Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಬ್ಯಾಂಕಿಂಗ್, ಅಗ್ನಿವೀರ್, ಬಾಲ ನ್ಯಾಯ ಕಾಯ್ದೆಗಳು ಹಾಗೂ ನಾಟಾ  ವಿಷಯದ ಕುರಿತಾಗಿ ಮಾಹಿತಿ ಕಾರ್ಯಾಗಾರ ಹೆಮ್ಮಾಡಿಯ ಜಯಶ್ರೀ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ಶಿರೂರಿನ ವ್ಯವಸ್ಥಾಪಕರಾದ ರಾಧೇಶ್ ಕಾಮತ್ ಅವರು ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಮಾಹಿತಿ ಕಾರ್ಯಾಗಾರಗಳು ಉಪಯುಕ್ತವಾಗಿವೆ, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಹೆಜ್ಜೆ ಹಾಕಿ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ಪದವಿಪೂರ್ವ ಶಿಕ್ಷಣ ಪರಿಪೂರ್ಣವಾಗಬೇಕಾದರೆ ಜ್ಞಾನಾತ್ಮಕವಾದ ಎಲ್ಲಾ ವಿಚಾರಗಳನ್ನು ಸ್ವೀಕರಿಸಿ ಅದರಂತೆ ಕಾಲೇಜಿನಲ್ಲಿ ವಿನೂತನ ಯೋಜನೆಗಳನ್ನು ಆಯೋಜಿಸಿದ್ದೇವೆ ಅವುಗಳ ಬಳಕೆ ನಿಮ್ಮದಾಗಲಿ ಎಂದರು‌. ಬ್ಯಾಂಕಿಂಗ್ ಕುರಿತು ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ಅಧಿಕಾರಿ ಉದಯ ಹೆಗ್ಡೆ ಅವರು ಮಾಹಿತಿಯ ನೀಡಿ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಬ್ಯಾಂಕಿಂಗ್ ಉದ್ಯೋಗಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ   ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ, ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ ಎಂದು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾ‍ರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನುನೀಡುತ್ತವೆ ಎಂದರು. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ ಪುಟ, ಸ್ಥಳೀಯ, ರಾಜ್ಯ, ರಾಷ್ಟ್ರ ಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವೃತ್ತಿ, ಮನೆ, ಮನಸ್ಸು ಹಲವು ವ್ಯತ್ಯಾಸಗಳ ಕಾರಣಗಳಿಂದ ಸಮಾಜದಲ್ಲಿ ನಮ್ಮೊಳಗೆ ಪರಸ್ಪರ ಯುದ್ಧಗಳು ನಡೆಯುತ್ತಿರುತ್ತವೆ. ಆದರೆ ದೇಶ ಕಾಯುವ ಸೈನಿಕರದ್ದು ಮಾತ್ರ ನೈಜವಾದ ಯುದ್ಧವಾಗಿದ್ದು, ಅವರು ತಮ್ಮ ಕುಟುಂಬವನ್ನು ತೊರೆದು ದೇಶ ರಕ್ಷಣೆಗೆ ಸಾಹಸ ಹಾಗೂ ಧೈರ್ಯದಿಂದ ಮಾಡಿದ ಹೋರಾಟದ ಫಲದಿಂದ ನಾವುಗಳು ನೆಮ್ಮದಿಯಿಂದ ಬದುಕಲು ಸಹಕಾರಿಯಾಗಿದೆ. ಸೈನಿಕರ ರಕ್ತಕ್ಕೆ ಬೆಲೆ ಕಟ್ಟಲಾಗದು ಎನ್ನುವುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ. ನಾಯ್ಕ್ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಾಗೂ ಬೈಂದೂರು ತಾಲೂಕು ಘಟಕದ ವತಿಯಿಂದ ನಡೆದ ಕಾರ್ಗಿಲ್ ಯುದ್ಧ ವಿಜಯೋತ್ಸವದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಾರತವು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿದ ದೇಶವಾಗಿದ್ದು, ಇತರೇ ಯಾವ ದೇಶಗಳಿಗೂ ಹೆದರುವ ಅವಶ್ಯಕತೆಯಿಲ್ಲ. ಇದಕ್ಕೆ ಪೂರಕ ಎಂಬಂತೆ ಪ್ರಸ್ತುತ ಸನ್ನಿವೇಶದಲ್ಲಿ ವಿರೋಧಿ ಶತ್ರುಗಳನ್ನು ಸದೆಬಡಿದು, ಭಾರತಾಂಬೆಯ ಘನತೆ, ಗೌರವವನ್ನು ಮುಗಿಲೆತ್ತರಕ್ಕೆ ಹಾರಿಸುವ ನಮ್ಮ ಸೈನಿಕರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೈಂದೂರು ತಾಲೂಕು ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ತಾಲೂಕಿನ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಮತ್ತು ಗೋಳಿಹೊಳೆ ವಲಯದ ಭಜನೋತ್ಸವ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮೈಯಾಡಿಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ ಅವರು ನೆರವೇರಿಸಿ, ಪ್ರತಿಫಲ ಅಪೇಕ್ಷೆ ಇಲ್ಲದೆ ನಡೆಸುವ ಎಲ್ಲಾ ಸೇವೆಯಿಂದ ಭಗವಂತನ ಅನುಗ್ರಹಕ್ಕೆ ಪ್ರಾಪ್ತರಾಗುತ್ತೇವೆ. ಕಲಿಯುಗದಲ್ಲಿ ಭಜನೆಯಿಂದ ಮಾತ್ರ ದೇವರ ಒಲಿಸಿಕೊಳ್ಳಬಹುದು ಮತ್ತು ಹಿರಿಯ ಭಜನ ಕಲಾವಿದರು ಭಜನೆಯನ್ನು ಶ್ರೇಷ್ಠತೆಯ ಕಡೆಗೆಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇನ್ನು ಮುಂದಕ್ಕೆ ಇಂದಿನ ಯುವ ಪೀಳಿಗೆ ಭಜನೆಯನ್ನು ಉಳಿಸಿ ಬೆಳೆಸಿ ಕೊಂಡು ಹೋಗುವ ಕಡೆಗೆ ಹಿರಿಯ ಭಜನಾ ಕಲಾವಿದರು ತಮ್ಮ ಸೇವೆಯನ್ನು ಮಡಿಪಾಗಿಡಬೇಕು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಿರಿಯರ ಜನಜಾಗೃತಿ ವೇದಿಕೆ ಇದರ ಸ್ಥಾಪಕಾಧ್ಯಕ್ಷರು  ಬಿ. ಅಪ್ಪಣ್ಣ ಹೆಗ್ಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರದ ಹವ್ಯಾಸಿ ಚಿತ್ರ ಕಲಾವಿದೆ ಸುಪ್ರಸನ್ನ ನಕ್ಕತ್ತಾಯರವರ ಸಂಚಯ – ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ಇತ್ತೀಚಿಗೆ ಉದ್ಘಾಟನೆಗೊಂಡಿತ್ತು. ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಜರುಗಿದ ಚಿತ್ರಕಲಾ ಪ್ರದರ್ಶನವನ್ನು ಮಂಗಳೂರಿನ ಚಿತ್ರ ಕಲಾವಿದ ಮತ್ತು ಪರಿಸರ ತಜ್ಞ ದಿನೇಶ್ ಹೊಳ್ಳ ಉದ್ಘಾಟಿಸಿದ್ದರು. ಈ ವೇಳೆ ಅತಿಥಿಗಳಾಗಿ ಕುಂದಪ್ರಭ ಪತ್ರಿಕೆಯ ಸಂಪಾದಕ ಯು. ಎಸ್. ಶೆಣೈ , ಕುಂದಾಪುರದ ಶಿಕ್ಷಣ ತಜ್ಞೆ ಚಿತ್ರಾ ಕಾರಂತ್, ಕಲಾವಿದ ಮತ್ತು ತ್ರಿವರ್ಣ ಕಲಾ ಕ್ಲಾಸಸ್‌ನ ಮಾರ್ಗದರ್ಶಕ ಹರೀಶ್ ಸಾಗಾ ಉಪಸ್ಥಿತರಿದ್ದರು. ಅಕ್ರಾಲಿಕ್ ವರ್ಣದಲ್ಲಿ ಕ್ಯಾನ್ವಾಸ್ ಮೇಲೆ ಪರಿಸರದ ಪ್ರಾಣಿ ಪಕ್ಷಿಗಳ ಬೆಸುಗೆಯ ರೇಖೆ, ನೈಜ್ಯ ಚಿತ್ರಣ, ಮಧುಬನಿ ಮತ್ತು ಗೋಂಡ್ ಶೈಲಿಯಲ್ಲಿ ರೂಪುಗೊಂಡ 100ಕ್ಕೂ ಅಧಿಕ ಕಲಾಕೃತಿಗಳಲ್ಲಿ ಮೂಡಿ ಬಂದಿದೆ. ಎರಡು ದಿನಗಳ ಕಾಲ ನಡೆದ ಚಿತ್ರ ಕಲಾ ಪ್ರದರ್ಶನದಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದು, 25 ಕಲಾಕೃತಿಗಳು ಮಾರಾಟಗೊಂಡವು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಕಾಲೇಜ್‍ನಲ್ಲಿ ನೀಟ್, ಜೆಇಇ, ಸಿಇಟಿ ಹಾಗೂ ದ್ವಿತೀಯ ಪಿಯುಸಿ ಇಲಾಖಾ ಪರೀಕ್ಷೆಯಲಿ ರ‍್ಯಾಂಕ್ ವಿಜೇತ 37 ವಿದ್ಯಾರ್ಥಿಗಳಿಗೆ  ಕಾಲೇಜಿನ ಆಡಳಿತ ಮಂಡಳಿಯಾದ  ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇದರ ಉಪಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಇವತ್ತು ಕೇವಲ ಇಂಜಿನಿಯರ್ ಡಾಕ್ಟರ್ ಮಾತ್ರವಲ್ಲದೆ ಬೇರೆ ಬೇರೆ ಸಾವಿರಾರು ಉದ್ಯೋಗ ಅವಕಾಶಗಳು ಇವತ್ತು ತೆರೆದುಕೊಂಡಿದೆ ಅದನ್ನು ಸುಧುಪಯೋಗಪಡಿಸಿಕೊಳ್ಳಬೇಕು. ಇವತ್ತಿನ ಯುವ ಜನತೆಯಲ್ಲಿ ಮಾನಸಿಕ ನೆಮ್ಮದಿ ಹದಗೆಡುತ್ತಿದೆ. ಹಾಗೆ ನಾವು ಕಲಿತ ಶಾಲೆ ನಮ್ಮ ತಂದೆ ತಾಯಿ ಮತ್ತು ನಮ್ಮ ಊರನ್ನು ಮರೆಯಬಾರದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಮಾತನಾಡಿ ಎಕ್ಸಲೆಂಟ್ ಸಂಸ್ಥೆ ಆರಂಭದಿಂದ ಇಲ್ಲಿವರೆಗೆ ಅನೇಕ ರ‍್ಯಾಂಕ್ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಾ ಬಂದಿದೆ. ಇವತ್ತಿನ ಕಾಲಮಟ್ಟಕ್ಕೆ ಸರಿಸಮನಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಯುಷ್ ಔಷಧಿಗಳಿಂದ ಅಡ್ಡ ಪರಿಣಾಮಗಳಿಲ್ಲದೆ ಕಾಯಿಲೆ ಗುಣಪಡಿಸಬಹುದು, ಜೊತೆಯಲ್ಲಿ ಜೀವನ ಶೈಲಿ ಆಹಾರದ ಬದಲಾವಣೆ ಇಂದ ಆರೋಗ್ಯವಂತರಾಗಿ ಬದುಕಬಹುದು. ಅಲ್ಲದೆ  ಹಿರಿಯ ನಾಗರಿಕರಿಗೆ ಈ ಶಿಬಿರ ಏರ್ಪಡಿಸಿ ರುವುದರಿಂದ ಇಲ್ಲಿಯ ಮಾಹಿತಿ ಔಷಧಿಗಳಿಂದ ಇನ್ನಷ್ಟು ವರ್ಷ ಹೆಚ್ಚಿಗೆ ಬದುಕಬಹುದು ಎಂದು ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಣ್ಣಪ್ಪ ಶೆಟ್ಟಿ ಭಟ್ನಾಡಿ  ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಉಡುಪಿ ಆಯುಷ್ ಇಲಾಖೆ, ಕಾಲ್ತೋಡು ಗ್ರಾಮ ಪಂಚಾಯತ್ ಹಾಗೂ ಕಾಲ್ತೋಡು ಆಯುಷ್ಮಾನ್ ಆರೋಗ್ಯ ಮಂದಿರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾದ 80 ವರ್ಷ ಮೇಲ್ಪಟ್ಟ ಸಮಾಜಸೇವಕರು ಹಿರಿಯರ ಆದ ಸಂಜೀವ್ ಶೆಟ್ಟಿ ಅವರು ಆಯುರ್ವೇದ ಮನೆಮದ್ದಿನ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಗ್ರಾಮ ಪಂಚಾಯತ್‌ ಕಾಲ್ತೋಡು ಕಾರ್ಯದರ್ಶಿಗಳಾದ ‌ಆನಂದ ಬಿಲ್ಲವ, ಡಾ. ನಾಗರಾಜ್ ಕೌಲಗಿ ಹಾಗೂ ಸಿ. ಎಚ್. ಒ. ಅರುಣ್ ಪ್ರಾ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಉಪವಿಭಾಗದ ನೂತನ ಸಹಾಯಕ ಆಯಕ್ತರಾಗಿ ಮಹೇಶ್‍ಚಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಈ ಮೊದಲು ಉಡುಪಿ ನಗರಾಭಿವೃಧ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕುಂದಾಪುರದಲ್ಲಿ ಉಪವಿಭಾಗಾಧಿಕಾರಿದ್ದ ರಶ್ಮಿ ಆರ್. ಎಸ್. ಅವರನ್ನು ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭವು “ಕೇವಲ ಬಿರುದು ಮತ್ತು ಜವಾಬ್ದಾರಿಗಳನ್ನು ನೀಡುವುದಲ್ಲ, ಇದು ಸಾಮರ್ಥ್ಯದ ಗುರುತಿಸುವಿಕೆ ಬೆಳವಣಿಗೆ ಮತ್ತು ಶ್ರೇಷ್ಠತೆಯ ಪ್ರಯಾಣಕ್ಕೆ ಬದ್ಧತೆಯಾಗಿದೆ. ಅಲ್ಲದೆ “ನಾಯಕತ್ವ ಮತ್ತು ಜವಾಬ್ದಾರಿಯ ಸಾರವನ್ನು ಪ್ರದರ್ಶಿಸುವ ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.” 2024-25ರ ಶೈಕ್ಷಣಿಕ ಅವಧಿಯ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭವು ಬೈಂದೂರಿನ ಯು. ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹಳ ವಿಜೃಂಭಣೆಯಿಂದ ಮತ್ತು ಘನತೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಬೈಂದೂರಿನ ಪೊಲೀಸ್ ಸಬ್ ಇನ್ ಸ್ಪೇಕ್ಟರ್ ಆದ ನವೀನ್ ಗೊರ್ಕರ್ ಅವರು ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಅಮೀತಾ ಶೆಟ್ಟಿ ಹಾಗೂ 10ನೇ ತರಗತಿ ಶಿಕ್ಷಕರಾದ ಜಗದೀಶ್ ನಾಯ್ಕರವರು ಹಾಜರಿದ್ದರು. ಸಮಾರಂಭವನ್ನು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಚುನಾಯಿತ ಹೆಡ್ ಗರ್ಲ್ ಮೆಹೆಕ್ ಮತ್ತು ಹೆಡ್ ಬಾಯ್ ನಫೀಸ್ ತಮ್ಮನ್ನು ಪರಿಚಯಿಸಿಕೊಂಡರು. ಅವರಿಗೆ ಗೌರವಾನ್ವಿತ ಅತಿಥಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಅವರು ಬ್ಯಾಡ್ನಗಳನ್ನು ನೀಡಿದರು. ವಿದ್ಯಾರ್ಥಿ ಪರಿಷತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮಿಡೀಯಂ ಸ್ಕೂಲ್‍ನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತೀಯ ಗಡಿಭದ್ರತಾ ಪಡೆಯಲಿ ಸೈನಿಕರಾಗಿ ಸೇವೆಸಲ್ಲಿಸಿದ ನಿವ್ರತ್ತ ಸೈನಿಕರಾದ ಗಣಪತಿ ಖಾರ್ವಿ ಅವರು ಹುತಾತ್ಮ ಯೋಧರಿಗೆ ಪುಷ್ಪ ನಮನವನ್ನು ಸಲ್ಲಿಸಿ, ಕಾರ್ಗಿಲ್ಯುದ್ಧದ ನೇರ ಅನುಭವವನ್ನು ಹಂಚಿಕೊಂಡು ಒಂದು ವ್ಯವಸ್ಥೆಯ ಮುಖಂಡ ಸಮರ್ಥನಾಗಿದ್ದಾರೆ ಜಯ ಖಂಡಿತ ಸಿಗುವುದು. ಸೈನಿಕರು ದೇಶದ ರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಲು ಸದಾ ಸಿದ್ಧರಾಗಿರುತ್ತಾರೆ ಎನ್ನುತ್ತಾ, ವಿದ್ಯಾರ್ಥಿಗಳಿಗೆ ಮಾತ್ರಭೂಮಿಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೇನೆಗೆ ಸೇರಿ ಎಂದು ಎಳೆಯ ಮನಸ್ಸುಗಳನ್ನು ಹುರಿದುಂಬಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಮಾತನಾಡಿ ದೇಶದ ಪ್ರಗತಿಯಲ್ಲಿ ಶಿಕ್ಷಣ, ರೈತರು ಹಾಗೂ ಯೋಧರು ಬಹಳ ಮುಖ್ಯ ಪಾತ್ರವಹಿಸುತ್ತಾರೆ ಈ ದಿಶೆಯಲ್ಲಿ ಮಕ್ಕಳಿಗೆ ಈ ಮೂರು ಪ್ರಮುಖ ವಿಚಾರಗಳ ಕುರಿತು ಗಮನವಹಿಸುವಂತೆ ಎಂದರು. ಸಮಾರಂಭದಲ್ಲಿ…

Read More