊಂದಿಗೆ ಭಾವಿ ರಾಷ್ಟ್ರದ ಭಾಗ್ಯೋದಯ ಶಿಲ್ಪಿಗಳಾಬೇಕು ಜೊತೆಗೆ ಜೀವನದಲ್ಲಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ತಮ್ಮ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ರಾಧಾ ಕೃಷ್ಣ ಶೆಣೈ ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾ ಕಾಂತ್ ರೇವಣಕರ್ ಉಪಸ್ಥಿತರಿದ್ದರು. ಸತೀಶ್ ಹೆಮ್ಮಾಡಿ ಅವರಿಂದ ಜಾದು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳಾದ ಅಮೂಲ್ಯ ಅತಿಥಿಗಳನ್ನು ಪರಿಚಯಿಸಿದರು, ವೈಷ್ಣವಿ ವಂದಿಸಿ, ಸಂಜನಾ ಸ್ವಾಗತಿಸಿ, ಸಿಂಚನಾ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಎನ್.ಎಮ್.ಎಮ್.ಎಸ್ ಪರೀಕ್ಷೆ (National Means cum Merit Scholarship examination) ಬರೆದು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುವ ಹತ್ತನೇ ತರಗತಿ, ಪ್ರಥಮ – ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಗೂ ಕಳೆದ ವರ್ಷ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು ಎನ್.ಎಮ್.ಎಮ್.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಎನ್.ಎಸ್.ಪಿ ಪೋರ್ಟಲ್ನಲ್ಲಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕಾಗಿದೆ. ಈಗಾಗಲೇ ಓಟಿಆರ್ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆ ಪಡೆದವರು ಫೇಸ್ ಅಥೇಂಟಿಕೇಶನ್ ಮಾಡಿಸಿ, ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಓಟಿಆರ್ ಸಂಖ್ಯೆ ಅಥವಾ ರೆಫರೆನ್ಸ್ ಸಂಖ್ಯೆ ಪಡೆಯದ ವಿದ್ಯಾರ್ಥಿಗಳು ಮತ್ತು ಈಗ 9ನೇ ತರಗತಿಯಲ್ಲಿ ಕಲಿಯುತ್ತಿರುವ ಹಾಗೂ ವಿದ್ಯಾರ್ಥಿವೇತನಕ್ಕೆ ಆಯ್ಕೆ ಆಗಿರುವ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ಮಾಹಿತಿಯನ್ನು ಪಡೆದು ಓಟಿಆರ್ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎನ್.ಎಮ್.ಎಮ್.ಎಸ್ ನೋಡೆಲ್ ಅಧಿಕಾರಿ ಅಥವಾ ಜಿಲ್ಲಾ ನೋಡೆಲ್ ಅಧಿಕಾರಿ, ಡಯಟ್, ಉಡುಪಿ ಇಲ್ಲಿಯ ಉಪನ್ಯಾಸಕ ಚಂದ್ರನಾಯ್ಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಾರಾಹಿ ಯೋಜನೆಯ ಮಾನಿ ಹಾಗೂ ವರಾಹಿ ಪಿಕ್ ಅಪ್ ಆಣೆಕಟ್ಟುಗಳ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ವಾರಾಹಿ ಪಿಕ್ ಅಪ್ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹವಾಗುತ್ತಿದ್ದು, ಇದೇ ರೀತಿ ಮುಂದುವರಿದರೆ ಯಾವುದೇ ಸಂದರ್ಭದಲ್ಲಿ ವಾರಾಹಿ ಪಿಕ್ ಅಪ್ ಅಣೆಕಟ್ಟಿನ ರೇಡಿಯಲ್ ಗೇಟ್ಸ್ ಮುಖಾಂತರ ನೀರು ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (ಕೆಪಿಸಿಎಲ್) ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು ಎಚ್ಚರಿಕೆ ನೀಡಿದ್ದಾರೆ. ವಾರಾಹಿ ಪಿಕ್ ಅಪ್ ಅಣೆಕಟ್ಟಿನಲ್ಲಿ ಶೇಖರಣೆಯಾದ ನೀರನ್ನು ಬಳಸಿ ಭೂಗರ್ಭ ವಿದ್ಯುದಾಗಾರದಲ್ಲಿ ಕನಿಷ್ಠ 1000 ದಿಂದ ಗರಿಷ್ಠ 5000 ಕ್ಯೂಸೆಕ್ಸ್ ನಷ್ಟು ನೀರನ್ನು ವಿದ್ಯುತ್ ಉತ್ಪಾದಿಸಿ ನಂತರ ಹೊರಬಿಡಲಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳ ಹರಿವು ಮುಂದುವರೆದಲ್ಲಿ ಹಾಗೂ SLDC (State Load Dispatch Center) ವತಿಯಿಂದ ವಿದ್ಯುತ್ ಉತ್ಪಾದನೆಗೆ ಬೇಡಿಕೆ ಬಾರದಿದ್ದರೆ ನೀರನ ಮಟ್ಟ ಹೆಚ್ಚಾಗಲಿದೆ ಎಂದಿರುವ ಅವರು, ವರಾಹಿ ಪಿಕ್ ಅಪ್ ಆಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ವಿದ್ಯುತ್ ಉತ್ಪಾದನೆಯಿಂದ ಹೊರಬಿಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯೋಗಾಭ್ಯಾಸ ಮಾಡುವುದರಿಂದ ನಮಗೆ ಆಗುವ ಪ್ರಯೋಜನವನ್ನು ಅರಿತುಕೊಂಡು, ಯೋಗವನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಪ್ರತಿನಿತ್ಯ ಒಂದು ಗಂಟೆ ಯೋಗಾಸನ, ಪ್ರಾಣಾಯಾಮವನ್ನು ಮಾಡುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೈಹಿಕವಾಗಿ, ಮಾನಸಿಕವಾಗಿ ಆಧ್ಯಾತ್ಮಿಕವಾಗಿ ಸದೃಢರಾಗಿರಲು ಯೋಗ ಸಹಕಾರಿಯಾಗುತ್ತದೆ ಎಂದು ಯೋಗ ತರಬೇತುದಾರರಾದ ಆಟಕೆರೆ ಬಾಬು ಪೈ ಕೋಟೇಶ್ವರ ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಆಶ್ರಯದಲ್ಲಿ ಶ್ರೀ ಶಾರದೋತ್ಸವದ ಸುವರ್ಣ ಸಂಭ್ರಮ-2024ರ ಪ್ರಯುಕ್ತ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಹತ್ತು ದಿನಗಳ ಕಾಲ ಜರಗಿದ ಉಚಿತ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಿವೃತ್ತ ಯೋಧ ಟಿ. ದಿನಕರ ಶ್ಯಾನುಭಾಗ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಯೋಗ ತರಬೇತುದಾರರಾದ ಆಟಕೆರೆ ಬಾಬು ಪೈ ಮತ್ತು ರೂಪಾ ಬಾಬು ಪೈ ಅವರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಗಳಾದ ಸೌಪರ್ಣಿಕಾ ಬಸವ ಖಾರ್ವಿ, ಜಿ.ವೆಂಕಟೇಶ ಶೆಣೈ, ನರಸಿಂಹ ದೇವಾಡಿಗ ಓಣಿಮನೆ,…
